AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರದೋಷ್‌ ಮಾಫಿ ಸಾಕ್ಷಿ: ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ14 ಪ್ರದೋಷ್ ರಾವ್ ಮಾಫಿ ಸಾಕ್ಷಿಯಾಗಲು ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು (ಸೆಪ್ಟೆಂಬರ್ 23) ವಿಚಾರಣೆ ನಡೆಸಿದ ನ್ಯಾಯಾಲಯವು ವಿಜಯಲಕ್ಷ್ಮಿ ಅವರ ಅರ್ಜಿಯನ್ನು ವಜಾಗೊಳಿಸಿದೆ.

ಪ್ರದೋಷ್‌ ಮಾಫಿ ಸಾಕ್ಷಿ: ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
Pradosh, Darshan
ರಮೇಶ್​ ಎಮ್​.
| Edited By: |

Updated on:Sep 23, 2026 | 5:11 PM

Share

ನಟ ದರ್ಶನ್ ಅವರಿಗೆ ಹೈಕೋರ್ಟ್​ನಲ್ಲಿ ತೀವ್ರ ಹಿನ್ನಡೆ ಆಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರದೋಷ್ ರಾವ್ ಮಾಫಿ ಸಾಕ್ಷಿಯಾಲು 59ನೇ ಸಿಸಿಹೆಚ್ ಕೋರ್ಟ್ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕ್ರಾಸ್ ಎಗ್ಸಾಮಿನೇಷನ್ ವೇಳೆ ಪ್ರದೋಷ್ ಅವರನ್ನು ಪ್ರಶ್ನಿಸುವ ಹಕ್ಕಿದೆ. ಹೀಗಾಗಿ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಹಸ್ತಕ್ಷೇಪವಿಲ್ಲ ಎಂದು ನ್ಯಾ.ವಿ. ಶ್ರೀಶಾನಂದ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ.

ಪ್ರದೋಷ್ ಪರ ಹಿರಿಯ ವಕೀಲ ಕೆ. ದಿವಾಕರ್ ವಾದ ಮಾಡಿದ್ದಾರೆ. ‘ದರ್ಶನ್ ಪರ ವಕೀಲರು ವಿಚಾರಣೆಯನ್ನು ವಿಳಂಬಿಸುತ್ತಿದ್ದಾರೆ. ಸುಪ್ರೀಂಕೋರ್ಟ್ ಜಾಮೀನು ರದ್ದುಪಡಿಸಿದಾಗ ನಾವೂ ವಾದಿಸಿದ್ದೆವು. ನಿಮ್ಮ ತಪ್ಪಿಲ್ಲದಿದ್ರೆ ಅಪ್ರೂವರ್ ​ಆಗಿ ಎಂದು ನ್ಯಾಯಮೂರ್ತಿಗಳು ಹೇಳಿದ್ದರು. ಅಪ್ರೂವರ್ ಅರ್ಜಿ ಸಲ್ಲಿಸಿದ್ದರೂ ಒಂದಲ್ಲಒಂದು ತಕರಾರು ಸಲ್ಲಿಸುತ್ತಿದ್ದಾರೆ. ಜೈಲು ಕೈಪಿಡಿಯಲ್ಲಿ ಅವಕಾಶವಿರುವಂತೆ ಪ್ರದೋಷ್ ದೂರವಾಣಿ ಮೂಲಕ ಮಾತನಾಡಿದ್ದಾರೆ’ ಎಂದು ಪ್ರದೋಷ್ ವಕೀಲರು ವಾದಿಸಿದ್ದಾರೆ.

‘ನಾನು ಅಪ್ರೂವರ್ ಆಗ್ತೀನಿ ಅಂತ ದೂರವಾಣಿಯಲ್ಲಿ ಮಾತನಾಡಿದ್ದರೂ ತಪ್ಪೇನು? ಗಂಡ ಹೆಂಡತಿಗೆ ಅಭಿಪ್ರಾಯ ಕೇಳಿದರೆ ತಪ್ಪೇನಿದೆ? ಬೇರೆಯವರ ಚಿತಾವಣೆ ದಾಖಲೆ ಇದ್ದರೆ ಅದು ಬೇರೆ ವಿಚಾರ’ ಎಂದು ಜಡ್ಜ್ ಅಭಿಪ್ರಾಯಪಟ್ಟಿದ್ದಾರೆ. 10ನೇ ಆರೋಪಿ ವಿನಯ್ ಸಹ ಮಾಫಿ ಸಾಕ್ಷಿಗೆ ಅರ್ಜಿ ಸಲ್ಲಿಸಿದ್ದಾನೆ. ಅವನ ಅರ್ಜಿ ಪರಿಗಣಿಸದೇ ಪ್ರದೋಷ್ ಅರ್ಜಿ ಪರಿಗಣಿಸಿದ್ದಾರೆ ಎಂದು ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ವಾದ ಮಾಡಿದರು. ‘ಅದನ್ನು 10ನೇ ಆರೋಪಿ ಹೇಳಬೇಕು. ನೀವು ವಾದಿಸುವಂತಿಲ್ಲ’ ಎಂದು ಜಡ್ಜ್ ಹೇಳಿದರು.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್: ಪ್ರದೋಶ್ ಮಾಫಿ ಸಾಕ್ಷಿಗೆ ​ಒಪ್ಪಿದ ಕೋರ್ಟ್, ದರ್ಶನ್​​ಗೆ ಶಾಕ್

ರೇಣುಕಾಸ್ವಾಮಿ ಕೊಲೆ ಪ್ರಕರಣ:

ಚಿತ್ರದುರ್ಗದ ರೇಣುಕಾಸ್ವಾಮಿ 2024ರ ಜೂನ್‌ನಲ್ಲಿ ನಟ ದರ್ಶನ್‌ ಅವರ ಆಪ್ತೆ ಪವಿತ್ರ ಗೌಡಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದರೆಂಬ ಆರೋಪ ಕೇಳಿಬಂದಿತ್ತು. ಈ ಕಾರಣಕ್ಕಾಗಿ ರೇಣುಕಾಸ್ವಾಮಿಯನ್ನು ಬೆಂಗಳೂರಿನ ಪಟ್ಟಣಗೆರೆ ಶೆಡ್‌ಗೆ ಕರೆತಂದು ಬರ್ಬರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದರು.

ಪ್ರಕರಣದ 14ನೇ ಆರೋಪಿ ಪ್ರದೋಷ್‌ ರಾವ್, ಸಾಕ್ಷ್ಯ ನಾಶಪಡಿಸಲು ಹಾಗೂ ಹಣಕಾಸಿನ ವ್ಯವಹಾರಕ್ಕೆ ನೆರವಾಗಿದ್ದ ಆರೋಪ ಎದುರಿಸುತ್ತಿದ್ದು, ಇತ್ತೀಚೆಗೆ ತಾವು ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆಯನ್ನು ಕೋರ್ಟ್‌ ಮುಂದೆ ಬಹಿರಂಗಪಡಿಸುವುದಾಗಿ ಹೇಳಿ ಮಾಫಿ ಸಾಕ್ಷಿಯಾಗಲು (ಅಪ್ರೂವರ್) ಅರ್ಜಿ ಸಲ್ಲಿಸಿದ್ದರು. ಇದನ್ನು ಬೆಂಗಳೂರಿನ ಸಿಸಿಹೆಚ್‌ ನ್ಯಾಯಾಲಯ ಪುರಸ್ಕರಿಸಿತ್ತು. ಇದೀಗ ಈ ನಿರ್ಧಾರವನ್ನು ಪ್ರಶ್ನಿಸಿ ನಟ ದರ್ಶನ್ ಪರವಾಗಿ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:02 pm, Wed, 23 September 26

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಉಪ್ಪಿನ ಪ್ಯಾಕೆಟ್​​ ಮೇಲೂ ಇನ್ನು 'ಆರೋಗ್ಯಕ್ಕೆ ಹಾನಿಕಾರಕ' ಎಂಬ ಸ್ಟಿಕರ್
ಉಪ್ಪಿನ ಪ್ಯಾಕೆಟ್​​ ಮೇಲೂ ಇನ್ನು 'ಆರೋಗ್ಯಕ್ಕೆ ಹಾನಿಕಾರಕ' ಎಂಬ ಸ್ಟಿಕರ್
ರೌಡಿಶೀಟರ್‌ಗಳ ಜೊತೆ ರಾತ್ರಿಯಿಡೀ ಎಣ್ಣೆ ಪಾರ್ಟಿ
ರೌಡಿಶೀಟರ್‌ಗಳ ಜೊತೆ ರಾತ್ರಿಯಿಡೀ ಎಣ್ಣೆ ಪಾರ್ಟಿ
ಲಂಚ ಪಡೆದು ಲಾಕ್ ಆದ ತಹಶೀಲ್ದಾರ್: ಮತ್ತಷ್ಟು ಅಕ್ರಮಗಳು ಬಯಲಿಗೆ
ಲಂಚ ಪಡೆದು ಲಾಕ್ ಆದ ತಹಶೀಲ್ದಾರ್: ಮತ್ತಷ್ಟು ಅಕ್ರಮಗಳು ಬಯಲಿಗೆ
ಬಿಡಿಎ ನಿವೇಶನದಾರರಿಗೆ ಮನೆ ಕಟ್ಟಲು ಅರಣ್ಯ ಇಲಾಖೆಯಿಂದ ಅಡ್ಡಿ
ಬಿಡಿಎ ನಿವೇಶನದಾರರಿಗೆ ಮನೆ ಕಟ್ಟಲು ಅರಣ್ಯ ಇಲಾಖೆಯಿಂದ ಅಡ್ಡಿ