Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾ ಚೋಪ್ರಾ ಮಗಳ ಹೆಸರು ಮಾಲ್ತಿ ಮೇರಿ ಚೋಪ್ರಾ ಜೋನಸ್​; ಏನು ಇದರ ಅರ್ಥ?

Priyanka Chopra Daughter Name: ಹೆಣ್ಣು ಮಗುವಿಗೆ ಮಾಲ್ತಿ ಮೇರಿ ಚೋಪ್ರಾ ಜೋನಸ್ ಎಂದು ನಾಮಕರಣ ಮಾಡಿರುವ ಬಗ್ಗೆ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋನಸ್​ ದಂಪತಿ ಕಡೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ ಹಲವು ಮಾಧ್ಯಮಗಳು ವರದಿ ಪ್ರಕಟಿಸಿವೆ.

ಪ್ರಿಯಾಂಕಾ ಚೋಪ್ರಾ ಮಗಳ ಹೆಸರು ಮಾಲ್ತಿ ಮೇರಿ ಚೋಪ್ರಾ ಜೋನಸ್​; ಏನು ಇದರ ಅರ್ಥ?
ನಿಕ್​ ಜೋನಸ್​, ಪ್ರಿಯಾಂಕಾ ಚೋಪ್ರಾ
Follow us
TV9 Web
| Updated By: ಮದನ್​ ಕುಮಾರ್​

Updated on:Apr 21, 2022 | 1:23 PM

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಈ ವರ್ಷ ಆರಂಭದಲ್ಲಿ ಮೊದಲ ಮಗುವನ್ನು ಬರಮಾಡಿಕೊಂಡರು. ಈವರೆಗೂ ಅವರು ಮಗುವಿನ ಫೋಟೋ ತೋರಿಸಿಲ್ಲ. ಬಾಡಿಗೆ ತಾಯಿ ಮೂಲಕ ಹೆಣ್ಣು ಮಗು ಪಡೆದಿರುವ ಅವರು ಈಗ ನಾಮಕರಣ ಮಾಡಿದ್ದಾರೆ ಎನ್ನಲಾಗಿದೆ. ಪ್ರಿಯಾಂಕಾ ಚೋಪ್ರಾ ಮಗಳಿಗೆ ಮಾಲ್ತಿ ಮೇರಿ ಚೋಪ್ರಾ ಜೋನಸ್​ (Malti Marie Chopra Jonas) ಅಂತ ಹೆಸರು ಇಡಲಾಗಿದೆ ಎಂದು ಕೆಲವೆಡೆ ವರದಿ ಆಗಿದೆ. ನಿಕ್​ ಜೋನಸ್​ ಅವರನ್ನು ಮದುವೆ ಆದ ಬಳಿಕ ಪ್ರಿಯಾಂಕಾ ಅಮೆರಿಕದಲ್ಲಿ ನೆಲೆಸಿದ್ದಾರೆ. ಅಲ್ಲಿನ ಸಂಸ್ಕೃತಿಯ ಜನರ ನಡುವೆ ಜೀವನ ಸಾಗಿಸುತ್ತಿದ್ದರೂ ಕೂಡ ಅವರು ತಾಯ್ನಾಡಿನ ಬಗ್ಗೆ ಗೌರವ ಹೊಂದಿದ್ದಾರೆ. ಅವರ ಪ್ರತಿ ನಡೆಯಲ್ಲೂ ಅದನ್ನು ಅಭಿಮಾನಿಗಳು ಗುರುತಿಸುತ್ತಿದ್ದಾರೆ. ಈಗ ಪ್ರಿಯಾಂಕಾ ಅವರು ತಮ್ಮ ಹೆಣ್ಣು ಮಗುವಿಗೆ (Priyanka Chopra Daughter) ಮಾಲ್ತಿ ಎಂದು ಸಂಸ್ಕೃತ ಮೂಲದ ಹೆಸರನ್ನು ಇಟ್ಟಿರುವುದು ವಿಶೇಷ.

ಪ್ರಿಯಾಂಕಾ ಚೋಪ್ರಾ-ನಿಕ್ ಜೋನಸ್​ ದಂಪತಿಯ ಮಗಳ ಹೆಸರು ‘ಮಾಲ್ತಿ ಮೇರಿ ಚೋಪ್ರಾ ಜೋನಸ್​’ ಅಂತ ಜನನ ಪ್ರಮಾಣಪತ್ರದಲ್ಲಿ ಬರೆಯಲಾಗಿದೆ ಎಂದು TMZ ವೆಬ್​ಸೈಟ್​ನಲ್ಲಿ ವರದಿ ಪ್ರಕಟ ಆಗಿದೆ. ‘ಈ ಹೆಸರನ್ನು ಅವರು ಯಾಕೆ ಆಯ್ಕೆ ಮಾಡಿದ್ದಾರೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಮಾಲ್ತಿ ಎಂದರೆ ಸಂಸ್ಕೃತದಲ್ಲಿ ಪರಿಮಳ ಬೀರುವ ಹೂವು ಅಥವಾ ಬೆಳದಿಂಗಳು ಎಂಬ ಅರ್ಥ ಇದೆ. ಇದು ಭಾರತ ಹಾಗೂ ಸಂಸ್ಕೃತ ಮೂಲದ ಪದ’ ಎಂದು TMZ ವೆಬ್​ಸೈಟ್ ವರದಿ ಮಾಡಿದೆ.

ಮಗು ಬಗ್ಗೆ ಪ್ರಿಯಾಂಕಾ ಚೋಪ್ರಾ ಅವರು ಮೊದಲಿನಿಂದಲೂ ಗೌಪ್ಯತೆ ಕಾಯ್ದುಕೊಂಡು ಬಂದಿದ್ದಾರೆ. ಬಾಡಿಗೆ ತಾಯಿ ಮೂಲಕ ಮಗು ಪಡೆಯುವ ಬಗ್ಗೆ ಅವರು ಯಾವುದೇ ಮಾಹಿತಿ ಹಂಚಿಕೊಂಡಿರಲಿಲ್ಲ. ಸುದ್ದಿ ಹೊರಬಿದ್ದ ಬಳಿಕ ಅವರು ಆ ಕುರಿತು ಪೋಸ್ಟ್​ ಮಾಡಿದ್ದರು. ಮಗು ಬಗ್ಗೆ ಅನೇಕ ಅಂತೆ-ಕಂತೆಗಳು ಹರಿದಾಡುತ್ತಿವೆ. ಅವಧಿಗೂ ಮುನ್ನವೇ ಆ ಮಗು ಜನಿಸಿದೆ ಎಂಬ ಸುದ್ದಿ ಕೂಡ ಕೇಳಿಬಂತು.

‘ಆರೂವರೆ ತಿಂಗಳಿಗೆ ಮಗು ಹುಟ್ಟಿದ್ದರಿಂದ ಅದನ್ನು ತಕ್ಷಣವೇ ಮನೆಗೆ ಕರೆದುಕೊಂಡು ಬರಲು ಸಾಧ್ಯವಿಲ್ಲ. ಒಂದಷ್ಟು ದಿನಗಳು ಆಸ್ಪತ್ರೆಯಲ್ಲೇ ಆರೈಕೆ ಮಾಡಿ ನಂತರ ಮನೆಗೆ ಕರೆದುಕೊಂಡು ಬರುತ್ತಾರೆ’ ಎಂದು ಕೂಡ ಸುದ್ದಿ ಪ್ರಕಟ ಆಗಿತ್ತು. ಆ ಬಗ್ಗೆ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋಸನ್​ ದಂಪತಿ ಯಾವುದೇ ಪ್ರತಿಕ್ರಿಯೆಯನ್ನೂ ನೀಡಲಿಲ್ಲ.

ಈಗ ಮಗುವಿಗೆ ಮಾಲ್ತಿ ಮೇರಿ ಚೋಪ್ರಾ ಜೋನಸ್​ ಎಂದು ಹೆಸರು ಇಟ್ಟಿದ್ದಾರೆ ಎಂದು ಎಲ್ಲ ಕಡೆ ಸುದ್ದಿ ಹಬ್ಬಿದೆ. ಈ ಕುರಿತು ಪ್ರಿಯಾಂಕಾ ಚೋಪ್ರಾ ಯಾವಾಗ ಪ್ರತಿಕ್ರಿಯಿಸಬಹುದು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಅನೇಕ ಹಾಲಿವುಡ್​ ಪ್ರಾಜೆಕ್ಟ್​ಗಳಲ್ಲಿ ಪ್ರಿಯಾಂಕಾ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ:

ಬೆಂಗಳೂರಿನ ವ್ಯಕ್ತಿಗೆ ರೋಲ್ಸ್ ರಾಯ್ಸ್ ಘೋಸ್ಟ್ ಕಾರು ಮಾರಿದ ಪ್ರಿಯಾಂಕಾ ಚೋಪ್ರಾ; ಕಾರಣ ಏನು?

ಗೊಂಬೆ ಜತೆ ಕೃಷ್ಣನ ಮೂರ್ತಿ; ವೈರಲ್​ ಆಗುತ್ತಿದೆ ಪ್ರಿಯಾಂಕಾ ಚೋಪ್ರಾ ಹಂಚಿಕೊಂಡ ಫೋಟೋ

Published On - 12:53 pm, Thu, 21 April 22

ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ