Rajamouli: ರಾಜಮೌಳಿಯ ಹಾಲಿವುಡ್​ ಪ್ಲ್ಯಾನ್​ ಏನು? ಕೇಳಿಬಂತು ಎರಡು ಅಚ್ಚರಿಯ ಸುದ್ದಿ 

RRR, Rajamouli | Hollywood: ‘ಆರ್​ಆರ್​ಆರ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ರಾಜಮೌಳಿ ಅವರ ಖ್ಯಾತಿ ಹೆಚ್ಚಿದೆ. ಹಾಲಿವುಡ್​ ಕಂಪನಿಗಳು ಕೂಡ ಅವರನ್ನು ಹುಡುಕಿಕೊಂಡು ಬರುತ್ತಿವೆ.

Rajamouli: ರಾಜಮೌಳಿಯ ಹಾಲಿವುಡ್​ ಪ್ಲ್ಯಾನ್​ ಏನು? ಕೇಳಿಬಂತು ಎರಡು ಅಚ್ಚರಿಯ ಸುದ್ದಿ 
ರಾಜಮೌಳಿ
Follow us
TV9 Web
| Updated By: ಮದನ್​ ಕುಮಾರ್​

Updated on:Sep 25, 2022 | 5:02 PM

ನಿರ್ದೇಶಕ ರಾಜಮೌಳಿ (Rajamouli) ಅವರ ಪ್ರತಿಭೆ ಬಗ್ಗೆ ಹೊಸದಾಗಿ ಹೇಳುವಂಥದ್ದು ಏನೂ ಇಲ್ಲ. ಮಾತಿಗಿಂತಲೂ ಕೆಲಸದ ಮೂಲಕವೇ ಅವರು ತಮ್ಮ ಸಾಮಾರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಚಿತ್ರರಂಗದಲ್ಲಿ ಅವರು ಮಾಡಿದ ದಾಖಲೆಗಳನ್ನು ಅವರೇ ಮುರಿಯಬೇಕು. ‘ಬಾಹುಬಲಿ’, ‘ಆರ್​ಆರ್​ಆರ್​’ (RRR) ಮುಂತಾದ ಸಿನಿಮಾಗಳಿಂದ ರಾಜಮೌಳಿ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​ ಪ್ರಶಸ್ತಿ ಕಣಕ್ಕೆ ಭಾರತದಿಂದ ಆಯ್ಕೆ ಆಗಲಿದೆ ಎಂದು ಊಹಿಸಲಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಹಾಗಾಗಿ ಅಭಿಮಾನಿಗಳಿಗೆ ಬೇಸರ ಆಗಿದ್ದು ನಿಜ. ಆದರೆ ಆ ಬೇಸರವನ್ನು ಮರೆಸುವಂತಹ ಎರಡು ಸುದ್ದಿ ಈಗ ಕೇಳಿಬಂದಿದೆ. ಹಾಲಿವುಡ್​ (Hollywood) ಕಂಪನಿಗಳ ಜೊತೆ ರಾಜಮೌಳಿ ಕೈ ಜೋಡಿಸಿರುವುದು ತಿಳಿದುಬಂದಿದೆ. ಹಾಗಾಗಿ ಅವರ ಮುಂದಿನ ಪ್ರಾಜೆಕ್ಟ್​ ಬಗ್ಗೆ ಕೌತುಕ ಹೆಚ್ಚಾಗಿದೆ.

ರಾಜಮೌಳಿ ಅವರ ಟಾಲಿವುಡ್​ ಸ್ಟಾರ್​ ನಟ ಮಹೇಶ್​ ಬಾಬು ಜೊತೆಗೆ ಸಿನಿಮಾ ಮಾಡಲು ಸಜ್ಜಾಗುತ್ತಿದ್ದಾರೆ. ಆ ಚಿತ್ರಕ್ಕಾಗಿ ಸ್ಕ್ರಿಪ್ಟ್​ ಕೆಲಸಗಳು ಭರದಿಂದ ಸಾಗುತ್ತಿವೆ. ಅಷ್ಟರಲ್ಲಾಗಲೇ ರಾಜಮೌಳಿ ಅವರು ಹಾಲಿವುಡ್​ನ ಕ್ರಿಯೇಟಿವ್​ ಆರ್ಟಿಸ್ಟ್ಸ್​ ಏಜೆನ್ಸಿ (ಸಿಎಎ) ಜೊತೆ ಕೈ ಜೋಡಿಸಿದ್ದಾರೆ. ಈ ಪ್ರತಿಷ್ಠಿತ ಸಂಸ್ಥೆ ಜೊತೆ ಅವರು ಹೊಸ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಈ ಸುದ್ದಿ ಕೇಳಿ ಫ್ಯಾನ್ಸ್​ ಥ್ರಿಲ್​ ಆಗಿದ್ದಾರೆ.

ಸಿಎಎ ಜೊತೆ ಕೈ ಜೋಡಿಸಿರುವುದರಿಂದ ರಾಜಮೌಳಿ ಅವರ ಹವಾ ಹಾಲಿವುಡ್​ನಲ್ಲೂ ಹೆಚ್ಚಲಿದೆ. ಮಹೇಶ್​ ಬಾಬು ಜೊತೆ ಅವರು ಮಾಡಲಿರುವ ಚಿತ್ರವನ್ನು ವಿಶ್ವಮಟ್ಟಕ್ಕೆ ತಲುಪಿಸಲು ಪ್ಲ್ಯಾನ್​ ನಡೆದಿದೆ. ಅದರ ಅಂಗವಾಗಿಯೇ ರಾಜಮೌಳಿ ಅವರು ಸಿಎಎ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ
Image
ಬಾಕ್ಸ್​ ಆಫೀಸ್​ನಲ್ಲಿ ನೂರಾರು ಕೋಟಿ ಬಾಚಿದ ‘ಬ್ರಹ್ಮಾಸ್ತ್ರ’ ಚಿತ್ರದಿಂದ ರಾಜಮೌಳಿಗೆ ಸಿಕ್ಕ ಹಣ ಎಷ್ಟು?
Image
ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್; ಪಬ್ಲಿಸಿಟಿ ಸ್ಟಂಟ್ಸ್ ಎಂದ ನೆಟ್ಟಿಗರು
Image
ಕೊನೇ ಕ್ಷಣದಲ್ಲಿ ಅಮಿತ್ ಶಾ ಭೇಟಿಯಿಂದ ಹಿಂದೆ ಸರಿದ ರಾಜಮೌಳಿ? ಇದಕ್ಕಿದೆ ದೊಡ್ಡ ಕಾರಣ
Image
‘ನನ್ನ ಸಿನಿಮಾದಲ್ಲಿ ಅಂಥ ನಟರು ಇರೋದೇ ಬೇಡ’: ರಾಜಮೌಳಿಗೆ ಕಂಡೀಷನ್​ ಹಾಕಿದ ಮಹೇಶ್​ ಬಾಬು?

ಎರಡನೇ ಅಚ್ಚರಿಯ ಸುದ್ದಿ ಏನೆಂದರೆ, ಮಹೇಶ್​ ಬಾಬು-ರಾಜಮೌಳಿ ಕಾಂಬಿನೇಷನ್​ನ ಹೊಸ ಚಿತ್ರದಲ್ಲಿ ಹಾಲಿವುಡ್​ನ ಸ್ಟಾ​ರ್​ ನಟರು ಕೂಡ ಅತಿಥಿ ಪಾತ್ರ ಮಾಡುತ್ತಾರೆ ಎನ್ನಲಾಗಿದೆ. ಸದ್ಯಕ್ಕೆ ಇದು ಅಂತೆ-ಕಂತೆಯ ಹಂತದಲ್ಲಿ ಇದೆ. ಈ ಸುದ್ದಿ ಬಗ್ಗೆ ಯಾರೊಬ್ಬರು ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ‘ಅವೆಂಜರ್ಸ್​: ಎಂಡ್​ಗೇಮ್​’ ಮತ್ತು ಇತರ ಸಿನಿಮಾಗಳಲ್ಲಿ ‘ಥೋರ್’​ ಪಾತ್ರ ಮಾಡಿ ಸೈ ಎನಿಸಿಕೊಂಡಿರುವ ನಟ ಕ್ರಿಸ್​ ಹ್ಯಾಮ್ಸ್​ವರ್ಥ್​ ಅವರು ರಾಜಮೌಳಿಯ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡುತ್ತಾರೆ ಎಂಬ ಸುದ್ದಿ ಕೆಲವೆಡೆ ಪ್ರಕಟ ಆಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್​ ಕಾದಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ರಾಜಮೌಳಿ ಅವರ ಖ್ಯಾತಿ ಹೆಚ್ಚಿದೆ. ಹಾಲಿವುಡ್​ ಮಂದಿ ಕೂಡ ಈ ಚಿತ್ರವನ್ನು ನೋಡಿ ಇಷ್ಟಪಟ್ಟಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:02 pm, Sun, 25 September 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ