AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಿಷನ್ ಇಂಪಾಸಿಬಲ್’ ಬಾಕ್ಸ್ ಆಫೀಸ್​​ನಲ್ಲಿ ಗಳಿಸಿದ್ದು ಎಷ್ಟು ಸಾವಿರ ಕೋಟಿ?

Mission impossible final reckoning: ಮಿಷನ್ ಇಂಪಾಸಿಬಲ್: ದಿ ಫೈನಲ್ ರಿಕನಿಂಗ್ ಸಿನಿಮಾ ಮೇ 17 ರಂದು ಭಾರತದಲ್ಲಿ ಬಿಡುಗಡೆ ಆಗಿತ್ತು. ಅದಾದ ಹತ್ತು ದಿನಗಳ ನಂತರ ಅಮೆರಿಕ ಸೇರಿದಂತೆ ವಿಶ್ವದ ಹಲವೆಡೆ ಬಿಡುಗಡೆ ಆಗಿತ್ತು. ಭಾರತದಲ್ಲಿ ಕೇವಲ 22 ದಿನಗಳಲ್ಲಿ ನೂರು ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದ್ದ ‘ಮಿಷನ್ ಇಂಪಾಸಿಬಲ್: ದಿ ಫೈನಲ್ ರಿಕನಿಂಗ್’ ಸಿನಿಮಾ ವಿಶ್ವದೆಲ್ಲೆಡೆ ಗಳಿಸಿದ್ದು ಎಷ್ಟು ಸಾವಿರ ಕೋಟಿ?

‘ಮಿಷನ್ ಇಂಪಾಸಿಬಲ್’ ಬಾಕ್ಸ್ ಆಫೀಸ್​​ನಲ್ಲಿ ಗಳಿಸಿದ್ದು ಎಷ್ಟು ಸಾವಿರ ಕೋಟಿ?
Mission Imposible
ಮಂಜುನಾಥ ಸಿ.
|

Updated on: Jul 02, 2025 | 3:41 PM

Share

‘ಮಿಷನ್ ಇಂಪಾಸಿಬಲ್: ದಿ ಫೈನಲ್ ರೆಕನಿಂಗ್’ (Mission Imposible) ಸಿನಿಮಾ ಮೇ ತಿಂಗಳಲ್ಲಿ ಭಾರತ ಸೇರಿದಂತೆ ವಿಶ್ವದಾದ್ಯಂತ ಬಿಡುಗಡೆ ಆಗಿತ್ತು. ಜಗತ್ತಿನ ಬಲು ದುಬಾರಿ ನಟ ಟಾಮ್ ಕ್ರೂಸ್ ನಟಿಸಿ, ಸಹ ನಿರ್ಮಾಣ ಮಾಡಿದ್ದ ಈ ಸಿನಿಮಾ ವಿಶ್ವದಾದ್ಯಂತ ಅತ್ಯಂತ ನಿರೀಕ್ಷೆಯ ಸಿನಿಮಾ ಎನಿಸಿಕೊಂಡಿತ್ತು. ಅಭಿಮಾನಿಗಳು ‘ಮಿಷನ್ ಇಂಪಾಸಿಬಲ್’ ಸಿನಿಮಾಕ್ಕಾಗಿ ವರ್ಷಗಳಿಂದ ಕಾಯುತ್ತಿದ್ದರು. ಅದಕ್ಕೆ ತಕ್ಕಂತೆ ಸಿನಿಮಾ ಅಭಿಮಾನಿಗಳಿಗೆ ನಿರಾಸೆ ಮಾಡಲಿಲ್ಲ. ಇದೀಗ ‘ಮಿಷನ್ ಇಂಪಾಸಿಬಲ್’ ಸಿನಿಮಾ ಬಿಡುಗಡೆ ಆಗಿ ತಿಂಗಳಿಗೂ ಹೆಚ್ಚು ಸಮಯ ಆಗಿದ್ದು, ಈ ಸಿನಿಮಾದ ಫೈನಲ್ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟಾಯಿತು ನೋಡೋಣವೇ?

‘ಮಿಷನ್ ಇಂಪಾಸಿಬಲ್: ದಿ ಫೈನಲ್ ರಿಕನಿಂಗ್’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಈ ವರೆಗೆ ಗಳಿಸಿರುವ ಒಟ್ಟು ಮೊತ್ತ ಸರಿ ಸುಮಾರು 5300 ಕೋಟಿ ರೂಪಾಯಿಗಳು. ಅಂದರೆ ಐದು ‘ಪುಷ್ಪ 2’ ಸಿನಿಮಾಗಳ ಕಲೆಕ್ಷನ್ ಅನ್ನು ‘ಮಿಷನ್ ಇಂಪಾಸಿಬಲ್’ ಒಂದೇ ಸಿನಿಮಾ ಮಾಡಿದೆ. ಮಾತ್ರವಲ್ಲದೆ, ಇತ್ತೀಚೆಗಿನ ವರ್ಷಗಳಲ್ಲಿ ಬಿಡುಗಡೆ ಆಗಿ ಭಾರಿ ಮೊತ್ತ ಕಲೆಕ್ಷನ್ ಮಾಡಿದ ಹಾಲಿವುಡ್ ಸಿನಿಮಾ ಎಂಬ ಖ್ಯಾತಿಗೂ ಸಹ ‘ಮಿಷನ್ ಇಂಪಾಸಿಬಲ್: ದಿ ಫೈನಲ್ ರಿಕನಿಂಗ್’ ಸಿನಿಮಾ ಪಾತ್ರವಾಗಿದೆ.

ಇದನ್ನೂ ಓದಿ:ಭಾರತದ ಬಾಕ್ಸ್ ಆಫೀಸ್​ನಲ್ಲಿ ದಾಖಲೆ ಬರೆದ ಹಾಲಿವುಡ್ ಸಿನಿಮಾ ಮಿಷನ್ ಇಂಪಾಸಿಬಲ್

‘ಮಿಷನ್ ಇಂಪಾಸಿಬಲ್: ದಿ ಫೈನಲ್ ರಿಕನಿಂಗ್’ ಸಿನಿಮಾ ಚೀನಾನಲ್ಲಿ ‘ಆಪನ್​ಹೈಮರ್’ ಸಿನಿಮಾ ದಾಖಲೆಯನ್ನು ಪುಡಿಗಟ್ಟಿದೆ. ಭಾರತದಲ್ಲಿ ಸಹ ನೂರು ಕೋಟಿಗೂ ಹೆಚ್ಚಿನ ಮೊತ್ತವನ್ನು ಕಲೆ ಹಾಕಿದೆ. ಇತ್ತೀಚೆಗಿನ ವರ್ಷಗಳಲ್ಲಿ ‘ಮಿಷನ್ ಇಂಪಾಸಿಬಲ್’ನಷ್ಟು ದೊಡ್ಡ ಮೊತ್ತದ ಹಣವನ್ನು ಭಾರತದ ಮಾರುಕಟ್ಟೆಯಲ್ಲಿ ಇನ್ಯಾವ ಹಾಲಿವುಡ್ ಸಿನಿಮಾ ಸಹ ಕಲೆ ಹಾಕಿಲ್ಲ. ಭಾರತದಲ್ಲಿ ಮೇ 17 ರಂದು ಈ ಸಿನಿಮಾ ಬಿಡುಗಡೆ ಆಗಿತ್ತು, ಬಿಡುಗಡೆ ಆದ ಕೇವಲ 22 ದಿನಗಳಲ್ಲಿ ನೂರು ಕೋಟಿ ರೂಪಾಯಿ ಗಳಿಕೆ ಮಾಡಿತ್ತು ಈ ಸಿನಿಮಾ.

‘ಮಿಷನ್ ಇಂಪಾಸಿಬಲ್: ದಿ ಫೈನಲ್ ರಿಕನಿಂಗ್’ ಸಿನಿಮಾ ‘ಮಿಷನ್ ಇಂಪಾಸಿಬಲ್’ ಸರಣಿಯ ಕೊನೆಯ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾದ ಬಗ್ಗೆ ಭಾರಿ ಒಳ್ಳೆಯ ವಿಮರ್ಶೆಗಳು ವ್ಯಕ್ತವಾಗಿದ್ದವು. ಈ ಸಿನಿಮಾ ಅಮೆರಿಕ ಮತ್ತು ಕೆನಡಾ ಬಾಕ್ಸ್ ಆಫೀಸ್​ಗಳಲ್ಲಿ ಸಹ ಅನೇಕ ಹೊಸ ದಾಖಲೆಗಳನ್ನು ಬರೆದಿದೆ. ಸಿನಿಮಾವನ್ನು ಕ್ರಿಸ್ಟೋಫರ್ ಮೆಕ್ವೀರ್ ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ಬಂಡವಾಳ ಹಾಕಿರುವುದು ಟಾಮ್ ಕ್ರೂಸ್ ಮತ್ತು ಕ್ರಿಸ್ಟೋಫರ್ ಮೆಕ್ವೀರ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು