AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ‘ಸ್ಪೈಡರ್ ಮ್ಯಾನ್’ ಹೊಸ ದಾಖಲೆ; ಎರಡು ದಿನಕ್ಕೆ 130 ಕೋಟಿ ಗಳಿಕೆ

ಟಾಮ್ ಹಾಲೆಂಡ್ ನಟನೆಯ 'ಸ್ಪೈಡರ್-ಮ್ಯಾನ್: ಬ್ರ್ಯಾಂಡ್ ನ್ಯೂ ಡೇ' ಸಿನಿಮಾ ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ ಇತಿಹಾಸ ಸೃಷ್ಟಿಸಿದೆ. ಬಿಡುಗಡೆಯಾದ ಎರಡೇ ದಿನಗಳಲ್ಲಿ ಈ ಚಿತ್ರ ಭರ್ಜರಿ ಕಲೆಕ್ಷನ್ ಮಾಡಿ ₹100 ಕೋಟಿ ಕ್ಲಬ್ ಸೇರಿದೆ. ಭಾರತದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಹಾಲಿವುಡ್ ಸಿನಿಮಾಗಳ ಸಾಲಿಗೆ ಈ ಆಕ್ಷನ್ ಸಿನಿಮಾ ಈಗ ಹೊಸದಾಗಿ ಸೇರ್ಪಡೆಯಾಗಿದೆ.

ಭಾರತದಲ್ಲಿ ‘ಸ್ಪೈಡರ್ ಮ್ಯಾನ್’ ಹೊಸ ದಾಖಲೆ; ಎರಡು ದಿನಕ್ಕೆ 130 ಕೋಟಿ ಗಳಿಕೆ
ಸ್ಪೈಡರ್ ಮ್ಯಾನ್
ರಾಜೇಶ್ ದುಗ್ಗುಮನೆ
|

Updated on:Aug 01, 2026 | 7:05 AM

Share

ಮುಖ್ಯಾಂಶಗಳು

  • ಎರಡೇ ದಿನಕ್ಕೆ ₹100 ಕೋಟಿ ಕ್ಲಬ್ ಸೇರಿದ ಸ್ಪೈಡರ್-ಮ್ಯಾನ್
  • ಹಿಂದಿ ಹಾಗೂ ಇಂಗ್ಲಿಷ್ ಆವೃತ್ತಿಗಳಿಗೆ ಮುಗಿಬಿದ್ದ ಭಾರತೀಯ ಪ್ರೇಕ್ಷಕರು
  • ಬಾಕ್ಸ್ ಆಫೀಸ್‌ನಲ್ಲಿ ಇತಿಹಾಸ ಬರೆದ ಹಾಲಿವುಡ್ ಆಕ್ಷನ್ ಸಿನಿಮಾ

ಭಾರತೀಯ ಚಿತ್ರರಂಗದಲ್ಲಿ ಹಾಲಿವುಡ್‌ ಸಿನಿಮಾಗಳ ಕ್ರೇಜ್ ಎಂದಿಗೂ ಕಮ್ಮಿ ಇಲ್ಲ. ಇದಕ್ಕೆ ‘ಸ್ಪೈಡರ್-ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆದಿರುವುದೇ ಸಾಕ್ಷಿ. ಬಿಡುಗಡೆಯಾದ ಎರಡೇ ದಿನಕ್ಕೆ ಈ ಚಿತ್ರ ನೂರು ಕೋಟಿ ಕ್ಲಬ್ ಸೇರಿದೆ. ಟಾಮ್ ಹಾಲೆಂಡ್ ಮತ್ತು ಝೆಂಡಾಯಾ ನಟನೆಯ ಈ ಸಿನಿಮಾ ಭಾರತೀಯ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಗಲ್ಲಾಪೆಟ್ಟಿಗೆಯಲ್ಲಿ ಈಗ ಸ್ಪೈಡರ್ ಮ್ಯಾನ್ ಹವಾ ಜೋರಾಗಿದೆ.

ಬಾಕ್ಸ್ ಆಫೀಸ್‌ನಲ್ಲಿ ಸ್ಪೈಡರ್ ಜಾದೂ

‘ಸ್ಪೈಡರ್-ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಭಾರತದಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಎರಡನೇ ದಿನ (ಜುಲೈ 31) ಈ ಚಿತ್ರ ಒಟ್ಟು 49.35 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ಇದರೊಂದಿಗೆ ಚಿತ್ರದ ಎರಡನೇ ದಿನದ ಗ್ರಾಸ್ ಕಲೆಕ್ಷನ್ 59.03 ಕೋಟಿ ರೂಪಾಯಿಗೆ ತಲುಪಿದೆ. ಮೊದಲ ದಿನಕ್ಕೆ ಹೋಲಿಸಿದರೆ ಕಲೆಕ್ಷನ್‌ನಲ್ಲಿ ಶೇಕಡಾ 18.6 ರಷ್ಟು ಇಳಿಕೆ ಕಂಡಿದೆ. ಆದರೂ ವೀಕೆಂಡ್‌ನಲ್ಲಿ ಸಿನಿಮಾ ಕಲೆಕ್ಷನ್ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಸ್ಪೈಡರ್ ಮ್ಯಾನ್’ ದಾಖಲೆ; ಭಾರತದಲ್ಲಿ ಮೊದಲ ದಿನವೇ 72 ಕೋಟಿ ರೂ. ಗಳಿಕೆ

ಹಿಂದಿ ಮತ್ತು ಇಂಗ್ಲಿಷ್ ವರ್ಷನ್‌ಗಳ ಅಬ್ಬರ

ಭಾರತದಲ್ಲಿ ಇಂಗ್ಲಿಷ್ ಮತ್ತು ಹಿಂದಿ ಆವೃತ್ತಿಗಳಿಗೆ ಭಾರಿ ಬೇಡಿಕೆ ವ್ಯಕ್ತವಾಗಿದೆ. ಇಂಗ್ಲಿಷ್ ವರ್ಷನ್ ಶುಕ್ರವಾರ 28 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ಇನ್ನು ಹಿಂದಿ ಡಬ್ಬಿಂಗ್ ವರ್ಷನ್ ಬರೋಬ್ಬರಿ 17 ಕೋಟಿ ರೂಪಾಯಿ ಗಳಿಸಿದೆ. ಹಿಂದಿ ಚಿತ್ರಮಂದಿರಗಳಲ್ಲಿ ಶೇಕಡಾ 90 ರಷ್ಟು ಸೀಟುಗಳು ಭರ್ತಿಯಾಗಿದ್ದವು. ದಕ್ಷಿಣ ಭಾರತದ ಭಾಷೆಗಳ ಪೈಕಿ ತಮಿಳಿನಲ್ಲಿ 2.25 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ತೆಲುಗಿನಲ್ಲಿ 2 ಕೋಟಿ ರೂಪಾಯಿ ಗಳಿಕೆಯಾಗಿದೆ. ಮಲಯಾಳಂ ಮತ್ತು ಕನ್ನಡ ಆವೃತ್ತಿಗಳು ಕ್ರಮವಾಗಿ 7 ಲಕ್ಷ ಮತ್ತು 3 ಲಕ್ಷ ರೂಪಾಯಿ ಗಳಿಸಿವೆ.

ಎರಡೇ ದಿನಕ್ಕೆ 130 ಕೋಟಿ ದಾಟಿದ ಗಳಿಕೆ

ಕೇವಲ ಎರಡು ದಿನಗಳಲ್ಲಿ ಈ ಸಿನಿಮಾ ಭಾರತದಲ್ಲಿ ದಾಖಲೆಯ ಮುನ್ನಡೆ ಸಾಧಿಸಿದೆ. ಒಟ್ಟು 34,152 ಶೋಗಳಿಂದ ಚಿತ್ರ ಬರೋಬ್ಬರಿ 131.46 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಇದರ ನೆಟ್ ಕಲೆಕ್ಷನ್ 109.95 ಕೋಟಿ ರೂಪಾಯಿ ಆಗಿದೆ. ಭಾರತದಲ್ಲಿ ಅತಿ ಹೆಚ್ಚು ಓಪನಿಂಗ್ ಪಡೆದ ಮೊದಲ ಭಾರತೀಯೇತರ ಸಿನಿಮಾ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ. ಡೆಸ್ಟಿನ್ ಡೇನಿಯಲ್ ಕ್ರೆಟ್ಟನ್ ನಿರ್ದೇಶನದ ಈ ಚಿತ್ರದಲ್ಲಿ ಟಾಮ್ ಹಾಲೆಂಡ್, ಝೆಂಡಾಯಾ, ಸ್ಯಾಡಿ ಸಿಂಕ್ ಮತ್ತು ಮಾರ್ಕ್ ರುಫಾಲೋ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಪ್ರಶ್ನೆ: ‘ಸ್ಪೈಡರ್ ಮ್ಯಾನ್’ ಸಿನಿಮಾ ರಿಲೀಸ್ ಆಗಿದ್ದು ಯಾವಾಗ? ಉತ್ತರ: ಜುಲೈ 30

ಪ್ರಶ್ನೆ: ‘ಸ್ಪೈಡರ್ ಮ್ಯಾನ್’ ಸಿನಿಮಾದ ಎರಡು ದಿನದ ಕಲೆಕ್ಷನ್ ಎಷ್ಟು? ಉತ್ತರ: 131.46 ಕೋಟಿ ರೂಪಾಯಿ

ಪ್ರಶ್ನೆ: ‘ಸ್ಪೈಡರ್ ಮ್ಯಾನ್’ ಚಿತ್ರದಲ್ಲಿ ಯಾರೆಲ್ಲ ಇದ್ದಾರೆ? ಉತ್ತರ: ಟಾಮ್ ಹಾಲೆಂಡ್, ಝೆಂಡಾಯಾ, ಸ್ಯಾಡಿ ಸಿಂಕ್ ಮತ್ತು ಮಾರ್ಕ್ ರುಫಾಲೋ

Published On - 7:04 am, Sat, 1 August 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!