Justin Bieber: ವೈರಸ್​ನಿಂದ ಜಸ್ಟಿನ್​ ಬೀಬರ್​ ಮುಖಕ್ಕೆ ಪಾರ್ಶ್ವವಾಯು; ಖ್ಯಾತ ಗಾಯಕನಿಗೆ ಕಾಡುತ್ತಿದೆ ಗಂಭೀರ ಸಮಸ್ಯೆ

Justin Bieber | Facial Paralysis: ಜಸ್ಟಿನ್​ ಬೀಬರ್​ ಅವರಿಗೆ ಮುಖದ ಪಾರ್ಶ್ವವಾಯು ಆಗಿದೆ. ಅವರು ಬೇಗ ಗುಣಮುಖರಾಗಲಿ ಎಂದು ಫ್ಯಾನ್ಸ್​ ಪ್ರಾರ್ಥಿಸುತ್ತಿದ್ದಾರೆ.

Justin Bieber: ವೈರಸ್​ನಿಂದ ಜಸ್ಟಿನ್​ ಬೀಬರ್​ ಮುಖಕ್ಕೆ ಪಾರ್ಶ್ವವಾಯು; ಖ್ಯಾತ ಗಾಯಕನಿಗೆ ಕಾಡುತ್ತಿದೆ ಗಂಭೀರ ಸಮಸ್ಯೆ
ಜಸ್ಟಿನ್ ಬೀಬರ್
Follow us
TV9 Web
| Updated By: ಮದನ್​ ಕುಮಾರ್​

Updated on:Jun 11, 2022 | 8:26 AM

ಗಾಯಕ ಜಸ್ಟಿನ್​ ಬೀಬರ್​ (Justin Bieber) ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಅವರ ಸಂಗೀತ ಕಾರ್ಯಕ್ರಮಗಳಿಗೆ ಲಕ್ಷಾಂತರ ಜನರು ಸೇರುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 240 ಮಿಲಿಯನ್​ಗಿಂತಲೂ ಹೆಚ್ಚು ಮಂದಿ ಫಾಲೋ ಮಾಡುತ್ತಿದ್ದಾರೆ. ಇಷ್ಟೆಲ್ಲ ಜನಪ್ರಿಯತೆ ಇರುವ ಜಸ್ಟಿನ್​ ಬೀಬರ್ ಅವರಿಗೆ ಈಗ ಗಂಭೀರ ಆರೋಗ್ಯ ಸಮಸ್ಯೆ ಕಾಣುತ್ತಿದೆ. ಅವರ ಮುಖಕ್ಕೆ ಪಾರ್ಶ್ವವಾಯು (Facial Paralysis) ಆಗಿದೆ! ಹಾಗಂತ ಇದು ಗಾಸಿಪ್​ ಅಲ್ಲವೇ ಅಲ್ಲ. ಈ ವಿಚಾರವನ್ನು ಖುದ್ದು ಜಸ್ಟಿನ್​ ಬೀಬರ್​ ಅವರೇ ಖಚಿತ ಪಡಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಒಂದು ವಿಡಿಯೋ ಹಂಚಿಕೊಂಡಿರುವ ಅವರು, ತಮ್ಮ ಪರಿಸ್ಥಿತಿ ಹೇಗಿದೆ ಎಂಬುದನ್ನು ತಿಳಿಸಿದ್ದಾರೆ. ತಮ್ಮ ನೆಚ್ಚಿನ ಗಾಯಕನಿಗೆ ಈ ರೀತಿ ಆಗಿರುವುದು ಕೇಳಿ ಅಭಿಮಾನಿಗಳಿಗೆ ತೀವ್ರ ಬೇಸರ ಆಗಿದೆ. ತಮಗೆ ಮುಖದ ಪಾರ್ಶ್ವವಾಯು (Paralysis) ಆಗಲು ಒಂದು ವೈರಸ್​​ ಕಾರಣ ಎಂದು ಜಸ್ಟಿನ್​ ಬೀಬರ್​ ವಿವರಿಸಿದ್ದಾರೆ. ಸದ್ಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

ಕೊವಿಡ್​ ಕಾರಣದಿಂದ ಜಸ್ಟಿನ್​ ಬೀಬರ್​ ಅವರ ಹಲವು ಶೋ ರದ್ದಾಗಿದ್ದವು. ಈಗ ಅನಾರೋಗ್ಯದ ಕಾರಣದಿಂದ ಸಂಗೀತ ಸಮಾರಂಭ ಮತ್ತೆ ಕ್ಯಾನ್ಸಲ್​ ಆಗಿದೆ. ಅದಕ್ಕೆ ಮುಖದ ಪಾರ್ಶ್ವವಾಯು ಕಾರಣ ಎಂದು ಅವರು ಹೇಳಿದ್ದಾರೆ. ಒಂದು ವೈರಸ್​ ಅವರ ಕಿವಿಯನ್ನು ಹೊಕ್ಕಿದೆ. ಅದರಿಂದ ಅವರಿಗೆ ಹಲವು ಸಮಸ್ಯೆಗಳು ಉಂಟಾಗಿವೆ. ಒಂದು ಕಡೆಗೆ ಕಣ್ಣನ್ನು ಮುಚ್ಚಲು ಅವರಿಗೆ ಸಾಧ್ಯವಾಗುತ್ತಿಲ್ಲ. ನಕ್ಕರೆ ಒಂದು ಕಡೆಯ ತುಟಿಗಳು ಮಾತ್ರ ಸ್ಪಂದಿಸುತ್ತವೆ. ಪಾರ್ಶ್ವವಾಯು ಆಗಿರುವ ಭಾಗ ನಿಷ್ಕ್ರಿಯ ಆದಂತೆ ಆಗಿದೆ.

ಇದನ್ನೂ ಓದಿ
Image
ಜೋಗದಲ್ಲಿ ತಾಯಿಗೆ ಪಾರ್ಶ್ವವಾಯು ಸ್ಟ್ರೋಕ್ ಆದಾಗ ಆಸ್ಪತ್ರೆಗೆ ಸೇರಿಸಲು ಮಗ ಡೋಲಿ ಮಾಡಿಕೊಂಡು ಹೊತ್ತು ತರಬೇಕಾಯಿತು
Image
ಪಾರ್ಶ್ವವಾಯು ಬಳಿಕ ನಾಲಿಗೆಯ ಮೇಲೆ ಬೆಳೆದ ಕಪ್ಪು ಕೂದಲು: ವಿಚಿತ್ರ ಕಾಯಿಲೆಗೆ ತುತ್ತಾದ ವ್ಯಕ್ತಿ
Image
Health Tips: ಪಾರ್ಶ್ವವಾಯುವಿನ ಲಕ್ಷಣ, ಅಪಾಯ, ಮುನ್ನೆಚ್ಚರಿಕೆ ಕ್ರಮಗಳೇನು?
Image
World Stroke Day 2021: ವಿಶ್ವ ಪಾರ್ಶ್ವವಾಯು ಜಾಗೃತಿ ದಿನದ ಮಹತ್ವ ಇತಿಹಾಸದ ಜೊತೆಗೆ ತಡೆಗಟ್ಟುವ ವಿಧಾನಗಳು

ಜಸ್ಟಿನ್​ ಬೀಬರ್​ ಅವರ ಈ ಪರಿಸ್ಥಿತಿ ಕಂಡು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದಾರೆ. ಈ ವಿಡಿಯೋವನ್ನು ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ 1.5 ಕೋಟಿಗೂ ಅಧಿಕ ಜನರು ನೋಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಪ್ರತಿಕ್ರಿಯಿಸಿದ್ದಾರೆ. ‘ನಾವೆಲ್ಲರೂ ನಿಮಗಾಗಿ ಪ್ರಾರ್ಥಿಸುತ್ತೇನೆ’ ಎಂದು ಕಮೆಂಟ್​ ಮಾಡಿದ್ದಾರೆ.

ಅನೇಕ ಸೂಪರ್​ ಹಿಟ್​ ಇಂಗ್ಲಿಷ್​ ಗೀತೆಗಳಿಗೆ ಜಸ್ಟಿನ್​ ಬೀಬರ್​ ಧ್ವನಿ ನೀಡಿದ್ದಾರೆ. ಅವರ ಮ್ಯೂಸಿಕ್​ ವಿಡಿಯೋಗಳಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಜಗತ್ತಿನ ಹಲವು ಕಡೆಗಳಲ್ಲಿ ಅವರು ಸಂಗೀತ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಸದ್ಯ ಅನಾರೋಗ್ಯದ ಕಾರಣದಿಂದ ಜಸ್ಟಿನ್ ಬೀಬರ್​ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:04 am, Sat, 11 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ