AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ ಐದು ದಿನಕ್ಕೆ 2900 ಕೋಟಿ ಕಲೆಕ್ಷನ್ ಮಾಡಿದೆ ಈ ಸಿನಿಮಾ

Jurassic World Rebirth collection: ಭಾರತೀಯ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿ ಗಳಿಕೆ ಮಾಡುವುದು ಈಗ ಹೊಸತಲ್ಲ. ಕೆಲವಾರು ಸಿನಿಮಾಗಳು ಈಗಾಗಲೇ ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿಗೂ ಹೆಚ್ಚು ಹಣ ಗಳಿಸಿವೆ. ಆದರೆ ಇದಕ್ಕೆ ಕನಿಷ್ಟ ಒಂದು ತಿಂಗಳಾದರೂ ಸಮಯ ತೆಗೆದುಕೊಂಡಿವೆ. ಆದರೆ ಇಲ್ಲೊಂದು ಸಿನಿಮಾ ಬಿಡುಗಡೆ ಆದ ಕೇವಲ ಐದು ದಿನಕ್ಕೆ ಸುಮಾರು 2900 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ಕೇವಲ ಐದು ದಿನಕ್ಕೆ 2900 ಕೋಟಿ ಕಲೆಕ್ಷನ್ ಮಾಡಿದೆ ಈ ಸಿನಿಮಾ
Jurassic World Rebirth
ಮಂಜುನಾಥ ಸಿ.
|

Updated on: Jul 09, 2025 | 1:16 PM

Share

ಭಾರತದ ಸಿನಿಮಾಗಳು ಸಾವಿರ ಕೋಟಿ ಕಲೆಕ್ಷನ್ (Collection) ಮಾಡುವುದು ಹೊಸತಲ್ಲ. ಆದರೆ ಹೀಗೆ ಭಾರತದ ಸಿನಿಮಾ ಒಂದು ಸಾವಿರ ಕೋಟಿ ಕಲೆಕ್ಷನ್ ಮಾಡುವುದು ಸಾಧನೆಯೆಂದೇ ಪರಿಗಣಿಸಲಾಗಿದೆ. ಭಾರತದ ಸಿನಿಮಾ ಒಂದು ಸಾವಿರ ಕೋಟಿ ಕಲೆಕ್ಷನ್ ದಾಟಲು ಕನಿಷ್ಟ ತಿಂಗಳಾದರೂ ಸಮಯ ಬೇಕು. ಆದರೆ ಇತ್ತೀಚೆಗೆ ಬಿಡುಗಡೆ ಆದ ಹಾಲಿವುಡ್ ಸಿನಿಮಾ ಒಂದು ಬಿಡುಗಡೆ ಆದ ಕೇವಲ ಐದು ದಿನಕ್ಕೆ ಸುಮಾರು 2900 ಕೋಟಿ ರೂಪಾಯಿ ಹಣ ಗಳಿಕೆ ಮಾಡಿದೆ. ಒಂದು ವಾರಕ್ಕೆ ಸಿನಿಮಾದ ಕಲೆಕ್ಷನ್ 3200 ಕೋಟಿ ದಾಟಿದೆ.

‘ಜುರಾಸಿಕ್ ವರ್ಲ್ಡ್: ರೀ ಬರ್ತ್’ ಸಿನಿಮಾ ಜುಲೈ 2 ರಂದು ಅಮೆರಿಕ, ಭಾರತ ಸೇರಿದಂತೆ ವಿಶ್ವದಾದ್ಯಂತ ಬಿಡುಗಡೆ ಆಯ್ತು. ಸ್ಕಾರ್ಲೆಟ್ ಜೋನ್ಸನ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಬಿಡುಗಡೆ ಆದ ಕೇವಲ ಐದು ದಿನಕ್ಕೆ 334.3 ಮಿಲಿಯನ್ ಡಾಲರ್ ಗಳಿಕೆ ಮಾಡಿದೆ. ಭಾರತದ ರೂಪಾಯಿ ಲೆಕ್ಕದಲ್ಲಿ ಸಿನಿಮಾದ ಐದು ದಿನದ ಗಳಿಕೆ 2828 ಕೋಟಿ ರೂಪಾಯಿಗಳು. ಸಿನಿಮಾ ಬಿಡುಗಡೆ ಆಗಿ ಇಂದಿಗೆ ಏಳು ದಿನಗಳಾಗಿದ್ದು, ಸಿನಿಮಾದ ಕಲೆಕ್ಷನ್ 3200 ಕೋಟಿ ರೂಪಾಯಿ ದಾಟಿದೆ.

ಭಾರತದಲ್ಲಿ ಸಹ ಈ ಸಿನಿಮಾ ಒಳ್ಳೆ ಗಳಿಕೆಯನ್ನೇ ಮಾಡಿದೆ. ಬೆಂಗಳೂರು, ಮುಂಬೈ, ದೆಹಲಿ ಇನ್ನಿತರೆ ಮೆಟ್ರೋ ಸಿಟಿಗಳಲ್ಲಿ ಹೆಚ್ಚಾಗಿ ಬಿಡುಗಡೆ ಆಗಿರುವ ‘ಜುರಾಸಿಕ್ ರೀಬರ್ತ್’ ಸಿನಿಮಾ ಐದು ದಿನಗಳಲ್ಲಿ 47.35 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಸಿನಿಮಾದ ಕಲೆಕ್ಷನ್ ಸೋಮವಾರದಂದು ತುಸು ಕಡಿಮೆ ಆಗಿದ್ದು, ಮತ್ತೆ ವೀಕೆಂಡ್​ಗೆ ಹೆಚ್ಚಾಗುವ ನಿರೀಕ್ಷೆ ಇದೆ. ಆಮಿರ್ ಖಾನ್ ನಟನೆಯ ‘ಸಿತಾರೆ ಜಮೀನ್ ಪರ್’ ಸಿನಿಮಾದ ಪ್ರಬಲ ಪೈಪೋಟಿಯ ನಡುವೆಯೂ ಈ ಸಿನಿಮಾ ಗಳಿಸಿರುವ ಮೊತ್ತ ಸಾಧಾರಣವಾದುದಲ್ಲ.

ಇದನ್ನೂ ಓದಿ:‘ಮಿಷನ್ ಇಂಪಾಸಿಬಲ್’ ಬಾಕ್ಸ್ ಆಫೀಸ್​​ನಲ್ಲಿ ಗಳಿಸಿದ್ದು ಎಷ್ಟು ಸಾವಿರ ಕೋಟಿ?

‘ಬ್ಲಾಕ್ ವಿಡೊ’ ಖ್ಯಾತಿಯ ಸ್ಕಾರ್ಲೆಟ್ ಜಾನ್ಸನ್ ‘ಜುರಾಸಿಕ್: ರೀಬರ್ತ್’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅವರೊಟ್ಟಿಗೆ ಮಹರ್ಶೆಲಾ ಅಲಿ, ಜಾನತನ್ ಬೇಯ್ಲಿ ಇನ್ನೂ ಕೆಲವು ಖ್ಯಾತ ನಟರು ನಟಿಸಿದ್ದಾರೆ. ಸಿನಿಮಾ ಅನ್ನು ಗ್ಯಾರೆತ್ ಎಡ್ವರ್ಡ್ಸ್ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಇವರು ‘ಗಾಡ್ಜಿಲಾ’, ‘ಮಾನ್​ಸ್ಟರ್ಸ್’, ‘ರೋಗ್ ಒನ್’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಯೂನಿವರ್ಸಲ್ ಪಕ್ಚರ್ಸ್ ಮತ್ತು ಆಂಬಿಲ್ ಎಂಟರ್ಟೈನ್​ಮೆಂಟ್​ ಈ ಸಿನಿಮಾ ನಿರ್ಮಾಣ ಮಾಡಿದೆ. ‘ಜುರಾಸಿಕ್’ ಸಿನಿಮಾ ಸರಣಿಯಲ್ಲಿಯೇ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಇದಾಗುವ ಸೂಚನೆ ನೀಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು