ಸ್ಕ್ರಿಪ್ಟ್​ ಮೇಲೆ ‘ಓಂ’ ಅಂತ ಬರೆದು ಕೆಲಸ ಶುರು ಮಾಡಿದ ಪ್ರಿಯಾಂಕಾ ಚೋಪ್ರಾ

ಪ್ರಿಯಾಂಕಾ ಚೋಪ್ರಾ ಅವರು ನಿಕ್​ ಜೋನಸ್​ ಅವರನ್ನು ಮದುವೆ ಆಗಿದ್ದರೂ ಕೂಡ ಹಿಂದೂ ಧರ್ಮದ ಆಚರಣೆಗಳನ್ನು ನಿಲ್ಲಿಸಿಲ್ಲ. ಅಮೆರಿಕದಲ್ಲಿ ಸೆಟ್ಲ್​ ಆಗಿರುವ ಅವರು ಈಗ ಹೊಸ ಸಿನಿಮಾದ ಕೆಲಸ ಶುರು ಮಾಡಿದ್ದಾರೆ. ಆ ಚಿತ್ರದ ಸ್ಕ್ರಿಪ್ಟ್​ ಮೇಲೆ ‘ಓಂ’ ಎಂದು ಬರೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ವೈರಲ್​ ಆಗಿದೆ.

ಸ್ಕ್ರಿಪ್ಟ್​ ಮೇಲೆ ‘ಓಂ’ ಅಂತ ಬರೆದು ಕೆಲಸ ಶುರು ಮಾಡಿದ ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ, ವೈರಲ್ ಫೋಟೋ
Follow us
|

Updated on: May 31, 2024 | 9:14 PM

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಈಗ ಭಾರತದಲ್ಲಿ ಇಲ್ಲ. ಗಾಯಕ ನಿಕ್​ ಜೋನಸ್​ ಅವರನ್ನು ಮದುವೆ ಆದ ನಂತರ ಅವರು ಅಮೆರಿಕದಲ್ಲಿ ವಾಸವಾಗಿದ್ದಾರೆ. ದೇಶ ಬಿಟ್ಟು ಹೋದರೂ ಅವರು ಸಂಸ್ಕೃತಿ ಮರೆತಿಲ್ಲ. ಅದಕ್ಕೆ ಆಗಾಗ ಸಾಕ್ಷಿ ಸಿಗುತ್ತಲೇ ಇದೆ. ಈಗ ಪ್ರಿಯಾಂಕಾ ಚೋಪ್ರಾ ಅವರು ಹೊಸ ಸಿನಿಮಾದ (Priyanka Chopra New Movie) ಕೆಲಸ ಆರಂಭಿಸಿದ್ದಾರೆ. ಈ ಸಿನಿಮಾದ ಸ್ಕ್ರಿಪ್ಟ್​ನ ಮೊದಲ ಪುಟದ ಫೋಟೋವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿಶೇಷ ಏನೆಂದರೆ, ಸ್ಕ್ರಿಪ್ಟ್​ನ ಆರಂಭದಲ್ಲಿ ಅವರು ಓಂ (Om) ಎಂದು ಬರೆದಿದ್ದಾರೆ! ಇದು ಎಲ್ಲರ ಗಮನ ಸೆಳೆದಿದೆ.

ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋನಸ್​ ಅವರದ್ದು ಅಂತರ್​ ಧರ್ಮೀಯ ವಿವಾಹ. ಹಾಗಿದ್ದರೂ ಕೂಡ ಪ್ರಿಯಾಂಕಾ ಚೋಪ್ರಾ ಅವರು ಹಿಂದೂ ಧರ್ಮದ ಆಚರಣೆಗಳನ್ನು ನಿಲ್ಲಿಸಿಲ್ಲ. ಪ್ರತಿ ವರ್ಷ ಅವರು ಹೋಳಿ, ದೀಪಾವಳಿ, ಗಣೇಶ ಚತುರ್ಥಿ ಮುಂತಾದ ಹಬ್ಬಗಳನ್ನು ಆಚರಿಸುತ್ತಾರೆ. ಆ ಕಾರಣದಿಂದ ಭಾರತದಲ್ಲಿನ ಅಭಿಮಾನಿಗಳಿಗೆ ಅವರು ಇಷ್ಟ ಆಗುತ್ತಾರೆ.

ಇದನ್ನೂ ಓದಿ: ವಿಜಯ್​ ಜತೆ ಸಿನಿಮಾ ಮಾಡಲ್ಲ ಅಂತ ಕಣ್ಣೀರು ಹಾಕಿದ್ದ ಪ್ರಿಯಾಂಕಾ ಚೋಪ್ರಾ

ಯಾವುದೇ ಹೊಸ ಕಾರ್ಯ ಆರಂಭಿಸುವಾಗ ಅಥವಾ ಹೊಸ ಬರವಣಿಗೆ ಶುರು ಮಾಡುವಾಗ ಮೊದಲು ‘ಓಂ’ ಎಂದು ಬರೆಯುವ ಅಭ್ಯಾಸ ಭಾರತದಲ್ಲಿದೆ. ಬಹುತೇಕ ಸಿನಿಮಾದವರ ಸ್ಕ್ರಿಪ್ಟ್​ನಲ್ಲಿ ಇದು ಕಾಣಿಸುತ್ತದೆ. ಪ್ರಿಯಾಂಕಾ ಚೋಪ್ರಾ ಅವರು ಮಾಡುತ್ತಿರುವುದು ಹಾಲಿವುಡ್​ ಸಿನಿಮಾ ಆಗಿದ್ದರೂ ಕೂಡ ಅವರು ತಮ್ಮ ಪರಂಪರೆಯನ್ನು ಬಿಟ್ಟಿಲ್ಲ. ‘ದ ಬ್ಲಫ್​’ ಸಿನಿಮಾದ ಸ್ಕ್ರಿಪ್ಟ್​ ಮೇಲೆ ಓಂ ಎಂದು ಅವರು ಬರೆದಿದ್ದಾರೆ.

View this post on Instagram

A post shared by Priyanka (@priyankachopra)

ಪ್ರಿಯಾಂಕಾ ಚೋಪ್ರಾ ನಟನೆಯ ಹೊಸ ಸಿನಿಮಾ ‘ದ ಬ್ಲಫ್​’ ಚಿತ್ರೀಕರಣ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿದೆ. ‘ಅಮೇಜಾನ್​ ಪ್ರೈಂ ವಿಡಿಯೋ’ ಒಟಿಟಿಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ‘ದಿ ಸಿಟಾಡೆಲ್​’ ವೆಬ್​ ಸಿರೀಸ್​ ಬಳಿಕ ಪ್ರಿಯಾಂಕಾ ಚೋಪ್ರಾ ಅವರು ಎರಡನೇ ಬಾರಿಗೆ ಅಮೇಜಾನ್​ ಪ್ರೈಂ ವಿಡಿಯೋ ಜೊತೆ ಕೈ ಜೋಡಿಸಿದ್ದಾರೆ. ‘ದ ಬ್ಲಫ್​’ ಸಿನಿಮಾದಲ್ಲಿ ರೆಟ್ರೋ ಕಾಲದ ಕಹಾನಿ ಇರಲಿದೆ. ಈ ಸಿನಿಮಾ ಮೇಲೆ ಪ್ರಿಯಾಂಕಾ ಅವರ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಇದರ ಜೊತೆಗೆ ಅವರು ಹಿಂದಿ ಸಿನಿಮಾಗಳನ್ನು ಕೂಡ ಒಪ್ಪಿಕೊಳ್ಳಲಿ ಎಂಬುದು ಅಭಿಮಾನಿಗಳ ಆಸೆ. ಆದರೆ ಅದು ಸದ್ಯಕ್ಕಂತೂ ಈಡೇರುವ ರೀತಿ ಕಾಣುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ