ಮುಂಬೈಗೆ ಮರಳಿ ಬರದೇ ಇರಲು ನಿರ್ಧರಿಸಿದ್ರಾ ಪ್ರಿಯಾಂಕಾ ಚೋಪ್ರಾ?

ಪ್ರಿಯಾಂಕಾ ಚೋಪ್ರಾ ಅವರು ಮುಂಬೈನಲ್ಲೇ ಸೆಟಲ್ ಆಗಿದ್ದರು. ಈ ಸಂದರ್ಭದಲ್ಲಿ ಅವರು ಮುಂಬೈನಲ್ಲಿ ಹಲವು ಪ್ರಾಪರ್ಟಿಗಳನ್ನು ಖರೀದಿ ಮಾಡಿದ್ದರು. ಇದನ್ನು ಈಗ ಒಂದೊಂದಾಗಿಯೇ ಮಾರಾಟ ಮಾಡುತ್ತಿದ್ದಾರೆ.

ಮುಂಬೈಗೆ ಮರಳಿ ಬರದೇ ಇರಲು ನಿರ್ಧರಿಸಿದ್ರಾ ಪ್ರಿಯಾಂಕಾ ಚೋಪ್ರಾ?
ಪ್ರಿಯಾಂಕಾ ಚೋಪ್ರಾ
Follow us
|

Updated on: Nov 18, 2023 | 11:39 AM

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಪಾಪ್ ಸಿಂಗರ್ ನಿಕ್​ ಜೋನಸ್​ನ ಮದುವೆ ಆದ ಬಳಿಕ ಅಮೆರಿಕದಲ್ಲಿ ಸೆಟ್ಲ್ ಆಗಿದ್ದಾರೆ. ಅವರು ಅಲ್ಲಿ ಹೋಟೆಲ್ ಉದ್ಯಮವನ್ನೂ ಆರಂಭಿಸಿದ್ದರು. ಪಾರ್ಟನರ್ ಜೊತೆ ಹೊಂದಾಣಿಕೆ ಆಗದ ಕಾರಣ ಅವರು ಉದ್ಯಮದಿಂದ ಹೊರ ಬಂದರು. ಈಗ ಅವರ ಸಂಪೂರ್ಣ ಗಮನ ನಟನೆಯ ಮೇಲಿದೆ. ಅವರು ಮುಂಬೈ ಜೊತೆಯ ನಂಟನ್ನು ಸಂಪೂರ್ಣವಾಗಿ ಕಳೆದುಕೊಳ್ಳುವ ಉದ್ದೇಶ ಇಟ್ಟುಕೊಂಡಿದ್ದಾರಾ ಎನ್ನುವ ಅನುಮಾನ ಮೂಡುತ್ತಿದೆ.

ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಂಡವರು. ಅವರು ಮುಂಬೈನಲ್ಲೇ ಸೆಟಲ್ ಆಗಿದ್ದರು. ಈ ಸಂದರ್ಭದಲ್ಲಿ ಅವರು ಮುಂಬೈನಲ್ಲಿ ಹಲವು ಪ್ರಾಪರ್ಟಿಗಳನ್ನು ಖರೀದಿ ಮಾಡಿದ್ದರು. ಇದನ್ನು ಈಗ ಒಂದೊಂದಾಗಿಯೇ ಮಾರಾಟ ಮಾಡುತ್ತಿದ್ದಾರೆ. ಕಳೆದ ವರ್ಷ ಕೆಲವು ಪ್ರಾಪರ್ಟಿಗಳನ್ನು ಪ್ರಿಯಾಂಕಾ ಮಾರಿದ್ದರು. ಈಗ ಅವರು ಮತ್ತೆರಡು ಪೆಂಟ್​ಹೌಸ್​ಗಳನ್ನು ಮಾರಿದ್ದಾರೆ.

ದೀಪಾವಳಿ ಆಚರಣೆಗೆ ಪ್ರಿಯಾಂಕಾ ಅವರು ಮುಂಬೈಗೆ ಬಂದಿದ್ದರು. ಈ ವೇಳೆ ಮುಂಬೈನ ಅಂದೇರಿಯಲ್ಲಿರುವ ಎರಡು ಪೆಂಟ್​ಹೌಸ್​ಗಳನ್ನು ನಿರ್ಮಾಪಕ, ನಿರ್ದೇಶಕ ಅಭಿಷೇಕ್ ಚೌಬೆಗೆ ಮಾರಾಟ ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಅವರಿಗೆ 6 ಕೋಟಿ ರೂಪಾಯಿ ಸಿಕ್ಕಿದೆ ಎಂದು ವರದಿ ಆಗಿದೆ. ಈ ಮೂಲಕ ಪ್ರಿಯಾಂಕಾ ಒಂದೊಂದೇ ಮನೆಯನ್ನು ಮಾರಾಟ ಮಾಡುತ್ತಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಓಶಿವಾರದಲ್ಲಿರು ಪೆಂಟ್​ಹೌಸ್​ನ 2.25 ಕೋಟಿ ರೂಪಾಯಿಗೆ ಹಾಗೂ ಎರಡನೇ ಪೆಂಟ್​ಹೌಸ್​ನ 3.75 ಕೋಟಿ ರೂಪಾಯಿಗೆ ಮಾರಾಟ ಮಾಡಲಾಗಿದೆ. ಎರಡು ಪ್ರಾಪರ್ಟಿಗಳಿಂದ 36 ಲಕ್ಷ ರೂಪಾಯಿ ಸ್ಟಾಂಪ್​ ಡ್ಯೂಟಿನ ಕಟ್ಟಲಾಗಿದೆ. ಅಕ್ಟೋಬರ್ 23 ಹಾಗೂ 25ರಂದು ಈ ವ್ಯವಹಾರ ನಡೆದಿದೆ.

ಇದನ್ನೂ ಓದಿ: ‘ಗ್ಲೋಬಲ್ ಸ್ಟಾರ್’ ಪ್ರಿಯಾಂಕಾ ಚೋಪ್ರಾಗೆ ಟಾಂಗ್ ಕೊಟ್ಟ ದೀಪಿಕಾ ಪಡುಕೋಣೆ

ಪ್ರಿಯಾಂಕಾ ಚೋಪ್ರಾ ಅವರು ಇಂಗ್ಲಿಷ್ ಸೀರಿಸ್ ಹಾಗೂ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅವರ ನಟನೆಯ ‘ಸಿಟಾಡೆಲ್’ ವೆಬ್ ಸೀರಿಸ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈಗ ಎರಡನೇ ಸೀಸನ್​ ಶೂಟಿಂಗ್​ನಲ್ಲಿ ಅವರು ಬ್ಯುಸಿ ಇದ್ದಾರೆ. ಇನ್ನೂ ಕೆಲವು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಹಿಂದಿ ಸಿನಿಮಾ ಒಂದರಲ್ಲಿ ಅವರು ನಟಿಸಬೇಕಿತ್ತು. ಆದರೆ, ಅವರು ಚಿತ್ರದಿಂದ ಹೊರ ನಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ