AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಪೈಡರ್ ಮ್ಯಾನ್’ ದಾಖಲೆ; ಭಾರತದಲ್ಲಿ ಮೊದಲ ದಿನವೇ 72 ಕೋಟಿ ರೂ. ಗಳಿಕೆ

ಹಾಲಿವುಡ್ ನಟ ಟಾಮ್ ಹೊಲೆಂಡ್ ನಟನೆಯ 'ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ' ಸಿನಿಮಾ ಭಾರತದಲ್ಲಿ ದಾಖಲೆಯ ಓಪನಿಂಗ್ ಪಡೆದಿದೆ. ಮೊದಲ ದಿನವೇ 72 ಕೋಟಿಗೂ ಅಧಿಕ ಗ್ರಾಸ್ ಕಲೆಕ್ಷನ್ ಮಾಡುವ ಮೂಲಕ 'ಅವೆಂಜರ್ಸ್ ಎಂಡ್‌ಗೇಮ್' ದಾಖಲೆಯನ್ನು ಮುರಿದಿದೆ. ಭಾರತದಲ್ಲಿ ಅತಿ ದೊಡ್ಡ ಓಪನಿಂಗ್ ಪಡೆದ ವಿದೇಶಿ ಸಿನಿಮಾ ಎಂಬ ಇತಿಹಾಸ ಬರೆದಿದೆ.

‘ಸ್ಪೈಡರ್ ಮ್ಯಾನ್’ ದಾಖಲೆ;  ಭಾರತದಲ್ಲಿ ಮೊದಲ ದಿನವೇ 72 ಕೋಟಿ ರೂ. ಗಳಿಕೆ
ಸ್ಪೈಡರ್ ಮ್ಯಾನ್
ರಾಜೇಶ್ ದುಗ್ಗುಮನೆ
|

Updated on: Jul 31, 2026 | 7:03 AM

Share

ಮುಖ್ಯಾಂಶಗಳು

  • ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ಸ್ಪೈಡರ್-ಮ್ಯಾನ್
  • ಎಂಡ್‌ಗೇಮ್ ದಾಖಲೆ ಉಡೀಸ್; ಭಾರತದಲ್ಲಿ ಹೊಸ ಹಿಸ್ಟರಿ
  • ಟಿಕೆಟ್ ಬುಕಿಂಗ್‌ನಲ್ಲಿ ನೋಲನ್ ಚಿತ್ರಕ್ಕೆ ಸೆಡ್ಡು ಹೊಡೆದ ಟಾಮ್

ಟಾಮ್ ಹಾಲೆಂಡ್ ನಟನೆಯ ‘ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ’ ಸಿನಿಮಾ (Spider Man) ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ಜುಲೈ 30ರಂದು ರಿಲೀಸ್ ಆದ ಈ ಸಿನಿಮಾ ಮೊದಲ ದಿನವೇ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದೆ. ಈ ಚಿತ್ರವು ಹಾಲಿವುಡ್‌ನ ಬಿಗ್ ಹಿಟ್ ‘ಅವೆಂಜರ್ಸ್: ಎಂಡ್‌ಗೇಮ್’ ದಾಖಲೆಯನ್ನು ಮುರಿದಿದೆ. ಭಾರತದಲ್ಲಿ ಅತಿ ಹೆಚ್ಚು ಹಣ ಗಳಿಸಿದ ಮೊದಲ ದಿನದ ವಿದೇಶಿ ಸಿನಿಮಾ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ.

ಭರ್ಜರಿ ಕಲೆಕ್ಷನ್ ವಿವರ

ಬಾಕ್ಸ್ ಆಫೀಸ್ ವರದಿಗಳ ಪ್ರಕಾರ, ಈ ಸಿನಿಮಾ ಭಾರತದಲ್ಲಿ ಮೊದಲ ದಿನ 60.60 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ಚಿತ್ರದ ಒಟ್ಟು ಗ್ರಾಸ್ ಕಲೆಕ್ಷನ್ ಬರೋಬ್ಬರಿ 72.44 ಕೋಟಿ ರೂಪಾಯಿ ತಲುಪಿದೆ. ಈ ಮುಂಚೆ ‘ಅವೆಂಜರ್ಸ್: ಎಂಡ್‌ಗೇಮ್’ ಸಿನಿಮಾ 65 ಕೋಟಿ ರೂ. ಗ್ರಾಸ್ ಕಲೆಕ್ಷನ್ ಮಾಡಿ ದಾಖಲೆ ಬರೆದಿತ್ತು. ಈಗ ಸ್ಪೈಡರ್-ಮ್ಯಾನ್ ಆ ದಾಖಲೆಯನ್ನು ಸುಲಭವಾಗಿ ಹಿಂದಿಕ್ಕಿದೆ.

ಭಾಷಾವಾರು ಗಳಿಕೆ

ಭಾರತದಲ್ಲಿ ಈ ಸಿನಿಮಾ ಒಟ್ಟು 17,250 ಶೋಗಳಲ್ಲಿ ಪ್ರದರ್ಶನ ಕಂಡಿದೆ. ಚಿತ್ರಮಂದಿರಗಳಲ್ಲಿ ಸರಾಸರಿ 72.3ರಷ್ಟು ಆಸನಗಳು ಭರ್ತಿಯಾಗಿದ್ದವು. ಇಂಗ್ಲಿಷ್ ಆವೃತ್ತಿಯು 32.25 ಕೋಟಿ ರೂಪಾಯಿ ಗಳಿಸಿದೆ. ಹಿಂದಿ ಡಬ್ಬಿಂಗ್ ಆವೃತ್ತಿಯು ಶೇಕಡಾ 95ರಷ್ಟು ಆಕ್ಯುಪೆನ್ಸಿ ಪಡೆದು 22 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇನ್ನು ತಮಿಳು ಆವೃತ್ತಿ 3 ಕೋಟಿ ಹಾಗೂ ತೆಲುಗು ಆವೃತ್ತಿ 3.25 ಕೋಟಿ ರೂಪಾಯಿ ಗಳಿಕೆ ಕಂಡಿದೆ. ಕನ್ನಡ ಆವೃತ್ತಿಯಲ್ಲಿ 3 ಲಕ್ಷ ರೂಪಾಯಿ ಬಾಚಿಕೊಂಡಿದೆ.

ಇದನ್ನೂ ಓದಿ: ‘ಸ್ಪೈಡರ್ ಮ್ಯಾನ್’ ಹೊಸ ಚಿತ್ರಕ್ಕೆ ಸೆನ್ಸಾರ್ ಕತ್ತರಿ: 8 ಸೆಕೆಂಡ್‌ಗಳ ಚುಂಬನದ ದೃಶ್ಯ ಕಟ್

ಟಿಕೆಟ್ ಮಾರಾಟದಲ್ಲಿ ದಾಖಲೆ

ಬುಕಿಂಗ್ ಆ್ಯಪ್ ‘ಬುಕ್‌ಮೈಶೋ’ನಲ್ಲಿ ಈ ಚಿತ್ರ ಹೊಸ ದಾಖಲೆ ಬರೆದಿದೆ. ‘ದಿ ಒಡಿಸ್ಸಿ’ ಮೊದಲ ದಿನ 2.71 ಲಕ್ಷ ಟಿಕೆಟ್ ಮಾರಾಟ ಮಾಡಿತ್ತು. ಆದರೆ ಸ್ಪೈಡರ್-ಮ್ಯಾನ್ ಸಂಜೆ ಹೊತ್ತಿಗಾಗಲೇ 3.70 ಲಕ್ಷಕ್ಕೂ ಹೆಚ್ಚು ಟಿಕೆಟ್ ಮಾರಾಟ ಮಾಡಿ ಮುನ್ನುಗ್ಗಿದೆ.

ದಾಖಲೆಯ ಓಪನಿಂಗ್‌ಗೆ ಕಾರಣಗಳೇನು?

ಈ ಸಿನಿಮಾ ಭಾರತದಲ್ಲಿ ಇಷ್ಟು ದೊಡ್ಡ ಮಟ್ಟದ ಓಪನಿಂಗ್ ಪಡೆಯಲು ಹಲವು ಪ್ರಮುಖ ಕಾರಣಗಳಿವೆ. ಮೊದಲನೆಯದಾಗಿ, ಇದು ಜಗತ್ತಿನಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ನಿರೀಕ್ಷಿತ ಸಿನಿಮಾವಾಗಿತ್ತು. ಚಿತ್ರ ಬಿಡುಗಡೆಯಾದ ತಕ್ಷಣವೇ ಪ್ರೇಕ್ಷಕರಿಂದ ಹಾಗೂ ವಿಮರ್ಶಕರಿಂದ ಅತ್ಯುತ್ತಮ ವಿಮರ್ಶೆಗಳು ವ್ಯಕ್ತವಾದವು. ಇದರ ಜೊತೆಗೆ ಚಿತ್ರಮಂದಿರಗಳಲ್ಲಿ ದುಬಾರಿ ಟಿಕೆಟ್ ದರ ಇದ್ದರೂ ಅಭಿಮಾನಿಗಳು ಮುಗಿಬಿದ್ದು ನೋಡಿದ್ದಾರೆ. ಬಾಕ್ಸ್ ಆಫೀಸ್‌ನಲ್ಲಿ ಸದ್ಯ ಬೇರೆ ಯಾವುದೇ ದೊಡ್ಡ ಸಿನಿಮಾಗಳ ಸ್ಪರ್ಧೆ ಇಲ್ಲದೇ ಇರುವುದು ಕೂಡ ಚಿತ್ರದ ಭರ್ಜರಿ ಗಳಿಕೆಗೆ ರಹದಾರಿಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!