AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್ ಆಫೀಸ್‌ನಲ್ಲಿ ಸ್ಪೈಡರ್-ಮ್ಯಾನ್ ಅಬ್ಬರ; 4 ದಿನಗಳಲ್ಲಿ 300 ಕೋಟಿ ಕ್ಲಬ್ ಸೇರಿದ ‘ಬ್ರ್ಯಾಂಡ್ ನ್ಯೂ ಡೇ’

ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿರುವ 'ಸ್ಪೈಡರ್-ಮ್ಯಾನ್: ಬ್ರ್ಯಾಂಡ್ ನ್ಯೂ ಡೇ' ಸಿನಿಮಾ ಕೇವಲ ನಾಲ್ಕೇ ದಿನಗಳಲ್ಲಿ ₹306.37 ಕೋಟಿ ಗ್ರಾಸ್ ಕಲೆಕ್ಷನ್ ಮಾಡಿದೆ. ಭಾನುವಾರ ಒಂದೇ ದಿನ ₹76 ಕೋಟಿ ಗಳಿಸಿದ್ದು, ಇಂಗ್ಲಿಷ್ ಮತ್ತು ಹಿಂದಿ ಆವೃತ್ತಿಗಳು ದಾಖಲೆಯ ಪ್ರದರ್ಶನ ಕಾಣುತ್ತಿವೆ. ದಕ್ಷಿಣ ಭಾರತದಲ್ಲೂ ಸ್ಪೈಡರ್-ಮ್ಯಾನ್ ಮ್ಯಾಜಿಕ್ ಮುಂದುವರಿದಿದೆ.

ಬಾಕ್ಸ್ ಆಫೀಸ್‌ನಲ್ಲಿ ಸ್ಪೈಡರ್-ಮ್ಯಾನ್ ಅಬ್ಬರ; 4 ದಿನಗಳಲ್ಲಿ 300 ಕೋಟಿ ಕ್ಲಬ್ ಸೇರಿದ 'ಬ್ರ್ಯಾಂಡ್ ನ್ಯೂ ಡೇ'
ಸ್ಪೈಡರ್ ಮ್ಯಾನ್
ರಾಜೇಶ್ ದುಗ್ಗುಮನೆ
|

Updated on:Aug 03, 2026 | 7:03 AM

Share

ಮುಖ್ಯಾಂಶಗಳು

  • ನಾಲ್ಕೇ ದಿನಗಳಲ್ಲಿ 300 ಕೋಟಿ ಕ್ಲಬ್ ಸೇರಿದ ಸ್ಪೈಡಿ
  • ಸಿಂಗಲ್ ಡೇ ಕಲೆಕ್ಷನ್‌ನಲ್ಲಿ ಹೊಸ ಇತಿಹಾಸ
  • ಹಿಂದಿ, ಇಂಗ್ಲಿಷ್‌ನಲ್ಲಿ ಧೂಳ್ ಎಬ್ಬಿಸಿದ ಸಿನಿಮಾ

ಬಾಕ್ಸ್ ಆಫೀಸ್‌ನಲ್ಲಿ ಸ್ಪೈಡರ್-ಮ್ಯಾನ್ ಹವಾ ಜೋರಾಗಿದ್ದು, ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ‘ಸ್ಪೈಡರ್-ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ (Spider Man) ಪ್ರೇಕ್ಷಕರಿಂದ ಅಭೂತಪೂರ್ವ ಬೆಂಬಲ ಪಡೆದುಕೊಂಡಿದ್ದು, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿದೆ. ವಾರಾಂತ್ಯದ ದಿನಗಳಲ್ಲಿ ಪ್ರೇಕ್ಷಕರು ಚಿತ್ರಮಂದಿರಗಳತ್ತ ಮುಗಿಬಿದ್ದಿರುವುದು ಚಿತ್ರದ ಭರ್ಜರಿ ಗಳಿಕೆಗೆ ಸಾಕ್ಷಿಯಾಗಿದೆ. ಕೇವಲ ನಾಲ್ಕೇ ದಿನಗಳಲ್ಲಿ ಈ ಸಿನಿಮಾ ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 306.37 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ದಾಖಲೆ ಬರೆದಿದೆ. ಚಿತ್ರದ ನೆಟ್ ಕಲೆಕ್ಷನ್ 256.20 ಕೋಟಿ ರೂಪಾಯಿ ದಾಟಿದೆ.

ಚಿತ್ರದ ದಿನದ ಗಳಿಕೆಯನ್ನು ಗಮನಿಸಿದರೆ, ಮೊದಲ ದಿನ ಅಂದರೆ ಗುರುವಾರ 17,250 ಶೋಗಳ ಮೂಲಕ 60.60 ಕೋಟಿ ರೂಪಾಯಿ ಗಳಿಸುವುದರೊಂದಿಗೆ ಚಿತ್ರ ಭರ್ಜರಿ ಆರಂಭ ಪಡೆದುಕೊಂಡಿತ್ತು. ಅಂದು ಶೇಕಡಾ 72.3 ರಷ್ಟು ಥಿಯೇಟರ್ ಭರ್ತಿಯಾಗಿತ್ತು. ಎರಡನೇ ದಿನವಾದ ಶುಕ್ರವಾರದಂದು 16,902 ಶೋಗಳಿಂದ 49.35 ಕೋಟಿ ರೂಪಾಯಿ ಗಳಿಸಿ, ಶೇಕಡಾ 64.8 ರಷ್ಟು ಆಕ್ಯುಪೆನ್ಸಿ ಕಂಡಿತ್ತು. ಇನ್ನು ವಾರಾಂತ್ಯದ ದಿನಗಳಾದ ಶನಿವಾರ ಮತ್ತು ಭಾನುವಾರ ಚಿತ್ರದ ಕಲೆಕ್ಷನ್ ಗಗನಕ್ಕೇರಿದೆ. ಮೂರನೇ ದಿನವಾದ ಶನಿವಾರ 17,703 ಶೋಗಳ ಪ್ರದರ್ಶನ ಕಂಡು, ಶೇಕಡಾ 77.0 ರಷ್ಟು ಆಕ್ಯುಪೆನ್ಸಿಯೊಂದಿಗೆ 70.25 ಕೋಟಿ ರೂಪಾಯಿ ಲೂಟಿ ಮಾಡಿತ್ತು.

ನಾಲ್ಕನೇ ದಿನವಾದ ಭಾನುವಾರವಂತೂ ಸ್ಪೈಡರ್-ಮ್ಯಾನ್ ಅಬ್ಬರ ನೆಕ್ಸ್ಟ್ ಲೆವೆಲ್‌ಗೆ ತಲುಪಿದೆ. ಭಾನುವಾರ ಒಂದೇ ದಿನ ದೇಶಾದ್ಯಂತ ಬರೋಬ್ಬರಿ 18,051 ಶೋಗಳು ಪ್ರದರ್ಶನಗೊಂಡಿದ್ದು, ದಾಖಲೆಯ 76.00 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅಂದು ಚಿತ್ರಮಂದಿರಗಳಲ್ಲಿ ಶೇಕಡಾ 78.7 ರಷ್ಟು ಆಕ್ಯುಪೆನ್ಸಿ ದಾಖಲಾಗಿತ್ತು. ಭಾನುವಾರದ ಭಾಷಾವಾರು ಗಳಿಕೆಯನ್ನು ನೋಡುವುದಾದರೆ, ಇಂಗ್ಲಿಷ್ ಆವೃತ್ತಿಯು 8,269 ಶೋಗಳಿಂದ 40.00 ಕೋಟಿ ರೂಪಾಯಿ ಗಳಿಸಿ ಅಗ್ರಸ್ಥಾನದಲ್ಲಿದೆ.

ಇದನ್ನೂ ಓದಿ: ಭಾರತದಲ್ಲೇ ‘ಧುರಂಧರ್’, ‘ಪಠಾಣ್’ ಸಿನಿಮಾಗಳ ಹಿಂದಿಕ್ಕಿದ ಸ್ಪೈಡರ್ ಮ್ಯಾನ್

ದಕ್ಷಿಣ ಭಾರತದಲ್ಲೂ ಸ್ಪೈಡರ್-ಮ್ಯಾನ್ ಮ್ಯಾಜಿಕ್ ವರ್ಕ್ ಆಗಿದೆ. ಭಾನುವಾರ ತಮಿಳು ಆವೃತ್ತಿಯು 1,117 ಶೋಗಳಿಂದ 3.55 ಕೋಟಿ ರೂಪಾಯಿ ಹಾಗೂ ತೆಲುಗು ಆವೃತ್ತಿಯು 1,122 ಶೋಗಳಿಂದ 3.25 ಕೋಟಿ ರೂಪಾಯಿ ಗಳಿಸಿದೆ. ಇನ್ನು ಕನ್ನಡ ಆವೃತ್ತಿಯು 55 ಶೋಗಳ ಮೂಲಕ 10 ಲಕ್ಷ ರೂಪಾಯಿ ಮತ್ತು ಮಲಯಾಳಂ ಆವೃತ್ತಿಯು 47 ಶೋಗಳಿಂದ 10 ಲಕ್ಷ ಗಳಿಕೆ ಕಂಡಿದೆ. ಭಾನುವಾರದ ರಜಾದಿನವನ್ನು ಸ್ಪೈಡರ್-ಮ್ಯಾನ್ ಪೂರ್ಣ ಪ್ರಮಾಣದಲ್ಲಿ ಬಳಸಿಕೊಂಡಿದ್ದು, ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸುವತ್ತ ಮುನ್ನುಗ್ಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:03 am, Mon, 3 August 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!