ಹಾಲಿವುಡ್​​ನಲ್ಲಿ ಸಿನಿಮಾ ಮಾಡಲಿದ್ದಾರೆ ರಾಜಮೌಳಿ; ಅವರಿಗೆ ಇರೋದು ಒಂದೇ ಭಯ

SS Rajamouli: ‘ಆರ್​ಆರ್​ಆರ್​’ ಸಿನಿಮಾ ಅಮೆರಿಕದಲ್ಲಿ 3 ಪ್ರಶಸ್ತಿಗಳನ್ನು ಗೆದ್ದಿದೆ. ‘ಗೋಲ್ಡನ್​ ಗ್ಲೋಬ್ಸ್​​’ನಲ್ಲಿ ಒಂದು ಹಾಗೂ ‘ಕ್ರಿಟಿಕ್ಸ್​ ಅವಾರ್ಡ್​​’ನಲ್ಲಿ ಎರಡು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಈ ವಿಚಾರದಲ್ಲಿ ಅವರಿಗೆ ಖುಷಿ ಇದೆ.

ಹಾಲಿವುಡ್​​ನಲ್ಲಿ ಸಿನಿಮಾ ಮಾಡಲಿದ್ದಾರೆ ರಾಜಮೌಳಿ; ಅವರಿಗೆ ಇರೋದು ಒಂದೇ ಭಯ
ಶಾರುಖ್ ಖಾನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 18, 2023 | 9:46 AM

ಎಸ್​.ಎಸ್​. ರಾಜಮೌಳಿ (SS Rajamouli) ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದಿಂದ ಅವರ ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿದೆ. ಅದ್ದೂರಿ ಸಿನಿಮಾಗಳನ್ನು ನಿರ್ದೇಶನ ಮಾಡುವುದರಲ್ಲಿ ರಾಜಮೌಳಿ ಅವರದ್ದು ಎತ್ತಿದ ಕೈ. ಅವರ ಸಿನಿಮಾ ಗ್ರಾಫಿಕ್ಸ್​​ ಅತ್ಯುತ್ತಮವಾಗಿರುತ್ತದೆ. ಇವರ ಸಿನಿಮಾ ಮೇಕಿಂಗ್​ ಅನ್ನು ಅನೇಕರು ಹಾಲಿವುಡ್​ ಚಿತ್ರಗಳಿಗೆ (Hollywood Movies) ಹೋಲಿಕೆ ಮಾಡಿದ್ದೂ ಇದೆ. ಈಗ ಹಾಲಿವುಡ್​​ನಲ್ಲಿ ಸಿನಿಮಾ ಮಾಡುವ ಆಸೆಯನ್ನು ರಾಜಮೌಳಿ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ರಾಜಮೌಳಿ ಕಿಂಗ್. ಆದರೆ, ಹಾಲಿವುಡ್​ನಲ್ಲಿ ಈ ರೀತಿ ಆಗುವುದಿಲ್ಲ ಎನ್ನುವ ಭಯ ಅವರಲ್ಲಿ ಇದೆ.

‘ಆರ್​ಆರ್​ಆರ್​’ ಸಿನಿಮಾ ಅಮೆರಿಕದಲ್ಲಿ 3 ಪ್ರಶಸ್ತಿಗಳನ್ನು ಗೆದ್ದಿದೆ. ‘ಗೋಲ್ಡನ್​ ಗ್ಲೋಬ್ಸ್​​’ನಲ್ಲಿ ಒಂದು ಹಾಗೂ ‘ಕ್ರಿಟಿಕ್ಸ್​ ಅವಾರ್ಡ್​​’ನಲ್ಲಿ ಎರಡು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಈ ವಿಚಾರದಲ್ಲಿ ಅವರಿಗೆ ಖುಷಿ ಇದೆ. ಈ ಖುಷಿಯನ್ನು ಹಂಚಿಕೊಳ್ಳುವ ಸಂದರ್ಭದಲ್ಲಿ ಅವರು ಹಾಲಿವುಡ್ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಇದನ್ನು ಕೇಳಿ ಅವರ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಹಾಲಿವುಡ್‌ನಲ್ಲಿ ಸಿನಿಮಾ ಮಾಡಬೇಕು ಎಂಬುದು ಪ್ರಪಂಚದಾದ್ಯಂತ ಇರುವ ಪ್ರತಿಯೊಬ್ಬ ನಿರ್ದೇಶಕನ ಕನಸಾಗಿರುತ್ತದೆ ಎಂಬುದು ನನ್ನ ಅಭಿಪ್ರಾಯ. ನಾನು ಅದಕ್ಕೆ ಹೊರತಾಗಿಲ್ಲ. ನಾನು ಪ್ರಯೋಗಗಳನ್ನು ಮಾಡಲು ಸಿದ್ಧನಿದ್ದೇನೆ. ಮುಂದೆ ಏನು ಮಾಡಬೇಕು ಎಂಬ ಬಗ್ಗೆ ನನಗೆ ಗೊಂದಲವಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಬಾಕ್ಸ್​ ಆಫೀಸ್​ನಲ್ಲಿ ನೂರಾರು ಕೋಟಿ ಬಾಚಿದ ‘ಬ್ರಹ್ಮಾಸ್ತ್ರ’ ಚಿತ್ರದಿಂದ ರಾಜಮೌಳಿಗೆ ಸಿಕ್ಕ ಹಣ ಎಷ್ಟು?
Image
ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್; ಪಬ್ಲಿಸಿಟಿ ಸ್ಟಂಟ್ಸ್ ಎಂದ ನೆಟ್ಟಿಗರು
Image
ಕೊನೇ ಕ್ಷಣದಲ್ಲಿ ಅಮಿತ್ ಶಾ ಭೇಟಿಯಿಂದ ಹಿಂದೆ ಸರಿದ ರಾಜಮೌಳಿ? ಇದಕ್ಕಿದೆ ದೊಡ್ಡ ಕಾರಣ
Image
‘ನನ್ನ ಸಿನಿಮಾದಲ್ಲಿ ಅಂಥ ನಟರು ಇರೋದೇ ಬೇಡ’: ರಾಜಮೌಳಿಗೆ ಕಂಡೀಷನ್​ ಹಾಕಿದ ಮಹೇಶ್​ ಬಾಬು?

‘ಭಾರತದಲ್ಲಿ ನಾನು ಸಿನಿಮಾ ಮಾಡಿದರೆ ನಾನು ಡಿಕ್ಟೇಟರ್​. ಸಿನಿಮಾ ಹೇಗೆ ಮಾಡಬೇಕು ಎಂದು ಯಾರೂ ನನಗೆ ಹೇಳಬೇಕಿಲ್ಲ. ಆದರೆ, ಹಾಲಿವುಡ್​​ನಲ್ಲಿ ಸಿನಿಮಾ ಮಾಡಿದರೆ ಮತ್ತೊಬ್ಬರಿಗೆ ಕ್ರೆಡಿಟ್ ಕೊಡಲೇಬೇಕು. ಏಕೆಂದರೆ ಹಾಲಿವುಡ್​ನಲ್ಲಿ ಸಿನಿಮಾ ಮಾಡಿದರೆ ನಾನು ಮತ್ತೊಬ್ಬರ ಜತೆ ಕೈ ಜೋಡಿಸಲೇಬೇಕಾಗುತ್ತದೆ’ ಎಂದಿದ್ದಾರೆ ರಾಜಮೌಳಿ.

ಇದನ್ನೂ ಓದಿ: SS Rajamouli: ‘RRR ಬಾಲಿವುಡ್​ ಚಿತ್ರವಲ್ಲ’: ರಾಜಮೌಳಿ ಹೇಳಿಕೆಗೆ ಹಿಂದಿ ಮಂದಿ ಅಸಮಾಧಾನ

ರಾಜಮೌಳಿ ಅವರ ‘ಆರ್​ಆರ್​ಆರ್​’ ಚಿತ್ರ ಹಾಲಿವುಡ್ ಅಂಗಳದಲ್ಲಿ ಸದ್ದು ಮಾಡುತ್ತಿದೆ. ‘ಆರ್​ಆರ್​ಆರ್​ ಚಿತ್ರವನ್ನು ವಿದೇಶಿಗರು ಹೊಗಳುತ್ತಿದ್ದಾರೆ. ಈ ಚಿತ್ರವನ್ನು ಕಣ್ತುಂಬಿಕೊಂಡು ಖುಷಿಪಡುತ್ತಿದ್ದಾರೆ. ಇತ್ತೀಚೆಗೆ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಕಾರ್ಯಕ್ರಮದಲ್ಲಿ ಇಡೀ ತಂಡ ಭಾಗಿ ಆಗಿತ್ತು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈಗ ‘ಆರ್​ಆರ್​ಆರ್​’ ಆಸ್ಕರ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ