ಡೀಪ್​ಫೇಕ್ ವಿಡಿಯೋ ಬಗ್ಗೆ ರಶ್ಮಿಕಾ ಮಂದಣ್ಣ ಧ್ವನಿ ಎತ್ತಿದ್ದೇಕೆ? ನಟಿಯೇ ಕೊಟ್ಟರು ಉತ್ತರ

ನಟನೆಯನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಂಡಾಗ ಈ ರೀತಿಯ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹೀಗಿರುವಾಗ ಡೀಪ್​ಫೇಕ್ ವಿಡಿಯೋಗಳಿಗೆ ಅಷ್ಟೊಂದು ತಲೆಕೆಡಿಸಿಕೊಂಡಿದ್ದು ಏಕೆ ಎನ್ನುವ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ. ಇದರ ಹಿಂದೆ ಜಾಗೃತಿ ಮೂಡಿಸುವ ಉದ್ದೇಶ ಇದೆ.

ಡೀಪ್​ಫೇಕ್ ವಿಡಿಯೋ ಬಗ್ಗೆ ರಶ್ಮಿಕಾ ಮಂದಣ್ಣ ಧ್ವನಿ ಎತ್ತಿದ್ದೇಕೆ? ನಟಿಯೇ ಕೊಟ್ಟರು ಉತ್ತರ
ರಶ್ಮಿಕಾ
Follow us
ರಾಜೇಶ್ ದುಗ್ಗುಮನೆ
|

Updated on:Feb 01, 2024 | 10:22 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್​ಫೇಕ್ ವಿಡಿಯೋ ಸಂಚಲನ ಸೃಷ್ಟಿ ಮಾಡಿತ್ತು. 2023ರ ಕೊನೆಯಲ್ಲಿ ಈ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು. ಇದರ ಹಿಂದಿರೋ ವ್ಯಕ್ತಿಯನ್ನು ಬಂಧಿಸಲಾಯಿತು. ರಶ್ಮಿಕಾ ಮಂದಣ್ಣ, ಅಮಿತಾಭ್ ಬಚ್ಚನ್ ಸೇರಿ ಅನೇಕರು ಈ ವಿಡಿಯೋ ವೈರಲ್ ಮಾಡಿದ್ದನ್ನು ಖಂಡಿಸಿದ್ದರು. ಈ ಬಗ್ಗೆ ಮಾತನಾಡಿದ್ದು ಏಕೆ ಎನ್ನುವ ಪ್ರಶ್ನೆಗೆ ರಶ್ಮಿಕಾ ಮಂದಣ್ಣ ಅವರು ಉತ್ತರ ನೀಡಿದ್ದಾರೆ.

ನಟನೆಯನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಂಡಾಗ ಈ ರೀತಿಯ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಸಿನಿಮಾದಲ್ಲಿ ಕೆಲವೊಮ್ಮೆ ಅವರು ಬೋಲ್ಡ್ ಆಗಿ ಕಾಣಿಸಿಕೊಳ್ಳಬೇಕಾಗುತ್ತದೆ.  ಹೀಗಿರುವಾಗ ಈ ರೀತಿಯ ಡೀಪ್​ಫೇಕ್ ವಿಡಿಯೋಗಳಿಗೆ ಅಷ್ಟೊಂದು ತಲೆಕೆಡಿಸಿಕೊಂಡಿದ್ದು ಏಕೆ ಎನ್ನುವ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ. ಇದರ ಹಿಂದೆ ಜಾಗೃತಿ ಮೂಡಿಸುವ ಕೆಲಸ ಇದೆ.

‘ಈ ರೀತಿಯ ಘಟನೆಗಳು ಹಲವು ಬಾರಿ ನಡೆಯುತ್ತವೆ. ನೀವು ಅದರ ಬಗ್ಗೆ ಮಾತನಾಡುತ್ತೀರಿ. ಆದರೆ ಕೆಲವರಿಗೆ ಇದು ಇಷ್ಟ ಆಗುವುದಿಲ್ಲ. ನೀವು ಆಯ್ಕೆ ಮಾಡಿಕೊಂಡ ವೃತ್ತಿ ಹಾಗಿದೆ ಎನ್ನುತ್ತಾರೆ. ಆ ಸಮಯದಲ್ಲಿ ನನ್ನ ತಲೆಯಲ್ಲಿ ಓಡೋದು ಒಂದೇ. ಈ ಘಟನೆ ಕಾಲೇಜ್​​ನಲ್ಲಿ ಓದುತ್ತಿರುವಾಗ ಆಗಿದ್ದರೆ? ಬಹುಶಃ ಯಾರೊಬ್ಬರೂ ನನ್ನ ಬೆಂಬಲಕ್ಕೆ ಬರುತ್ತಿರಲಿಲ್ಲವೇನೋ. ನಾವು ಹೇಗಿರಬೇಕು ಎಂದು ಸಮಾಜ ನಿರ್ಧರಿಸುತ್ತದೆಯೋ ನಾವು ಹಾಗೆಯೇ ಇರಬೇಕಾಗುತ್ತದೆ’ ಎಂದಿದ್ದಾರೆ ರಶ್ಮಿಕಾ ಮಂದಣ್ಣ.

‘ನನ್ನ ಕಾಲೇಜಿನಲ್ಲಿ ಕೆಲವು ಹುಡುಗಿಯರು ಇದೇ ವಿಷಯವನ್ನು ಎದುರಿಸಬೇಕಾಗಿತ್ತು ಎಂದು ಊಹಿಸಿಕೊಳ್ಳಿ. ಬಹುಶಃ ನನಗೆ ನಿಜವಾಗಿಯೂ ಭಯ ಆಗುತ್ತಿತ್ತು. ನಾನು ಈ ಬಗ್ಗೆ ಈಗ ಮಾತನಾಡಿದರೆ 4 ಕೋಟಿ ಜನರಿಗೆ ಈ ಬಗ್ಗೆ ತಿಳಿಯುತ್ತದೆ. ಡೀಪ್​ಫೇಕ್ ಎಂಬುದೊಂದಿದೆ ಅನ್ನೋದು ಗೊತ್ತಾಗುತ್ತದೆ. ಜನರಲ್ಲಿ ಜಾಗೃತಿ ಮೂಡಿಸೋದು ನನಗೆ ಮುಖ್ಯ ಎಂದಿದ್ದಾರೆ’ ರಶ್ಮಿಕಾ.

ಇದನ್ನೂ ಓದಿ: ರಶ್ಮಿಕಾ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡೋದು ಯಾವಾಗ? ಸದ್ಯಕ್ಕಂತೂ ಸಿಗಲ್ಲ ಉತ್ತರ..

ಡೀಪ್​ಫೇಕ್ ವಿಡಿಯೋ ಸಂಚಲನ ಸೃಷ್ಟಿಸಿದ ಬಳಿಕ ಪೊಲೀಸರು ಎಫ್​ಐಆರ್ ದಾಖಲು ಮಾಡಿಕೊಂಡರು. ಇತ್ತೀಚೆಗೆ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರ ಫ್ಯಾನ್​ಪೇಜ್ ನಡೆಸುತ್ತಿದ್ದ ವ್ಯಕ್ತಿಯೇ ಈ ರೀತಿ ಡೀಪ್​ಫೇಕ್ ವಿಡಿಯೋ ಮಾಡಿದ್ದ. ಖ್ಯಾತಿ ಪಡೆಯಬೇಕು ಎನ್ನುವ ಕಾರಣಕ್ಕೆ ಈ ರೀತಿ ಮಾಡಿದ್ದಾಗಿ ಒಪ್ಪಿಕೊಂಡಿದ್ದ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:34 am, Thu, 1 February 24

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು