Samantha: ಡಿವೋರ್ಸ್​ ಬಳಿಕ ಸಮಂತಾ ಗುಡ್​ ನ್ಯೂಸ್​; ಇಂಗ್ಲಿಷ್​ ಸಿನಿಮಾ ನಿರ್ದೇಶಕನನ್ನು ತಬ್ಬಿಕೊಂಡ ಫೋಟೋ ವೈರಲ್​

Arrangements of Love: ‘ಇದು ನನಗೆ ಹೊಸ ಪ್ರಪಂಚ. ಈ ಪಯಣ ಆರಂಭಿಸಲು ಕಾತರದಿಂದ ಕಾಯುತ್ತಿದ್ದೇನೆ’ ಎಂದು ಸಮಂತಾ ಹೇಳಿದ್ದಾರೆ.​ ಗುಡ್​ ನ್ಯೂಸ್​ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

Samantha: ಡಿವೋರ್ಸ್​ ಬಳಿಕ ಸಮಂತಾ ಗುಡ್​ ನ್ಯೂಸ್​; ಇಂಗ್ಲಿಷ್​ ಸಿನಿಮಾ ನಿರ್ದೇಶಕನನ್ನು ತಬ್ಬಿಕೊಂಡ ಫೋಟೋ ವೈರಲ್​
ಸಮಂತಾ, ಫಿಲಿಪ್​ ಜಾನ್
Follow us
TV9 Web
| Updated By: ಮದನ್​ ಕುಮಾರ್​

Updated on: Nov 26, 2021 | 11:26 AM

ನಟಿ ಸಮಂತಾ (Samantha Ruth Prabhu) ಅವರು ಪ್ರತಿಭಾವಂತ ಕಲಾವಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಅವರು ನಟಿಸಿರುವ ಎಲ್ಲ ಸಿನಿಮಾಗಳನ್ನು ಜನರು ಇಷ್ಟಪಟ್ಟಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸರಣಿಯಲ್ಲಿ ಸಮಂತಾ ನಟನೆಯನ್ನು ಕಂಡು ಅಭಿಮಾನಿಗಳು ಫಿದಾ ಆಗಿದ್ದರು. ಆ ಬಳಿಕ ಅವರು ಹೆಚ್ಚು ಸುದ್ದಿ ಆಗಿದ್ದು ವಿಚ್ಛೇದನದ ವಿಚಾರಕ್ಕೆ. ಪತಿ ನಾಗ ಚೈತನ್ಯ (Naga Chaitanya) ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿರುವ ಸಮಂತಾ ಈಗ ಹೊಸ ಹೊಸ ಸಿನಿಮಾ​ಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅಚ್ಚರಿ ಎಂದರೆ ಈಗ ಅವರಿಗೊಂದು ಇಂಟರ್​ನ್ಯಾಷನಲ್​ ಪ್ರಾಜೆಕ್ಟ್​ ಸಿಕ್ಕಿದೆ. ಬ್ರಿಟಿಷ್​ ನಿರ್ದೇಶಕ ಫಿಲಿಪ್​​ ಜಾನ್​ ಜೊತೆ ಅವರು ಕೆಲಸ ಮಾಡಲಿದ್ದಾರೆ. ಫಿಲಿಪ್​​ ಜಾನ್ (Philip John) ನಿರ್ದೇಶನ ಮಾಡಲಿರುವ ‘ಅರೇಂಜ್​ಮೆಂಟ್ಸ್​ ಆಫ್​ ಲವ್​’ (Arrangements of Love) ಸಿನಿಮಾದಲ್ಲಿ ಸಮಂತಾ (Samantha) ಮುಖ್ಯ ಪಾತ್ರ ನಿಭಾಯಿಸಲಿದ್ದಾರೆ. ನಿರ್ದೇಶಕನನ್ನು ತಬ್ಬಿಕೊಂಡಿರುವ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಈ ಸುದ್ದಿ ಬಹಿರಂಗ ಪಡಿಸಿದ್ದಾರೆ.

ಈ ಹಿಂದೆ ಸಮಂತಾ ನಟಿಸಿದ್ದ ‘ಓಹ್​ ಬೇಬಿ’ ಸಿನಿಮಾವನ್ನು ನಿರ್ಮಾಣ ಮಾಡಿದ್ದ ‘ಗುರು ಫಿಲ್ಮ್ಸ್​’ ಬ್ಯಾನರ್​ ಮೂಲಕವೇ ‘ಅರೇಂಜ್​ಮೆಂಟ್ಸ್​ ಆಫ್​ ಲವ್​’ ಸಿನಿಮಾ ತಯಾರಾಗಲಿದೆ. ಅದೇ ಶೀರ್ಷಿಕೆಯ ಕಾದಂಬರಿ ಆಧರಿಸಿ ಈ ಚಿತ್ರ ಮೂಡಿಬರಲಿದೆ. ಸ್ವಂತ ಡಿಟೆಕ್ಟೀವ್​ ಏಜೆನ್ಸಿ ನಡೆಸುವ ತಮಿಳು ಉಭಯಲಿಂಗಿ ಮಹಿಳೆಯಾಗಿ ಸಮಂತಾ ಕಾಣಿಸಿಕೊಳ್ಳಲಿದ್ದಾರೆ.

‘ಇದು ನನಗೆ ಹೊಸ ಪ್ರಪಂಚ. ನಾನು ಕೊನೆ ಬಾರಿಗೆ ಆಡಿಷನ್​ ನೀಡಿದ್ದು 2009ರಲ್ಲಿ ‘ಏ ಮಾಯ ಚೇಸಾವೆ’ ಚಿತ್ರಕ್ಕಾಗಿ. 12 ವರ್ಷಗಳ ಬಳಿಕ ಮತ್ತೆ ಆಡಿಷನ್​ ನೀಡಿದ್ದೇನೆ. ಮತ್ತೆ ಅದೇ ರೀತಿ ನರ್ವಸ್​ ಆಗಿದ್ದೇನೆ. ಫಿಲಿಪ್​ ಜಾನ್ ಜೊತೆ ಕೆಲಸ ಮಾಡುವುದು ತುಂಬ ಅಪರೂಪದ ಅವಕಾಶ. ಈ ಪಾತ್ರಕ್ಕೆ ಆಯ್ಕೆ ಆಗಿರುವುದು ತುಂಬ ಖುಷಿ ಆಗುತ್ತಿದೆ. ಈ ಪಯಣ ಆರಂಭಿಸಲು ಕಾತರದಿಂದ ಕಾಯುತ್ತಿದ್ದೇನೆ’ ಎಂದು ಸಮಂತಾ ಹೇಳಿದ್ದಾರೆ.​

ಐಟಂ ಸಾಂಗ್​ನಲ್ಲಿ ನರ್ತಿಸಲು ಭಾರಿ ಸಂಭಾವನೆ!

‘ಪುಷ್ಪ’ ಸಿನಿಮಾದ ಐಟಂ ಸಾಂಗ್​ನಲ್ಲಿ ನಟಿಸಲು ಸಮಂತಾ ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ಅವರು ದೊಡ್ಡ ಮೊತ್ತದ ಸಂಭಾವನೆ ಕೇಳುತ್ತಿದ್ದಾರೆ ಎನ್ನಲಾಗಿದೆ. ಸಂಭಾವನೆ ವಿಚಾರದ ಬಗ್ಗೆ ಚಿತ್ರತಂಡದಿಂದಾಗಲೀ ಸಮಂತಾ ಕಡೆಯಿಂದಾಗಿ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ ಅವರು ಪಡೆಯುತ್ತಾರೆ ಎನ್ನಲಾದ ಸಂಭಾವನೆ ಮೊತ್ತ ಕೇಳಿ ಎಲ್ಲರಿಗೂ ಅಚ್ಚರಿ ಆಗಿದೆ. ಈ ಐಟಂ ಸಾಂಗ್​ನಲ್ಲಿ ನಟಿಸಲು ಸಮಂತಾ ಬರೋಬ್ಬರಿ 1.5 ಕೋಟಿ ರೂಪಾಯಿ ಕೇಳಿದ್ದಾರೆ ಎಂಬ ಸುದ್ದಿ ಹರಡಿದೆ.

ಇದನ್ನೂ ಓದಿ:

ಮಾಜಿ ಪತಿ ಬರ್ತ್​ಡೇ ಕಾರಣಕ್ಕೆ ಟೀಕೆ ಎದುರಿಸಿ, ಮರುದಿನವೇ ನಾಯಿ ಜನ್ಮದಿನ ಆಚರಿಸಿದ ಸಮಂತಾ

ವಿಚ್ಛೇದನದ ಬಳಿಕ ಸಮಂತಾಗೆ ಶಾರುಖ್​ ಕಡೆಯಿಂದ 2ನೇ ಚಾನ್ಸ್​; ಸ್ಟಾರ್​ ನಟಿಯ ಉತ್ತರ ಏನು?

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ