AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ದಾಖಲೆ ಬರೆಯುತ್ತದೆಯೇ ‘ಮೈಖಲ್’ ಸಿನಿಮಾ: ಗಳಿಸಿರುವುದೆಷ್ಟು? ಗಳಿಸಬೇಕಾದ್ದೆಷ್ಟು?

Michael movie collection: ‘ಮೈಖಲ್’ ಸಿನಿಮಾ ಮೂರು ವಾರಗಳ ಹಿಂದೆ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ಮೊದಲ ದಿನ ವಿಮರ್ಶಕರಿಂದ ಧನಾತ್ಮಕ ವಿಮರ್ಶೆಗಳನ್ನು ಗಳಿಸದೇ ಇದ್ದರು, ಪ್ರೇಕ್ಷಕರು ಮಾತ್ರ ಮುಗಿಬಿದ್ದು ಸಿನಿಮಾ ವೀಕ್ಷಿಸುತ್ತಿದ್ದಾರೆ. ಮೈಖಲ್ ಜಾಕ್ಸನ್ ಅಭಿಮಾನಿಗಳು ವಿಶ್ವದಾದ್ಯಂತ ಇದ್ದು, ಎಲ್ಲೆಡೆ ಈ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿದೆ. ಈ ಸಿನಿಮಾ ಸಾರ್ವಕಾಲಿಕ ಬಾಕ್ಸ್ ಆಫೀಸ್ ರೆಕಾರ್ಡ್ ಅನ್ನು ಮುರಿಯುವ ಸಾಧ್ಯತೆ ಇದೆ ಎಂದು ಕೆಲ ಬಾಕ್ಸ್ ಆಫೀಸ್ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

ವಿಶ್ವ ದಾಖಲೆ ಬರೆಯುತ್ತದೆಯೇ ‘ಮೈಖಲ್’ ಸಿನಿಮಾ: ಗಳಿಸಿರುವುದೆಷ್ಟು? ಗಳಿಸಬೇಕಾದ್ದೆಷ್ಟು?
Michael
ಮಂಜುನಾಥ ಸಿ.
|

Updated on: May 10, 2026 | 8:12 PM

Share

ವಿಶ್ವದ ನಂಬರ್ 1 ಪಾಪ್ ಸ್ಟಾರ್, ಎಂಟರ್ಟೈನರ್ ಎಂದೇ ಕರೆಯಲಾಗುವ ದಿವಂಗತ ಮೈಖಲ್ ಜಾಕ್ಸನ್ (Michael) ಜೀವನ ಆಧರಿಸಿದ ‘ಮೈಖಲ್’ ಸಿನಿಮಾ ಮೂರು ವಾರಗಳ ಹಿಂದೆ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ಮೊದಲ ದಿನ ವಿಮರ್ಶಕರಿಂದ ಧನಾತ್ಮಕ ವಿಮರ್ಶೆಗಳನ್ನು ಗಳಿಸದೇ ಇದ್ದರು, ಪ್ರೇಕ್ಷಕರು ಮಾತ್ರ ಮುಗಿಬಿದ್ದು ಸಿನಿಮಾ ವೀಕ್ಷಿಸುತ್ತಿದ್ದಾರೆ. ಮೈಖಲ್ ಜಾಕ್ಸನ್ ಅಭಿಮಾನಿಗಳು ವಿಶ್ವದಾದ್ಯಂತ ಇದ್ದು, ಎಲ್ಲೆಡೆ ಈ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿದೆ. ಈ ಸಿನಿಮಾ ಸಾರ್ವಕಾಲಿಕ ಬಾಕ್ಸ್ ಆಫೀಸ್ ರೆಕಾರ್ಡ್ ಅನ್ನು ಮುರಿಯುವ ಸಾಧ್ಯತೆ ಇದೆ ಎಂದು ಕೆಲ ಬಾಕ್ಸ್ ಆಫೀಸ್ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

‘ಮೈಖಲ್’ ಸಿನಿಮಾ ಬಿಡುಗಡೆ ಆದ ಮೂರು ವಾರಗಳಲ್ಲಿ 570 ಮಿಲಿಯನ್​​ಗೂ ಹೆಚ್ಚು ಹಣವನ್ನು ಗಳಿಕೆ ಮಾಡಿದೆ. ಅಂದರೆ ಭಾರತೀಯ ರೂಪಾಯಿ ಲೆಕ್ಕಾಚಾರದಲ್ಲಿ ಈ ಸಿನಿಮಾ ಈಗಾಗಲೇ 5300 ಕೋಟಿಗೂ ಹೆಚ್ಚು ಮೊತ್ತವನ್ನು ಗಳಿಸಿದೆ. ಆದರೆ ಸಾರ್ವಕಾಲಿಕ ಬಾಕ್ಸ್ ಆಫೀಸ್ ದಾಖಲೆಯನ್ನು ಮುರಿಯಲು ಸಿನಿಮಾ ಇನ್ನೂ ಸಾಕಷ್ಟು ಮೊತ್ತ ಗಳಿಸಬೇಕಿದೆ. ಅದು ಅಷ್ಟು ಸುಲಭವಲ್ಲ.

ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಈ ವರೆಗೆ ಅತಿ ಹೆಚ್ಚು ಹಣ ಗಳಿಸಿರುವ ಸಿನಿಮಾ 2009 ರಲ್ಲಿ ಬಿಡುಗಡೆ ಆಗಿರುವ ‘ಅವತಾರ್’ ಆ ಸಿನಿಮಾ 2.97 ಬಿಲಿಯನ್ ಡಾಲರ್​​ಗಳನ್ನು ಗಳಿಸಿದೆ. ಅಂದರೆ ಭಾರತೀಯ ಲೆಕ್ಕಾಚಾರದಲ್ಲಿ ಆ ಸಿನಿಮಾ 27 ಸಾವಿರ ಕೋಟಿಗೂ ಹೆಚ್ಚು ಮೊತ್ತವನ್ನು ಗಳಿಕೆ ಮಾಡಿದೆ. ಅದರ ನಂತರದ ಸ್ಥಾನದಲ್ಲಿರುವ ‘ಅವೇಂಜರ್ಸ್: ದಿ ಎಂಡ್​​ಗೇಮ್’ ಸಿನಿಮಾ ಸುಮಾರು 25 ಸಾವಿರ ಕೋಟಿ ಮೊತ್ತ ಗಳಿಸಿದೆ. ಈ ಸಿನಿಮಾಗಳನ್ನು ಹಿಂದಿಕ್ಕಲು ‘ಮೈಖಲ್’ ಸಿನಿಮಾ ಈಗ ಗಳಿಸಿರುವುದಕ್ಕಿಂತಲೂ ಆರು ಪಟ್ಟು ಹೆಚ್ಚು ಮೊತ್ತ ಗಳಿಸಬೇಕಿದೆ. ಅದು ಸುಲಭ ಸಾಧ್ಯವಲ್ಲ.

ಇದನ್ನೂ ಓದಿ:ಗರ್ಲ್​​ಫ್ರೆಂಡ್ ಜೊತೆಗೆ ಬಿಗ್​​ಬಾಸ್ ಮೈಖಲ್ ವರ್ಕೌಟ್?

‘ಮೈಖಲ್’ ಸಿನಿಮಾದ ಗಳಿಕೆ ದಿನೇ-ದಿನೇ ಹೆಚ್ಚಾಗುತ್ತಿದೆ. ಆದರೂ ಈಗಿನ ಗಳಿಕೆಯ ಆರು ಪಟ್ಟು ಮೊತ್ತವನ್ನು ಗಳಿಸುವುದು ಸುಲಭದ ಮಾತಲ್ಲ. ‘ಮೈಖಲ್’ ಸಿನಿಮಾ ಭಾರತದಲ್ಲಿ ಸಹ ಉತ್ತಮ ಗಳಿಕೆ ಮಾಡುತ್ತಿದ್ದು, ಮೂರು ವಾರಗಳಲ್ಲಿ ಭಾರತದಲ್ಲಿ 58 ಕೋಟಿ ರೂಪಾಯಿಗಳ ಗಳಿಕೆ ಮಾಡಿದೆ. ಇದು ಸಹ ದೊಡ್ಡ ಮೊತ್ತವೇನೂ ಅಲ್ಲ. ‘ಅವೇಂಜರ್ಸ್’, ‘ಸ್ಪೈಡರ್​​ಮ್ಯಾನ್’ ಸಿನಿಮಾಗಳು ಭಾರತದಲ್ಲಿ 200 ಕೋಟಿ ಗಳಿಸಿದ ಉದಾಹರಣೆ ಇದೆ.

‘ಮೈಖಲ್’ ಸಿನಿಮಾವು ಮೈಖಲ್ ಜಾಕ್ಸನ್ ಅವರ ಮೊದಲಾರ್ಧದ ಜೀವನದ ಕತೆಯನ್ನು ಒಳಗೊಂಡಿದೆ. ಮೈಖಲ್ ಪಾತ್ರದಲ್ಲಿ, ಮೈಖಲ್ ಜಾಕ್ಸನ್ ಅವರ ಸಹೋದರನ ಮಗ ಜಫ್ಪಾರ್ ಮೈಖಲ್ ನಟಿಸಿದ್ದಾರೆ. ಭಾರತೀಯ ಮೂಲದ ಪಾಪ್ ಗಾಯಕ ಪ್ರಿನ್ಸ್ ಅವರ ಜೀವನವನ್ನು ತೆರೆಗೆ ತಂದಿದ್ದ ಆಂಟೊನಿ ಫಕು ಅವರೇ ಈ ಸಿನಿಮಾವನ್ನೂ ನಿರ್ದೇಶಿಸಿದ್ದು, ಸಿನಿಮಾದ ಎರಡನೇ ಭಾಗವೂ ಸಹ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!