Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ ಗೋಡೆ ನಿರ್ಮಾಣ ಆಗಿದೆ: ಹಿಜಾಬ್​ ವಿವಾದಕ್ಕೆ ಕಮಲ್​ ಹಾಸನ್​, ರಮ್ಯಾ ಪ್ರತಿಕ್ರಿಯೆ​

ಹಿಜಾಬ್​ ವಿವಾದದ ಬಗ್ಗೆ ನಟ ಕಮಲ್​ ಹಾಸನ್​, ನಟಿ ರಮ್ಯಾ ಸೇರಿದಂತೆ ಹಲವು ಸೆಲೆಬ್ರಿಟಿಗಳು ಪ್ರತಿಕ್ರಿಯಿಸಿದ್ದಾರೆ. ಈ ವಿಚಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.

ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ ಗೋಡೆ ನಿರ್ಮಾಣ ಆಗಿದೆ: ಹಿಜಾಬ್​ ವಿವಾದಕ್ಕೆ ಕಮಲ್​ ಹಾಸನ್​, ರಮ್ಯಾ ಪ್ರತಿಕ್ರಿಯೆ​
ಕಮಲ್​ ಹಾಸನ್​, ರಮ್ಯಾ
Follow us
TV9 Web
| Updated By: ಮದನ್​ ಕುಮಾರ್​

Updated on:Feb 09, 2022 | 1:18 PM

ಕರ್ನಾಟಕದಲ್ಲಿ ಹಿಜಾಬ್​ (Hijab) ವರ್ಸಸ್​ ಕೇಸರಿ ಶಾಲು ವಿವಾದ ಭುಗಿಲೆದ್ದಿದೆ. ಕರುನಾಡಿನ ಕಾಲೇಜುಗಳ ಅಂಗಳದಲ್ಲಿ ಶುರುವಾದ ಈ ಗಲಾಟೆ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿದೆ. ಈ ಕುರಿತು ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಖ್ಯಾತ ನಟ ಕಮಲ್​ ಹಾಸನ್​ (Kamal Haasan), ನಟಿ ರಮ್ಯಾ ಮುಂತಾದವರು ಈ ಘಟನೆ ಬಗ್ಗೆ ಸೋಶಿಯಲ್​ ಮೀಡಿಯಾ ಮೂಲಕ ಪ್ರತಿಕ್ರಿಯಿಸಿದ್ದಾರೆ. ‘ಕರ್ನಾಟಕದಲ್ಲಿ ನಡೆಯುತ್ತಿರುವ ಘಟನೆಗಳು ಶಾಂತಿ ಕಡದಲು ಪ್ರಚೋದಿಸುತ್ತಿವೆ. ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ ಗೋಡೆ ನಿರ್ಮಾಣವಾಗುತ್ತಿದೆ. ಪಕ್ಕದ ರಾಜ್ಯದಲ್ಲಿ ನಡೆಯುತ್ತಿರುವುದು ತಮಿಳುನಾಡಿಗೆ ಬರಬಾರದು. ಪ್ರಗತಿಪರ ಶಕ್ತಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕಾದ ಸಮಯವಿದು’ ಎಂದು ಕಮಲ್​ ಹಾಸನ್​ ಟ್ವೀಟ್​ ಮಾಡಿದ್ದಾರೆ. ಹಿಜಾಬ್​ ಧರಿಸಿದ ವಿದ್ಯಾರ್ಥಿನಿಯರು ಮತ್ತು ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಪರಸ್ಪರ ಕಾದಾಡುತ್ತಿರುವ ವಿಡಿಯೋವನ್ನು ರಮ್ಯಾ (Ramya Divya Spandana) ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಭಾರತದ ಯುವಜನತೆ ಈ ರೀತಿ ಎರಡು ಭಾಗವಾಗಿರುವುದನ್ನು ನೋಡಲು ದುಃಖವಾಗುತ್ತದೆ’ ಎಂದು ರಮ್ಯಾ ಪೋಸ್ಟ್​ ಮಾಡಿದ್ದಾರೆ.

ಕರ್ನಾಟಕದ ಹಲವು ಕಾಲೇಜುಗಳಲ್ಲಿ ಹಿಜಾಬ್​ ವರ್ಸಸ್​ ಕೇಸರಿ ಸಂಘರ್ಷ ತಾರಕಕ್ಕೇರಿದೆ. ಯಾವ ಬಟ್ಟೆ ಧರಿಸಬೇಕು ಎಂಬುದು ಮಹಿಳೆಯರ ಸ್ವಾತಂತ್ರ್ಯ ಎಂದು ಕೆಲವರು ಹೇಳುತ್ತಿದ್ದಾರೆ. ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಇರಬೇಕು ಎಂದು ಇನ್ನೂ ಕೆಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರದ ಬಗ್ಗೆ ನಾಯಕಿ ಸುಹಾನಾ ಸೈಯದ್​​ ಕೂಡ ಮಾತಮಾಡಿದ್ದಾರೆ.

‘ನಾನು ಕೂಡ ಇಸ್ಲಾಂ ಕುಟುಂಬದಲ್ಲಿ ಬೆಳೆದವಳು. ನಾನು ಹಿಜಾಬ್​ ಹಾಕಲ್ಲ. ಹಾಗಂತ ನಾನು ಹಿಬಾಬ್ ಹಾಕುವವರ ವಿರೋಧಿ ಕೂಡ ಅಲ್ಲ. ಬಟ್ಟೆ ಎಂಬುದು ಅವರವರ ವೈಯಕ್ತಿಕ ವಿಚಾರ. ನಾನು ಹಿಜಾಬ್​ ಹಾಕಲ್ಲ ಅಂತ ಅನೇಕ ಪರ-ವಿರೋಧ ಚರ್ಚೆ ನಡೆದಿದೆ. ನನ್ನ ನಿಲುವು ಏನೆಂದರೆ, ಹಿಜಾಬ್​ ಅಥವಾ ಯಾವುದೇ ಬಟ್ಟೆ ಆದರೂ ಇದನ್ನು ಹಾಕಬೇಕು-ಹಾಕಬಾರದು ಎಂದು ಒತ್ತಾಯ ಮಾಡುವ ಹಕ್ಕು ಯಾರಿಗೂ ಇಲ್ಲ. ಅದು ಆ ವ್ಯಕ್ತಿಯ ಸ್ವಾತಂತ್ರ್ಯ’ ಎಂದು ಸುಹಾನಾ ಸೈಯದ್​​ ಹೇಳಿದ್ದಾರೆ.

‘ನಾವು ಈಗ ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಮಾತನಾಡುತ್ತಿದ್ದೇವೆ. ಧರ್ಮವನ್ನೂ ಮೀರಿದ್ದು ಶಿಕ್ಷಣ. ಹೆಣ್ಣುಮಕ್ಕಳ ಶಿಕ್ಷಣವನ್ನು ಕಿತ್ತುಕೊಳ್ಳುವ ಹಕ್ಕು ಯಾರಿಗೂ ಇಲ್ಲ. ಯಾವುದೇ ಧರ್ಮ, ಜಾತಿ, ಭಾಷೆ, ಲಿಂಗ, ಬಟ್ಟೆಗೂ ಆ ಹಕ್ಕು ಇಲ್ಲ. ಈ ಎಲ್ಲ ಕಾರಣಗಳಿಂದ ಒಬ್ಬಳು ಹೆಣ್ಣು ಮಗಳು ಶಿಕ್ಷಣದಿಂದ ವಂಚಿತಳಾಗುತ್ತಾಳೆ ಎಂದರೆ ಅದು ತಪ್ಪು ಅಂತ ವೈಯಕ್ತಿಕವಾಗಿ ನನಗೆ ಅನಿಸುತ್ತದೆ’ ಎಂದಿದ್ದಾರೆ ಸುಹಾನಾ.

ಇದನ್ನೂ ಓದಿ:

ಕರ್ನಾಟಕ ಹಿಜಾಬ್​ ವಿವಾದದಲ್ಲಿ ಮೂಗು ತೂರಿಸಿದ ಪಾಕಿಸ್ತಾನ; ಭಾರತದಲ್ಲಿನ ಈ ಬೆಳವಣಿಗೆ ಸಚಿವರಿಗೆ ಭಯಹುಟ್ಟಿಸುತ್ತಿದೆಯಂತೆ !

ಸರ್ಕಾರದ ಆದೇಶಕ್ಕಿಲ್ಲ ಮರ್ಯಾದೆ; ಹಿಜಾಬ್‌- ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು

Published On - 12:28 pm, Wed, 9 February 22

ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು