ಎಲ್ಲರ ಎದುರು ಒಳ ಉಡುಪು ತೆಗೆದು ಪ್ರಿಯಾಂಕಾ ಪತಿ ಕಡೆ ಎಸೆದ ಮಹಿಳಾ ಅಭಿಮಾನಿ; ನಟಿಯ ರಿಯಾಕ್ಷನ್ ಏನು?

ಅದು 2019ರ ಸಮಯ. ನಿಕ್ ಅವರು ಅಮೆರಿಕದಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಪರ್ಫಾರ್ಮೆನ್ಸ್ ಕೊಟ್ಟಿದ್ದರು. ಈ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಚೋಪ್ರಾ ಕೂಡ ಆಗಮಿಸಿದ್ದರು.

ಎಲ್ಲರ ಎದುರು ಒಳ ಉಡುಪು ತೆಗೆದು ಪ್ರಿಯಾಂಕಾ ಪತಿ ಕಡೆ ಎಸೆದ ಮಹಿಳಾ ಅಭಿಮಾನಿ; ನಟಿಯ ರಿಯಾಕ್ಷನ್ ಏನು?
ಪ್ರಿಯಾಂಕಾ-ನಿಕ್
Follow us
ರಾಜೇಶ್ ದುಗ್ಗುಮನೆ
|

Updated on: Mar 24, 2023 | 1:01 PM

ಪ್ರಿಯಾಂಕಾ ಚೋಪ್ರಾ (Priyanka Chopra) ಅವರಿಗೆ ಸಾಕಷ್ಟು ಜನಪ್ರಿಯತೆ ಇದೆ. ಪಾಪ್ ಗಾಯಕ ನಿಕ್ ಜೋನಸ್ (Nick Jonas)​ ಅವರನ್ನು ಮದುವೆ ಆದ ಬಳಿಕ ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ. ಹಾಲಿವುಡ್ ಸಿನಿಮಾಗಳನ್ನು ಮಾಡುತ್ತಾ ಹೆಚ್ಚೆಚ್ಚು ಗುರುತಿಸಿಕೊಳ್ಳುತ್ತಿದ್ದಾರೆ. ಪ್ರಿಯಾಂಕಾ ಎಲ್ಲಾ ಸಂದರ್ಭದಲ್ಲಿ ಗಂಭೀರವಾಗಿರೋಕೆ ಇಷ್ಟಪಡುವುದಿಲ್ಲ. ಅವರು ಅನೇಕ ಕಡೆಗಳಲ್ಲಿ ಜೋಕ್ ಮಾಡುತ್ತಾರೆ. ಈಗ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ನಿಕ್​ ಕಡೆ ಅಭಿಮಾನಿಯೊಬ್ಬಳು ತಮ್ಮ ಮೇಲ್ಭಾಗದ ಒಳ ಉಡುಪನ್ನು ತೆಗೆದು ಎಸೆದಿದ್ದರು. ಇದಕ್ಕೆ ಪ್ರಿಯಾಂಕಾ ನೀಡಿದ ಉತ್ತರ ಸಖತ್ ಫನ್ನಿ ಆಗಿತ್ತು.

ಅದು 2019ರ ಸಮಯ. ನಿಕ್ ಅವರು ಅಮೆರಿಕದಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಪರ್ಫಾರ್ಮೆನ್ಸ್ ಕೊಟ್ಟಿದ್ದರು. ಈ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಚೋಪ್ರಾ ಕೂಡ ಆಗಮಿಸಿದ್ದರು. ಈ ಕಾರ್ಯಕ್ರಮ ಮುಗಿದ ಬಳಿಕ ಪ್ರಿಯಾಂಕಾ ಹಾಗೂ ನಿಕ್ ಅವರು ವೇದಿಕೆಯಿಂದ ನಡೆದರು. ಈ ವೇಳೆ ಅವರಿಗೆ ಬ್ರಾ ಸಿಕ್ಕಿತ್ತು. ಸಂತೋಷದಲ್ಲಿ ಅಭಿಮಾನಿಯೊಬ್ಬರು ನಿಕ್ ಕಡೆ ಎಸೆದ ಒಳ ಉಡುಪು ಇದಾಗಿತ್ತು. ಇದನ್ನು ಪ್ರಿಯಾಂಕಾ ಎತ್ತಿಕೊಂಡರು. ಅದನ್ನು ಅಭಿಮಾನಿಗಳ ಕಡೆ ತೋರಿಸಿ ನಗುತ್ತಾ ಒಳಗೆ ನಡೆದರು.

ನೆಲಕ್ಕ ಬಿದ್ದ ಒಳ ಉಡುಪನ್ನು ಪ್ರಿಯಾಂಕಾ ಮೇಲಕ್ಕೆ ಎತ್ತಿಕೊಳ್ಳುತ್ತಿದ್ದಂತೆ ಫ್ಯಾನ್ಸ್ ವಿಚಿತ್ರವಾಗಿ ಕೂಗಿದ್ದರು. ನೆಲಕ್ಕೆ ಬಿದ್ದಿದ್ದನ್ನು ನೋಡಿದ ಪ್ರಿಯಾಂಕ ಅದನ್ನು ನಿರ್ಲಕ್ಷ್ಯ ಮಾಡಬಹುದಿತ್ತು. ಆದರೆ, ಅವರು ಆ ರೀತಿ ಮಾಡಿಲ್ಲ. ಸದ್ಯ ಹಳೆಯ ವಿಡಿಯೋ ಈಗ ವೈರಲ್ ಆಗುತ್ತಿದೆ. ಫ್ಯಾನ್ಸ್ ಇದಕ್ಕೆ ಬಗೆ ಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಹೋಳಿ ಆಚರಿಸಿದ್ದ ಪ್ರಿಯಾಂಕಾ

ನಟಿ ಪ್ರಿಯಾಂಕಾ ಚೋಪ್ರಾ ಅವರು ಭಾರತದ ಸಂಸ್ಕೃತಿಯನ್ನು ವಿದೇಶದಲ್ಲೂ ಸಾರುತ್ತಿದ್ದಾರೆ. ಅದ್ದೂರಿಯಾಗಿ ಅವರು ಹೋಳಿ ಆಚರಿಸಿದ್ದರು. ಆ ಮೂಲಕ ಅವರು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ಪ್ರತಿ ವರ್ಷ ಅವರು ಭಾರತದ ಹಬ್ಬಗಳನ್ನು ಲಾಸ್​ ಏಂಜಲಿಸ್​ನಲ್ಲಿ ಆಚರಿಸುತ್ತಾರೆ. ಈ ಬಾರಿ ಅವರ ಮನೆಯಲ್ಲಿ ಹೋಳಿ ಸಡಗರ ಜೋರಾಗಿತ್ತು. ಪ್ರಿಯಾಂಕಾ ಚೋಪ್ರಾ ಮನೆಯಲ್ಲಿ ಆಯೋಜಿಸಿದ್ದ ಹೋಳಿ ಪಾರ್ಟಿಗೆ ಸ್ನೇಹಿತರನ್ನು ಆಹ್ವಾನಿಸಲಾಗಿತ್ತು. ನಟಿ ಪ್ರೀತಿ ಜಿಂಟಾ ಹಾಗೂ ಅವರ ಪತಿ ಜೇನ್​ ಗುಡ್​ಎನಫ್​ ಕೂಡ ಇದರಲ್ಲಿ ಭಾಗಿ ಆಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ