AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯಾದ ನಂತರ ಮೊದಲ ಬಾರಿಗೆ ಫೋಟೋ ಹಂಚಿಕೊಂಡ ಪ್ರಿಯಾಂಕಾ; ಫ್ಯಾನ್ಸ್​ಗೆ ಮತ್ತೊಂದು ಖುಷಿ ಸುದ್ದಿ ನೀಡಿದ ನಟಿ

Priyanka Chopra | Ending Things: ಬಹುಭಾಷಾ ನಟಿ ಪ್ರಿಯಾಂಕಾ ಚೋಪ್ರಾ ಸದ್ಯ ಹಾಲಿವುಡ್​ನಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಕುಟುಂಬಕ್ಕೆ ಹೊಸ ಸದಸ್ಯರನ್ನು ಸ್ವಾಗತಿಸಿರುವ ಅವರ ಬತ್ತಳಿಕೆಗೆ ಇದೀಗ ಹೊಸ ಸಿನಿಮಾ ಸೇರ್ಪಡೆಯಾಗಿದೆ.

ತಾಯಿಯಾದ ನಂತರ ಮೊದಲ ಬಾರಿಗೆ ಫೋಟೋ ಹಂಚಿಕೊಂಡ ಪ್ರಿಯಾಂಕಾ; ಫ್ಯಾನ್ಸ್​ಗೆ ಮತ್ತೊಂದು ಖುಷಿ ಸುದ್ದಿ ನೀಡಿದ ನಟಿ
ಪ್ರಿಯಾಂಕಾ ಚೋಪ್ರಾ ಹಂಚಿಕೊಂಡ ಹೊಸ ಫೋಟೋ
TV9 Web
| Edited By: |

Updated on: Feb 03, 2022 | 11:10 AM

Share

ಬಾಲಿವುಡ್​ನಲ್ಲಿ ಅಪಾರ ಜನಪ್ರಿಯತೆ ಪಡೆದ ನಂತರ ಪ್ರಿಯಾಂಕಾ ಚೋಪ್ರಾ (Priyanka Chopra) ಇದೀಗ ಹಾಲಿವುಡ್​ನಲ್ಲಿ ನೆಲೆಯೂರುತ್ತಿದ್ದಾರೆ. ಸದ್ಯ ಬಾಲಿವುಡ್ ಹಾಗೂ ಹಾಲಿವುಡ್ ಎರಡರಲ್ಲೂ ಚಿತ್ರಗಳನ್ನು ಒಪ್ಪಿಕೊಂಡಿರುವ ಪ್ರಿಯಾಂಕಾ, ಕೆಲ ದಿನಗಳ ಹಿಂದಷ್ಟೇ ಕುಟುಂಬಕ್ಕೆ ಹೊಸ ಅತಿಥಿಯನ್ನು ಸ್ವಾಗತಿಸಿದ್ದರು. 2018ರ ಡಿಸೆಂಬರ್​ನಲ್ಲಿ ಗೆಳೆಯ ನಿಕ್ ಜೋನಾಸ್ (Nick Jonas) ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಪ್ರಿಯಾಂಕ, ಜನವರಿ 22ರಂದು ಕುಟುಂಬಕ್ಕೆ ಹೊಸ ಅತಿಥಿ ಆಗಮನವಾಗಿದ್ದನ್ನು ಘೋಷಿಸಿದ್ದರು. ಬಾಡಿಗೆ ತಾಯಿಯ ಮೂಲಕ ನಿಕ್- ಪ್ರಿಯಾಂಕಾ ಪೋಷಕರಾಗಿದ್ದರು. ತಾರಾ ಜೋಡಿಗೆ ಜನಿಸಿರುವುದು ಹೆಣ್ಣು ಮಗು ಹಾಗೂ ಅವಧಿಪೂರ್ವದಲ್ಲಿ ಜನಿಸಿದೆ ಎಂದು ಹಲವು ವರದಿಗಳು ಹೇಳಿದ್ದವು. ಆದರೆ ಈ ಕುರಿತು ಪ್ರಿಯಾಂಕಾ ಆಗಲಿ ಅಥವಾ ನಿಕ್ ಆಗಲಿ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಇದೀಗ ಪ್ರಿಯಾಂಕಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಇದು ಅವರು ತಾಯಿಯಾದ ನಂತರ ಹಂಚಿಕೊಳ್ಳುತ್ತಿರುವ ಮೊದಲ ಚಿತ್ರವಾಗಿದೆ. ಇದರ ಬೆನ್ನಲ್ಲೇ ಪ್ರಿಯಾಂಕಾ ವೃತ್ತಿ ಜೀವನದ ಕುರಿತು ಹೊಸ ಸಮಾಚಾರ ಹೊರಬಿದ್ದಿದೆ.

ಪ್ರಿಯಾಂಕಾ ಇನ್​ಸ್ಟಾಗ್ರಾಂನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ಕಾರಿನಲ್ಲಿ ಕುಳಿತು ಸೆಲ್ಫಿಗೆ ಭರ್ಜರಿ ಪೋಸ್ ನೀಡಿದ್ದಾರೆ. ಸನ್​ಗ್ಲಾಸ್ ಧರಿಸಿಯೂ ಪ್ರಿಯಾಂಕಾ ಪೋಸ್ ನೀಡಿದ್ದು, ಚಿತ್ರಗಳು ಅಭಿಮಾನಿಗಳ ಮನಗೆದ್ದಿದೆ. ವಿಕ್ಕಿ ಕೌಶಲ್, ಅನುಷ್ಕಾ ಶರ್ಮಾ, ಮೇಘನಾ ರಾಜ್ ಸೇರಿದಂತೆ ಖ್ಯಾತ ತಾರೆಯರು ಪ್ರಿಯಾಂಕಾ ಫೋಟೋವನ್ನು ಇಷ್ಟಪಟ್ಟಿದ್ದಾರೆ. ಒಂಬತ್ತು ಗಂಟೆಗಳ ಹಿಂದೆ ಅಪ್​ಲೋಡ್ ಆದ ಚಿತ್ರಕ್ಕೆ ಈಗಾಗಲೇ 12 ಲಕ್ಷಕ್ಕೂ ಅಧಿಕ ಜನರು ಲೈಕ್ ಮಾಡಿದ್ದಾರೆ.

ಪ್ರಿಯಾಂಕಾ ಹಂಚಿಕೊಂಡ ಪೋಸ್ಟ್ ಇಲ್ಲಿದೆ:

View this post on Instagram

A post shared by Priyanka (@priyankachopra)

ಪ್ರಿಯಾಂಕಾ ಬತ್ತಳಿಕೆ ಸೇರಿತು ಮತ್ತೊಂದು ಚಿತ್ರ; ಫ್ಯಾನ್ಸ್ ಖುಷಿಪಡುವ ಸುದ್ದಿ ಇಲ್ಲಿದೆ

ಪ್ರಿಯಾಂಕಾ ಸದ್ಯ ಒಂದರ ಹಿಂದೊಂದು ಹಾಲಿವುಡ್ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ‘ದಿ ಮ್ಯಾಟ್ರಿಕ್ಸ್: ರಿಸರೆಕ್ಷನ್ಸ್’ನಲ್ಲಿಸತಿ ಪಾತ್ರದಲ್ಲಿ ಪ್ರಿಯಾಂಕಾ ಕಾಣಿಸಿಕೊಂಡಿದ್ದರು. ‘ಸಿಟಾಡೆಲ್’ ಸೀರೀಸ್​ನ ಚಿತ್ರೀಕರಣವನ್ನು ನಟಿ ಮುಗಿಸಿದ್ದಾರೆ. ‘ಟೆಕ್ಸ್ಟ್ ಫಾರ್ ಯೂ’ನಲ್ಲಿ ಪ್ರಿಯಾಂಕಾ ಕಾಣಿಸಿಕೊಳ್ಳುತ್ತಿದ್ದಾರೆ. ಬಾಲಿವುಡ್​ಗೂ ಕಮ್​ಬ್ಯಾಕ್ ಮಾಡಲಿರುವ ನಟಿ, ‘ಜೀ ಲೇ ಜರಾ’ ಚಿತ್ರದಲ್ಲಿ ಕತ್ರಿನಾ ಕೈಫ್ ಹಾಗೂ ಆಲಿಯಾ ಭಟ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ.

ಇದೀಗ ಪ್ರಿಯಾಂಕಾ ಬತ್ತಳಿಕೆಗೆ ಹೊಸ ಚಿತ್ರ ಸೇರ್ಪಡೆಯಾಗಿದೆ.ಖ್ಯಾತ ನಟ ಆಂಟೊನಿ ಮ್ಯಾಕಿ ಅವರೊಂದಿಗೆ ಪ್ರಿಯಾಂಕಾ ಕಾಣಿಸಿಕೊಳ್ಳಲಿದ್ದಾರೆ. ಕೆವಿನ್ ಸಲಿವಾನ್ ನಿರ್ದೇಶನದ ಆಕ್ಷನ್ ಚಿತ್ರ ‘ಎಂಡಿಂಗ್ ಥಿಂಗ್ಸ್’ ಪ್ರಿಯಾಂಕಾ ಒಪ್ಪಿಕೊಂಡಿರುವ ಲೇಟೆಸ್ಟ್ ಚಿತ್ರವಾಗಿದೆ. ಮ್ಯಾಕಿ ಈಗಾಗಲೇ ಮಾರ್ವೆಲ್ ಸರಣಿಯ ಚಿತ್ರಗಳಲ್ಲಿ ಕಾಣಿಸಿಕೊಂಡು ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಇದೀಗ ಪ್ರಿಯಾಂಕಾ ಅವರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದು ಚಿತ್ರದ ಕುರಿತು ಕುತೂಹಲ ಹೆಚ್ಚಿಸಿದೆ.

ಇದನ್ನೂ ಓದಿ:

ಪುನೀತ್​ ನಿವಾಸಕ್ಕೆ ಭೇಟಿ ನೀಡಲಿರುವ ಅಲ್ಲು ಅರ್ಜುನ್​; ಹೇಗಿರಲಿದೆ ಇಂದಿನ ಅವರ ವೇಳಾಪಟ್ಟಿ?

ನಟಿಯ ಫೋಟೋವನ್ನು ಅಶ್ಲೀಲವಾಗಿ ಎಡಿಟ್​ ಮಾಡಿದ ಕಿಡಿಗೇಡಿಗಳು; ಇಲ್ಲಿದೆ ಒರಿಜಿನಲ್​ ಫೋಟೋ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ