ಹಾಲಿವುಡ್​ನಲ್ಲಿ ಪ್ರಿಯಾಂಕಾ ಬ್ಯುಸಿ; ಪ್ರತಿ ಚಿತ್ರಕ್ಕೆ ಪಡೆಯುತ್ತಿರೋ ಸಂಭಾವನೆ ಎಷ್ಟು?

ಹಾಲಿವುಡ್​ನಲ್ಲಿ ಪ್ರಿಯಾಂಕಾ ಚೋಪ್ರಾಗೆ ಸಿನಿಮಾ ಆಫರ್​ಗಳು ಬರುತ್ತಿವೆ ನಿಜ. ಆದರೆ, ಬಾಲಿವುಡ್​ ಸಿನಿಮಾಗಳ ರೀತಿ ಅವರ ಚಿತ್ರಗಳು ಹಾಲಿವುಡ್​ನಲ್ಲಿ ಯಶಸ್ಸು ಕಾಣುತ್ತಿಲ್ಲ. ಈ ಬಗ್ಗೆ ಅವರಿಗೆ ಬೇಸರ ಇದೆ. ಆದರೆ, ಪ್ರಿಯಾಂಕಾ ಚೋಪ್ರಾ ಸಿನಿಮಾ ಮಾಡೋದನ್ನು ನಿಲ್ಲಿಸಿಲ್ಲ.

ಹಾಲಿವುಡ್​ನಲ್ಲಿ ಪ್ರಿಯಾಂಕಾ ಬ್ಯುಸಿ; ಪ್ರತಿ ಚಿತ್ರಕ್ಕೆ ಪಡೆಯುತ್ತಿರೋ ಸಂಭಾವನೆ ಎಷ್ಟು?
ಪ್ರಿಯಾಂಕಾ ಚೋಪ್ರಾ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Jul 18, 2024 | 7:48 AM

ನಟಿ ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್​ನಲ್ಲಿ ದೊಡ್ಡ ಯಶಸ್ಸು ಕಂಡವರು. ಈಗ ಅವರ ಗಮನ ಸಂಪೂರ್ಣವಾಗಿ ಹಾಲಿವುಡ್ ಮೇಲಿದೆ. ಅವರು ಅಲ್ಲಿನ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಅಲ್ಲಿ ಭರ್ಜರಿ ಬೇಡಿಕೆ ಸೃಷ್ಟಿ ಆಗುತ್ತಿದೆ. ಪ್ರಿಯಾಂಕಾ ಹಾಲಿವುಡ್​ನಲ್ಲಿ ಸೆಟಲ್ ಆಗಲು ಕಾರಣ ಅವರ ಪತಿ ನಿಕ್ ಜೋನಸ್. ನಿಕ್ ಅವರು ಹಾಲಿವುಡ್​ನಲ್ಲಿ ಸಿಂಗರ್. ಹೀಗಾಗಿ, ಪ್ರಿಯಾಂಕಾಗೆ ಅಲ್ಲಿನವರು ಆಫರ್ ನೀಡುತ್ತಿದ್ದಾರೆ. ಅವರು ಪ್ರತಿ ಚಿತ್ರಕ್ಕೆ ಭರ್ಜರಿ ಸಂಭಾವನೆಗೆ ಬೇಡಿಕೆ ಇಡುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಪ್ರಿಯಾಂಕಾ ಚೋಪ್ರಾಗೆ ಇಂದು (ಜುಲೈ 17) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಅವರು ಬಾಲಿವುಡ್ ತೊರೆದು ಹಲವು ವರ್ಷಗಳೇ ಕಳೆದಿವೆ. ಸದ್ಯಕ್ಕಂತೂ ಅವರು ಬಾಲಿವುಡ್​ನತ್ತ ಮುಖ ಮಾಡುತ್ತಿಲ್ಲ. ಇದರ ಜೊತೆಗೆ ಅವರು ಮುಂಬೈನಲ್ಲಿರೋ ಕೆಲವು ಅಪಾರ್ಟ್​ಮೆಂಟ್​ಗಳನ್ನು ಮಾರಾಟ ಮಾಡಿದ್ದಾರೆ. ಈ ಮೂಲಕ ಅವರು ಹಿಂದಿ ಚಿತ್ರರಂಗದಿಂದ, ಭಾರತದಿಂದ ಸಂಪೂರ್ಣವಾಗಿ ದೂರವಾಗುವ ಆಲೋಚನೆಯಲ್ಲಿ ಇದ್ದಾರಾ ಎನ್ನುವ ಪ್ರಶ್ನೆ ಮೂಡಿದೆ.

ಪ್ರಿಯಾಂಕಾ ಚೋಪ್ರಾ ಹಾಲಿವುಡ್​ನಲ್ಲಿ ಪ್ರತಿ ಚಿತ್ರಕ್ಕೆ ಬರೋಬ್ಬರಿ 40 ಕೋಟಿ ರೂಪಾಯಿ ಪಡೆಯುತ್ತಾರೆ.  ಭಾರತದಲ್ಲಿ ಸಿನಿಮಾ ಮಾಡಲು ಅವರು 20 ಕೋಟಿ ರೂಪಾಯಿ ತೆಗೆದುಕೊಳ್ಳುತ್ತಿದ್ದರು. ಈಗ ಅಮೆರಿಕಕ್ಕೆ ಹೋಗಿ ಅವರು ಸಂಭಾವನೆಯನ್ನು ದುಪ್ಪಟ್ಟು ಮಾಡಿಕೊಂಡಿದ್ದಾರೆ.

ಪ್ರಿಯಾಂಕಾ ಚೋಪ್ರಾಗೆ ಹಾಲಿವುಡ್​ನಲ್ಲಿ ಸಿನಿಮಾ ಆಫರ್​ಗಳು ಬರುತ್ತಿವೆ ನಿಜ. ಆದರೆ, ಬಾಲಿವುಡ್​ ಸಿನಿಮಾಗಳ ರೀತಿ ಅವರ ಚಿತ್ರಗಳು ಯಶಸ್ಸು ಕಾಣುತ್ತಿಲ್ಲ. ಈ ಬಗ್ಗೆ ಅವರಿಗೆ ಬೇಸರ ಇದೆ. ಆದರೆ, ಪ್ರಿಯಾಂಕಾ ಚೋಪ್ರಾ ಸಿನಿಮಾ ಮಾಡೋದನ್ನು ನಿಲ್ಲಿಸಿಲ್ಲ.

ಪ್ರಿಯಾಂಕಾ ಚೋಪ್ರಾ ಅವರ ಆಸ್ತಿ 620 ಕೋಟಿ ರೂಪಾಯಿ. ಅವರು ಹಿಂದಿ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ನಟಿಸಿದ್ದಾರೆ. ಆ ಸಂದರ್ಭದಲ್ಲಿ ಅವರು ಭರ್ಜರಿ ಹಣವನ್ನು ಸಂಪಾದಿಸಿದ್ದರು. ಮುಂಬೈನ ಹಲವು ಕಡೆಗಳಲ್ಲಿ ಅವರು ಆಸ್ತಿ ಖರೀತಿ ಮಾಡಿದ್ದರು. ಪ್ರಿಯಾಂಕಾ ಚೋಪ್ರಾ ಬಳಿ ದುಬಾರಿ ಕಾರುಗಳು ಇವೆ.

ಇದನ್ನೂ ಓದಿ: ಪ್ರಿಯಾಂಕಾ ಚೋಪ್ರಾ ಮೈದುನನಿಗೆ ಕ್ಯಾನ್ಸರ್​: ಚರ್ಮದ ಕ್ಯಾನ್ಸರ್ ಬಗ್ಗೆ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ ಕೆವಿನ್​

ಪ್ರಿಯಾಂಕಾ ಚೋಪ್ರಾ ಅವರ ವಯಸ್ಸು 42. ಈಗಲೂ ಪ್ರಿಯಾಂಕಾ ಗ್ಲಾಮರ್ ಕಾಯ್ದುಕೊಂಡಿದ್ದಾರೆ. ಕೆಲ ವರ್ಷಗಳ ಹಿಂದೆ ಪ್ರಿಯಾಂಕಾ ಅವರು ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆದಿದ್ದಾರೆ. ಈ ಮಗುವಿಗೆ ಮಾಲ್ತಿ ಎಂದು ಹೆಸರು ಇಡಲಾಗಿದೆ. ಪ್ರಿಯಾಂಕಾ ಚೋಪ್ರಾಗೆ ಇನ್​ಸ್ಟಾಗ್ರಾಮ್​ನಲ್ಲಿ 9.1 ಕೋಟಿ ಹಿಂಬಾಲಕರು ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ