ಭಾರತದಲ್ಲಿ 263 ಕೋಟಿ ಕಲೆಕ್ಷನ್ ಮಾಡಿದ ‘ಸ್ಪೈಡರ್​ ಮ್ಯಾನ್​’ ಒಟಿಟಿಗೆ ಬರೋದು ಯಾವಾಗ? ಇಲ್ಲಿದೆ ಉತ್ತರ

‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ ಚಿತ್ರ ಈ ಸರಣಿಯ ಫೇವರಿಟ್​ ಸಿನಿಮಾ ಎಂದು ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಅದ್ಭುತ ಪ್ರತಿಕ್ರಿಯೆ ಸಿಗುತ್ತಿದೆ. ಹೀಗಾಗಿ, ಈ ಸಿನಿಮಾ ಈವರೆಗೆ 263 ಕೋಟಿ ರೂಪಾಯಿ ಬಾಚಿಕೊಂಡಿದೆ.

ಭಾರತದಲ್ಲಿ 263 ಕೋಟಿ ಕಲೆಕ್ಷನ್ ಮಾಡಿದ ‘ಸ್ಪೈಡರ್​ ಮ್ಯಾನ್​’ ಒಟಿಟಿಗೆ ಬರೋದು ಯಾವಾಗ? ಇಲ್ಲಿದೆ ಉತ್ತರ
ಸ್ಪೈಡರ್​ ಮ್ಯಾನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 09, 2022 | 6:06 PM

ಟಾಮ್ ಹಾಲೆಂಡ್ (Tom Holland)​ ನಟನೆಯ ‘ಸ್ಪೈಡರ್​ ಮ್ಯಾನ್​’ (Spider Man) ಸರಣಿಯ ಹೊಸ ಸಿನಿಮಾ ‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ (Spider-Man: No Way Home) ಡಿಸೆಂಬರ್​ 16ರಂದು ಬಿಡುಗಡೆಯಾಗಿ ಬಾಕ್ಸ್​ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತಿದೆ. ಈ ಸಿನಿಮಾ ಈಗಾಗಲೇ ಭಾರತದಲ್ಲಿ 263 ಕೋಟಿ ರೂಪಾಯಿ ಗಳಿಸಿದೆ. ಈ ಸಿನಿಮಾವನ್ನು ಶೀಘ್ರದಲ್ಲೇ ಒಟಿಟಿಯಲ್ಲಿ ನೋಡಬೇಕು ಎಂದು ಕಾದು ಕೂತಿದ್ದವರಿಗೆ ನಿರಾಸೆ ಆಗಿದೆ. ಒಟಿಟಿ ರಿಲೀಸ್​ ಬಗ್ಗೆ ಚಿತ್ರತಂಡದವರು ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ ಚಿತ್ರ ಈ ಸರಣಿಯ ಫೇವರಿಟ್​ ಸಿನಿಮಾ ಎಂದು ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಅದ್ಭುತ ಪ್ರತಿಕ್ರಿಯೆ ಸಿಗುತ್ತಿದೆ. ಹೀಗಾಗಿ, ಈ ಸಿನಿಮಾ ಈವರೆಗೆ 263 ಕೋಟಿ ರೂಪಾಯಿ ಬಾಚಿಕೊಂಡಿದೆ. ಈಗ ಕೊವಿಡ್​ ಹೆಚ್ಚುತ್ತಿರುವ ಕಾರಣ ಯಾರೂ ಅಷ್ಟಾಗಿ ಚಿತ್ರಮಂದಿರದತ್ತ ಮುಖ ಮಾಡುತ್ತಿಲ್ಲ. ದೇಶದ ಬಹುತೇಕ ಚಿತ್ರಮಂದಿರಗಳಲ್ಲಿ ಶೇ.50 ಆಸನ ವ್ಯವಸ್ಥೆ ನಿಯಮ ಜಾರಿಗೆ ಬಂದಿದೆ. ಈ ಕಾರಣಕ್ಕೆ ಈ ಸಿನಿಮಾ ಶೀಘ್ರವೇ ಒಟಿಟಿಯಲ್ಲಿ ಬರಬಹುದು ಎಂದು ಭಾವಿಸಲಾಗಿತ್ತು. ಆದರೆ, ಅದು ಸುಳ್ಳಾಗಿದೆ.

ಮುಂದಿನ ಎರಡು ತಿಂಗಳಕಾಲ ಈ ಸಿನಿಮಾ ಪ್ರದರ್ಶನ ಕಾಣಲಿದೆ. ಚಿತ್ರ ನೋಡೋಕೆ ಈಗಲೂ ಜನರು ಬರುತ್ತಿದ್ದಾರೆ. ಹೀಗಾಗಿ, ಮಲ್ಟಿಪ್ಲೆಕ್ಸ್​ಗಳು ಈ ಸಿನಿಮಾವನ್ನು ಮುಂದಿನ ಎರಡು ತಿಂಗಳು ಪ್ರದರ್ಶನ ಮಾಡಲು ನಿರ್ಧರಿಸಿವೆ. ಆ ಬಳಿಕವೇ ಚಿತ್ರ ಒಟಿಟಿಗೆ ಕಾಲಿಡಲಿದೆ. ಹೀಗಾಗಿ, ಇನ್ನೂ ಕೆಲವು ಸಮಯ ಈ ಚಿತ್ರಕ್ಕಾಗಿ ಕಾಯಬೇಕು.

ವಿಶ್ವಾದ್ಯಂತ ಮತ್ತೆ ಕೊವಿಡ್​ ಭಯ ಕಾಡುತ್ತಿದೆ. ನಿಧಾನವಾಗಿ ಕೊವಿಡ್​ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರಗಳನ್ನು ಮುಚ್ಚಲಾಗಿದೆ. ಕೆಲ ರಾಷ್ಟ್ರಗಳಲ್ಲಿ ರಾತ್ರಿ ಕರ್ಫ್ಯೂ ಹೇರಲಾಗಿದೆ. ಈ ಎಲ್ಲಾ ಕಾರಣಗಳಿಂದ ಈ ಚಿತ್ರಕ್ಕೆ ಕೊಂಚ ಹಿನ್ನಡೆ ಆಗಿದೆ. ಆದಾಗ್ಯೂ, ಸಿನಿಮಾ ಉತ್ತಮ ಗಳಿಕೆ ಮಾಡುತ್ತಿದೆ. ಈ ಚಿತ್ರ ವಿಶ್ವಾದ್ಯಂತ 10,361 ಕೋಟಿ ಕಲೆಕ್ಷನ್​ ಮಾಡಿದೆ.

ಇದನ್ನೂ ಓದಿ: ಭಾರತೀಯ ಬಾಕ್ಸಾಫೀಸ್​​ನಲ್ಲಿ ಹೊಸ ಮೈಲಿಗಲ್ಲು ಮುಟ್ಟಿದ ‘ಸ್ಪೈಡರ್​ಮ್ಯಾನ್ ನೋ ವೇ ಹೋಮ್’; ವಿಶ್ವದಾದ್ಯಂತ ಕಲೆಕ್ಷನ್ ಎಷ್ಟು ಗೊತ್ತಾ? 

Yash: ಯಶ್​ ಇಂಗ್ಲಿಷ್​ನಲ್ಲಿ ಟ್ವೀಟ್​ ಮಾಡಿದ್ದಕ್ಕೆ ಟ್ರೋಲ್; ಸರಿಯಾಗಿ ಉತ್ತರ ಕೊಟ್ಟ ಅಭಿಮಾನಿಗಳು

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್