Avatar 2: 1650 ರೂ. ದಾಟಿದ ‘ಅವತಾರ್​ 2’ ಟಿಕೆಟ್​ ಬೆಲೆ; ಆದ್ರೂ ಮುಗಿಬಿದ್ದು ಬುಕ್​ ಮಾಡುತ್ತಿರುವ ಪ್ರೇಕ್ಷಕರು

James Cameron | Avatar The Way of Water: ಬೆಂಗಳೂರಿನ ಪ್ರಮುಖ ಮಲ್ಟಿಪ್ಲೆಕ್ಸ್​ಗಳಲ್ಲಿ ಈಗಾಗಲೇ ‘ದಿ ಅವತಾರ್​ 2’ ಚಿತ್ರದ ಟಿಕೆಟ್​ ಬುಕಿಂಗ್​ಗೆ ಅವಕಾಶ ನೀಡಲಾಗಿದೆ. ಇನ್ನೂ ಅನೇಕ ಕಡೆಗಳಲ್ಲಿ ಬುಕಿಂಗ್​ ಓಪನ್​ ಆಗುವುದು ಬಾಕಿ ಇದೆ.

Avatar 2: 1650 ರೂ. ದಾಟಿದ ‘ಅವತಾರ್​ 2’ ಟಿಕೆಟ್​ ಬೆಲೆ; ಆದ್ರೂ ಮುಗಿಬಿದ್ದು ಬುಕ್​ ಮಾಡುತ್ತಿರುವ ಪ್ರೇಕ್ಷಕರು
ಅವತಾರ್ 2
Follow us
TV9 Web
| Updated By: ಮದನ್​ ಕುಮಾರ್​

Updated on: Nov 24, 2022 | 8:00 AM

ಸಿನಿಮಾಗಳ ಟಿಕೆಟ್​ ಬೆಲೆ ವಿಚಾರದಲ್ಲಿ ಚರ್ಚೆ ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಾರದೇ ಇರಲು ದುಬಾರಿ ಟಿಕೆಟ್​ ಬೆಲೆಯೇ ಕಾರಣ ಎಂಬ ವಾದ ಇದೆ. ಹಾಗಾಗಿ ಇತ್ತೀಚಿನ ಕೆಲವು ಸಿನಿಮಾಗಳ ಟಿಕೆಟ್​ ಬೆಲೆ ತಗ್ಗಿಸುವ ಪ್ರಯೋಗ ನಡೆದಿತ್ತು. ಆದರೆ ಬಹುನಿರೀಕ್ಷಿತ ‘ಅವತಾರ್​ 2’ (Avatar The Way of Water) ಚಿತ್ರ ಬೇರೆಯದೇ ಮಾರ್ಗ ಅನುಸರಿಸುತ್ತಿದೆ. ಈ ಸಿನಿಮಾದ ಟಿಕೆಟ್​ ಬೆಲೆ ಮುಗಿಲು ಮುಟ್ಟಿದೆ. ಸಾಮಾನ್ಯಾವಾಗಿ 300 ಅಥವಾ 350 ರೂಪಾಯಿ ಇರುತ್ತಿದ್ದ ಸ್ಕ್ರೀನ್​ಗಳಲ್ಲಿ ಈ ಸಿನಿಮಾದ ಬೆಲೆ ಸಾವಿರ ರೂಪಾಯಿ ದಾಟಿದೆ. ಕೆಲವು ಕಡೆಗಳಲ್ಲಿ 1,650 ರೂಪಾಯಿ ತನಕವೂ ಟಿಕೆಟ್​ (Avatar 2 Movie Ticket) ಬೆಲೆ ಇದೆ. ಹಾಗಿದ್ದರೂ ಕೂಡ ಪ್ರೇಕ್ಷಕರು ಮುಗಿಬಿದ್ದು ಈ ಹಾಲಿವುಡ್​ (Hollywood) ಚಿತ್ರದ ಟಿಕೆಟ್​ ಬುಕ್​ ಮಾಡುತ್ತಿದ್ದಾರೆ ಎಂಬುದು ವಿಶೇಷ.

ಡಿಸೆಂಬರ್​ 16ರಂದು ‘ಅವತಾರ್​ 2’ ಚಿತ್ರ ಬಿಡುಗಡೆ ಆಗಲಿದೆ. ಇನ್ನೂ 24 ದಿನಗಳು ಬಾಕಿ ಇರುವಾಗಲೇ ಚಿತ್ರದ ಬುಕಿಂಗ್​ ಓಪನ್​ ಮಾಡಲಾಗಿದೆ. 3ಡಿ, ಐಮ್ಯಾಕ್ಸ್​ 3ಡಿ, 4ಡಿಎಕ್ಸ್​ ಮುಂತಾದ ವರ್ಷನ್​ಗಳಲ್ಲಿ ಈ ಚಿತ್ರ ತೆರೆಕಾಣಲಿದೆ. ಜಗತ್ತಿನಾದ್ಯಂತ ಇರುವ ಪ್ರೇಕ್ಷಕರು ಈ ಚಿತ್ರಕ್ಕಾಗಿ ಕಾದಿದ್ದಾರೆ. ಬೆಂಗಳೂರಿನಲ್ಲೂ ಮೊದಲ ದಿನ ಭರ್ಜರಿ ಪ್ರದರ್ಶನ ಕಾಣಲಿದೆ ಎಂಬುದಕ್ಕೆ ಸೂಚನೆ ಸಿಕ್ಕಿದೆ.

ಬೆಂಗಳೂರಿನ ಪ್ರಮುಖ ಮಲ್ಟಿಪ್ಲೆಕ್ಸ್​ಗಳಲ್ಲಿ ಈಗಾಗಲೇ ‘ದಿ ಅವತಾರ್​ 2’ ಚಿತ್ರದ ಟಿಕೆಟ್​ ಬುಕಿಂಗ್​ಗೆ ಅವಕಾಶ ನೀಡಲಾಗಿದೆ. ಟಿಕೆಟ್​ ಬೆಲೆ 800, 1000, 1500 ಮತ್ತು ಕೆಲವು ಕೆಲವು ಕಡೆಗಳಲ್ಲಿ 1650 ರೂಪಾಯಿ ಇದ್ದರೂ ಕೂಡ ಜನರು ಬುಕ್​ ಮಾಡುತ್ತಿದ್ದಾರೆ. ಇನ್ನೂ ಅನೇಕ ಕಡೆಗಳಲ್ಲಿ ಬುಕಿಂಗ್​ ಓಪನ್​ ಆಗುವುದು ಬಾಕಿ ಇದೆ. ಸಿಂಗಲ್​ ಸ್ಕ್ರೀನ್​ಗಳಲ್ಲಿ ಎಷ್ಟು ದರ ಇರಲಿದೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇದನ್ನೂ ಓದಿ
Image
Avatar 2: ಕನ್ನಡಿಗರ ಒತ್ತಾಯಕ್ಕೆ ಮಣಿದ ಹಾಲಿವುಡ್​ ನಿರ್ಮಾಪಕ; ಕನ್ನಡದಲ್ಲೂ ತೆರೆ ಕಾಣಲಿದೆ ‘ಅವತಾರ್​ 2’ ಚಿತ್ರ
Image
‘ಅವತಾರ್​’ ಸರಣಿ ಚಿತ್ರಗಳ ಬಜೆಟ್ ಎಷ್ಟು ಸಾವಿರ ಕೋಟಿ ರೂಪಾಯಿ? ಸೀಕ್ವೆಲ್ ಕೈ ಬಿಡುವ ಆಲೋಚನೆಯಲ್ಲಿ ನಿರ್ದೇಶಕ  
Image
ಅಚ್ಚರಿಗಳ ಲೋಕವಾಯಿತು ‘ಅವತಾರ್ 2’ ಸಿನಿಮಾ ಟ್ರೇಲರ್; ಹೊಸ ಜಗತ್ತು ಪರಿಚಯಿಸಿದ ಜೇಮ್ಸ್ ಕ್ಯಾಮೆರಾನ್
Image
13 ವರ್ಷಗಳ ಬಳಿಕ ಬರುತ್ತಿದೆ ‘ಅವತಾರ್’ ಸೀಕ್ವೆಲ್​; ವರ್ಷಾಂತ್ಯಕ್ಕೆ ‘ಅವತಾರ್​ 2’, 2028ಕ್ಕೆ ‘ಅವತಾರ್​ 5’

ಜೇಮ್ಸ್​ ಕ್ಯಾಮೆರಾನ್​ ಅವರು ‘ಅವತಾರ್​ 2’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಅವರ ಮೇಲೆ ಪ್ರೇಕ್ಷಕರಿಗೆ ಸಿಕ್ಕಾಪಟ್ಟೆ ಭರವಸೆ ಇದೆ. 13 ವರ್ಷಗಳ ಹಿಂದೆ ‘ಅವತಾರ್​’ ಚಿತ್ರ ತೆರೆಕಂಡು ದಾಖಲೆ ಬರೆದಿತ್ತು. ಆ ದಾಖಲೆಯನ್ನು ‘ಅವತಾರ್​ 2’ ಮುರಿಯಲಿದೆಯೇ ಎಂಬುದನ್ನು ತಿಳಿಯುವ ಕೌತುಕ ನಿರ್ಮಾಣ ಆಗಿದೆ. ಕನ್ನಡಕ್ಕೂ ಡಬ್​ ಆಗಿ ಈ ಚಿತ್ರ ಬಿಡುಗಡೆ ಆಗುತ್ತಿದೆ. ಚಿತ್ರದ ಝಲಕ್​ ಹೇಗಿರಲಿದೆ ಎಂಬುದನ್ನು ತಿಳಿಸಲು ಟ್ರೇಲರ್​ ಬಿಡುಗಡೆ ಆಗಿದೆ. ಬೇರೊಂದು ಲೋಕವನ್ನೇ ಪರಿಚಯಿಸುವಂತಹ ದೃಶ್ಯಗಳು ಟ್ರೇಲರ್​ನಲ್ಲಿ ಹೈಲೈಟ್​ ಆಗಿವೆ. ಅತ್ಯಾಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನ ಈ ಚಿತ್ರಕ್ಕೆ ಬಳಕೆ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ