ಗಳಿಕೆಯಲ್ಲಿ ‘ಸ್ಪೈಡರ್​ ಮ್ಯಾನ್​’ ಹೊಸ ದಾಖಲೆ; ಕೊರೊನಾ ಮಧ್ಯೆಯೂ ಬಂಗಾರದ ಬೆಳೆ ತೆಗೆದ ಹಾಲಿವುಡ್​​ ಸಿನಿಮಾ

ಗಳಿಕೆ ವಿಚಾರದಲ್ಲಿ ‘ಅವತಾರ್​’ ಸಿನಿಮಾ ಮೊದಲ ಸ್ಥಾನದಲ್ಲಿದೆ. ಈ ಸಿನಿಮಾ 21,240 ಕೋಟಿ ರೂಪಾಯಿ ಗಳಿಸಿತ್ತು. ‘ಅವೇಂಜರ್ಸ್​: ಎಂಡ್​ಗೇಮ್​’ 20,870 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಎರಡನೇ ಸ್ಥಾನದಲ್ಲಿದೆ.

ಗಳಿಕೆಯಲ್ಲಿ ‘ಸ್ಪೈಡರ್​ ಮ್ಯಾನ್​’ ಹೊಸ ದಾಖಲೆ; ಕೊರೊನಾ ಮಧ್ಯೆಯೂ ಬಂಗಾರದ ಬೆಳೆ ತೆಗೆದ ಹಾಲಿವುಡ್​​ ಸಿನಿಮಾ
ಸ್ಪೈಡರ್​ ಮ್ಯಾನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 24, 2022 | 6:23 PM

ಟಾಮ್ ಹಾಲೆಂಡ್ ((Tom Holland)​) ನಟನೆಯ ‘ಸ್ಪೈಡರ್​ ಮ್ಯಾನ್​’  (Spider Man) ಸರಣಿಯ ‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ (Spider-Man: No Way Home) ಡಿಸೆಂಬರ್​ 16ರಂದು ಬಿಡುಗಡೆಯಾಗಿ ಬಾಕ್ಸ್​ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡಿದೆ. ಈ ಸಿನಿಮಾ ಈಗಾಗಲೇ ಭಾರತದಲ್ಲಿ 213 ಕೋಟಿ ರೂಪಾಯಿ ಗಳಿಸಿದೆ. ಕೊವಿಡ್​ ಮಧ್ಯೆಯೂ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಈ ಚಿತ್ರ ವಿಶ್ವಮಟ್ಟದಲ್ಲಿ ಬಾಕ್ಸ್​ ಆಫೀಸ್​ ಉಡೀಸ್​ ಮಾಡಿದೆ. ಈ ಮೂಲಕ ಸಿನಿಮಾ ಹೊಸ ದಾಖಲೆ ಬರೆದಿದೆ. ಈ ಚಿತ್ರ ಈವರೆಗೆ 12,608 ಕೋಟಿ ರೂಪಾಯಿ ಗಳಿಸಿದೆ. ವಿಶ್ವಮಟ್ಟದಲ್ಲಿ ಹೆಚ್ಚು ಕಲೆಕ್ಷನ್​ ಮಾಡಿದ ಆರನೇ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ.

‘ಜ್ಯುರಾಸಿಕ್​ ವರ್ಲ್ಡ್​​ (12,459 ಕೋಟಿ ರೂಪಾಯಿ), ‘ದಿ ಲೈನ್​ ಕಿಂಗ್​’ (12,385 ಕೋಟಿ ರೂಪಾಯಿ) ಸಿನಿಮಾಗಳ ಕಲೆಕ್ಷನ್​ಅನ್ನು ‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್’ ಈ ವಾರ ಹಿಂದಿಕ್ಕಿದೆ. ಈವರೆಗೆ ಈ ಸಿನಿಮಾ 12,608 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾಗಳಲ್ಲಿ ಆರನೇ ಸ್ಥಾನ ಪಡೆದುಕೊಂಡಿದೆ.

ಕೊವಿಡ್​ ಹೆಚ್ಚುತ್ತಿರುವ ಕಾರಣ ಯಾರೂ ಅಷ್ಟಾಗಿ ಚಿತ್ರಮಂದಿರದತ್ತ ಮುಖ ಮಾಡುತ್ತಿಲ್ಲ. ದೇಶದ ಬಹುತೇಕ ಚಿತ್ರಮಂದಿರಗಳಲ್ಲಿ ಶೇ.50 ಆಸನ ವ್ಯವಸ್ಥೆ ನಿಯಮ ಜಾರಿಗೆ ಬಂದಿದೆ. ಈ ಕಾರಣಕ್ಕೆ ಈ ಸಿನಿಮಾ ಶೀಘ್ರವೇ ಒಟಿಟಿಯಲ್ಲಿ ಬರಬಹುದು ಎಂದು ಭಾವಿಸಲಾಗಿತ್ತು. ಆದರೆ, ಅದು ಸುಳ್ಳಾಗಿದೆ. ಇನ್ನೂ ಒಂದು ತಿಂಗಳಕಾಲ ಈ ಸಿನಿಮಾ ಪ್ರದರ್ಶನ ಕಾಣಲಿದೆ. ಚಿತ್ರ ನೋಡೋಕೆ ಈಗಲೂ ಜನರು ಬರುತ್ತಿದ್ದಾರೆ. ಹೀಗಾಗಿ, ಮಲ್ಟಿಪ್ಲೆಕ್ಸ್​ಗಳು ಈ ಸಿನಿಮಾವನ್ನು ಮುಂದಿನ ಒಂದು ತಿಂಗಳು ಪ್ರದರ್ಶನ ಮಾಡಲು ನಿರ್ಧರಿಸಿವೆ. ಆ ಬಳಿಕವೇ ಚಿತ್ರ ಒಟಿಟಿಗೆ ಕಾಲಿಡಲಿದೆ. ಹೀಗಾಗಿ, ಈ ಸಿನಿಮಾ ಕಲೆಕ್ಷನ್​ ಮತ್ತಷ್ಟು ಹೆಚ್ಚಲಿದೆ.

ಗಳಿಕೆ ವಿಚಾರದಲ್ಲಿ ‘ಅವತಾರ್​’ ಸಿನಿಮಾ ಮೊದಲ ಸ್ಥಾನದಲ್ಲಿದೆ. ಈ ಸಿನಿಮಾ 21,240 ಕೋಟಿ ರೂಪಾಯಿ ಗಳಿಸಿತ್ತು. ‘ಅವೇಂಜರ್ಸ್​: ಎಂಡ್​ಗೇಮ್​’ 20,870 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಎರಡನೇ ಸ್ಥಾನದಲ್ಲಿದೆ. 1997ರಲ್ಲಿ ತೆರೆಗೆ ಬಂದ ‘ಟೈಟಾನಿಕ್​’ ಚಿತ್ರದ ದಾಖಲೆಯನ್ನು ಮುರಿಯೋಕೆ ಅನೇಕ ಚಿತ್ರಗಳ ಬಳಿ ಈಗಲೂ ಸಾಧ್ಯವಾಗಿಲ್ಲ. ಈ ಚಿತ್ರ ಮೂರನೇ ಸ್ಥಾನದಲ್ಲಿದೆ. ಈ ಸಿನಿಮಾ 16,315 ಕೋಟಿ ರೂಪಾಯಿ ಗಳಿಕೆ ಮಾಡಿದೆ. ನಾಲ್ಕನೇ ಸ್ಥಾನದಲ್ಲಿರುವ ‘ಸ್ಟಾರ್​ ವಾರ್ಸ್​: ದಿ ಫೋರ್ಸ್​ ಅವೇಕನ್ಸ್’ 15,427 ಕೋಟಿ ರೂಪಾಯಿ ಗಳಿಸಿದೆ. ‘ಅವೆಂಜರ್ಸ್: ಇನ್ಫಿನಿಟಿ ವಾರ್’ 15,280 ಕೋಟಿ ರೂಪಾಯಿ ಗಳಿಸಿದೆ. ಇವುಗಳ ದಾಖಲೆಯನ್ನು ಮುರಿಯೋದು ಈಗಿನ ಪರಿಸ್ಥಿತಿಯಲ್ಲಿ ‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್’ಗೆ ಕಷ್ಟವಾಗಬಹುದು.

ಇದನ್ನೂ ಓದಿ: Pushpa The Rise: ರಶ್ಮಿಕಾರಂತೆ ಹೆಜ್ಜೆಹಾಕಿ ಎಲ್ಲರನ್ನೂ ದಂಗಾಗಿಸಿದ ಸ್ಪೈಡರ್​ಮ್ಯಾನ್! ಇಲ್ಲಿದೆ ವಿಡಿಯೋ ಸಾಕ್ಷಿ 

ಭಾರತೀಯ ಬಾಕ್ಸಾಫೀಸ್​​ನಲ್ಲಿ ಹೊಸ ಮೈಲಿಗಲ್ಲು ಮುಟ್ಟಿದ ‘ಸ್ಪೈಡರ್​ಮ್ಯಾನ್ ನೋ ವೇ ಹೋಮ್’; ವಿಶ್ವದಾದ್ಯಂತ ಕಲೆಕ್ಷನ್ ಎಷ್ಟು ಗೊತ್ತಾ?

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ