AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಪೈಡರ್​ ಮ್ಯಾನ್​’ ಚಿತ್ರದ ಮೊದಲ ದಿನದ ಗಳಿಕೆ​ ಇಷ್ಟೊಂದಾ? ಅಕ್ಷಯ್​ ಕುಮಾರ್​ ಕಲೆಕ್ಷನ್​ ಹಿಂದಿಕ್ಕಿದ ’ನೋ ವೇ ಹೋಮ್’

‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ ಚಿತ್ರ ಈ ಸರಣಿಯ ಫೇವರಿಟ್​ ಸಿನಿಮಾ ಎಂದು ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಅದ್ಭುತ ಪ್ರತಿಕ್ರಿಯೆ ಸಿಗುತ್ತಿದೆ.

‘ಸ್ಪೈಡರ್​ ಮ್ಯಾನ್​’ ಚಿತ್ರದ ಮೊದಲ ದಿನದ ಗಳಿಕೆ​ ಇಷ್ಟೊಂದಾ? ಅಕ್ಷಯ್​ ಕುಮಾರ್​ ಕಲೆಕ್ಷನ್​ ಹಿಂದಿಕ್ಕಿದ ’ನೋ ವೇ ಹೋಮ್’
ಸ್ಪೈಡರ್​ ಮ್ಯಾನ್​
TV9 Web
| Edited By: |

Updated on:Dec 20, 2021 | 7:35 PM

Share

ಟಾಮ್ ಹಾಲೆಂಡ್ (Tom Holland)​ ನಟನೆಯ ‘ಸ್ಪೈಡರ್​ ಮ್ಯಾನ್​’ (Spider Man) ಸರಣಿಯ ಹೊಸ ಸಿನಿಮಾ ‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ (Spider-Man: No Way Home) ಡಿಸೆಂಬರ್​ 16ರಂದು ಬಿಡುಗಡೆಯಾಗಿ ಬಾಕ್ಸ್​ಆಫೀಸ್​ ಉಡೀಸ್​ ಮಾಡಿದೆ. ಸಿನಿಮಾ ಭಾರತದಲ್ಲಿ ಸಾಕಷ್ಟು ಮೆಚ್ಚುಗೆ ಪಡೆದುಕೊಂಡ ಕಾರಣ ಗಲ್ಲಾಪೆಟ್ಟಿಗೆಯಲ್ಲಿ ಒಳ್ಳೆಯ ಕಲೆಕ್ಷನ್​ ಮಾಡಿದೆ. ಈ ಸಿನಿಮಾದ ಗಳಿಕೆ ಮುಂದಿನ ಮೂರು ದಿನಗಳಲ್ಲಿ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ವರದಿ ಆಗಿದೆ. ಹಾಗಾದರೆ ಹಾಲಿವುಡ್​ನ ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದೆಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ ಚಿತ್ರ ಈ ಸರಣಿಯ ಫೇವರಿಟ್​ ಸಿನಿಮಾ ಎಂದು ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಅದ್ಭುತ ಪ್ರತಿಕ್ರಿಯೆ ಸಿಗುತ್ತಿದೆ. ಹೀಗಾಗಿ, ಈ ಸಿನಿಮಾ ಭಾರತದಲ್ಲಿ ಮೊದಲ ದಿನ 33-35 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ವರದಿ ಆಗಿದೆ. ಈ ಮೂಲಕ ಮೊದಲ ದಿನದ ಕಲೆಕ್ಷನ್​ ವಿಚಾರದಲ್ಲಿ ಬಾಲಿವುಡ್​ನ ಸೂರ್ಯವಂಶಿ ಸಿನಿಮಾವನ್ನು ‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ ಹಿಂದಿಕ್ಕಿದೆ.

‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ ಸಿನಿಮಾ 2ಡಿ, 3ಡಿ, ಐಮ್ಯಾಕ್ಸ್​ 3ಡಿ ಸೇರಿ ಸಾಕಷ್ಟು ವಿಧದಲ್ಲಿ ಪ್ರೇಕ್ಷಕರಿಗೆ ಲಭ್ಯವಿದೆ. ಈ ಮೂಲಕ ನಾನಾ ರೀತಿಯ ಅನುಭವ ಹೊಂದುವ ಅವಕಾಶ ಇದೆ. ಭಾರತೀಯ ಪ್ರೇಕ್ಷಕರು ಸಿನಿಮಾವನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ. ಶನಿವಾರ, ಭಾನುವಾರ ಸಿನಿಮಾದ ಕಲೆಕ್ಷನ್​ ಹೆಚ್ಚುವ ನಿರೀಕ್ಷೆ ಇದೆ. ವಿಶ್ವಾದ್ಯಂತ ಈ ಸಿನಿಮಾ ಇಂದು (ಡಿಸೆಂಬರ್​ 17) ರಿಲೀಸ್​ ಆಗುತ್ತಿದೆ. ಕ್ರಿಸ್​ಮಸ್​ಗೆ ಒಳ್ಳೆಯ ಗಿಫ್ಟ್​ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಟಾಮ್ ಹಾಲೆಂಡ್ ನಟಿಸಿರುವ ಈ ಚಿತ್ರದ ಟ್ರೇಲರ್ ಹವಾ ಸೃಷ್ಟಿ ಮಾಡಿತ್ತು. ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿ.17ರಂದು ‘ಸ್ಪೈಡರ್ ಮ್ಯಾನ್: ನೋ ವೇ ಹೋಮ್’ ಚಿತ್ರ ಬಿಡುಗಡೆ ಆಗುತ್ತಿದೆ. ವಿಶೇಷ ಎಂದರೆ ಭಾರತದಲ್ಲಿ ಒಂದು ದಿನ ಮೊದಲು ಅಂದರೆ ಡಿಸೆಂಬರ್ 16ರಂದು ರಿಲೀಸ್ ಆಗಿದೆ. ಈಗ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ:‘ಪುಷ್ಪ’ ವಿರುದ್ಧ ತೊಡೆತಟ್ಟಿದ ‘ಸ್ಪೈಡರ್​ ಮ್ಯಾನ್​’; ಮೊದಲ ದಿನ ಬೆಂಗಳೂರಿನಲ್ಲಿ 700ಕ್ಕೂ ಅಧಿಕ ಶೋ 

‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ಗೆ ಮೆಚ್ಚುಗೆ; ಹೇಗಿದೆ ಟಾಮ್ ಹಾಲೆಂಡ್ ಚಿತ್ರ?

Published On - 3:25 pm, Fri, 17 December 21

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್