AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪದ ದಾಖಲೆ ಬರೆಯಲಿರುವ ‘ಅವತಾರ್’ ನಿರ್ದೇಶಕ ಜೇಮ್ಸ್ ಕ್ಯಾಮರನ್

Avatar fire and ash: ‘ಅವತಾರ್ 3’ ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಜೇಮ್ಸ್ ಕ್ಯಾಮರನ್ ಈ ವರೆಗೆ ನಿರ್ದೇಶಿಸಿರುವ ಸಿನಿಮಾಗಳಲ್ಲಿಯೇ ಕಡಿಮೆ ಗುಣಮಟ್ಟದ ಸಿನಿಮಾ ಇದೆಂದು ಸಹ ಕೆಲವು ವಿಮರ್ಶಕರು ಟೀಕೆ ಮಾಡಿದ್ದಾರೆ. ಭಾರತದ ಬಾಕ್ಸ್ ಆಫೀಸ್​​ನಲ್ಲಿ ‘ಅವತಾರ್ 3’ ಸಾಧಾರಣ ಯಶಸ್ಸನ್ನಷ್ಟೆ ಗಳಿಸಿದೆ. ಇದೆಲ್ಲದರ ಹೊರತಾಗಿಯೂ ‘ಅವತಾರ್ 3’ ಸಿನಿಮಾ ಹಾಗೂ ಸಿನಿಮಾದ ನಿರ್ದೇಶಕ ಜೇಮ್ಸ್ ಕ್ಯಾಮರನ್ ಅಪರೂಪದ ದಾಖಲೆ ಬರೆಯಲು ಸಜ್ಜಾಗಿದ್ದಾರೆ.

ಅಪರೂಪದ ದಾಖಲೆ ಬರೆಯಲಿರುವ ‘ಅವತಾರ್’ ನಿರ್ದೇಶಕ ಜೇಮ್ಸ್ ಕ್ಯಾಮರನ್
James Cameron
ಮಂಜುನಾಥ ಸಿ.
|

Updated on: Dec 30, 2025 | 1:24 PM

Share

ಅವತಾರ್ 3’ (Avatar 3) ಸಿನಿಮಾ ಬಿಡುಗಡೆ ಆಗಿ ಕೆಲ ವಾರಗಷ್ಟೆ ಆಗಿದೆ. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವಿಶ್ವಮಟ್ಟದಲ್ಲಿ ವ್ಯಕ್ತವಾಗಿದೆ. ಜೇಮ್ಸ್ ಕ್ಯಾಮರನ್ ಈ ವರೆಗೆ ನಿರ್ದೇಶಿಸಿರುವ ಸಿನಿಮಾಗಳಲ್ಲಿಯೇ ಕಡಿಮೆ ಗುಣಮಟ್ಟದ ಸಿನಿಮಾ ಇದೆಂದು ಸಹ ಕೆಲವು ವಿಮರ್ಶಕರು ಟೀಕೆ ಮಾಡಿದ್ದಾರೆ. ಭಾರತದ ಬಾಕ್ಸ್ ಆಫೀಸ್​​ನಲ್ಲಿ ‘ಅವತಾರ್ 3’ ಸಾಧಾರಣ ಯಶಸ್ಸನ್ನಷ್ಟೆ ಗಳಿಸಿದೆ. ಇದೆಲ್ಲದರ ಹೊರತಾಗಿಯೂ ‘ಅವತಾರ್ 3’ ಸಿನಿಮಾ ಹಾಗೂ ಸಿನಿಮಾದ ನಿರ್ದೇಶಕ ಜೇಮ್ಸ್ ಕ್ಯಾಮರನ್ ಅಪರೂಪದ ದಾಖಲೆ ಬರೆಯಲು ಸಜ್ಜಾಗಿದ್ದಾರೆ.

ಜೇಮ್ಸ್ ಕ್ಯಾಮರನ್ ವಿಶ್ವ ಬಾಕ್ಸ್ ಆಫೀಸ್​​ನ ಸುಲ್ತಾನರೇ ಆಗಿದ್ದಾರೆ. ಅವರು ನಿರ್ದೇಶಿಸಿರುವ ಮೂರು ಸಿನಿಮಾಗಳು ಒಂದರ ಹಿಂದೆ ಒಂದರಂತೆ 10000 ಕೋಟಿಗೂ ಹೆಚ್ಚು ಮೊತ್ತವನ್ನು ಗಳಿಕೆ ಮಾಡಿವೆ. ಇದೀಗ ‘ಅವತಾರ್ 3’ ಸಿನಿಮಾ ಸಹ ಅದೇ ಹಾದಿಯಲ್ಲಿದ್ದು, ಆ ಮೂಲಕ ಜೇಮ್ಸ್ ಕ್ಯಾಮರನ್ ನಿರ್ದೇಶನದ ಸತತ ನಾಲ್ಕನೇ ಸಿನಿಮಾ ಹತ್ತು ಸಾವಿರ ಕೋಟಿ ಗಳಿಕೆ ಮಾಡಿದಂತಾಗಲಿದೆ.

ಜೇಮ್ಸ್ ಕ್ಯಾಮರನ್ ನಿರ್ದೇಶಿಸಿದ್ದ ‘ಟೈಟಾನಿಕ್’ ಸಿನಿಮಾ ಮೊದಲ ಬಾರಿಗೆ ಒಂದು ಬಿಲಿಯನ್ ಅಥವಾ ಎಂಟು ಸಾವಿರ ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿತು. ಅದಾದ ಬಳಿಕ 2000 ರಲ್ಲಿ ಜೇಮ್ಸ್ ಅವರು ‘ಅವತಾರ್’ ಸಿನಿಮಾ ನಿರ್ದೇಶಿಸಿದರು. ಈ ಸಿನಿಮಾ 2.9 ಬಿಲಿಯನ್​​ಗೂ ಹೆಚ್ಚು ಮೊತ್ತವನ್ನು ಬಾಕ್ಸ್ ಆಫೀಸ್​ನಲ್ಲಿ ಗಳಿಸಿತು. ಬಳಿಕ ಜೇಮ್ಸ್ ‘ಅವತಾರ್ 2’ ನಿರ್ದೇಶಿಸಿದರು. ಈ ಸಿನಿಮಾ ಸಹ ಎರಡು ಬಿಲಿಯನ್​​ಗೂ ಹೆಚ್ಚು ಮೊತ್ತವನ್ನು ಗಳಿಸಿತು. ಇದೀಗ ‘ಅವತಾರ್ 3’ (ಅವತಾರ್: ಫೈರ್ ಆಂಡ್ ಆಶ್) ನಿರ್ದೇಶಿಸಿದ್ದು, ಈ ಸಿನಿಮಾ ಸಹ ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಮೊತ್ತ ಗಳಿಕೆಯಲ್ಲಿದ್ದು, ಶೀಘ್ರವೇ ಒಂದು ಬಿಲಿಯನ್ ಕಲೆಕ್ಷನ್ ದಾಟಲಿದೆ.

ಇದನ್ನೂ ಓದಿ:‘ಅವತಾರ್ 3’ ಬಳಿಕ ಬಾಕ್ಸ್ ಆಫೀಸ್​​ನಲ್ಲಿ ಮುಗ್ಗರಿಸಿದ ಮತ್ತೊಂದು ಹಾಲಿವುಡ್ ಸಿನಿಮಾ

ಆ ಮೂಲಕ, ಸತತ ನಾಲ್ಕು ಬಾರಿ ಒಂದು ಬಿಲಿಯನ್​​ಗೂ ಹೆಚ್ಚು ಮೊತ್ತ ಗಳಿಕೆ ಮಾಡಿದ ವಿಶ್ವದ ಏಕೈಕ ಸಿನಿಮಾ ನಿರ್ದೇಶಕ ಎಂಬ ಗೌರವಕ್ಕೆ ಜೇಮ್ಸ್ ಕ್ಯಾಮರನ್ ಪಾತ್ರರಾಗಲಿದ್ದಾರೆ. ಈ ಹಿಂದೆ ‘ಅವೇಂಜರ್ಸ್’ ಸರಣಿಯ ಎರಡು ಸಿನಿಮಾಗಳು ಒಂದರ ಹಿಂದೆ ಒಂದರಂತೆ ಎರಡು ಬಿಲಿಯನ್​​ಗೂ ಹೆಚ್ಚು ಮೊತ್ತವನ್ನು ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಗಳಿಕೆ ಮಾಡಿದ್ದವು. ಆ ದಾಖಲೆಯನ್ನು ಜೇಮ್ಸ್ ಕ್ಯಾಮರನ್ ಮುರಿದಿದ್ದು, ಹೊಸ ದಾಖಲೆಯನ್ನು ಬರೆಯಲು ಸಜ್ಜಾಗಿದ್ದಾರೆ.

‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾ ವಿಶ್ವ ಬಾಕ್ಸ್​ ಆಫೀಸ್​​ನಲ್ಲಿ ಈವರೆಗೆ 6800 ಕೋಟಿಗೂ ಹೆಚ್ಚು ಮೊತ್ತವನ್ನು ಗಳಿಕೆ ಮಾಡಿದೆ. ಸಿನಿಮಾ ಬಿಡುಗಡೆ ಆಗಿ 12 ದಿನಗಳಷ್ಟೆ ಆಗಿದ್ದು, ಮುಂದಿನ ದಿನಗಳಲ್ಲಿ ಈ ಸಿನಿಮಾ 10000 ಕೋಟಿ ಗಳಿಕೆಯನ್ನು ದಾಟುವುದು ಖಾತ್ರಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!