ಆಸ್ಕರ್​ ಅವಾರ್ಡ್ಸ್​​​​ಗೆ ನೆನಪಾಗಿಲ್ಲ ಬಾಲಿವುಡ್​ ಲೆಜೆಂಡ್ ನಟ ಧರ್ಮೇಂದ್ರ

Oscars 2026: ಆಸ್ಕರ್ 2026 ಸಮಾರಂಭದಲ್ಲಿ ಬಾಲಿವುಡ್ ದಂತಕಥೆ ಧರ್ಮೇಂದ್ರ ಅವರನ್ನು 'ಇನ್ ಮೆಮೋರಿಯಮ್' ವಿಭಾಗದಲ್ಲಿ ಸ್ಮರಿಸದಿರುವುದು ಅಭಿಮಾನಿಗಳಿಗೆ ತೀವ್ರ ನಿರಾಶೆ ಮೂಡಿಸಿದೆ. ಭಾರತೀಯ ಚಿತ್ರರಂಗಕ್ಕೆ ಧರ್ಮೇಂದ್ರರ ಅಪಾರ ಕೊಡುಗೆಯನ್ನು ಪರಿಗಣಿಸದೆ, ಅಕಾಡೆಮಿ ಗೌರವ ನೀಡದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ.

ಆಸ್ಕರ್​ ಅವಾರ್ಡ್ಸ್​​​​ಗೆ ನೆನಪಾಗಿಲ್ಲ ಬಾಲಿವುಡ್​ ಲೆಜೆಂಡ್ ನಟ ಧರ್ಮೇಂದ್ರ
ಧರ್ಮೆಂದ್ರ

Updated on: Mar 16, 2026 | 7:35 AM

Oscars 2026 Updates:98ನೇ ಸಾಲಿ ಆಸ್ಕರ್ ಅವಾರ್ಟಡ್ ಕಾರ್ಯಕ್ರಮ ಭಾರತೀಯ ಕಾಲಮಾನದ ಪ್ರಕಾರ ಸೋಮವಾರ (ಮಾರ್ಚ್ 16) ಬೆಳಿಗ್ಗೆ ಆರಂಭ ಆಗಿದೆ. ಭಾರತ ಹಾಗೂ ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಕಾರ್ಯಕ್ರಮದಲ್ಲಿ ಮಿಂಚಿದರು. ಅಚ್ಚರಿಯೆಂದರೆ, ಬಾಲಿವುಡ್ ದಂತಕಥೆ ಧರ್ಮೇಂದ್ರ ಅವರನ್ನು ಆಸ್ಕರ್ 2026 ‘ಮೆಮೋರಿಯಮ್’ ವಿಭಾಗದಲ್ಲಿ ಸೇರಿಸಲಾಗಿಲ್ಲ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಭಾರತ ಮೂಲದ ಅಮೆರಿಕ ನಿರ್ದೇಶಕಿ ಗೀತಾ ಕೂಡ ಆಸ್ಕರ್ ಕಾರ್ಯಕ್ರಮದಲ್ಲಿ ಇದ್ದರು. ‘ದಿ ಪರ್ಫೆಕ್ಟ್ ನೇಬರ್’ (ಬೆಸ್ಟ್ ಡಾಕ್ಯುಮೆಂಟರಿ ಫೀಚರ್) ಹಾಗೂ ‘ದಿ ಡೆವಿಲ್’ (ದಿ ಬೆಸ್ಟ್ ಡಾಕ್ಯುಮೆಂಟರಿ ಶಾರ್ಟ್) ನಾಮಿನೇಟ್ ಆಗಿದ್ದವು. ಆದರೆ, ಅವಾರ್ಡ್ ಗೆಲ್ಲಲು ಸಾಧ್ಯವಾಗಿಲ್ಲ.

ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ ಧರ್ಮೇಂದ್ರ ಅವರು ಕಳೆದ ವರ್ಷ ನಿಧನ ಹೊಂದಿದರು. ಅವರು ಭಾರತೀಯ ಮತ್ತು ಜಾಗತಿಕ ಸಿನಿಮಾಗೆ ಹಲವು ದಶಕಗಳ ಕಾಲ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಇವರನ್ನು ಅಕಾಡೆಮಿ ಅವಾರ್ಡ್ಸ್​ನಲ್ಲಿ ಗೌರವಿಸಲಾಗುವುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಇದರಲ್ಲಿ ಅವರ ಹೆಸರು ಇರಲೇ ಇಲ್ಲ. ಈ ವರ್ಷ ಅಕಾಡೆಮಿಯ ಗೌರವವು ಇತರ ಸಿನಿಮಾ ರಂಗದ ದಂತಕಥೆಗಳ ಮೇಲೆ ಆಧರಿಸಿದೆ.

ಇದನ್ನೂ ಓದಿ: ಧರ್ಮೇಂದ್ರ ಕುಟುಂಬ ಹೇಮಾ ಮಾಲಿನಿಯನ್ನು ಒಂಟಿ ಮಾಡಿದೆ; ಕೇಳಿ ಬಂತು ಆರೋಪ

ಕಾಮಿಡಿಯನ್ ಕೊನನ್ ಒ ಬ್ರೇನ್ ಅವವರು ಈ ಬಾರಿ ಅಕಾಡೆಮಿ ಅವಾರ್ಡ್ಸ್ ಕಾರ್ಯಕ್ರಮ ಹೋಸ್ಟ್ ಮಾಡಿದ್ದಾರೆ. ‘ಸಿನ್ನರ್ಸ್’ ಸಿನಿಮಾ ಬರೋಬ್ಬರಿ 17 ವಿಭಾಗಳಲ್ಲಿ ನಾಮ ನಿರ್ದೇಶನಗೊಂಡಿದೆ.
ಬಾಲಿವುಡ್​ನ ಹಿರಿಯ ನಟ ಧರ್ಮೇಂದ್ರ ಅವರು ಕಳೆದ ನವೆಂಬರ್ 24ರಂದು ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಹಲವು ಸಮಯದಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೊನೆಗೂ ಬದುಕುಳಿಯಲೇ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us