AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಕ್ಷನ್ ದೃಶ್ಯದ ವೇಳೆ ಪ್ರಿಯಾಂಕಾ ಚೋಪ್ರಾ ಕತ್ತಿಗೆ ಆಯ್ತು ಗಾಯ

ಆ್ಯಕ್ಷನ್ ಸಿನಿಮಾಗಳನ್ನು ಮಾಡೋ ಸಂದರ್ಭದಲ್ಲಿ ಈ ರೀತಿಯ ಸಮಸ್ಯೆ ಎದುರಾಗೋದು ಸಹಜ. ಹೀಗಾಗಿಯೇ ಪ್ರಿಯಾಂಕಾ ತೊಂದರೆ ಅನುಭವಿಸಿದ್ದಾರೆ.  ಈ ಮೊದಲು ಕೂಡ ಪ್ರಿಯಾಂಕಾ ಚೋಪ್ರಾ ಹಲವು ಬಾರಿ ಗಾಯಗೊಂಡಿದ್ದರು. ಆದರೆ, ಅವರು ಆ್ಯಕ್ಷನ್ ಸಿನಿಮಾಗಳಿಂದ ದೂರ ಹೋಗಿಲ್ಲ.

ಆ್ಯಕ್ಷನ್ ದೃಶ್ಯದ ವೇಳೆ ಪ್ರಿಯಾಂಕಾ ಚೋಪ್ರಾ ಕತ್ತಿಗೆ ಆಯ್ತು ಗಾಯ
ಪ್ರಿಯಾಂಕಾ
ರಾಜೇಶ್ ದುಗ್ಗುಮನೆ
|

Updated on: Jun 20, 2024 | 7:44 AM

Share

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಗಾಯಕ ನಿಕ್ ಜೋನಸ್​ನ ಮದುವೆ ಆಗೋ ಮೂಲಕ ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ. ಅವರು ಹಾಯಾಗಿ ಸಂಸಾರ ನಡೆಸುತ್ತಾ ಬರುತ್ತಿದ್ದಾರೆ. ಅವರಿಗೆ ಈಗ ಹಾಲಿವುಡ್​ನಲ್ಲಿ ಬೇಡಿಕೆ ಸೃಷ್ಟಿ ಆಗಿದೆ. ಪ್ರಿಯಾಂಕಾ ಚೋಪ್ರಾ ಅವರು ಈಗ ಶೂಟಿಂಗ್ ವೇಳೆ ಗಾಯ ಮಾಡಿಕೊಂಡಿದ್ದಾರೆ. ಈ ಫೋಟೋನ ಸ್ವತಃ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸಿನಿಮಾ ಶೂಟಿಂಗ್ ವೇಳೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತದೆ. ಆದಾಗ್ಯೂ ಕೆಲವೊಮ್ಮೆ ಅವಘಡಗಳು ಸಂಭವಿಸಿ ಬಿಡುತ್ತವೆ. ಈಗ ಪ್ರಿಯಾಂಕಾ ಚೋಪ್ರಾಗೂ ಹಾಗೆಯೇ ಆಗಿದೆ. ‘ದಿ ಬ್ಲಫ್’ ಸಿನಿಮಾ ಶೂಟಿಂಗ್ ವೇಳೆ ಅವರ ಕತ್ತಿನ ಭಾಗಕ್ಕೆ ಸರಿಯಾಗಿ ಮಾರ್ಕ್ ಬಿದ್ದಿದೆ. ಇದನ್ನು ಪ್ರಿಯಾಂಕಾ ಶೇರ್ ಮಾಡಿಕೊಂಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ಬಾಲಿವುಡ್​ನಲ್ಲಿ ಹಲವು ಆ್ಯಕ್ಷನ್ ಸಿನಿಮಾ ಮಾಡಿದ್ದಾರೆ. ಹಾಲಿವುಡ್​ಗೆ ತೆರಳಿದ ಬಳಿಕ ಅವರು ಅದೇ ರೀತಿಯ ಸಿನಿಮಾ ಬಗ್ಗೆ ಗಮನ ಹರಿಸಿದರು. ಆ್ಯಕ್ಷನ್ ಸಿನಿಮಾಗಳನ್ನು ಮಾಡೋ ಸಂದರ್ಭದಲ್ಲಿ ಈ ರೀತಿಯ ಸಮಸ್ಯೆ ಎದುರಾಗೋದು ಸಹಜ. ಹೀಗಾಗಿಯೇ ಪ್ರಿಯಾಂಕಾ ತೊಂದರೆ ಅನುಭವಿಸಿದ್ದಾರೆ.  ಈ ಮೊದಲು ಕೂಡ ಪ್ರಿಯಾಂಕಾ ಚೋಪ್ರಾ ಹಲವು ಬಾರಿ ಗಾಯಗೊಂಡಿದ್ದರು. ಆದರೆ, ಅವರು ಆ್ಯಕ್ಷನ್ ಸಿನಿಮಾಗಳಿಂದ ದೂರ ಹೋಗಿಲ್ಲ.

ಇದನ್ನೂ ಓದಿ: ಪ್ರಿಯಾಂಕಾ ಚೋಪ್ರಾ ಮೈದುನನಿಗೆ ಕ್ಯಾನ್ಸರ್​: ಚರ್ಮದ ಕ್ಯಾನ್ಸರ್ ಬಗ್ಗೆ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ ಕೆವಿನ್​

ಮಾರ್ಚ್ ತಿಂಗಳಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ಪತಿ ನಿಕ್ ಜೋನಸ್ ಜೊತೆ ಅಯೋಧ್ಯೆಗೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದಿದ್ದರು. ತಿಳಿ ಬಣ್ಣದ ಸೀರೆಯುಟ್ಟಿದ್ದ ಪ್ರಿಯಾಂಕಾ ಮಗಳನ್ನು ಕಂಕುಳಲ್ಲಿ ಹೊತ್ತು ದೇವಾಲಯಕ್ಕೆ ಬಂದಿದ್ದರು. ಪ್ರಿಯಾಂಕಾ ಪತಿ ನಿಕ್ ಜೋನಸ್ ಸಹ ಭಾರತೀಯ ಉಡುಗೆ ತೊಟ್ಟು ಬಂದಿದ್ದರು. ಬಾಲರಾಮನ ದರ್ಶನ ಪಡೆದ ಪ್ರಿಯಾಂಕಾ-ನಿಕ್ ಜೋನಸ್ ದಂಪತಿಗೆ ದೇವಾಲಯದ ಪೂಜಾರಿಗಳು ತೀರ್ಥ, ಪ್ರಸಾದ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು