ಕೆನ್ನೆಗೆ ಹೊಡೆದು ವಿಲ್ ಸ್ಮಿತ್ ರಂಪಾಟ ಮಾಡಿದ ಪ್ರಕರಣ; ಆಸ್ಕರ್ ಪ್ರಶಸ್ತಿ ಹಿಂಪಡೆಯಲಿದೆ ಅಕಾಡೆಮಿ?
ವೇದಿಕೆ ಏರಿದ ವಿಲ್ ಸ್ಮಿತ್ ಅವರು ಕ್ರಿಸ್ ರಾಕ್ ಮುಖಕ್ಕೆ ಬಾರಿಸಿದರು. ಸದ್ಯ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಇದಕ್ಕೆ ಅನೇಕರು ಖಂಡನೆ ವ್ಯಕ್ತಪಡಿಸಿದ್ದರು.
ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ (Oscar Awards) ಸಮಾರಂಭದಲ್ಲಿ ಎಲ್ಲರೂ ಶಿಸ್ತಿನಿಂದ ನಡೆದುಕೊಳ್ಳೋಕೆ ಬಯಸುತ್ತಾರೆ. ಆದರೆ, ಈ ಬಾರಿಯ ಆಸ್ಕರ್ ಪ್ರಶಸ್ತಿ ಸಮಾರಂಭ ವಿಚಿತ್ರ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ನಟ ವಿಲ್ ಸ್ಮಿತ್ (Will Smith) ಅವರು ವೇದಿಕೆ ಮೇಲೆ ಹಾಸ್ಯ ನಟ ಕ್ರಿಸ್ ರಾಕ್ (Chris Rock) ಕೆನ್ನೆಗೆ ಬಾರಿಸುವ ಮೂಲಕ ವಿವಾದ ಹುಟ್ಟು ಹಾಕಿದ್ದಾರೆ. ವಿಶೇಷ ಎಂದರೆ, ಇದೇ ವೇದಿಕೆ ಮೇಲೆ ವಿಲ್ ಸ್ಮಿತ್ಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. ಈ ಪ್ರಶಸ್ತಿಯನ್ನು ಹಿಂಪಡೆಯಬೇಕು ಎನ್ನುವ ಆಗ್ರಹ ಕೇಳಿ ಬರುತ್ತಿದೆ. ಇದಕ್ಕೆ ಅಕಾಡೆಮಿ ಪ್ರತಿಕ್ರಿಯಿಸಿದೆ.
ಎಂದಿನಂತೆ ಆಸ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಖುಷಿಖುಷಿಯಾಗಿ ನಡೆಯುತ್ತಿತ್ತು. ಅತ್ಯುತ್ತಮ ಡಾಕ್ಯುಮೆಂಟರಿ ಪ್ರಶಸ್ತಿಯನ್ನು ವಿತರಿಸಲು ಕ್ರಿಸ್ ರಾಕ್ ಅವರನ್ನು ವೇದಿಕೆಗೆ ಕರೆಯಲಾಗಿತ್ತು. ಈ ವೇಳೆ ಅವರು ಸುಮ್ಮನಿರಲಾರದೇ ವಿಲ್ ಸ್ಮಿತ್ ಪತ್ನಿ ಜೇಡಾ ಪಿಂಕೆಟ್ ಸ್ಮಿತ್ ಬಗ್ಗೆ ಮಾತನಾಡಿದರು. ಜೇಡಾ ಪಿಂಕೆಟ್ ಸ್ಮಿತ್ ಬಗ್ಗೆ ಅವರು ಜೋಕ್ ಕೂಡ ಮಾಡಿದರು. ಅದನ್ನು ಕೇಳಿ ಇಡೀ ಸಭಾಂಗಣ ಜೋರಾಗಿ ನಕ್ಕಿತು. ಒಂದು ಕ್ಷಣ ವಿಲ್ ಸ್ಮಿತ್ ಕೂಡ ನಕ್ಕರು. ಆದರೆ ಅಲ್ಲಿ ಮರುಕ್ಷಣ ನಡೆದಿದ್ದು ನಿಜಕ್ಕೂ ಶಾಕಿಂಗ್. ಕೂಡಲೇ ವೇದಿಕೆ ಏರಿದ ವಿಲ್ ಸ್ಮಿತ್ ಅವರು ಕ್ರಿಸ್ ರಾಕ್ ಮುಖಕ್ಕೆ ಬಾರಿಸಿದರು. ಸದ್ಯ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಇದಕ್ಕೆ ಅನೇಕರು ಖಂಡನೆ ವ್ಯಕ್ತಪಡಿಸಿದ್ದರು.
ಈ ರೀತಿ ಆಗಿದ್ದರ ಬಗ್ಗೆ ಸ್ವತಃ ವಿಲ್ ಸ್ಮಿತ್ ಅವರಿಗೂ ಬೇಸರ ಇದೆ. ಈಗ ಅವರು ಕ್ಷಮೆ ಕೇಳಿದ್ದಾರೆ. ‘ನಾನು ಅಕಾಡೆಮಿಯ ಕ್ಷಮೆ ಕೇಳುತ್ತೇನೆ. ನಾಮನಿರ್ದೇಶಕಗೊಂಡ ಎಲ್ಲರಲ್ಲೂ ಕ್ಷಮೆ ಕೇಳುತ್ತೇನೆ’ ಎಂದು ಅವರು ವೇದಿಕೆ ಮೇಲೆ ಕಣ್ಣೀರು ಹಾಕಿದ್ದಾರೆ. ಆ ವಿಡಿಯೋ ಕೂಡ ವೈರಲ್ ಆಗುತ್ತಿದೆ.
ಇದನ್ನೂ ಓದಿ: ಯಶ್ ಹೊಸ ಸಿನಿಮಾ ಸೆಟ್ಟೇರೋದು ಯಾವಾಗ, ಅದು ಯಾವ ಹಂತದಲ್ಲಿದೆ?; ರಾಕಿಂಗ್ ಸ್ಟಾರ್ ಕೊಟ್ರು ಉತ್ತರ
Oscars 2022 Winners: ವಿಲ್ ಸ್ಮಿತ್ಗೆ ಅತ್ಯುತ್ತಮ ನಟ ಆಸ್ಕರ್ ಪ್ರಶಸ್ತಿ; ‘ಕೋಡಾ’ ಅತ್ಯುತ್ತಮ ಸಿನಿಮಾ