ಕಾರಿನ ವಸ್ತು ಕದಿಯುತ್ತಿದ್ದವರನ್ನು ತಡೆಯಲು ಹೋದ ನಟನಿಗೆ ಗುಂಡೇಟು; ಸ್ಥಳದಲ್ಲೇ ಸಾವು

ಕೆಲವು ಕಳ್ಳರು ನಟನ ಕಾರಿನಿಂದ ಏನನ್ನೋ ಕದಿಯಲು ಪ್ರಯತ್ನಿಸುತ್ತಿದ್ದರು. ಇದನ್ನು ಪ್ರಶ್ನೆ ಮಾಡಲು ಹೋದ ಜಾನಿ ಮೇಲೆ ಅವರು ಗುಂಡು ಹಾರಿಸಿದರು. ನಟನ ಮೇಲೆ ಶೂಟ್ ಮಾಡಿದ ಮೂವರು ವ್ಯಕ್ತಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಜಾನಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ.

ಕಾರಿನ ವಸ್ತು ಕದಿಯುತ್ತಿದ್ದವರನ್ನು ತಡೆಯಲು ಹೋದ ನಟನಿಗೆ ಗುಂಡೇಟು; ಸ್ಥಳದಲ್ಲೇ ಸಾವು
ಜಾನಿ ವ್ಯಾಕ್ಟರ್
Follow us
ರಾಜೇಶ್ ದುಗ್ಗುಮನೆ
|

Updated on: May 27, 2024 | 1:20 PM

ಹಾಲಿವುಡ್ ನಟ ಜಾನಿ ವ್ಯಾಕ್ಟರ್ (Johnny Wactor) ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಕೇವಲ 37ನೇ ವಯಸ್ಸಿಗೆ ಅವರ ಬದುಕು ಕೊನೆ ಆಗಿದೆ. ಅವರ ಸಾವು ಅನೇಕರಿಗೆ ಶಾಕಿಂಗ್ ಎನಿಸಿದೆ. ಶನಿವಾರ (ಮೇ 25) ಬೆಳಿಗ್ಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ವೆಕ್ಟರ್ ಅನೇಕ ಸಿನಿಮಾ ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ನಟಿಸಿದ್ದರು. ವೆಕ್ಟರ್ ತಾಯಿ ಕೂಡ ಮಗನ ಸಾವನ್ನು ಖಚಿತಪಡಿಸಿದ್ದಾರೆ. ‘ಜನರಲ್ ಹಾಸ್ಪಿಟಲ್’ ಸಿನಿಮಾದಲ್ಲಿ ವೆಕ್ಟರ್ ನಟಿಸಿದ್ದರು.

ಅಮೆರಿಕದ ಲಾಸ್ ಏಂಜಲೀಸ್​ನಲ್ಲಿ ಈ ಘಟನೆ ನಡೆದಿದೆ. ಜಾನಿ ವ್ಯಾಕ್ಟರ್ ಶನಿವಾರ ಬೆಳಿಗ್ಗೆ ತಮ್ಮ ಸ್ನೇಹಿತರೊಂದಿಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಅವರ ಸ್ನೇಹಿತರೊಬ್ಬರ ಗಮನ ನಟನ ಕಾರಿನತ್ತ ಹೋಯಿತು. ಕಾರಿನ ಬಳಿ ಮೂವರು ಅಪರಿಚಿತ ವ್ಯಕ್ತಿಗಳು ಇದ್ದರು. ಅವರು ನಟನ ಕಾರಿನಿಂದ ಏನನ್ನೋ ಕದಿಯಲು ಪ್ರಯತ್ನಿಸುತ್ತಿದ್ದರು. ಇದನ್ನು ಪ್ರಶ್ನೆ ಮಾಡಲು ಹೋದ ಜಾನಿ ಮೇಲೆ ಅವರು ಗುಂಡು ಹಾರಿಸಿದರು. ನಟನ ಮೇಲೆ ಶೂಟ್ ಮಾಡಿದ ಮೂವರು ವ್ಯಕ್ತಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಜಾನಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ.

ಈ ಪ್ರಕರಣದಲ್ಲಿ ಯಾರನ್ನೂ ಪೊಲೀಸರು ಅರೆಸ್ಟ್ ಮಾಡಿಲ್ಲ. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದೆ. ಕಳ್ಳತನ ತಡೆಯಲು ಬಂದಿದ್ದಕ್ಕೆ ಈ ಕೊಲೆ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ನಟನ ಸಾವಿಗೆ ಹಾಲಿವುಡ್ ಮಂದಿ ಸಂತಾಪ ಸೂಚಿಸುತ್ತಿದ್ದಾರೆ. ಅವರು ‘ಸೈಬೀರಿಯಾ ಆ್ಯಂಡ್ ಕ್ರಿಮಿನಲ್ ಮೈಂಡ್ಸ್’, ‘ಆರ್ಮಿ ವೈವ್ಸ್’, ‘ಹಾಲಿವುಡ್ ಗರ್ಲ್’, ‘ದಿ ವೆಸ್ಟ್‌ವರ್ಲ್ಡ್‌’ನಂತಹ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಇದನ್ನೂ ಓದಿ: ಧ್ರುವ ಸರ್ಜಾ ಜಿಮ್ ಟ್ರೈನರ್ ಮೇಲೆ ಹಲ್ಲೆ; ‘ನಮ್ಮ ಹುಡುಗ, ಜೊತೆಗೆ ಇರುತ್ತೇನೆ’ ಎಂದ ನಟ

ಜಾನಿ ಅವರು ಜನಪ್ರಿಯ ಶೋ ‘ಜನರಲ್ ಹಾಸ್ಪಿಟಲ್‌’ ಮೂಲಕ ಖ್ಯಾತಿ ಪಡೆದಿದ್ದರು. ಅವರ ನಿಧನದಿಂದ ಕುಟುಂಬ ಶೋಕದಲ್ಲಿ ಮುಳುಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ