‘ಪ್ರಕಾಶ್ ರೈ, ಬಾಬಿ ಸಿಂಹ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ’; ಕೋರ್ಟ್‌ಗೆ ಸರ್ಕಾರದ ಮಾಹಿತಿ
‘ಎರಡು ಬಂಗಲೆಗಳ ನಿರ್ಮಾಣ ಕಾಮಗಾರಿಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಇಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ’ ಎಂದು ತಮಿಳುನಾಡು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ತೆಗೆದುಕೊಂಡ ಕ್ರಮದ ಸಂಪೂರ್ಣ ವಿವರಣೆ ನೀಡುವಂತೆ ಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.

ಅಕ್ರಮ ಬಂಗಲೆ ನಿರ್ಮಾಣ ಪ್ರಕರಣದಲ್ಲಿ ನಟ ಪ್ರಕಾಶ್ ರೈ (Prakash Rai) ಹಾಗೂ ಬಾಬಿ ಸಿಂಹ ಅವರ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳಲಾಗಿದ ಎಂದು ವರದಿ ನೀಡುವಂತೆ ಮದ್ರಾಸ್ ಹೈಕೋರ್ಟ್ನ ಮಧುರೈ ಬೆಂಚ್ ತಮಿಳುನಾಡು ಸರ್ಕಾರಕ್ಕೆ ಸೂಚಿಸಿದೆ. ತಮಿಳುನಾಡಿನ ಕೊಡೈಕೆನಲ್ನಲ್ಲಿರುವ ವಿಳಪಟ್ಟಿ ಪಂಚಾಯತ್ ಭಾಗದಲ್ಲಿ ಬಾಬಿ ಸಿಂಹ ಹಾಗೂ ಪ್ರಕಾಶ್ ರೈ ಅಕ್ರಮವಾಗಿ ಬಂಗಲೆ ನಿರ್ಮಾಣ ಮಾಡಲು ಪ್ರಯತ್ನಿಸಿದ್ದರು ಎನ್ನಲಾಗಿತ್ತು.
ದಿಂಡುಗಲ್ ಜಿಲ್ಲೆಯ ಮುಹಮ್ಮದ್ ಜುನೈದ್ ಅವರು ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಪ್ರಕಾಶ್ ರೈ ಹಾಗೂ ಬಾಬಿ ಸಿಂಹ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರ್ಜಿಯಲ್ಲಿ ಕೋರಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೃಷ್ಣಕುಮಾರ್ ಮತ್ತು ವಿಜಯಕುಮಾರ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಪ್ರಕಾಶ್ ರೈ ಹಾಗೂ ಬಾಬಿ ಸಿಂಹ ಅವರು ಕೊಡೈಕೆನಾಲ್ ಪುರಸಭೆಯಿಂದ ಅನುಮತಿ ಪಡೆಯದೆ ನಿಯಮಗಳನ್ನು ಉಲ್ಲಂಘಿಸಿ ತಮ್ಮ ಬಂಗಲೆಗಳನ್ನು ನಿರ್ಮಿಸಲು ಪ್ರಯತ್ನಿಸಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದರು. ಬಂಗಲೆ ನಿರ್ಮಾಣ ಸ್ಥಳಕ್ಕೆ ವಸ್ತುಗಳನ್ನು ಸಾಗಿಸಲು ಭಾರೀ ಯಂತ್ರೋಪಕರಣಗಳನ್ನು ಬಳಸಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.
ಇದನ್ನೂ ಓದಿ: 100 ಕೋಟಿ ಹಣ ವಂಚನೆ ಪ್ರಕರಣ: ಪ್ರಕಾಶ್ ರೈಗೆ ಸಮನ್ಸ್
‘ಎರಡು ಬಂಗಲೆಗಳ ನಿರ್ಮಾಣ ಕಾಮಗಾರಿಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಇಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ’ ಎಂದು ತಮಿಳುನಾಡು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ತೆಗೆದುಕೊಂಡ ಕ್ರಮದ ಸಂಪೂರ್ಣ ವಿವರಣೆ ನೀಡುವಂತೆ ಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ. ಅರ್ಜಿ ವಿಚಾರಣೆ ಜನವರಿ 9ಕ್ಕೆ ಮುಂದೂಡಲ್ಪಟ್ಟಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:19 pm, Fri, 5 January 24