AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Chopra: ಲಿಫ್ಟ್​ನಲ್ಲೂ ಪ್ರಿಯಾಂಕಾ-ನಿಕ್​ ಜೋನಸ್​ ರೊಮ್ಯಾನ್ಸ್​; ವೈರಲ್​ ಫೋಟೋ ಕಂಡು ಫ್ಯಾನ್ಸ್​ ಪ್ರತಿಕ್ರಿಯೆ ಏನು?

Citadel Premier Show: ಲಂಡನ್​ನಲ್ಲಿ ‘ಸಿಟಾಡೆಲ್​’ ಪ್ರೀಮಿಯರ್ ಶೋ ನಡೆದಿದೆ. ಈ ವೇಳೆ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋನಸ್​ ಅವರು ಆತ್ಮೀಯವಾಗಿ ಫೋಟೋಶೂಟ್​ ಮಾಡಿಸಿದ್ದಾರೆ.

Priyanka Chopra: ಲಿಫ್ಟ್​ನಲ್ಲೂ ಪ್ರಿಯಾಂಕಾ-ನಿಕ್​ ಜೋನಸ್​ ರೊಮ್ಯಾನ್ಸ್​; ವೈರಲ್​ ಫೋಟೋ ಕಂಡು ಫ್ಯಾನ್ಸ್​ ಪ್ರತಿಕ್ರಿಯೆ ಏನು?
ನಿಕ್ ಜೋನಸ್. ಪ್ರಿಯಾಂಕಾ ಚೋಪ್ರಾ
ಮದನ್​ ಕುಮಾರ್​
|

Updated on: Apr 20, 2023 | 11:01 AM

Share

​ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಹಾಲಿವುಡ್​ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಬಣ್ಣದ ಬದುಕಿನ ಜರ್ನಿಗೆ ಪತಿ ನಿಕ್​ ಜೋನಸ್​ ಅವರು ಬೆಂಬಲವಾಗಿ ನಿಂತಿದ್ದಾರೆ. ಇಬ್ಬರ ನಡುವೆ ಅಗಾಧವಾದ ಪ್ರೀತಿ ಇದೆ. ಆ ಬಗ್ಗೆ ಪ್ರಿಯಾಂಕಾ ಚೋಪ್ರಾ ಅವರು ಈಗಾಗಲೇ ಅನೇಕ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದುಂಟು. ಈಗ ‘ಸಿಟಾಡೆಲ್​’ (Citadel) ವೆಬ್​ ಸಿರೀಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ನಟಿಸಿದ್ದಾರೆ. ಅದರ ಸಲುವಾಗಿ ಶುಭ ಕೋರಲು ನಿಕ್​ ಜೋನಸ್​ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಪ್ರಿಯಾಂಕಾ ಮತ್ತು ನಿಕ್​ ಜೋನಸ್​ (Nick Jonas) ಅವರ ಆತ್ಮೀಯ ಕ್ಷಣಗಳಿವೆ. ಅದನ್ನು ಕಂಡು ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ. ‘ಪ್ರಿಯಾಂಕಾ ಚೋಪ್ರಾ ಮೇಲೆ ನಿಕ್​ ಜೋನಸ್​ಗೆ ಎಷ್ಟು ಪ್ರೀತಿ ಇದೆ ಎಂಬುದಕ್ಕೆ ಈ ಫೋಟೋಗಳೇ ಸಾಕ್ಷಿ’ ಎನ್ನುತ್ತಿದ್ದಾರೆ ಫ್ಯಾನ್ಸ್​.

ಇಂಗ್ಲಿಷ್​ನ ‘ಸಿಟಾಡೆಲ್​’ ಸೀರಿಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ರಿಚರ್ಡ್​ ಮ್ಯಾಡನ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅಮೇಜಾನ್​ ಪ್ರೈಂ ವಿಡಿಯೋ ಮೂಲಕ ಏಪ್ರಿಲ್​ 28ರಿಂದ ಈ ಸೀರಿಸ್​ ಪ್ರಸಾರ ಆರಂಭ ಆಗಲಿದೆ. ಅದಕ್ಕೂ ಮುನ್ನ ಸೆಲೆಬ್ರಿಟಿಗಳಿಗಾಗಿ ಲಂಡನ್​ನಲ್ಲಿ ಇದರ ಪ್ರೀಮಿಯರ್ ಶೋ ನಡೆದಿದೆ. ಅದರಲ್ಲಿ ಭಾಗವಹಿಸುವ ಸಲುವಾಗಿ ಲಂಡನ್​ಗೆ ಬಂದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋನಸ್​ ಅವರು ಆತ್ಮೀಯವಾಗಿ ಫೋಟೋಶೂಟ್​ ಮಾಡಿಸಿದ್ದಾರೆ.

ಇದನ್ನೂ ಓದಿ
Image
Priyanka Chopra: ಫ್ಯಾನ್ಸ್​ ವಾವ್​ ಎನ್ನುವಂತೆ ಗ್ಲಾಮರ್​ ವೇಷ ಧರಿಸಿದ ಪ್ರಿಯಾಂಕಾ ಚೋಪ್ರಾ; ಇಲ್ಲಿವೆ ಫೋಟೋಗಳು
Image
ಶಾಕಿಂಗ್​ ಸತ್ಯದ ಜತೆ ಮೊದಲ ಬಾರಿ ಮಗು ಫೋಟೋ ತೋರಿಸಿದ ಪ್ರಿಯಾಂಕಾ ಚೋಪ್ರಾ-ನಿಕ್​ ಜೋನಸ್​
Image
ಪ್ರಿಯಾಂಕಾ ಚೋಪ್ರಾ ಮಗಳ ಹೆಸರು ಮಾಲ್ತಿ ಮೇರಿ ಚೋಪ್ರಾ ಜೋನಸ್​; ಏನು ಇದರ ಅರ್ಥ?
Image
ಕಪ್ಪು ಸೀರೆ ಧರಿಸಿ ‘ಪ್ರೀ ಆಸ್ಕರ್​ ಪಾರ್ಟಿ’ಯಲ್ಲಿ ಮಿಂಚಿದ ‘ದೇಸಿ ಗರ್ಲ್​’ ಪ್ರಿಯಾಂಕಾ ಚೋಪ್ರಾ

ಇದನ್ನೂ ಓದಿ: ಪ್ರಿಯಾಂಕಾ ಚೋಪ್ರಾ-ನಿಕ್​ ಜೋನಸ್​ ಸಂಸಾರದ ಗುಟ್ಟು ರಟ್ಟು ಮಾಡ್ತಾರಾ ಕರಣ್​ ಜೋಹರ್​?

ಲಿಫ್ಟ್​ನಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋನಸ್​ ಅವರು ಪರಸ್ಪರ ಚುಂಬಿಸುತ್ತಿರುವ ರೀತಿಯಲ್ಲಿ ಪೋಸ್​ ನೀಡಿದ್ದಾರೆ. ಬಾಲ್ಕನಿಯಲ್ಲಿ ಕ್ಲಿಕ್ಕಿಸಿದ ಫೋಟೋದಲ್ಲಿ ಪ್ರಿಯಾಂಕಾ ಅವರು ನಿಕ್​ ಜೋನಸ್​ ಮುಖದ ಮೇಲೆ ಕೈ ಇಟ್ಟು ಮುದ್ದಿಸುವಂತಿದೆ. ಮತ್ತೊಂದು ಫೋಟೋದಲ್ಲಿ ಈ ದಂಪತಿ ಮನಸಾರೆ ನಗುತ್ತಿದ್ದಾರೆ. ಈ ಎಲ್ಲ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಲಕ್ಷಾಂತರ ಜನರು ಲೈಕ್​ ಮಾಡಿದ್ದು, ಸಾವಿರಾರು ಕಮೆಂಟ್​ಗಳು ಬಂದಿವೆ.

View this post on Instagram

A post shared by Nick Jonas (@nickjonas)

ಇದನ್ನೂ ಓದಿ: ಲಾಸ್​ ವೇಗಾಸ್ ನಲ್ಲಿ ರೊಮ್ಯಾಂಟಿಕ್​ ವಾಕ್​ ಮಾಡಿದ ಪ್ರಿಯಾಂಕಾ ಚೋಪ್ರಾ  ಮತ್ತು ನಿಕ್​ ಜೋನಸ್​  

ಮುಂಬೈನಲ್ಲಿನ ಆಸ್ತಿ ಮಾರಿದ ಪ್ರಿಯಾಂಕಾ:

2018ರಲ್ಲಿ ನಿಕ್​ ಜೋನಸ್​ ಅವರನ್ನು ಮದುವೆ ಆದ ಬಳಿಕ ಪ್ರಿಯಾಂಕಾ ಚೋಪ್ರಾ ಅವರು ಅಮೆರಿಕಕ್ಕೆ ಶಿಫ್ಟ್​ ಆದರು. ಈಗ ಅವರು ಅಲ್ಲಿಯೇ ಸೆಟ್ಲ್​ ಆಗಿದ್ದಾರೆ. ಹಾಲಿವುಡ್​ ಸಿನಿಮಾಗಳಿಂದ ಅವರಿಗೆ ಅವಕಾಶಗಳು ಸಿಗುತ್ತಿವೆ. ಕೆಲವೇ ದಿನಗಳ ಹಿಂದೆ ಅವರು ಮುಂಬೈನಲ್ಲಿನ ಆಸ್ತಿ ಮಾರಿದ್ದಾರೆ. ಇಷ್ಟು ವರ್ಷಗಳ ಕಾಲ ಆ ಜಾಗವನ್ನು ಅವರು ಬಾಡಿಗೆಗೆ ನೀಡಿದ್ದರು. ಆದರೆ ಈಗ 7 ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾರೆ. ಪ್ರಿಯಾಂಕಾ ಚೋಪ್ರಾ ಪರವಾಗಿ ಅವರ ತಾಯಿ ಮಧು ಚೋಪ್ರಾ ಈ ವ್ಯವಹಾರ ನಡೆಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ