Avatar 2 Collection: ಭಾರತದಲ್ಲಿ ಧೂಳೆಬ್ಬಿಸುತ್ತಿದೆ ‘ಅವತಾರ್​ 2’: ಕೇವಲ 2 ದಿನಕ್ಕೆ 80 ಕೋಟಿ ರೂ. ಕಲೆಕ್ಷನ್​

Avatar 2 Box Office Collection: ‘ಅವತಾರ್​ 2’ ಸಿನಿಮಾ ವಿಶ್ವಾದ್ಯಂತ ಸದ್ದು ಮಾಡುತ್ತಿದೆ. 52 ಸಾವಿರಕ್ಕೂ ಅಧಿಕ ಪರದೆಗಳಲ್ಲಿ ಈ ಚಿತ್ರ ಪ್ರದರ್ಶನ ಕಾಣುತ್ತಿದೆ.

Avatar 2 Collection: ಭಾರತದಲ್ಲಿ ಧೂಳೆಬ್ಬಿಸುತ್ತಿದೆ ‘ಅವತಾರ್​ 2’: ಕೇವಲ 2 ದಿನಕ್ಕೆ 80 ಕೋಟಿ ರೂ. ಕಲೆಕ್ಷನ್​
ಅವತಾರ್ ದಿ ವೇ ಆಫ್ ವಾಟರ್
Follow us
TV9 Web
| Updated By: ಮದನ್​ ಕುಮಾರ್​

Updated on:Dec 18, 2022 | 7:26 PM

ಹಾಲಿವುಡ್​ನ ದೈತ್ಯ ಸಿನಿಮಾ ‘ಅವತಾರ್​: ದಿ ವೇ ಆಫ್​ ವಾಟರ್​’ (Avatar The way of Water) ವಿಶ್ವಾದ್ಯಂತ ಬಿಡುಗಡೆ ಆಗಿದೆ. ಡಿಸೆಂಬರ್​ 16ರಂದು ರಿಲೀಸ್​ ಆಗಿರುವ ಈ ಚಿತ್ರಕ್ಕೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ನಿರ್ದೇಶಕ ಜೇಮ್ಸ್​ ಕ್ಯಾಮೆರಾನ್​ (James Cameron) ಅವರ ಕಾರ್ಯವೈಖರಿಗೆ ಪ್ರೇಕ್ಷಕರು ಭೇಷ್​ ಎನ್ನುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ‘ಅವತಾರ್​ 2’ (Avatar 2) ಚಿತ್ರ ನೋಡಿ ಮೆಚ್ಚಿಕೊಂಡಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಎಷ್ಟು ಕಲೆಕ್ಷನ್​ ಮಾಡುತ್ತಿದೆ ಎಂಬುದನ್ನು ತಿಳಿಯುವ ಕುತೂಹಲ ಸಿನಿಪ್ರಿಯರಿಗೆ ಇದೆ. ಸಾವಿರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಒಳ್ಳೆಯ ಓಪನಿಂಗ್​ ಪಡೆದುಕೊಂಡಿದೆ. ಭಾರತದ ಮಾರುಕಟ್ಟೆಯಲ್ಲಿ ‘ಅವತಾರ್​ 2’ ಚಿತ್ರ ಬಂಗಾರದ ಬೆಳೆ ತೆಗೆಯುತ್ತಿದೆ. ಕೇವಲ 2 ದಿನಕ್ಕೆ 80 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ಮೂರನೇ ದಿನ ಕೂಡ ಭರ್ಜರಿ ಕಮಾಯಿ ಆಗುತ್ತಿದೆ.

ಭಾರತದಲ್ಲಿ ‘ಅವತಾರ್​ 2’ ಚಿತ್ರ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿದೆ. ಇಂಗ್ಲಿಷ್​ ಜೊತೆಗೆ ಕನ್ನಡ, ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗಿಗೂ ಡಬ್​ ಆಗಿ ತೆರೆ ಕಂಡಿದೆ. 2ಡಿ, 3ಡಿ, ಐಮ್ಯಾಕ್ಸ್​ 3ಡಿ, 4ಡಿಎಕ್ಸ್​ ಮುಂತಾದ ವರ್ಷನ್​ಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಅತ್ಯಾಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನ ಬಳಸಿ ಕಟ್ಟಿಕೊಟ್ಟಿರುವ ದೃಶ್ಯಗಳು ಜನರ ಮೆಚ್ಚುಗೆ ಪಡೆದುಕೊಳ್ಳುತ್ತಿವೆ.

ಇದನ್ನೂ ಓದಿ: Avatar The Way of Water: ‘ಕೆಜಿಎಫ್​ 2’ ವರ್ಸಸ್​ ‘ಅವತಾರ್​ 2’: ಮೊದಲ ದಿನದ ಟಿಕೆಟ್​ ಬುಕಿಂಗ್​ನಲ್ಲಿ ಯಶ್​ ಚಿತ್ರದ್ದೇ ಮೇಲುಗೈ

ಇದನ್ನೂ ಓದಿ
Image
Avatar The Way of Water: ‘ಕೆಜಿಎಫ್​ 2’ ವರ್ಸಸ್​ ‘ಅವತಾರ್​ 2’: ಮೊದಲ ದಿನದ ಟಿಕೆಟ್​ ಬುಕಿಂಗ್​ನಲ್ಲಿ ಯಶ್​ ಚಿತ್ರದ್ದೇ ಮೇಲುಗೈ
Image
Avatar 2: ‘ಅವತಾರ್​: ದಿ ವೇ ಆಫ್​ ವಾಟರ್​’ ಚಿತ್ರ ಅದ್ದೂರಿ ರಿಲೀಸ್​; ಆದರೆ ಮೊದಲ ದಿನವೇ ಪೈರಸಿ ಕಾಟ
Image
Avatar 2: 1650 ರೂ. ದಾಟಿದ ‘ಅವತಾರ್​ 2’ ಟಿಕೆಟ್​ ಬೆಲೆ; ಆದ್ರೂ ಮುಗಿಬಿದ್ದು ಬುಕ್​ ಮಾಡುತ್ತಿರುವ ಪ್ರೇಕ್ಷಕರು
Image
‘ಅವತಾರ್​’ ಸರಣಿ ಚಿತ್ರಗಳ ಬಜೆಟ್ ಎಷ್ಟು ಸಾವಿರ ಕೋಟಿ ರೂಪಾಯಿ? ಸೀಕ್ವೆಲ್ ಕೈ ಬಿಡುವ ಆಲೋಚನೆಯಲ್ಲಿ ನಿರ್ದೇಶಕ  

ಬಹುತೇಕ ಮಲ್ಟಿಪ್ಲೆಕ್ಸ್​ಗಳಲ್ಲಿ ‘ಅವತಾರ್​: ದಿ ವೇ ಆಫ್​ ವಾಟರ್​’ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಮೊದಲ ದಿನ (ಡಿ.16) ಭಾರತದಲ್ಲಿ ಈ ಸಿನಿಮಾ 40 ಕೋಟಿ ರೂಪಾಯಿ ಗಳಿಸಿತು. ಎರಡನೇ ಕೂಡ ಅಂದಾಜು ಅಷ್ಟೇ ಪ್ರಮಾಣದಲ್ಲಿ ಕಲೆಕ್ಷನ್​ ಆಗಿದೆ. ಮೂರನೇ ದಿನವಾದ ಭಾನುವಾರ (ಡಿ.18) ಹೆಚ್ಚಿನ ಜನರು ಚಿತ್ರಮಂದಿರಕ್ಕೆ ಬಂದು ‘ಅವತಾರ್​ 2’ ನೋಡಿದ್ದಾರೆ. ಮೂರು ದಿನಕ್ಕೆ ಅನಾಯಾಸವಾಗಿ 100 ಕೋಟಿ ರೂಪಾಯಿಗಿಂತಲೂ ಹೆಚ್ಚಿನ ಕಲೆಕ್ಷನ್​ ಆಗಿದೆ.

ಇದನ್ನೂ ಓದಿ: Avatar 2: ‘ಅವತಾರ್​: ದಿ ವೇ ಆಫ್​ ವಾಟರ್​’ ಚಿತ್ರ ಅದ್ದೂರಿ ರಿಲೀಸ್​; ಆದರೆ ಮೊದಲ ದಿನವೇ ಪೈರಸಿ ಕಾಟ

ವಿಶ್ವಾದ್ಯಂತ ಈ ಸಿನಿಮಾ ಸದ್ದು ಮಾಡುತ್ತಿದೆ. ವಿಶ್ವ ಮಾರುಕಟ್ಟೆಯಲ್ಲಿ ಎರಡೇ ದಿನದಲ್ಲಿ 1500 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ ಎಂದು ಅಂದಾಜಿಸಲಾಗಿದೆ. 2009ರಲ್ಲಿ ‘ಅವತಾರ್​’ ಚಿತ್ರ ತೆರೆಕಂಡಿತ್ತು. ಅದರ ಮುಂದುವರಿದ ಭಾಗವಾಗಿ ‘ಅವತಾರ್​: ದಿ ವೇ ಆಫ್​ ವಾಟರ್​’ ಚಿತ್ರ ಈಗ ತೆರೆಕಂಡಿದೆ. 52 ಸಾವಿರಕ್ಕೂ ಅಧಿಕ ಪರದೆಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಅಂತಿಮವಾಗಿ ಈ ಚಿತ್ರ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:26 pm, Sun, 18 December 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ