Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Chopra: ಪ್ರಿಯಾಂಕಾ ಚೋಪ್ರಾಗೆ ‘ಮತ್ತೆ ಪ್ರೀತಿ’? ಗಂಡನ ಎದುರಲ್ಲೇ ಬೇರೆ ನಟನ ಜೊತೆ ಕಿಸ್​​

Sam Heughan: ಪ್ರಿಯಾಂಕಾ ಚೋಪ್ರಾ ಮೂಗಿಗೆ ಸ್ಯಾಮ್​ ಹ್ಯೂವನ್​ ಅವರು ಕಿಸ್​ ಮಾಡಿದ್ದಾರೆ. ಈ ಸಂದರ್ಭದ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ.

Priyanka Chopra: ಪ್ರಿಯಾಂಕಾ ಚೋಪ್ರಾಗೆ ‘ಮತ್ತೆ ಪ್ರೀತಿ’? ಗಂಡನ ಎದುರಲ್ಲೇ ಬೇರೆ ನಟನ ಜೊತೆ ಕಿಸ್​​
ಪ್ರಿಯಾಂಕಾ ಚೋಪ್ರಾ, ಸ್ಯಾಮ್ ಹ್ಯೂವನ್, ನಿಕ್ ಜೋನಸ್
Follow us
TV9 Web
| Updated By: ಮದನ್​ ಕುಮಾರ್​

Updated on: May 04, 2023 | 11:13 AM

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಸಖತ್​ ಬ್ಯುಸಿ ಆಗಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳುತ್ತಿರುವ ಅವರು ಹಲವು ಕಡೆಗಳಲ್ಲಿ ಸುತ್ತಾಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಅವರು ‘ಸಿಟಾಡೆಲ್​’ ವೆಬ್​ ಸರಣಿಯ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಈಗ ‘ಲವ್​ ಅಗೇನ್​’ (Love Again) ಸಿನಿಮಾವನ್ನು ಪ್ರಚಾರ ಮಾಡುತ್ತಿದ್ದಾರೆ. ಈ ಶೀರ್ಷಿಕೆಗೆ ತಕ್ಕಂತೆಯೇ ಪ್ರಿಯಾಂಕಾ ಚೋಪ್ರಾ ಅವರಿಗೆ ‘ಮತ್ತೆ ಪ್ರೀತಿ’ ಆಗಿದೆಯಾ? ಈಗ ವೈರಲ್​ ಆಗಿರುವ ಫೋಟೋ ನೋಡಿ ಕೆಲವರಿಗೆ ಆ ರೀತಿ ಅನಿಸಿದ್ದುಂಟು. ಯಾಕೆಂದರೆ, ಪತಿ ನಿಕ್​ ಜೋನಸ್​ ಎದುರಲ್ಲೇ ಪ್ರಿಯಾಂಕಾ ಚೋಪ್ರಾ ಅವರು ಬೇರೆ ನಟನೊಂದಿಗೆ ಸಿಹಿ ಮುತ್ತು ಹಂಚಿಕೊಂಡಿದ್ದಾರೆ. ‘ಲವ್​ ಅಗೇನ್​’ ಸಿನಿಮಾದಲ್ಲಿ ಸ್ಯಾಮ್​ ಹ್ಯೂವನ್​ (Sam Heughan) ಮತ್ತು ಪ್ರಿಯಾಂಕಾ ಚೋಪ್ರಾ ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಚಿತ್ರದ ಪ್ರಮೋಷನ್​ ವೇಳೆ ಪ್ರಿಯಾಂಕಾ ಅವರ ಮೂಗಿಗೆ ಸ್ಯಾಮ್​ ಹ್ಯೂವನ್​ ಅವರು ಕಿಸ್​ ಮಾಡಿದ್ದಾರೆ. ಈ ಸಂದರ್ಭದ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ.

ಪ್ರಿಯಾಂಕಾ ಚೋಪ್ರಾ ಅವರು ಈಗ ಹಾಲಿವುಡ್​ನಲ್ಲೇ ಹೆಚ್ಚು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಹಿಂದಿ ಸಿನಿಮಾಗಳಿಂದ ಅವರು ಅಂತರ ಕಾಯ್ದುಕೊಂಡಿದ್ದಾರೆ. ಈಗ ‘ಲವ್​ ಅಗೇನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಪ್ರೀಮಿಯರ್ ಶೋ ಇತ್ತೀಚೆಗೆ ನಡೆಯಿತು. ನ್ಯೂಯಾರ್ಕ್​ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಸ್ಯಾಮ್​ ಹ್ಯೂವನ್​ ಜೊತೆ ನಿಕ್​ ಜೋನಸ್​ ಕೂಡ ಭಾಗಿ ಆಗಿದ್ದರು. ಪ್ರಚಾರದ ವೇಳೆ ಮಾಧ್ಯಮದ ಕ್ಯಾಮೆರಾಗೆ ಪೋಸ್​ ನೀಡುವಾಗ ಪ್ರಿಯಾಂಕಾ ಅವರ ಮೂಗಿನ ಮೇಲೆ ಸ್ಯಾಮ್​ ಹ್ಯೂವನ್ ಅವರು ಕಿಸ್​ ಮಾಡಿದ್ದಾರೆ.

ಇದನ್ನೂ ಓದಿ
Image
Priyanka Chopra: ಫ್ಯಾನ್ಸ್​ ವಾವ್​ ಎನ್ನುವಂತೆ ಗ್ಲಾಮರ್​ ವೇಷ ಧರಿಸಿದ ಪ್ರಿಯಾಂಕಾ ಚೋಪ್ರಾ; ಇಲ್ಲಿವೆ ಫೋಟೋಗಳು
Image
ಶಾಕಿಂಗ್​ ಸತ್ಯದ ಜತೆ ಮೊದಲ ಬಾರಿ ಮಗು ಫೋಟೋ ತೋರಿಸಿದ ಪ್ರಿಯಾಂಕಾ ಚೋಪ್ರಾ-ನಿಕ್​ ಜೋನಸ್​
Image
ಪ್ರಿಯಾಂಕಾ ಚೋಪ್ರಾ ಮಗಳ ಹೆಸರು ಮಾಲ್ತಿ ಮೇರಿ ಚೋಪ್ರಾ ಜೋನಸ್​; ಏನು ಇದರ ಅರ್ಥ?
Image
ಕಪ್ಪು ಸೀರೆ ಧರಿಸಿ ‘ಪ್ರೀ ಆಸ್ಕರ್​ ಪಾರ್ಟಿ’ಯಲ್ಲಿ ಮಿಂಚಿದ ‘ದೇಸಿ ಗರ್ಲ್​’ ಪ್ರಿಯಾಂಕಾ ಚೋಪ್ರಾ
View this post on Instagram

A post shared by Jerry x Mimi ? (@jerryxmimi)

ಮೇ 5ರಂದು ‘ಲವ್​ ಅಗೇನ್​’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ನಿಕ್​ ಜೋನಸ್​ ಕೂಡ ನಟಿಸಿದ್ದಾರೆ. ಪ್ರಿಯಾಂಕಾ ಚೋಪ್ರಾ ಮತ್ತು ಸ್ಯಾಮ್​ ಹ್ಯೂವನ್​ ಅವರ ಕೆಮಿಸ್ಟ್ರಿ ಚೆನ್ನಾಗಿ ಮೂಡಿಬಂದಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: Nick Jonas: ರೋಮ್​ನಲ್ಲಿ ಸಿಕ್ಕಾಪಟ್ಟೆ ರೊಮ್ಯಾಂಟಿಕ್​ ಆದ ನಿಕ್​ ಜೋನಸ್​; ಪ್ರಿಯಾಂಕಾ ಚೋಪ್ರಾ ತುಟಿಗೆ ಸಿಹಿ ಮುತ್ತು

2018ರಲ್ಲಿ ನಿಕ್​ ಜೋನಸ್​ ಅವರನ್ನು ಮದುವೆ ಆದ ಬಳಿಕ ಪ್ರಿಯಾಂಕಾ ಚೋಪ್ರಾ ಅವರು ಅಮೆರಿಕಕ್ಕೆ ಶಿಫ್ಟ್​ ಆದರು. ಈಗ ಅವರು ಅಲ್ಲಿಯೇ ಸೆಟ್ಲ್​ ಆಗಿದ್ದಾರೆ. ಹಾಲಿವುಡ್​ ಸಿನಿಮಾಗಳಿಂದ ಅವರಿಗೆ ಅವಕಾಶಗಳು ಸಿಗುತ್ತಿವೆ. ಮತ್ತೆ ಅವರು ಹಿಂದಿ ಸಿನಿಮಾಗಳಲ್ಲಿ ನಟಿಸಲಿ ಎಂಬುದು ಅಭಿಮಾನಿಗಳ ಆಸೆ. ಆದರೆ ಸದ್ಯಕ್ಕಂತೂ ಈ ಆಸೆ ಈಡೇರುವ ಲಕ್ಷಣ ಕಾಣುತ್ತಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ