‘ಆರೋಗ್ಯ ಸಮಸ್ಯೆ ಇದೆ’; ಬಾಡಿಗೆ ತಾಯ್ತನ ಆಯ್ಕೆ ಮಾಡಿಕೊಂಡಿದ್ದಕ್ಕೆ ಕಾರಣ ತಿಳಿಸಿದ ಪ್ರಿಯಾಂಕಾ ಚೋಪ್ರಾ

| Updated By: ರಾಜೇಶ್ ದುಗ್ಗುಮನೆ

Updated on: Jan 20, 2023 | 7:56 AM

ಮಗಳಿಗೆ ಮಾಲ್ತಿ ಎಂದು ಪ್ರಿಯಾಂಕಾ ಹೆಸರು ಇಟ್ಟಿದ್ದಾರೆ. ಈ ಮಗು ನಿಗದಿತ ಸಮಯಕ್ಕಿಂತ ಮೂರು ತಿಂಗಳು ಮೊದಲೇ ಜನಿಸಿತ್ತು ಎಂದು ಕೆಲವು ಕಡೆಗಳಲ್ಲಿ ವರದಿ ಆಗಿತ್ತು. ಇದನ್ನು ಪ್ರಿಯಾಂಕಾ ಒಪ್ಪಿಕೊಂಡಿದ್ದಾರೆ.

‘ಆರೋಗ್ಯ ಸಮಸ್ಯೆ ಇದೆ’; ಬಾಡಿಗೆ ತಾಯ್ತನ ಆಯ್ಕೆ ಮಾಡಿಕೊಂಡಿದ್ದಕ್ಕೆ ಕಾರಣ ತಿಳಿಸಿದ ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ
Follow us on

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಬಾಡಿಗೆ ತಾಯ್ತನ ಆಯ್ಕೆ ಮಾಡಿಕೊಂಡಿದ್ದರು. ಈ ಮೂಲಕ ಅವರು ಮಗಳನ್ನು ಪಡೆದಿದ್ದರು. ಈ ಬಗ್ಗೆ ಪರ ವಿರೋಧ ಚರ್ಚೆಗಳು ನಡೆದಿದ್ದವು. ಹಾಲಿವುಡ್​ನಲ್ಲಿ ಬೇಡಿಕೆ ಕಳೆದುಕೊಳ್ಳಬಾರದು ಎಂದು ಪ್ರಿಯಾಂಕಾ ಚೋಪ್ರಾ ಈ ರೀತಿ ಮಾಡಿದ್ದಾರೆ ಎಂದು ಕೆಲವರು ಹೇಳಿದ್ದರು. ಇನ್ನೂ ಕೆಲವರು ಪ್ರಿಯಾಂಕಾ ಚೋಪ್ರಾಗೆ ವಯಸ್ಸಾಗಿದೆ. ಹೀಗಾಗಿ, ಬಾಡಿಗೆ ತಾಯ್ತನವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದೆಲ್ಲ ಸುದ್ದಿ ಹಬ್ಬಿಸಿದ್ದರು. ಈ ವಿಚಾರದಲ್ಲಿ ಮೌನ ಕಾಯ್ದುಕೊಂಡಿದ್ದ ಪ್ರಿಯಾಂಕಾ ಚೋಪ್ರಾ ಅವರು ಈಗ ಈ ಬಗ್ಗೆ ಮಾತನಾಡಿದ್ದಾರೆ. ಜನರ ಊಹೆಗೆ ತೆರೆ ಎಳೆದಿದ್ದಾರೆ.

ಮಗಳಿಗೆ ಮಾಲ್ತಿ ಎಂದು ಪ್ರಿಯಾಂಕಾ ಹೆಸರು ಇಟ್ಟಿದ್ದಾರೆ. ಈ ಮಗು ನಿಗದಿತ ಸಮಯಕ್ಕಿಂತ ಮೂರು ತಿಂಗಳು ಮೊದಲೇ ಜನಿಸಿತ್ತು ಎಂದು ಕೆಲವು ಕಡೆಗಳಲ್ಲಿ ವರದಿ ಆಗಿತ್ತು. ಇದನ್ನು ಪ್ರಿಯಾಂಕಾ ಒಪ್ಪಿಕೊಂಡಿದ್ದಾರೆ. ‘ಮಾಲ್ತಿ ಜನಿಸುವಾಗ ನಾನು ಆಪರೇಷನ್​ ರೂಂನಲ್ಲಿ ಇದ್ದೆ. ಅವಳು ತುಂಬಾನೇ ಚಿಕ್ಕವಳಾಗಿದ್ದಳು. ನನ್ನ ಕೈಗಿಂತ ಚಿಕ್ಕವಳಿದ್ದಳು. ಮನೆಗೆ ಕರೆತರುವುದಕ್ಕೂ ಮುನ್ನ ಅವಳನ್ನು ನಾವು ಆಸ್ಪತ್ರೆಯಲ್ಲಿ ನೋಡಿಕೊಂಡಿದ್ದೇವೆ. ನಿತ್ಯ ನಾವು ಆಸ್ಪತ್ರೆಗೆ ತೆರಳುತ್ತಿದ್ದೆವು’ ಎಂದು ಪ್ರಿಯಾಂಕಾ ಚೋಪ್ರಾ ಹೇಳಿದ್ದಾರೆ.

ಬಾಡಿಗೆ ತಾಯ್ತನ ಆಯ್ಕೆ ಮಾಡಿಕೊಂಡಿದ್ದು ಏಕೆ ಎನ್ನುವ ಪ್ರಶ್ನೆಗೆ ಪ್ರಿಯಾಂಕಾ ಉತ್ತರಿಸಿದ್ದಾರೆ. ‘ನನಗೆ ನನ್ನದೇ ಆದ ಆರೋಗ್ಯ ಸಮಸ್ಯೆಗಳು ಇವೆ’ ಎಂದಷ್ಟೇ ಹೇಳಿದ್ದಾರೆ. ಈ ಮೂಲಕ ಜನರ ಕಲ್ಪನೆಗೆ ಅವರು ತೆರೆ ಎಳೆದಿದ್ದಾರೆ. ಪ್ರಿಯಾಂಕಾ ಚೋಪ್ರಾ ಅವರು ಅಮೆರಿಕದ ಪಾಪ್ ಗಾಯಕ ನಿಕ್ ಜೋನಸ್ ಅವರನ್ನು ಮದುವೆ ಆದ ನಂತರದಲ್ಲಿ ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ. ಹಲವು ಹಾಲಿವುಡ್ ಚಿತ್ರಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ.

ಇದನ್ನೂ ಓದಿ
ತಂದೆ-ತಾಯಿ ಸಮಾಧಿ ಬಳಿ ದುನಿಯಾ ವಿಜಯ್ ಹುಟ್ಟುಹಬ್ಬ; ರಿಲೀಸ್ ಆಯ್ತು ‘ಭೀಮ’ ಫಸ್ಟ್ ಲುಕ್
Shah Rukh Khan: 2000 ರೂಪಾಯಿ ಮೀರಿತು ‘ಪಠಾಣ್​’ ಟಿಕೆಟ್​ ದರ; ಮುಗಿಬಿದ್ದು ಬುಕ್​ ಮಾಡಿದ ಅಪ್ಪಟ ಅಭಿಮಾನಿಗಳು
ಮಗಳು ಮಾಲ್ತಿ ಜತೆ ಮೊದಲ ದೀಪಾವಳಿ ಆಚರಿಸಿಕೊಂಡ ಪ್ರಿಯಾಂಕಾ-ನಿಕ್​; ಇಲ್ಲಿದೆ ಫೋಟೋ

ಇದನ್ನೂ ಓದಿ: ಲಾಸ್​ ವೇಗಾಸ್ ನಲ್ಲಿ ರೊಮ್ಯಾಂಟಿಕ್​ ವಾಕ್​ ಮಾಡಿದ ಪ್ರಿಯಾಂಕಾ ಚೋಪ್ರಾ  ಮತ್ತು ನಿಕ್​ ಜೋನಸ್​  

ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್​​ಗೆ ಮರಳಬೇಕು ಎಂಬುದು ಅವರ ಅಭಿಮಾನಿಗಳ ಬಯಕೆ. ಆದರೆ, ಅದು ಸದ್ಯಕ್ಕಂತೂ ಈಡೇರುವುದಿಲ್ಲ. ಅವರು ಬಾಲಿವುಡ್​​ಗೆ ಮರಳುವ ಯಾವುದೇ ಸೂಚನೆ ಇಲ್ಲ. ಹಾಲಿವುಡ್​ನಲ್ಲೇ ಅವರು ಮುಂದುವರಿಯುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ