AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಹೆಮ್ಮೆಯ ಕ್ಷಣ: ಆಸ್ಕರ್ ಕಾರ್ಯಕ್ರಮದಲ್ಲಿ ‘ಆರ್​ಆರ್​ಆರ್’ ಚಿತ್ರಕ್ಕೆ ವಿಶೇಷ ಗೌರವ

2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಕಳೆದ ವರ್ಷ ಆಸ್ಕರ್ ಅವಾರ್ಡ್ ಸಿಕ್ಕಿದೆ. ಈ ಹಾಡಿನ ಕ್ಲಿಪ್​ನ ಆಸ್ಕರ್ ವೇದಿಕೆ ಮೇಲೆ ಪ್ರಸಾರ ಮಾಡಲಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಭಾರತಕ್ಕೆ ಹೆಮ್ಮೆಯ ಕ್ಷಣ: ಆಸ್ಕರ್ ಕಾರ್ಯಕ್ರಮದಲ್ಲಿ ‘ಆರ್​ಆರ್​ಆರ್’ ಚಿತ್ರಕ್ಕೆ ವಿಶೇಷ ಗೌರವ
ರಾಮ್ ಚರಣ್-ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Mar 11, 2024 | 10:39 AM

Share

96ನೇ ಸಾಲಿನಲ್ಲಿ ಆಸ್ಕರ್ ಅವಾರ್ಡ್ (Oscar Award) ಕಾರ್ಯಕ್ರಮ ಇಂದು (ಮಾರ್ಚ್​ 11) ಅಮೆರಿಕದ ಲಾಸ್ ಏಂಜಲೀಸ್​ನ ಡಾಲ್ಬಿ ಥಿಯೇಟರ್​​ನಲ್ಲಿ ನಡೆದಿದೆ. ಈ ವೇದಿಕೆ ಮೇಲೆ ‘ಆರ್​ಆರ್​ಆರ್’ ಚಿತ್ರಕ್ಕೆ ವಿಶೇಷ ಗೌರವ ಸಲ್ಲಿಕೆ ಮಾಡಲಾಗಿದೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ‘ಇದು ಭಾರತಕ್ಕೆ ಹೆಮ್ಮೆಯ ಕ್ಷಣ’ ಎಂದು ಫ್ಯಾನ್ಸ್ ಕರೆದಿದ್ದಾರೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರೂ ಎಸ್​ಎಸ್​ ರಾಜಮೌಳಿ ತಂಡಕ್ಕೆ ಶುಭಕೋರುತ್ತಿದ್ದಾರೆ.

2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಕಳೆದ ವರ್ಷ ಆಸ್ಕರ್ ಅವಾರ್ಡ್ ಸಿಕ್ಕಿದೆ. ಈ ಹಾಡಿನ ಕ್ಲಿಪ್​ನ ಆಸ್ಕರ್ ವೇದಿಕೆ ಮೇಲೆ ಪ್ರಸಾರ ಮಾಡಲಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ: ‘ಅತ್ಯುತ್ತಮ ಸಿನಿಮಾ’ ಸೇರಿ ಪ್ರಮುಖ ಅವಾರ್ಡ್ ಪಡೆದ ‘ಆಪನ್​​ಹೈಮರ್’; ಇಲ್ಲಿದೆ ಆಸ್ಕರ್ ಫುಲ್ ಲಿಸ್ಟ್

ಇಷ್ಟಕ್ಕೆ ನಿಂತಿಲ್ಲ. ಆ್ಯಕ್ಷನ್ ಸಿನಿಮಾಗಳಲ್ಲಿ ಹಿರೋಗಳು ಎಷ್ಟು ಕಷ್ಟಪಡುತ್ತಾರೆ ಎಂಬುದಕ್ಕೆ ವಿಶೇಷ ಗೌರವ ಅರ್ಪಿಸಲು ವಿಶೇಷ ವಿಡಿಯೋ ಮಾಡಲಾಗಿದೆ. ಈ ವಿಡಿಯೋದಲ್ಲಿ ‘ಆರ್​ಆರ್​ಆರ್’ ಚಿತ್ರದ ಆ್ಯಕ್ಷನ್ ದೃಶ್ಯ ಕೂಡ ಇತ್ತು ಅನ್ನೋದು ವಿಶೇಷ. ಈ ಬಗ್ಗೆ ರಾಜಮೌಳಿ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಆರ್​ಆರ್​ಆರ್​ ಚಿತ್ರಕ್ಕೆ ವಿಶೇಷ ಗೌರವ

ರಾಜಮೌಳಿ ನಿರ್ದೇಶನದ, ರಾಮ್ ಚರಣ್ ಹಾಗೂ ಜೂನಿಯರ್ ಎನ್​ಟಿಆರ್​ ನಟನೆಯ ‘ಆರ್​ಆರ್​ಆರ್’ ಚಿತ್ರ ಮಾಡಿದ ದಾಖಲೆಗಳು ಹಲವು. ಈ ವರ್ಷವೂ ಆಸ್ಕರ್ ಅವಾರ್ಡ್​ನಲ್ಲಿ ‘ಆರ್​ಆರ್​ಆರ್’ ಚಿತ್ರವನ್ನು ನೆನಪಿಸಿಕೊಂಡಿದ್ದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!