ಸಚಿವರಾಗಿದ್ದೂ ಸಿನಿಮಾಗಳಲ್ಲಿ ನಟನೆ: ಪವನ್ ಬಗ್ಗೆ ಹೈಕೋರ್ಟ್ ಹೇಳಿದ್ದೇನು?
Pawan Kalyan movie: ಡಿಸಿಎಂ ಪವನ್ ಕಲ್ಯಾಣ್ ಅವರ ಮೇಲೆ ಭಾರಿ ದೊಡ್ಡ ಆದರೆ ಪವನ್ ಕಲ್ಯಾಣ್ ಅವರು ಡಿಸಿಎಂ ಆದ ಬಳಿಕ ಸಿನಿಮಾನಲ್ಲಿ ನಟಿಸುತ್ತಿದ್ದು, ಡಿಸಿಎಂ ಆದ ಬಳಿಕ ಅವರ ನಟನೆಯ ಮೂರು ಸಿನಿಮಾಗಳು ಈವರೆಗೆ ಬಿಡುಗಡೆ ಆಗಿವೆ. ಆದರೆ ಇದನ್ನು ವಿರೋಧಿಸಿ ನ್ಯಾಯಾಲಯದಲ್ಲಿ ಅರ್ಜಿ ಹಾಕಲಾಗಿತ್ತು. ಜವಾಬ್ದಾರಿಯುತ ಸ್ಥಾನದಲ್ಲಿರುವಾಗ ಸಿನಿಮಾಗಳಲ್ಲಿ ನಟಿಸುವ ಮೂಲಕ ಸಮಯ ಹಾಗೂ ಜನರ ತೆರಿಗೆ ಹಣವನ್ನು ವ್ಯರ್ಥ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಇದೀಗ ಹೈಕೋರ್ಟ್ ಈ ಬಗ್ಗೆ ತೀರ್ಪು ಪ್ರಕಟಿಸಿದೆ.

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಆಗಿರುವ ಪವನ್ ಕಲ್ಯಾಣ್ (Pawan Kalyan), ಕೆಲವು ಪ್ರಮುಖ ಸಚಿವ ಖಾತೆಗಳನ್ನು ನಿಭಾಯಿಸುತ್ತಿದ್ದಾರೆ. ಪವನ್ ಕಲ್ಯಾಣ್ ಅವರ ಮೇಲೆ ಭಾರಿ ದೊಡ್ಡ ಜವಾಬ್ದಾರಿ ಇದೆ. ಜನಸೇವೆಯನ್ನು ಮಾಡಲೆಂದು ಜನ ನಂಬಿಕೆ ಇಟ್ಟು ಅವರನ್ನು ಆರಿಸಿ ಕಳಿಸಿದ್ದಾರೆ. ಆದರೆ ಪವನ್ ಕಲ್ಯಾಣ್ ಅವರು ಡಿಸಿಎಂ ಆದ ಬಳಿಕ ಸಿನಿಮಾನಲ್ಲಿ ನಟಿಸುತ್ತಿದ್ದು, ಡಿಸಿಎಂ ಆದ ಬಳಿಕ ಅವರ ನಟನೆಯ ಮೂರು ಸಿನಿಮಾಗಳು ಬಿಡುಗಡೆ ಆಗಿವೆ. ಆದರೆ ಇದನ್ನು ವಿರೋಧಿಸಿ ನ್ಯಾಯಾಲಯದಲ್ಲಿ ಅರ್ಜಿ ಹಾಕಲಾಗಿತ್ತು. ಜವಾಬ್ದಾರಿಯುತ ಸ್ಥಾನದಲ್ಲಿರುವಾಗ ಸಿನಿಮಾಗಳಲ್ಲಿ ನಟಿಸುವ ಮೂಲಕ ಸಮಯ ಹಾಗೂ ಜನರ ತೆರಿಗೆ ಹಣವನ್ನು ವ್ಯರ್ಥ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಇದೀಗ ಹೈಕೋರ್ಟ್ ಈ ಬಗ್ಗೆ ತೀರ್ಪು ಪ್ರಕಟಿಸಿದೆ.
ಮಾಜಿ ಐಎಎಸ್ ಅಧಿಕಾರಿ ಜಿ ವಿಜಯ್ ಕುಮಾರ್ ಅವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಈ ಬಗ್ಗೆ ಸಲ್ಲಿಸಿದ್ದರು. ‘ಒಬ್ಬ ವ್ಯಕ್ತಿಯು ಸಚಿವ ಅಥವಾ ಉಪಮುಖ್ಯಮಂತ್ರಿಯಂತಹ ಸಾಂವಿಧಾನಿಕ ಹುದ್ದೆಯಲ್ಲಿದ್ದಾಗ ವಾಣಿಜ್ಯ ಉದ್ದೇಶದ ಸಿನಿಮಾಗಳಲ್ಲಿ ನಟಿಸುವುದು ಅಸಂವಿಧಾನಿಕ ಮತ್ತು ನೈತಿಕವಾಗಿ ತಪ್ಪು. ಇದು ಹಿತಾಸಕ್ತಿ ಸಂಘರ್ಷಕ್ಕೆ (Conflict of Interest) ಕಾರಣವಾಗುತ್ತದೆ’ ಎಂದು ಅವರು ವಾದಿಸಿದ್ದರು. ಅಲ್ಲದೆ, ಪವನ್ ಕಲ್ಯಾಣ್ ಅವರ ಸಿನಿಮಾಗಳ ಟಿಕೆಟ್ ದರ ಏರಿಕೆ, ಹೆಚ್ಚುವರಿ ಶೋಗಳ ಪ್ರದರ್ಶನ ಮತ್ತು ಪ್ರಚಾರಕ್ಕಾಗಿ ಸರ್ಕಾರಿ ಯಂತ್ರದ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಆಂಧ್ರ ಪ್ರದೇಶ ಹೈಕೋರ್ಟ್, ಮುಖ್ಯಮಂತ್ರಿಗಳು ಅಥವಾ ಸಚಿವರು ಸಿನಿಮಾಗಳಲ್ಲಿ ನಟಿಸುವುದಕ್ಕೆ ಯಾವುದೇ ಕಾನೂನುಬದ್ಧ ನಿಷೇಧವಿಲ್ಲ ಎಂದಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ದಿವಂಗತ ಎನ್ ಟಿ ರಾಮರಾವ್ ಅವರ ವಿರುದ್ಧವೂ ಇಂತಹುದೇ ಪ್ರಕರಣ ದಾಖಲಾಗಿತ್ತು. ಆಗ ಹೈಕೋರ್ಟ್‌ನ ಪೂರ್ಣ ಪೀಠವು ‘ಮುಖ್ಯಮಂತ್ರಿ ಅಥವಾ ಸಚಿವರು ಸಿನಿಮಾಗಳಲ್ಲಿ ನಟಿಸುವುದಕ್ಕೆ ಯಾವುದೇ ಸಾಂವಿಧಾನಿಕ ಅಡ್ಡಿಯಿಲ್ಲ’ ಎಂದು ತೀರ್ಪು ನೀಡಿತ್ತು. ಅದೇ ತೀರ್ಪನ್ನು ಈಗ ಪವನ್ ಕಲ್ಯಾಣ್ ಪ್ರಕರಣದಲ್ಲೂ ಉಲ್ಲೇಖಿಸಲಾಗಿದೆ. ಅರ್ಜಿದಾರರು ಯಾವುದೇ ಬಲವಾದ ಸಾಕ್ಷ್ಯಾಧಾರಗಳನ್ನು ಒದಗಿಸದ ಕಾರಣ ಮತ್ತು ಈ ಅರ್ಜಿಯು ರಾಜಕೀಯ ಪ್ರೇರಿತವಾಗಿ ಕಾಣುತ್ತಿರುವುದರಿಂದ ನ್ಯಾಯಾಲಯವು ಇದನ್ನು ವಜಾಗೊಳಿಸಿದೆ.
ಇದನ್ನೂ ಓದಿ:ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್ ಅವರು ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಆದ ಬಳಿಕ ಅವರ ನಟನೆಯ ‘ಹರಿ ಹರ ವೀರ ಮಲ್ಲು’, ‘OG’ ಮತ್ತು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳು ಬಿಡುಗಡೆ ಆದವು. ಉಪ ಮುಖ್ಯಮಂತ್ರಿ ಆಗಿದ್ದಾಗಲೇ ಈ ಸಿನಿಮಾಗಳಲ್ಲಿ ಪವನ್ ಕಲ್ಯಾಣ್ ನಟನೆ ಸಹ ಮಾಡಿದರು. ಆಡಳಿತ, ರಾಜಕೀಯದ ಕೆಲಸಗಳ ನಡುವೆ ಪವನ್ ಅವರು ಸಿನಿಮಾ ಚಿತ್ರೀಕರಣಕ್ಕಾಗಿ ಸಮಯ ಹೊಂದಿಸಿಕೊಂಡಿದ್ದರು. ಅಲ್ಲದೆ, ತಮ್ಮ ಜನಸೇವೆಯ ಕೆಲಸಗಳಿಗೆ ತೊಂದರೆ ಆಗದಂತೆ ಚಿತ್ರೀಕರಣ ಮಾಡಿರುವುದಾಗಿ ಪವನ್ ಅವರು ಹೇಳಿಕೊಂಡಿದ್ದಾರೆ.
ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ನಟ ಪವನ್ ಕಲ್ಯಾಣ್, ‘ತಮ್ಮ ಜೀವನೋಪಾಯಕ್ಕೆ ಮತ್ತು ಆರ್ಥಿಕವಾಗಿ ಸ್ವತಂತ್ರವಾಗಿರಲು ಸಿನಿಮಾ ವೃತ್ತಿಯ ಅಗತ್ಯವಿದೆ. ಆದರೆ ಆಡಳಿತಕ್ಕೆ ಯಾವುದೇ ತೊಂದರೆಯಾಗದಂತೆ ದಿನಕ್ಕೆ ಕೇವಲ ಕೆಲವು ಗಂಟೆಗಳನ್ನು ಮಾತ್ರ ಸಿನಿಮಾಗಾಗಿ ಮೀಸಲಿಡುತ್ತೇನೆ’ ಎಂದು ತಿಳಿಸಿದ್ದರು. ಅಲ್ಲದೆ, ಚುನಾವಣೆಗೆ ಧುಮುಕುವ ಮೊದಲು ಒಪ್ಪಿಕೊಂಡಿದ್ದ ಸಿನಿಮಾಗಳನ್ನಷ್ಟೆ ಪವನ್ ಕಲ್ಯಾಣ್ ಮುಗಿಸಿ ಕೊಟ್ಟಿದ್ದು, ಇನ್ನು ಮುಂದೆ ಅಧಿಕಾರದಲ್ಲಿ ಇರುವವರೆಗೆ ಯಾವುದೇ ಸಿನಿಮಾಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




