AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ದಾಖಲೆ ಬರೆಯಲು ಸಜ್ಜಾದ ಹಾಲಿವುಡ್ ಸಿನಿಮಾ ‘ಮಿಷನ್ ಇಂಪಾಸಿಬಲ್’

Mission Impossible The Final Reckoning: ಹಾಲಿವುಡ್ ನಟ ಟಾಮ್ ಕ್ರೂಸ್ ನಟಿಸಿರುವ ‘ಮಿಷನ್ ಇಂಪಾಸಿಬಲ್ ಫೈನಲ್ ರಿಕನಿಂಗ್’ ಸಿನಿಮಾ ಕೆಲವೇ ದಿನಗಳಲ್ಲಿ ಭಾರತದಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಅಡ್ವಾನ್ಸ್ ಬುಕಿಂಗ್ ಜೋರಾಗಿ ನಡೆದಿದೆ. ಇದೀಗ ಮೊದಲ 24 ಗಂಟೆಯಲ್ಲಿಯೇ ಭಾರಿ ಸಂಖ್ಯೆಯ ಟಿಕೆಟ್ ಬುಕ್ ಆಗಿವೆ.

ಭಾರತದಲ್ಲಿ ದಾಖಲೆ ಬರೆಯಲು ಸಜ್ಜಾದ ಹಾಲಿವುಡ್ ಸಿನಿಮಾ ‘ಮಿಷನ್ ಇಂಪಾಸಿಬಲ್’
Mission
ಮಂಜುನಾಥ ಸಿ.
|

Updated on: May 10, 2025 | 8:26 PM

Share

ಭಾರತದಲ್ಲಿ ಹಾಲಿವುಡ್ (Hollywood) ಸಿನಿಮಾಗಳು ದೊಡ್ಡ ಮಟ್ಟದ ಲಾಭ ಮಾಡುತ್ತಿರುವುದು ಹೊಸದಲ್ಲ. ಕೋವಿಡ್​ಗೆ ಮುಂಚೆಯಿಂದಲೂ ಹಾಲಿವುಡ್​ನ ಕೆಲ ಸಿನಿಮಾಗಳು ನೂರಾರು ಕೋಟಿ ಬಾಕ್ಸ್ ಆಫೀಸ್ ಗಳಿಕೆಯನ್ನು ಭಾರತದಲ್ಲಿ ಮಾಡುತ್ತಿವೆ. ಹಲವು ಹಾಲಿವುಡ್ ಸಿನಿಮಾಗಳು, ಭಾರತಕ್ಕಾಗಿ ಇಲ್ಲಿನ ಪ್ರಾದೇಶಿಕ ಭಾಷೆಗಳಲ್ಲಿ ಡಬ್ ಮಾಡಿ ಸಿನಿಮಾ ಮಾಡುತ್ತವೆ. ಇತ್ತೀಚೆಗಿನ ವರ್ಷಗಳಲ್ಲಿ ಮಾರ್ವೆಲ್​ನ ‘ಅವೇಂಜರ್ಸ್​’ ಸಿನಿಮಾ ಸರಣಿ, ‘ಸ್ಪೈಡರ್​ಮ್ಯಾನ್’, ‘ಅವತಾರ್ 2’, ‘ಆಪನ್​ಹೈಮರ್’ ಸಿನಿಮಾಗಳು ಭಾರತದಲ್ಲಿ ಭಾರಿ ಪಸಲು ತೆಗೆದಿವೆ. ಇದೀಗ ಅದೇ ಸಾಲಿಗೆ ಸೇರಲು ಸಜ್ಜಾಗಿದೆ ಮತ್ತೊಂದು ಹಾಲಿವುಡ್ ಸಿನಿಮಾ.

ವಿಶ್ವದ ಅತ್ಯಂತ ದುಬಾರಿ ನಟ ಟಾಮ್ ಕ್ರೂಸ್ ನಟಿಸಿರುವ ‘ಮಿಷನ್ ಇಂಪಾಸಿಬಲ್’ ಸಿನಿಮಾ ಸರಣಿಯ ಎಂಟನೇ ಸಿನಿಮಾ ‘ಮಿಷನ್ ಇಂಪಾಸಿಬಲ್: ದಿ ಫೈನಲ್ ರೆಕನಿಂಗ್’ ಸಿನಿಮಾ ಇನ್ನೊಂದು ವಾರದಲ್ಲಿ ಭಾರತದಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದ್ದು, ಮೊದಲ 24 ಗಂಟೆ ಅವಧಿಯಲ್ಲಿ 11 ಸಾವಿರಕ್ಕೂ ಹೆಚ್ಚು ಟಿಕೆಟ್​ಗಳು ಮಾರಾಟವಾಗಿವೆ. ಇದು ಕಡಿಮೆ ಸಂಖ್ಯೆಯಲ್ಲ.

ಇದನ್ನೂ ಓದಿ:ಮಿಷನ್ ಇಂಪಾಸಿಬಲ್ 7 ನೋಡಿದ ನೆಟ್ಟಿಗರು ಏನಂದರು?

‘ಮಿಷನ್ ಇಂಪಾಸಿಬಲ್: ದಿ ಫೈನಲ್ ರೆಕನಿಂಗ್’ ಸಿನಿಮಾ ಮೇ 17ಕ್ಕೆ ಭಾರತದಲ್ಲಿ ಬಿಡುಗಡೆ ಆಗಲಿದೆ. ವಿಶೇಷವೆಂದರೆ ಈ ಸಿನಿಮಾ ಇಡೀ ವಿಶ್ವದಲ್ಲಿ ಮೊದಲಿಗೆ ಭಾರತದಲ್ಲಿಯೇ ಬಿಡುಗಡೆ ಆಗುತ್ತಿದೆ. ಭಾರತದಲ್ಲಿ ಬಿಡುಗಡೆ ಆದ ಒಂದು ವಾರದ ಬಳಿಕ ಅಮೆರಿಕ ಹಾಗೂ ಇತರೆಡೆ ಬಿಡುಗಡೆ ಆಗಲಿದೆ. ಅಲ್ಲದೆ, ‘ಮಿಷನ್ ಇಂಪಾಸಿಬಲ್’ನ ಈ ಹಿಂದಿನ ಕೆಲ ಸರಣಿಗಳು ಭಾರತದಲ್ಲಿ ಭರ್ಜರಿ ಕಲೆಕ್ಷನ್ ಮಾಡಿದ್ದು, ಟಾಮ್ ಕ್ರೂಸ್​ಗೆ ಭಾರಿ ಸಂಖ್ಯೆಯ ಅಭಿಮಾನಿಗಳು ಭಾರತದಲ್ಲಿ ಇದ್ದಾರೆ. ಹಾಗಾಗಿ ಸಿನಿಮಾದ ಕಲೆಕ್ಷನ್ ಭಾರತದಲ್ಲಿ ಬಲು ಜೋರಾಗಿಯೇ ಆಗುವ ನಿರೀಕ್ಷೆ ಇದೆ.

‘ಮಿಷನ್ ಇಂಪಾಸಿಬಲ್: ದಿ ಫೈನಲ್ ರೆಕನಿಂಗ್’ ಸಿನಿಮಾ, ಇಂಗ್ಲೀಷ್, ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಮೇ 17ರಂದೇ ತೆರೆಗೆ ಬರಲಿದೆ. ಈ ಸಿನಿಮಾದ ಮೊದಲ ಭಾಗ ‘ಮಿಷನ್ ಇಂಪಾಸಿಬಲ್: ಡೆಡ್ ರಕೂನ್’ 2023ರ ಜುಲೈ ತಿಂಗಳಲ್ಲಿ ಬಿಡುಗಡೆ ಆಗಿತ್ತು. ಒಂದು ಬೀಗದ ಹಿಂದೆ ಬಿದ್ದ ಮಾಫಿಯಾ ಗುಂಪನ್ನು ನಾಯಕ ಟಾಮ್ ಕ್ರೂಸ್ ತಡೆಯುವ ಕತೆಯನ್ನು ಆ ಸಿನಿಮಾ ಒಳಗೊಂಡಿತ್ತು. ಸಿನಿಮಾದ ಅಂತ್ಯದಲ್ಲಿ ಆ ಬೀಗ ಟಾಮ್ ಕ್ರೂಸ್ ಕೈ ಸೇರಿತ್ತು. ಇದೀಗ ಅದೇ ಕತೆಯ ಮುಂದುವರೆದ ಭಾಗ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ