ಹಾಲಿವುಡ್ ಸಿನಿಮಾದಲ್ಲಿ ಸಲ್ಮಾನ್ ಖಾನ್, ಸಂಜಯ್ ದತ್; ಸಿಕ್ತು ಬಿಗ್ ನ್ಯೂಸ್

ಹಿಂದಿ ಚಿತ್ರರಂಗದಲ್ಲಿ ಸಾಧನೆ ಮಾಡಿರುವ ಸಲ್ಮಾನ್ ಖಾನ್ ಹಾಗೂ ಸಂಜಯ್ ದತ್ ಅವರಿಗೆ ಈಗ ಹಾಲಿವುಡ್​ನಿಂದ ಆಫರ್​ ಬಂದಿದೆ. ಈಗಾಗಲೇ ಶೂಟಿಂಗ್ ಕೂಡ ಆರಂಭ ಆಗಿದೆ. ದುಬೈನಲ್ಲಿ ಅವರಿಬ್ಬರು ಶೂಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಪ್ರಕಟ ಆಗಿದೆ. ಈ ವಿಷಯ ಕೇಳಿ ಅಭಿಮಾನಿಗಳಿಗೆ ತುಂಬ ಖುಷಿ ಆಗಿದೆ.

ಹಾಲಿವುಡ್ ಸಿನಿಮಾದಲ್ಲಿ ಸಲ್ಮಾನ್ ಖಾನ್, ಸಂಜಯ್ ದತ್; ಸಿಕ್ತು ಬಿಗ್ ನ್ಯೂಸ್
Sanjay Dutt, Salman Khan

Updated on: Feb 17, 2025 | 3:16 PM

ಬಾಲಿವುಡ್​ನ ಸ್ಟಾರ್​ ನಟರಾದ ಸಲ್ಮಾನ್ ಖಾನ್ ಮತ್ತು ಸಂಜಯ್ ದತ್ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರಿಬ್ಬರ ಕಾಂಬಿನೇಷನ್​ಗೆ ದೊಡ್ಡ ಪ್ರೇಕ್ಷಕವರ್ಗ ಇದೆ. ಹಿಂದಿ ಸಿನಿಮಾದಲ್ಲಿ ಅವರಿಬ್ಬರು ಜೊತೆಯಾಗಿ ನಟಿಸಿದರೆ ಭಾರಿ ಹೈಪ್ ಸೃಷ್ಟಿ ಆಗುತ್ತದೆ. ಹಾಗಿರುವಾಗ ಹಾಲಿವುಡ್​ ಸಿನಿಮಾದಲ್ಲಿ ಅವರಿಬ್ಬರು ತೆರೆ ಹಂಚಿಕೊಂಡರೆ? ನಿರೀಕ್ಷೆಯ ಸುನಾಮಿ ಗ್ಯಾರಂಟಿ. ಅಭಿಮಾನಿಗಳಿಗೆ ಸಖತ್ ಥ್ರಿಲ್ ನೀಡುವಂತಹ ಸುದ್ದಿ ಕೇಳಿಬಂದಿದೆ. ಹಾಲಿವುಡ್ ಸಿನಿಮಾವೊಂದರಲ್ಲಿ ಸಲ್ಮಾನ್ ಖಾನ್ ಮತ್ತು ಸಂಜಯ್ ದತ್ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಸಲ್ಮಾನ್ ಖಾನ್ ಮತ್ತು ಸಂಜಯ್ ದತ್ ಅವರಿಗೆ ಭಾರತದಲ್ಲಿ ಮಾತ್ರವಲ್ಲದೇ ಬೇರೆ ಬೇರೆ ದೇಶಗಳಲ್ಲಿ ಕೂಡ ಬೇಡಿಕೆ ಇದೆ. ಹಾಗಾಗಿ ಎಲ್ಲ ಪ್ರೇಕ್ಷಕರನ್ನು ಗಮನದಲ್ಲಿ ಇಟ್ಟುಕೊಂಡು ಈ ನಟರನ್ನು ಹಾಲಿವುಡ್​ ಸಿನಿಮಾಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ಹಾಗಂತ ಅವರು ಪ್ರಮುಖ ಪಾತ್ರಗಳನ್ನು ಮಾಡುತ್ತಿಲ್ಲ. ಬದಲಿಗೆ, ಇಬ್ಬರೂ ಕೂಡ ಹಾಲಿವುಡ್ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಡಿದೆ.

ಹಾಲಿವುಡ್​ನ ಈ ಸಿನಿಮಾ ಯಾವುದು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಆದರೆ ಈ ಚಿತ್ರಕ್ಕೆ ದುಬೈನಲ್ಲಿ ಶೂಟಿಂಗ್ ನಡೆಯುತ್ತಿದೆ. ಚಿತ್ರೀಕರಣದ ಸಲುವಾಗಿ ಸಲ್ಮಾನ್ ಖಾನ್ ಮತ್ತು ಸಂಜಯ್ ದತ್ ಅವರು ಈಗಾಗಲೇ ದುಬೈಗೆ ಹೋಗಿದ್ದಾರೆ. ಫೆಬ್ರವರಿ 19ರ ತನಕ ಅವರಿಬ್ಬರು ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಅಧಿಕೃತ ನ್ಯೂಸ್ ಹೊರಬರುವುದು ಬಾಕಿ ಇದೆ.

ಇದನ್ನೂ ಓದಿ: ಆಮಿರ್ ಖಾನ್ ಮಗನ ಸಿನಿಮಾಗೆ ಸಲ್ಮಾನ್, ಶಾರುಖ್ ಬೆಂಬಲ

‘ಸಾಜನ್’, ‘ಚಲ್ ಮೇರೆ ಭಾಯ್’ ಮುಂತಾದ ಸಿನಿಮಾಗಳಲ್ಲಿ ಸಲ್ಮಾನ್ ಖಾನ್ ಮತ್ತು ಸಂಜಯ್ ದತ್ ಅವರು ಜೊತೆಯಾಗಿ ನಟಿಸಿದ್ದಾರೆ. ಆ ಮೂಲಕ ಅವರು ಅಭಿಮಾನಿಗಳನ್ನು ರಂಜಿಸಿದ್ದಾರೆ. ಇದೇ ಮೊದಲ ಬಾರಿಗೆ ಅವರಿಬ್ಬರು ಹಾಲಿವುಡ್​ ಸಿನಿಮಾದಲ್ಲಿ ಒಟ್ಟಿಗೆ ನಟಿಸುತ್ತಿರುವುದು ವಿಶೇಷ. ಬೇರೆ ಸಿನಿಮಾಗಳ ಬಗ್ಗೆ ಹೇಳುವುದಾದರೆ ಸಲ್ಮಾನ್ ಖಾನ್ ಅವರು ‘ಸಿಕಂದರ್​’ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಸಂಜಯ್ ದತ್ ಅವರ ಕೈಯಲ್ಲಿ ‘ಹೌಸ್​ಫುಲ್​ 5’, ‘ಬಾಘಿ 4’ ಮುಂತಾದ ಸಿನಿಮಾಗಳು ಇವೆ. ದಕ್ಷಿಣ ಭಾರತದಲ್ಲೂ ಅವರಿಗೆ ತುಂಬ ಬೇಡಿಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us