Miley Cyrus: ಬೆತ್ತಲೆಯಾಗಿ ಬಾತ್​ ರೂಂ ವಿಡಿಯೋ ಹಂಚಿಕೊಂಡ ನಟಿ ಮೈಲಿ ಸೈರಸ್​; ನೆಟ್ಟಿಗರಿಂದ ಕಟು ಟೀಕೆ

Miley Cyrus Viral Video: ಮೈಲಿ ಸೈರಸ್​ ಹಂಚಿಕೊಂಡಿರುವ ವಿಡಿಯೋ ವೈರಲ್​ ಆಗಿದೆ. 15 ಸಾವಿರಕ್ಕೂ ಹೆಚ್ಚು ಕಮೆಂಟ್​ಗಳು ಬಂದಿವೆ. ಒಂದು ವರ್ಗದ ನೆಟ್ಟಿಗರು ಕಟು ಟೀಕೆ ಮಾಡಿದ್ದಾರೆ.

Miley Cyrus: ಬೆತ್ತಲೆಯಾಗಿ ಬಾತ್​ ರೂಂ ವಿಡಿಯೋ ಹಂಚಿಕೊಂಡ ನಟಿ ಮೈಲಿ ಸೈರಸ್​; ನೆಟ್ಟಿಗರಿಂದ ಕಟು ಟೀಕೆ
ಮೈಲಿ ಸೈರಸ್Image Credit source: Miley Cyrus Instagram
Follow us
TV9 Web
| Updated By: ಮದನ್​ ಕುಮಾರ್​

Updated on:Jan 10, 2023 | 5:11 PM

ಹಾಲಿವುಡ್​ ನಟಿ, ಗಾಯಕಿ ಮೈಲಿ ಸೈರಸ್​ (Miley Cyrus) ಅವರು ಹೊಸ ಸೆನ್ಸೇಷನ್​ ಸೃಷ್ಟಿ ಮಾಡಿದ್ದಾರೆ. ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಅವರ ಅನೇಕ ಹಾಡುಗಳು ಸೂಪರ್​ ಹಿಟ್​ ಆಗಿವೆ. ಹಲವು ಪ್ರಕಾರದ ಸಂಗೀತದಲ್ಲಿ ಮೈಲಿ ಸೈರಸ್​ ಅವರು ಗುರುತಿಸಿಕೊಂಡಿದ್ದಾರೆ. ಈಗ ಅವರ ಒಂದು ವಿಡಿಯೋ (Miley Cyrus Viral Video) ವೈರಲ್​ ಆಗಿದೆ. ಬೆತ್ತಲಾಗಿ ಸ್ನಾನ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹಾಗಂತ ಇದು ಯಾವುದೋ ಕಿಡಿಗೇಡಿಗಳಿಂದ ಲೀಕ್​ ಆದ ವಿಡಿಯೋ ಅಲ್ಲ. ಬದಲಿಗೆ, ಸ್ವತಃ ಮೈಲಿ ಸೈರಸ್​ ಅವರೇ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಈ ಖಾಸಗಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅವರು ಈ ರೀತಿ ಮಾಡಿರುವುದನ್ನು ನೆಟ್ಟಿಗರು ಖಂಡಿಸುತ್ತಿದ್ದಾರೆ.

ಮೈಲಿ ಸೈರಸ್​ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 192 ಮಿಲಿಯನ್​ ಜನರು ಫಾಲೋ ಮಾಡುತ್ತಿದ್ದಾರೆ. ಅವರು ಹಾಕುವ ಪ್ರತಿ ಪೋಸ್ಟ್​ಗೆ ಲಕ್ಷಾಂತರ ಲೈಕ್ಸ್​ ಬರುತ್ತವೆ. ಈಗ ಮೈಲಿ ಸೈರಸ್​ ಹಂಚಿಕೊಂಡಿರುವ ಸ್ನಾನದ ವಿಡಿಯೋವನ್ನು 16 ಲಕ್ಷಕ್ಕೂ ಅಧಿಕ ಮಂದಿ ಲೈಕ್​ ಮಾಡಿದ್ದಾರೆ. 15 ಸಾವಿರಕ್ಕೂ ಹೆಚ್ಚು ಕಮೆಂಟ್​ಗಳು ಬಂದಿವೆ. ಅವರ ಅಪ್ಪಟ ಅಭಿಮಾನಿಗಳು ಭೇಷ್​ ಎಂದಿದ್ದಾರೆ. ಆದರೆ ಒಂದು ವರ್ಗದ ನೆಟ್ಟಿಗರು ಕಟು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ
Image
ಖಾಸಗಿ ವಿಡಿಯೋ ವೈರಲ್ ಆದಾಗ ಮನೆಯವರ ರಿಯಾಕ್ಷನ್ ಹೇಗಿತ್ತು? ಟಿವಿ9ಗೆ ಸೋನು ಶ್ರೀನಿವಾಸ್ ಗೌಡ ಹೇಳಿದ್ದಿಷ್ಟು
Image
Sanya Iyer: ಅಪ್ಪನೇ ಮಗಳ ಖಾಸಗಿ ವಿಡಿಯೋ ರೆಕಾರ್ಡ್​ ಮಾಡಿದ್ದ; ಸಾನ್ಯಾ ಅಯ್ಯರ್​ ತಾಯಿ ಹೇಳಿದ ಕರಾಳ ಸತ್ಯಗಳು
Image
ಖಾಸಗಿ ವಿಡಿಯೋ ತೋರಿಸಿ ಕಿರುಕುಳ ಪ್ರಕರಣ: ಪೊಲೀಸ್ ವಿಚಾರಣೆಗೆ ಹಾಜರಾದ ಕಾಂಗ್ರೆಸ್​ ನಾಯಕಿ ನವ್ಯಶ್ರೀ
Image
ತ್ರಿಷಾ ನಂತರ ಮತ್ತೋರ್ವ ಹೀರೋಯಿನ್ ಖಾಸಗಿ ವಿಡಿಯೋ ಲೀಕ್​​; ನರಕದಲ್ಲಿ ನಿಮಗೆ ವಿಶೇಷ ವ್ಯವಸ್ಥೆ ಇದೆ ಎಂದ ​ನಟಿ

ಇದನ್ನೂ ಓದಿ: ಖಾಸಗಿ ವಿಡಿಯೋ ವೈರಲ್ ಆದಾಗ ಮನೆಯವರ ರಿಯಾಕ್ಷನ್ ಹೇಗಿತ್ತು? ಟಿವಿ9ಗೆ ಸೋನು ಶ್ರೀನಿವಾಸ್ ಗೌಡ ಹೇಳಿದ್ದಿಷ್ಟು

ಶೀಘ್ರದಲ್ಲೇ ಮೈಲಿ ಸೈರಸ್ ಅವರ ಹೊಸ ಮ್ಯೂಸಿಕ್​ ವಿಡಿಯೋ ರಿಲೀಸ್​ ಆಗಲಿದೆ. ‘ಫ್ಲಾವರ್ಸ್​’ ಎಂಬ ಈ ಹಾಡಿಗೆ ಪ್ರಚಾರ ನೀಡುವ ಸಲುವಾಗಿ ಅವರು ಈ ರೀತಿ ಬೆತ್ತಲೆ ಪ್ರಯೋಗ ಮಾಡಿದ್ದಾರೆ. ಇಂಥ ಚೀಪ್​ ಗಿಮಿಕ್​ಗಳ ಮೂಲಕ ಪ್ರಚಾರ ಪಡೆಯಲು ಪ್ರಯತ್ನಿಸಿರುವುದು ಸರಿಯಲ್ಲ ಎಂದು ಅನೇಕರು ಕ್ಲಾಸ್​ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಖಾಸಗಿ ವಿಡಿಯೋ ತೋರಿಸಿ ಕಿರುಕುಳ ಪ್ರಕರಣ: ಪೊಲೀಸ್ ವಿಚಾರಣೆಗೆ ಹಾಜರಾದ ಕಾಂಗ್ರೆಸ್​ ನಾಯಕಿ ನವ್ಯಶ್ರೀ

ಬಾತ್​ ರೂಮ್​ನಲ್ಲಿ ಬೆತ್ತಲಾಗಿ ಸ್ನಾನ ಮಾಡುತ್ತಿರುವ ಮೈಲಿ ಸೈರಸ್​ ಅವರು ಹಾಡಿನ ಒಂದೆರಡು ಸಾಲುಗಳನ್ನು ಗುನುಗಿದ್ದಾರೆ. ಅದನ್ನು ಹಿಂಬದಿಯಿಂದ ಚಿತ್ರಿಸಿಕೊಳ್ಳಲಾಗಿದೆ. ಪ್ರಚಾರಕ್ಕಾಗಿ ಈ ರೀತಿ ಮಾಡಿದ್ದು ಸೂಕ್ತವಲ್ಲ ಎಂಬ ಅಭಿಪ್ರಾಯ ಅನೇಕರಿಂದ ವ್ಯಕ್ತವಾಗಿದೆ. ಅದಕ್ಕೆಲ್ಲ ಮೈಲಿ ಸೈರಸ್​ ಅವರು ತಲೆ ಕೆಡಿಸಿಕೊಂಡಿಲ್ಲ. ಹೊಸ ಹಾಡು ರಿಲೀಸ್​ ಆಗುವ ನಗರ ಮತ್ತು ಸಮಯದ ಮಾಹಿತಿಯನ್ನು ಕೂಡ ಅವರು ಈ ಪೋಸ್ಟ್​ ಜೊತೆ ಹಂಚಿಕೊಂಡಿದ್ದಾರೆ.

View this post on Instagram

A post shared by Miley Cyrus (@mileycyrus)

‘ಪಾರ್ಟಿ ಇನ್​ ದಿ ಯುಎಸ್​’, ‘ಕಾಂಟ್​ ಬಿ ಟೇಮ್ಡ್’, ‘7 ಥಿಂಗ್ಸ್​’ ಸೇರಿದಂತೆ ಅನೇಕ ಹಾಡುಗಳ ಮೂಲಕ ಮೈಲಿ ಸೈರಸ್​ ಫೇಮಸ್​ ಆಗಿದ್ದಾರೆ. ವೈಯಕ್ತಿಕ ಕಾರಣಗಳಿಂದಲೂ ಅವರು ಆಗಾಗ ಸುದ್ದಿ ಆಗೋದುಂಟು. ಈ ಹಿಂದೆ ಗಾಯಕ ನಿಕ್​ ಜೋನಸ್​ ಜೊತೆಗೆ ಅವರ ಹೆಸರು ತಳುಕು ಹಾಕಿಕೊಂಡಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:37 pm, Tue, 10 January 23

ರೇಷನ್‌ ಕಾರ್ಡ್ ರದ್ದಾಗಿರುವುದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರು ಕಿಡಿ
ರೇಷನ್‌ ಕಾರ್ಡ್ ರದ್ದಾಗಿರುವುದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರು ಕಿಡಿ
ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್
ನಾನ್ಯಾಕೆ ಬೇಡವಾಗಿದ್ದೇನೆಂದು ಕುಮಾರಸ್ವಾಮಿಯೇ ಹೇಳಬೇಕು: ದೇವೇಗೌಡ
ನಾನ್ಯಾಕೆ ಬೇಡವಾಗಿದ್ದೇನೆಂದು ಕುಮಾರಸ್ವಾಮಿಯೇ ಹೇಳಬೇಕು: ದೇವೇಗೌಡ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ