
ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಹಾಗೂ ಪಾಪ್ ಸಿಂಗರ್ ನಿಕ್ ಜೋನಸ್ (Nick Jonas) ಇಬ್ಬರೂ ವಿಚ್ಛೇದನ ಪಡೆದುಕೊಳ್ಳುತ್ತಿದ್ದಾರೆ ಎನ್ನುವ ವದಂತಿ ಕಳೆದ ವರ್ಷ ಕೇಳಿ ಬಂದಿತ್ತು. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಈ ಸುದ್ದಿ ಸುಳ್ಳು ಎಂದು ಅವರು ಸ್ಪಷ್ಟನೆ ನೀಡಿದ ಮೇಲೆ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದರು. ಈಗ 2022ರ ಆರಂಭದಲ್ಲೇ ಪ್ರಿಯಾಂಕಾ ಚೋಪ್ರಾ-ನಿಕ್ ಖುಷಿ ಸುದ್ದಿ ನೀಡಿದ್ದಾರೆ. ಬಾಡಿಗೆ ತಾಯ್ತನದ (Surrogacy) ಮೂಲಕ ಇಬ್ಬರೂ ಮಗುವನ್ನು ಪಡೆದಿದ್ದಾರೆ. ಈ ವಿಚಾರ ಕೇಳಿ ಎಲ್ಲರೂ ಅಚ್ಚರಿಗೊಂಡಿದ್ದಾರೆ. ಈಗ ಪ್ರಿಯಾಂಕಾ ಚೋಪ್ರಾ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಮಗುವಿನ ನಿರೀಕ್ಷೆಯಲ್ಲಿ ಇರುವ ಬಗ್ಗೆ ಜೋಕ್ ಮಾಡಿದ್ದರು. ಆ ಸಂದರ್ಭದಲ್ಲಿ ಎಲ್ಲರೂ ಆ ಮಾತನ್ನು ತಮಾಷೆಯಾಗಿ ಸ್ವೀಕರಿಸಿದ್ದರು. ಆದರೆ, ಅದು ನಿಜವಾಗಿದೆ.
‘ಜೋನಸ್ ಬ್ರದರ್ಸ್ ಫ್ಯಾಮಿಲಿ ರೋಸ್ಟ್’ ಕಾರ್ಯಕ್ರಮ ನೆಟ್ಫ್ಲಿಕ್ಸ್ನಲ್ಲಿ ನವೆಂಬರ್ ತಿಂಗಳಲ್ಲಿ ಪ್ರಸಾರವಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಿಯಾಂಕಾ ಚೋಪ್ರಾ ಅವರು ನಿಕ್ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ್ದರು. ನಿಕ್ ಇನ್ನೂ ಚಿಕ್ಕ ಹುಡುಗ ಎಂಬರ್ಥದಲ್ಲಿ ಮಾತನಾಡಿದ್ದರು. ಈ ವೇಳೆ ಅವರು ಮಗುವಿನ ನಿರೀಕ್ಷೆಯಲ್ಲಿರುವ ವಿಚಾರ ಮಾತನಾಡಿದ್ದರು.
‘ಜೋನಸ್ ಕುಟುಂಬದಲ್ಲಿ ನಾನು ಮತ್ತು ನಿಕ್ ಇಬ್ಬರೇ ಮಗು ಇಲ್ಲದೆ ಇರುವವರು. ಈಗ ನಾನು ಮತ್ತು ನಿಕ್..’ ಎಂದು ಹೇಳಿದ್ದ ಪ್ರಿಯಾಂಕಾ ಬೇರೆ ವಿಚಾರ ಮಾತನಾಡಿದ್ದರು. ‘ನಾನು ಮತ್ತು ನಿಕ್ ಮಗುವಿನ ನಿರೀಕ್ಷೆಯಲ್ಲಿದ್ದೇವೆ’ ಎಂದು ಪ್ರಿಯಾಂಕಾ ಹೇಳುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಈ ವಿಚಾರದಲ್ಲಿ ಅವರು ಜೋಕ್ ಮಾಡಿದ್ದರು. ಆಗ ಅವರು ಹೇಳಲು ಹೊರಟಿದ್ದ ವಿಚಾರ ಏನು ಎಂಬುದು ಈಗ ಗೊತ್ತಾಗಿದೆ ಎಂದು ಎಲ್ಲರೂ ಹೇಳುತ್ತಿದ್ದಾರೆ.
ಶುಕ್ರವಾರ (ಜ.21) ತಡರಾತ್ರಿ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಅವರು ಈ ವಿಷಯ ಹಂಚಿಕೊಂಡರು. ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿರುವ ಅವರು ಮಗುವಿನ ಫೋಟೋ ತೋರಿಸಿಲ್ಲ. ‘ಬಾಡಿಗೆ ತಾಯಿ ಮೂಲಕ ನಾವು ಮಗು ಪಡೆದಿದ್ದೇವೆ ಎಂಬುದನ್ನು ತಿಳಿಸಲು ತುಂಬ ಖುಷಿ ಆಗುತ್ತಿದೆ. ಕುಟುಂಬದ ಕಡೆಗೆ ಹೆಚ್ಚು ಗಮನ ಹರಿಸಬೇಕಾಗಿರುವ ಈ ವಿಶೇಷ ಸಂದರ್ಭದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸಿ ಅಂತ ಕೇಳಿಕೊಳ್ಳುತ್ತೇನೆ’ ಎಂದು ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ರೀಲ್ಸ್ ಮಾಡುವಾಗ ಬಿಗ್ ಬಾಸ್ ಸ್ಪರ್ಧಿ ಧರಿಸಿದ ಬಟ್ಟೆ ನೋಡಿ ಶಾಕ್ ಆದ ಅಭಿಮಾನಿಗಳು
Priyanka Chopra: ಬಾಡಿಗೆ ತಾಯಿ ಮೂಲಕ ಮಗು ಪಡೆದ ಪ್ರಿಯಾಂಕಾ ಚೋಪ್ರಾ-ನಿಕ್ ಜೋನಸ್
Published On - 4:40 pm, Sat, 22 January 22