ದಿ ಕೇರಳ ಸ್ಟೋರಿ ಸಿನಿಮಾ ಪ್ರದರ್ಶನಕ್ಕೆ ಮುಸ್ಲಿಂ ಸಂಘನೆಯಿಂದ ಅಡ್ಡಿ

The Kerala Story: ವಿವಾದ, ಚರ್ಚೆಗಳ ನಡುವೆಯೂ ದಿ ಕೇರಳ ಸ್ಟೋರಿ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದೆ.

ದಿ ಕೇರಳ ಸ್ಟೋರಿ ಸಿನಿಮಾ ಪ್ರದರ್ಶನಕ್ಕೆ ಮುಸ್ಲಿಂ ಸಂಘನೆಯಿಂದ ಅಡ್ಡಿ
ದಿ ಕೇರಳ ಸ್ಟೋರಿ
Follow us
ಮಂಜುನಾಥ ಸಿ.
|

Updated on: May 21, 2023 | 6:29 PM

ದಿ ಕೇರಳ ಸ್ಟೋರಿ (The Kerala Story) ಸಿನಿಮಾ ವಿವಾದ, ಚರ್ಚೆಗಳ ನಡುವೆಯೂ ಭಾರತದಲ್ಲಿ ಉತ್ತಮ ಪ್ರದರ್ಶನ ಮುಂದುವರೆಸಿದೆ. ಕೆಲವೇ ದಿನಗಳಲ್ಲಿ ಸಿನಿಮಾದ ಗಳಿಕ 200 ಕೋಟಿ ದಾಟಿದೆ. ಸಿನಿಮಾವು ವಿದೇಶಗಳಲ್ಲಿಯೂ ಬಿಡುಗಡೆಗೊಂಡಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಬ್ರಿಟನ್​ನಲ್ಲಿ ದಿ ಕೇರಳ ಸ್ಟೋರಿ ಸಿನಿಮಾದ ಪ್ರದರ್ಶನದ ವೇಳೆ ಮುಸ್ಲಿಂ (Muslim) ಸಂಘಟನೆಯೊಂದು ಸಿನಿಮಾ ಪ್ರದರ್ಶನಕ್ಕೆ ಅಡ್ಡಿ ಉಂಟು ಮಾಡಿರುವ ಘಟನೆ ನಡೆದಿದೆ.

ಕಳೆದ ವಾರ ಬ್ರಿಟನ್​ನಲ್ಲಿ ದಿ ಕೇರಳ ಸ್ಟೋರಿ ಸಿನಿಮಾ ಬಿಡುಗಡೆ ಆಗಿತ್ತು. ಸಿನಿಮಾಕ್ಕೆ ಅಲ್ಲಿ 18+ ಪ್ರಮಾಣ ಪತ್ರ ದೊರೆತಿದೆ. ಬರ್ಮಿಂಗ್​ಹ್ಯಾಮ್​ನ ಚಿತ್ರಮಂದಿರವೊಂದರಲ್ಲಿ ದಿ ಕೇರಳ ಸ್ಟೋರಿ ಸಿನಿಮಾ ಪ್ರದರ್ಶಿಸುತ್ತಿರುವ ವೇಳೆ ಮುಸ್ಲಿಂ ಹೋರಾಟಗಾರರ ಗುಂಪೊಂದು ಚಿತ್ರಮಂದಿರಕ್ಕೆ ಪ್ರವೇಶಿಸಿ ಪ್ರದರ್ಶನಕ್ಕೆ ಅಡ್ಡಿ ಉಂಟು ಮಾಡಿರುವುದಲ್ಲದೆ, ಪ್ರೇಕ್ಷಕರೊಟ್ಟಿಗೆ ವಾಗ್ವಾದ ಸಹ ನಡೆಸಿದ್ದಾರೆ. ಈ ಘಟನೆಯ ವಿಡಿಯೋ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಶಕೀಲ್ ಅಶ್ರಫ್ ಹಾಗೂ ಇನ್ನು ಕೆಲವರು ದಿ ಕೇರಳ ಸ್ಟೋರಿ ಸಿನಿಮಾ ಪ್ರದರ್ಶನಗೊಳ್ಳುತ್ತಿದ್ದ ಚಿತ್ರಮಂದಿರಕ್ಕೆ ನುಗ್ಗಿ ಸಿನಿಮಾ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ ಆ ಬಳಿಕ ಪ್ರೇಕ್ಷಕರೊಟ್ಟಿಗೆ ಏರು ದನಿಯಲ್ಲಿ ವಾಗ್ವಾದ ನಡೆಸಿದ್ದಾರೆ. ಬಳಿಕ ಪೊಲೀಸರು ಹಾಗೂ ಚಿತ್ರಮಂದಿರದ ಸಿಬ್ಬಂದಿ ಬಂದು ಮುಸ್ಲಿಂ ಯುವಕರನ್ನು ಹೊರಗೆ ಕಳಿಸಿದ್ದಾರೆ. ಈ ವೇಳೆ ಫ್ರೀ ಕಶ್ಮೀರ್ ಘೋಷಣೆಗಳು ಸಹ ಕೇಳಿ ಬಂದಿವೆ. ಆ ಬಳಿಕ ಸಿನಿಮಾ ಪ್ರದರ್ಶನ ಮುಂದುವರೆಸಲಾಗಿದೆ.

ಬ್ರಿಟನ್​ನ 31 ಚಿತ್ರಮಂದಿರಗಳಲ್ಲಿ ಸಿನಿಮಾದ ಪ್ರದರ್ಶನ ಇತ್ತು ಆದರೆ ಹಲವು ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನವನ್ನು ರದ್ದುಗೊಳಿಸಿ ಟಿಕೆಟ್ ಬುಕ್ ಮಾಡಿದ್ದ ಪ್ರೇಕ್ಷಕರಿಗೆ ಹಣ ಮರುಪಾವತಿ ಮಾಡಲಾಗಿದೆ. ಈ ಬಗ್ಗೆ ಬ್ರಿಟನ್​ನ ಕೆಲವು ಭಾರತೀಯರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದು ಬಿಬಿಎಫ್​ಸಿಯು ಒಂದು ಸಮುದಾಯದ ಪರವಾಗಿ ನಿಂತಿದೆ ಎಂದು ಆರೋಪಿಸಿದ್ದಾರೆ.

ದಿ ಕೇರಳ ಸ್ಟೋರಿ ಸಿನಿಮಾವು ಕೇರಳದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಮತಾಂತರದ ಕುರಿತ ಕತೆಯನ್ನು ಒಳಗೊಂಡಿದೆ. ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಅದಾ ಶರ್ಮಾ ಮುಖ್ಯ ಪಾತ್ರದಲ್ಲಿ ನಟಿಸಿದ್ದು ಸಿನಿಮಾವನ್ನು ಸುದಿಪ್ತೊ ಸೇನ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಕ್ಕೆ ಕೇರಳ ರಾಜ್ಯ ಸರ್ಕಾರ ಹಾಗೂ ವಿಪಕ್ಷಗಳು ವಿರೋಧಿಸಿದ್ದವು. ಸಿನಿಮಾದ ಬಿಡುಗಡೆ ತಡೆಯಲು ಕಾನೂನಾತ್ಮಕ ಪ್ರಯತ್ನ ನಡೆಯಿತಾದರೂ ಅದು ವಿಫಲವಾಯಿತು. ಸಿನಿಮಾದ ಪ್ರದರ್ಶನವನ್ನು ತಮಿಳುನಾಡು ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳು ತಡೆಹಿಡಿದಿವೆ. ಇದೀಗ ಸುಪ್ರೀಂಕೋರ್ಟ್​ನಲ್ಲಿ ಈ ಬಗ್ಗೆ ಚಿತ್ರತಂಡದ ಪರವಾಗಿ ದಾವೆ ಹೂಡಲಾಗಿದ್ದು, ವಿಚಾರಣೆ ಚಾಲ್ತಿಯಲ್ಲಿದೆ.

ದಿ ಕೇರಳ ಸ್ಟೋರಿ ಸಿನಿಮಾವು ಇಸ್ಲಾಂ ಅನ್ನು ಮುಸ್ಲಿಂ ಸಮುದಾಯವನ್ನು ಕೆಟ್ಟದಾಗಿ ಚಿತ್ರಿಸಿದೆ. ಸತ್ಯ ಘಟನೆಯಿಂದ ಬಹಳ ದೂರ ಇದೆ. ಈ ಸಿನಿಮಾ ಇಸ್ಲಾಂ ವಿರುದ್ಧ ದ್ವೇಷ ಹುಟ್ಟಿಸುವಂತಿದೆ ಎಂದು ಆರೋಪಿಸಲಾಗುತ್ತಿದೆ. ಸಿನಿಮಾಕ್ಕೆ ಬಿಜೆಪಿ, ಆರ್​ಎಸ್​ಎಸ್ ಹಾಗೂ ಇನ್ನೂ ಕೆಲವು ಹಿಂದೂಪರ ಸಂಘಟನೆಗಳಿಂದ ಭರಪೂರ ಬೆಂಬಲ ವ್ಯಕ್ತವಾಗಿದೆ. ಸ್ವತಃ ಪ್ರಧಾನಿ ಮೋದಿ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಬಿಜೆಪಿ ಆಡಳಿತವಿರುವ ಮಧ್ಯ ಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ