AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಒಡೆಸ್ಸಿ’ ಅಬ್ಬರ; ಈ ಐಕಾನಿಕ್ ಥಿಯೇಟರ್‌ನಲ್ಲಿ ಎರಡು ತಿಂಗಳ ಶೋಗಳು ಹೌಸ್​​ಫುಲ್

ಖ್ಯಾತ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಅವರ ಎಪಿಕ್ ಸಿನಿಮಾ 'ದಿ ಒಡೆಸ್ಸಿ' ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸುತ್ತಿದೆ. ಲಂಡನ್‌ನ ಪ್ರತಿಷ್ಠಿತ ಬಿಎಫ್‌ಐ ಐಮ್ಯಾಕ್ಸ್ ಚಿತ್ರಮಂದಿರದಲ್ಲಿ ಮುಂದಿನ ಸೆಪ್ಟೆಂಬರ್ 10ರವರೆಗಿನ ಎಲ್ಲಾ ಶೋಗಳು ಸಂಪೂರ್ಣ ಸೋಲ್ಡ್ ಔಟ್ ಆಗಿವೆ. ಜಾಗತಿಕವಾಗಿ ಅತಿ ದೊಡ್ಡ ಓಪನಿಂಗ್ ಪಡೆದಿರುವ ಈ ಚಿತ್ರ, ಭಾರತದಲ್ಲೂ ಕೇವಲ 5 ದಿನಗಳಲ್ಲಿ ಬರೋಬ್ಬರಿ ₹93 ಕೋಟಿಗೂ ಅಧಿಕ ಗ್ರಾಸ್ ಕಲೆಕ್ಷನ್ ಮಾಡಿ ಧೂಳೆಬ್ಬಿಸುತ್ತಿದೆ.

'ದಿ ಒಡೆಸ್ಸಿ' ಅಬ್ಬರ; ಈ ಐಕಾನಿಕ್ ಥಿಯೇಟರ್‌ನಲ್ಲಿ ಎರಡು ತಿಂಗಳ ಶೋಗಳು ಹೌಸ್​​ಫುಲ್
ದಿ ಒಡೆಸ್ಸಿ
ರಾಜೇಶ್ ದುಗ್ಗುಮನೆ
|

Updated on: Jul 22, 2026 | 9:08 AM

Share

ಮುಖ್ಯಾಂಶಗಳು

  • ಲಂಡನ್ ಐಕಾನಿಕ್ ಥಿಯೇಟರ್‌ನಲ್ಲಿ 2 ತಿಂಗಳು ಹೌಸ್‌ಫುಲ್
  • ವಿದೇಶಗಳಿಂದ ಹರಿದು ಬರ್ತಿದ್ದಾರೆ ಪ್ರೇಕ್ಷಕರು
  • ನೋಲನ್ ಕೆರಿಯರ್‌ನಲ್ಲೇ ಬಿಗ್ ರೆಕಾರ್ಡ್

ಹಾಲಿವುಡ್‌ನ ಖ್ಯಾತ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ನಿರ್ದೇಶನದ ಸಿನಿಮಾಗಳು ವಿಶ್ವಾದ್ಯಂತ ಗಮನ ಸೆಳೆಯುತ್ತವೆ. ಅವರ ಸಿನಿಮಾಗೆ ಕಾಯುವಿಕೆ ದೊಡ್ಡದಾಗಿಯೇ ಇರುತ್ತದೆ. ಈಗ ಅವರ ನಿರ್ದೇಶನದ ‘ದಿ ಒಡೆಸ್ಸಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಯ ಬೇಟೆ ಮುಂದುವರಿಸಿದೆ. ಈ ಸಿನಿಮಾ ಭಾರತದಲ್ಲೂ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಈಗ ಸಿನಿಮಾ ಒಂದು ಅಚ್ಚರಿಯ ಘಟನೆಗೆ ಸಾಕ್ಷಿಯಾಗಿದೆ.

ಲಂಡನ್ ಥಿಯೇಟರ್

ಲಂಡನ್‌ನ ಪ್ರತಿಷ್ಠಿತ ಬಿಎಫ್‌ಐ ಐಮ್ಯಾಕ್ಸ್ (BFI IMAX – 70mm) ಚಿತ್ರಮಂದಿರದಲ್ಲಿ ‘ದಿ ಒಡೆಸ್ಸಿ’ ಸಿನಿಮಾದ ಕ್ರೇಜ್ ಹೊಸ ಇತಿಹಾಸ ಸೃಷ್ಟಿಸಿದೆ. ಈ ಐಕಾನಿಕ್ ಥಿಯೇಟರ್‌ನಲ್ಲಿ ಮುಂಬರುವ ಸೆಪ್ಟೆಂಬರ್ 10ರವರೆಗಿನ ಎಲ್ಲಾ ಶೋಗಳ ಟಿಕೆಟ್‌ಗಳು ಸಂಪೂರ್ಣವಾಗಿ ಮಾರಾಟವಾಗಿವೆ. ಅಂದರೆ ಮುಂದಿನ ಸುಮಾರು ಎರಡು ತಿಂಗಳ ಕಾಲ ಈ ಚಿತ್ರಮಂದಿರದಲ್ಲಿ ಒಂದು ಸೀಟು ಕೂಡ ಖಾಲಿ ಇಲ್ಲದಂತೆ ಪ್ರೇಕ್ಷಕರು ಮುಂಗಡವಾಗಿ ಟಿಕೆಟ್ ಬುಕ್ ಮಾಡಿದ್ದಾರೆ. ಇದು ನೋಲನ್ ಅವರ ಸಿನಿಮಾಗೆ ಇರುವ ಜಾಗತಿಕ ಮಟ್ಟದ ಅಭೂತಪೂರ್ವ ಕ್ರೇಜ್‌ಗೆ ಸಾಕ್ಷಿಯಾಗಿದೆ.

ಕ್ರಿಸ್ಟೋಫರ್ ನೋಲನ್ ಅವರು ಯಾವ ರೀತಿ ಪ್ರೇಕ್ಷಕರಿಗೆ ಸಿನಿಮಾ ತೋರಿಸಬೇಕು ಎಂದು ಬಯಸಿದ್ದರೋ, ಅದೇ ಗುಣಮಟ್ಟದಲ್ಲಿ ಪ್ರದರ್ಶಿಸುವ ವಿಶ್ವದ ಕೆಲವೇ ಕೆಲವು ಚಿತ್ರಮಂದಿರಗಳಲ್ಲಿ ಈ ಬಿಎಫ್‌ಐ ಐಮ್ಯಾಕ್ಸ್ ಕೂಡ ಒಂದು. ಹೀಗಾಗಿಯೇ ಬೇರೆ ಬೇರೆ ದೇಶಗಳಿಂದಲೂ ಪ್ರೇಕ್ಷಕರು ಲಂಡನ್‌ಗೆ ಬಂದು ಈ ಥಿಯೇಟರ್‌ನಲ್ಲಿ ಸಿನಿಮಾ ವೀಕ್ಷಿಸುತ್ತಿದ್ದಾರೆ. ಇಷ್ಟೇ ಅಲ್ಲದೆ, ಈ ಥಿಯೇಟರ್ ಇತಿಹಾಸದಲ್ಲೇ ಅತಿ ದೊಡ್ಡ ಓಪನಿಂಗ್ ಪಡೆದ ಸಿನಿಮಾ ಎಂಬ ಹೆಗ್ಗಳಿಕೆಯನ್ನೂ ‘ದಿ ಒಡೆಸ್ಸಿ’ ಪಡೆದುಕೊಂಡಿದ್ದು, ಈ ಹಿಂದೆ ಇದ್ದ ‘ಸ್ಟಾರ್ ವಾರ್ಸ್: ದಿ ಲಾಸ್ಟ್ ಜೆಡಿ’ ಚಿತ್ರದ ದಾಖಲೆಯನ್ನು ಮುರಿದಿದೆ.

‘ದಿ ಒಡೆಸ್ಸಿ’ ಸಿನಿಮಾ ನೋಲನ್ ವೃತ್ತಿಜೀವನದಲ್ಲೇ ಜಾಗತಿಕ ಮಟ್ಟದಲ್ಲಿ ಅತಿ ದೊಡ್ಡ ಓಪನಿಂಗ್ ಪಡೆದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮೊದಲ ವಾರಾಂತ್ಯದಲ್ಲೇ ಬರೋಬ್ಬರಿ 264 ಮಿಲಿಯನ್ ಡಾಲರ್ ಗಳಿಕೆ ಮಾಡುವ ಮೂಲಕ ಈ ಸಿನಿಮಾ ನೋಲನ್ ಅವರದ್ದೇ ಆದ ‘ದಿ ಡಾರ್ಕ್ ನೈಟ್ ರೈಸಸ್’ ಚಿತ್ರದ ದಾಖಲೆಯನ್ನು ಬದಿಗೆ ತಳ್ಳಿದೆ.

ಇದನ್ನೂ ಓದಿ: ‘ದಿ ಒಡೆಸ್ಸಿ’ ಪ್ರೀಮಿಯರ್ ಶೋಗಾಗಿ ಭಾರತಕ್ಕೆ ಬರ್ತಾರೆ ಕ್ರಿಸ್ಟೋಫರ್ ನೋಲನ್

ಭಾರತದಲ್ಲಿ ‘ದಿ ಒಡೆಸ್ಸಿ’ ಕಲೆಕ್ಷನ್ ವಿವರ

ಭಾರತದಲ್ಲೂ ಈ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದ್ದು, ಒಟ್ಟು 597 ಶೋಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಬಿಡುಗಡೆಯಾದ 5ನೇ ದಿನವಾದ (ಮೊದಲ ಮಂಗಳವಾರ) ₹8.35 ಕೋಟಿ ಗಳಿಕೆ ಮಾಡಿದ್ದು, ಚಿತ್ರಮಂದಿರಗಳಲ್ಲಿ ಶೇಕಡಾ 40.8 ರಷ್ಟು ಆಕ್ಯುಪೆನ್ಸಿ ಇತ್ತು. ಈ ಮೂಲಕ 5 ದಿನಗಳ ಅಂತ್ಯಕ್ಕೆ ಭಾರತದಲ್ಲಿ ಒಟ್ಟು 93.02 ಕೋಟಿ ಗ್ರಾಸ್ ಕಲೆಕ್ಷನ್ ಹಾಗೂ 77.98 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ಭಾರತದ ಅಂತಿಮ ಕಲೆಕ್ಷನ್ ವರದಿ ಇನ್ನಷ್ಟೇ ಬರಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ