AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Chopra: ಬಾಡಿಗೆ ತಾಯಿ ಮೂಲಕ ಮಗು ಪಡೆದ ಪ್ರಿಯಾಂಕಾ ಚೋಪ್ರಾ-ನಿಕ್​ ಜೋನಸ್

Priyanka Chopra | Nick Jonas: ಪ್ರಿಯಾಂಕಾ ಚೋಪ್ರಾ ಗರ್ಭಿಣಿ ಆಗಿರಲಿಲ್ಲ. ಬದಲಿಗೆ, ಬಾಡಿಗೆ ತಾಯಿ ಮೂಲಕ ಮಗು ಪಡೆದಿದ್ದಾರೆ. ತಂದೆ-ತಾಯಿಯಾಗಿ ಬಡ್ತಿ ಪಡೆದಿರುವ ನಿಕ್​ ಜೋನಸ್​ ಮತ್ತು ಪ್ರಿಯಾಂಕಾ ಚೋಪ್ರಾಗೆ ಎಲ್ಲರೂ ಶುಭ ಹಾರೈಸುತ್ತಿದ್ದಾರೆ.

Priyanka Chopra: ಬಾಡಿಗೆ ತಾಯಿ ಮೂಲಕ ಮಗು ಪಡೆದ ಪ್ರಿಯಾಂಕಾ ಚೋಪ್ರಾ-ನಿಕ್​ ಜೋನಸ್
ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್
TV9 Web
| Edited By: |

Updated on:Jan 22, 2022 | 8:19 AM

Share

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಏಕಾಏಕಿ ಸರ್ಪ್ರೈಸ್​ ನೀಡಿದ್ದಾರೆ. ಮೊದಲ ಮಗುವನ್ನು ಅವರು ಬರಮಾಡಿಕೊಂಡಿದ್ದಾರೆ. ಪತಿ ನಿಕ್​ ಜೋನಸ್​ (Nick Jonas) ಜೊತೆ ಸೇರಿ ಅವರು ಈ ಖುಷಿಯ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಹೌದು, ಪ್ರಿಯಾಂಕಾ ಚೋಪ್ರಾ ತಾಯಿ ಆಗಿದ್ದಾರೆ. ಈ ವಿಷಯ ಕೇಳಿ ಎಲ್ಲರಿಗೂ ಅಚ್ಚರಿ ಆಗಿರುವುದು ನಿಜ. ಯಾಕೆಂದರೆ ಪ್ರಿಯಾಂಕಾ ಗರ್ಭಿಣಿ ಆಗಿರಲಿಲ್ಲ. ಬದಲಿಗೆ, ಬಾಡಿಗೆ ತಾಯಿ (Surrogacy) ಮೂಲಕ ಮಗು ಪಡೆದಿದ್ದಾರೆ. ಆ ಮೂಲಕ ಬದುಕಿನ ಹೊಸ ಅಧ್ಯಾಯ ಶುರು ಮಾಡಿದ್ದಾರೆ. ತಂದೆ-ತಾಯಿಯಾಗಿ ಬಡ್ತಿ ಪಡೆದಿರುವ ನಿಕ್​ ಜೋನಸ್​ ಮತ್ತು ಪ್ರಿಯಾಂಕಾ ಚೋಪ್ರಾ ಜೋಡಿಗೆ ಎಲ್ಲರೂ ಶುಭ ಹಾರೈಸುತ್ತಿದ್ದಾರೆ. ಬಾಲಿವುಡ್​ ಮತ್ತು ಹಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಈ ದಂಪತಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಶುಕ್ರವಾರ (ಜ.21) ತಡರಾತ್ರಿ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋನಸ್​ ಅವರು ಈ ವಿಷಯ ಹಂಚಿಕೊಂಡರು. ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ನೀಡಿರುವ ಅವರು ಮಗುವಿನ ಫೋಟೋ ತೋರಿಸಿಲ್ಲ. ‘ಬಾಡಿಗೆ ತಾಯಿ ಮೂಲಕ ನಾವು ಮಗು ಪಡೆದಿದ್ದೇವೆ ಎಂಬುದನ್ನು ತಿಳಿಸಲು ತುಂಬ ಖುಷಿ ಆಗುತ್ತಿದೆ. ಕುಟುಂಬದ ಕಡೆಗೆ ಹೆಚ್ಚು ಗಮನ ಹರಿಸಬೇಕಾಗಿರುವ ಈ ವಿಶೇಷ ಸಂದರ್ಭದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸಿ ಅಂತ ಕೇಳಿಕೊಳ್ಳುತ್ತೇನೆ’ ಎಂದು ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋನಸ್ ಪೋಸ್ಟ್​ ಮಾಡಿದ್ದಾರೆ.

View this post on Instagram

A post shared by Priyanka (@priyankachopra)

ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋನಸ್​ ನಡುವೆ 10 ವರ್ಷಗಳ ವಯಸ್ಸಿನ ಅಂತರ ಇದೆ. 2018ರಲ್ಲಿ ಈ ಜೋಡಿ ಸಪ್ತಪದಿ ತುಳಿಯಿತು. ಮದುವೆ ಬಳಿಕ ಪ್ರಿಯಾಂಕಾ ಅವರು ಅಮೆರಿಕಾದಲ್ಲಿ ನೆಲೆಸಿದ್ದಾರೆ. ಬಾಲಿವುಡ್​ ಸಿನಿಮಾಗಳಿಗಿಂತಲೂ ಹೆಚ್ಚಾಗಿ ಹಾಲಿವುಡ್​ ಪ್ರಾಜೆಕ್ಟ್​ಗಳನ್ನೇ ಅವರು ಒಪ್ಪಿಕೊಳ್ಳುತ್ತಿದ್ದಾರೆ. ಅವರ ವೃತ್ತಿ ಜೀವನಕ್ಕೆ ಪತಿ ನಿಕ್​ ಜೋನಸ್​ ಬೆಂಬಲವಾಗಿ ನಿಂತಿದ್ದಾರೆ.

ಪ್ರಿಯಾಂಕಾ ಪಡೆದಿರುವುದು ಹೆಣ್ಣು ಮಗು ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಸ್ಟಾರ್​ ದಂಪತಿ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಬಾಲಿವುಡ್​ ಸೆಲೆಬ್ರಿಟಿಗಳಾದ ಆತಿಯಾ ಶೆಟ್ಟಿ, ವಿಕ್ಕಿ ಕೌಶಲ್​, ಅರ್ಜುನ್​ ಕಪೂರ್​, ಪೂಜಾ ಹೆಗ್ಡೆ, ನೇಹಾ ಧೂಪಿಯಾ ಸೇರಿದಂತೆ ಅನೇಕರು ಪ್ರಿಯಾಂಕಾ-ನಿಕ್​ ಜೋಡಿಗೆ ಶುಭಾಶಯ ತಿಳಿಸಿದ್ದಾರೆ.

ಇದನ್ನೂ ಓದಿ:

ಇನ್​ಸ್ಟಾಗ್ರಾಮ್​ನಲ್ಲಿ ಹೆಸರು ಬದಲಿಸಿದ್ದಕ್ಕೆ ಕಾರಣ ನೀಡಿದ ಪ್ರಿಯಾಂಕಾ ಚೋಪ್ರಾ

ಪ್ರಿಯಾಂಕಾ ಚೋಪ್ರಾ-ನಿಕ್​ ಜೋನಸ್​ ದಾಂಪತ್ಯಕ್ಕೆ 3 ವರ್ಷ; ಹೇಗಿದೆ ವೆಡ್ಡಿಂಗ್​ ಆ್ಯನಿವರ್ಸರಿ ಸಂಭ್ರಮ?

Published On - 7:47 am, Sat, 22 January 22

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?