AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಸ್ಟಾರ್ ನಟರ ಸಿನಿಮಾಗಳನ್ನೇ ಮೀರಿಸಿದ ಹಾಲಿವುಡ್ ಸಿನಿಮಾ

ಭಾರತದಲ್ಲೂ ಸಹ ಈ ಸಿನಿಮಾಕ್ಕೆ ಭಾರಿ ದೊಡ್ಡ ಕ್ರೇಜ್ ಇದೆ. ಯಾವ ಮಟ್ಟಿಗೆಂದರೆ ಸಿನಿಮಾ ಬಿಡುಗಡೆ ಆಗಲು ಇನ್ನೂ ಮೂರು ವಾರಗಳಿರುವಾಗ ಅಡ್ವನ್ಸ್ ಬುಕಿಂಗ್​​ನಲ್ಲಿಯೇ ಸಿನಿಮಾ 60 ಕೋಟಿಗೂ ಹೆಚ್ಚು ಹಣವನ್ನು ಬಾಕ್ಸ್ ಆಫೀಸ್​​ನಲ್ಲಿ ಬಾಚಿಕೊಂಡಿದೆ. ಸಿನಿಮಾದ ಬಿಡುಗಡೆ ದಿನಯ ಬಹುತೇಕ ಶೋಗಳು ಹೌಸ್​​ಫುಲ್ ಆಗಿವೆ. ಭಾರತದ ಸ್ಟಾರ್ ನಟರ ಸಿನಿಮಾಗಳಿಗೂ ಸಿಗದಂಥಹಾ ಪ್ರತಿಕ್ರಿಯೆ ಪ್ರೇಕ್ಷಕರಿಂದ ಸಿಗುತ್ತಿದೆ.

ಭಾರತದ ಸ್ಟಾರ್ ನಟರ ಸಿನಿಮಾಗಳನ್ನೇ ಮೀರಿಸಿದ ಹಾಲಿವುಡ್ ಸಿನಿಮಾ
Avengers
ಮಂಜುನಾಥ ಸಿ.
|

Updated on: Nov 25, 2026 | 12:17 PM

Share

ಮುಖ್ಯಾಂಶಗಳು

  • ‘ಅವೇಂಜರ್ಸ್: ಡೂಮ್ಸ್​​ಡೇ’ ಹಾಲಿವುಡ್ ಸಿನಿಮಾ
  • ಭರ್ಜರಿ ಮುಂಗಡ ಬುಕಿಂಗ್ ಕಾಣುತ್ತಿದೆ ಈ ಸಿನಿಮಾ
  • ಈಗಾಗಲೇ 61 ಕೋಟಿ ರೂಪಾಯಿ ಗಳಿಕೆ ಮಾಡಿದೆ

ಹಾಲಿವುಡ್ ಸಿನಿಮಾ ‘ಅವೇಂಜರ್ಸ್: ಡೂಮ್ಸ್​ಡೇ’ ಭಾರತದಲ್ಲಿ ಡಿಸೆಂಬರ್ 17ಕ್ಕೆ ರಿಲೀಸ್ ಆಗಲಿದೆ. ವಿಶ್ವದಾದ್ಯಂತ ಭಾರಿ ನಿರೀಕ್ಷಿತ ಸಿನಿಮಾ ಇದೆನ್ನಲಾಗುತ್ತಿದೆ. ಭಾರತದಲ್ಲೂ ಸಹ ಈ ಸಿನಿಮಾಕ್ಕೆ ಭಾರಿ ದೊಡ್ಡ ಕ್ರೇಜ್ ಇದೆ. ಯಾವ ಮಟ್ಟಿಗೆಂದರೆ ಸಿನಿಮಾ ಬಿಡುಗಡೆ ಆಗಲು ಇನ್ನೂ ಮೂರು ವಾರಗಳಿರುವಾಗ ಅಡ್ವನ್ಸ್ ಬುಕಿಂಗ್​​ನಲ್ಲಿಯೇ ಸಿನಿಮಾ 60 ಕೋಟಿಗೂ ಹೆಚ್ಚು ಹಣವನ್ನು ಬಾಕ್ಸ್ ಆಫೀಸ್​​ನಲ್ಲಿ ಬಾಚಿಕೊಂಡಿದೆ. ಸಿನಿಮಾದ ಬಿಡುಗಡೆ ದಿನಯ ಬಹುತೇಕ ಶೋಗಳು ಹೌಸ್​​ಫುಲ್ ಆಗಿವೆ. ಭಾರತದ ಸ್ಟಾರ್ ನಟರ ಸಿನಿಮಾಗಳಿಗೂ ಸಿಗದಂಥಹಾ ಪ್ರತಿಕ್ರಿಯೆ ಪ್ರೇಕ್ಷಕರಿಂದ ಸಿಗುತ್ತಿದೆ.

ಸಿನಿಮಾ ಬಿಡುಗಡೆಗೆ ಒಂದು ತಿಂಗಳಿರುವಾಗ ಸಿನಿಮಾದ ಮುಂಗಡ ಟಿಕೆಟ್ ಬುಕಿಂಗ್ ಆರಂಭವಾಯ್ತು. ಅಂದರೆ ಸರಿಯಾಗಿ ನವೆಂಬರ್ 17ಕ್ಕೆ ಸಿನಿಮಾದ ಮುಂಗಡ ಬುಕಿಂಗ್ ಆರಂಭವಾಗಿದ್ದು, ಒಂದು ವಾರ ಕಳೆಯುವಷ್ಟರಲ್ಲಿ ಕೇವಲ ಮುಂಗಡ ಬುಕಿಂಗ್ ಇಂದಲೇ ಸಿನಿಮಾ 61 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಸಿನಿಮಾ ಬಿಡುಗಡೆಗೆ ಇನ್ನೂ ಮೂರು ವಾರಗಳಿದ್ದು, ಸಿನಿಮಾದ ಮುಂಗಡ ಗಳಿಕೆಯೇ 100 ಕೋಟಿ ದಾಟುವ ನಿರೀಕ್ಷೆ ಇದೆ.

‘ಅವೇಂಜರ್ಸ್: ಡೂಮ್ಸ್​​ಡೇ’ ಸಿನಿಮಾದ ಸುಮಾರು 9 ಲಕ್ಷ ಟಿಕೆಟ್​​ಗಳು ಮಲ್ಟಿಪ್ಲೆಕ್ಸ್​ ಚೇನ್​​ಗಳಲ್ಲಿ ಈ ವರೆಗೆ ಮಾರಾಟ ಆಗಿವೆ. ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಇನ್ನೂ ಮುಂಗಡ ಬುಕಿಂಗ್ ಓಪನ್ ಆಗಿಲ್ಲ. ಈ ವರೆಗೆ ಭಾರತದ 294 ಚಿತ್ರಮಂದಿರಗಳಲ್ಲಿ ಸುಮಾರು 8,133 ಶೋಗಳನ್ನು ನೀಡಲಾಗಿದ್ದು. ಶೋಗಳ ಸಂಖ್ಯೆ ಇನ್ನೂ ಹೆಚ್ಚಾಗಲಿದೆ. ಸಿನಿಮಾ ಇಂಗ್ಲೀಷ್​​ನಲ್ಲಿ ಮಾತ್ರವಲ್ಲದೆ ಭಾರತದ ಹಲವು ಭಾಷೆಗಳಲ್ಲಿ ಸಹ ರಿಲೀಸ್ ಆಗಲಿದೆ. ಆದರೆ ಈ ವೆರಗೆ ಇಂಗ್ಲೀಷ್ ಆವೃತ್ತಿಗೆ ಹೆಚ್ಚು ಅಡ್ವಾನ್ಸ್ ಬುಕಿಂಗ್ ಆಗಿದೆ.

ಇದನ್ನೂ ಓದಿ:‘ವಾರಣಾಸಿ’ ಬಳಿಕ ಹಾಲಿವುಡ್​​ ಸಿನಿಮಾ ನಿರ್ದೇಶಿಸಲಿದ್ದಾರೆ ರಾಜಮೌಳಿ

‘ಅವೇಂಜರ್ಸ್: ಡೂಮ್ಸ್​​ಡೇ’ ಸಿನಿಮಾ, ವಿಶ್ವ ಸಿನಿಮಾರಂಗದಲ್ಲಿ ಅತ್ಯಂತ ದೊಡ್ಡ ಸಿನಿಮಾ ಎಎನಿಸಿಕೊಂಡಿದೆ. ಹಾಲಿವುಡ್​​ನ ಹಲವಾರು ಸ್ಟಾರ್ ನಟ-ನಟಿಯರು ಒಟ್ಟಿಗೆ ಈ ಸಿನಿಮಾನಲ್ಲಿ ನಟನೆ ಮಾಡಿದ್ದಾರೆ. ಸಿನಿಮಾದ ವಿಲನ್ ಆಗಿ ಹಾಲಿವುಡ್​​ನ ದೊಡ್ಡ ಸ್ಟಾರ್ ನಟ ರಾಬರ್ಟ್ ಡೌನಿ ಜೂನಿಯರ್ ನಟನೆ ಮಾಡಿದ್ದಾರೆ. ಡಾ ಡೂಮ್​​ ಪಾತ್ರದಲ್ಲಿ ರಾಬರ್ಟ್ ಡೌನಿ ಜೂನಿಯರ್ ನಟಿಸಿದ್ದು, ವಿಲನ್ ಅನ್ನು ಕೊಲ್ಲಲು ಎಂಸಿಯುನಲ್ಲಿರುವ ಬಹುತೇಕ ಎಲ್ಲ ಸೂಪರ್ ಹೀರೋಗಳು ಒಂದಾಗಿದ್ದಾರೆ. ಸಿನಿಮಾದ ಫೈನಲ್ ಟ್ರೈಲರ್ ಇತ್ತೀಚೆಗಷ್ಟೆ ರಿಲೀಸ್ ಆಗಿದ್ದು, ಭಾರಿ ವೈರಲ್ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!
ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!
ಬೆಂಗಳೂರಿನಲ್ಲಿ ದಿಲ್ಜಿತ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ
ಬೆಂಗಳೂರಿನಲ್ಲಿ ದಿಲ್ಜಿತ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ
‘ಆಪರೇಷನ್ ಗಜ’ ಕಾರ್ಯಾಚರಣೆಗೆ ವ್ಯಾಪಕ ವಿರೋಧ: ಮೂಡಿಗೆರೆ ಬಂದ್‌
‘ಆಪರೇಷನ್ ಗಜ’ ಕಾರ್ಯಾಚರಣೆಗೆ ವ್ಯಾಪಕ ವಿರೋಧ: ಮೂಡಿಗೆರೆ ಬಂದ್‌
ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ ಸಿಎಂ
ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ ಸಿಎಂ
ಇಂದು ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಸಂಕಷ್ಟ
ಇಂದು ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಸಂಕಷ್ಟ
ಕಲಬುರ್ಗಿಯಲ್ಲಿ ನಾಳೆ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಕೇಸರಿ ಕಹಳೆ
ಕಲಬುರ್ಗಿಯಲ್ಲಿ ನಾಳೆ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಕೇಸರಿ ಕಹಳೆ
‘ಕಂಠೀಹಾರ ಕೊಡಲು ಆಗಲ್ಲ’: ನರೇಂದ್ರಸ್ವಾಮಿ ಹೇಳಿಕೆಗೆ ರಮ್ಯಾ ಖಂಡನೆ
‘ಕಂಠೀಹಾರ ಕೊಡಲು ಆಗಲ್ಲ’: ನರೇಂದ್ರಸ್ವಾಮಿ ಹೇಳಿಕೆಗೆ ರಮ್ಯಾ ಖಂಡನೆ