ಮೊದಲ ದಿನವೇ 480 ಕೋಟಿ ಗಳಿಸಿದ ‘ಆಡಸ್ಸಿ’, ಭಾರತದಲ್ಲಿ ಗಳಿಸ್ಸಿದ್ದೆಷ್ಟು?

The Odyssey movie: ಈ ಸಿನಿಮಾದ ಅಡ್ವಾನ್ಸ್ ಟಿಕೆಟ್ ಬುಕಿಂಗ್ ವರ್ಷಕ್ಕೆ ಮುಂಚೆಯೇ ಮಾರಾಟವಾಗಿದ್ದವು. ಮ್ಯಾಟ್ ಡೇಮನ್, ಟಾಮ್ ಹಾಲೆಂಡ್, ಅನ್ನಾ ಹಾಥ್​​ವೇ, ಜೆಂಡೆಯಾ ಸೇರಿದಂತೆ ಇನ್ನೂ ಹಲವು ದೊಡ್ಡ ಸ್ಟಾರ್ ನಟ-ನಟಿಯರು ನಟಿಸಿದ್ದಾರೆ. ಸಿನಿಮಾ ಮೊದಲ ದಿನವೇ ಭರ್ಜರಿ ಕಲೆಕ್ಷನ್ ಮಾಡಿದೆ. ಭಾರತದಲ್ಲೂ ಸಹ ದೊಡ್ಡ ಮೊತ್ತವನ್ನು ಗಳಿಕೆ ಮಾಡಿದೆ ‘ಆಡಸ್ಸಿ’.

ಮೊದಲ ದಿನವೇ 480 ಕೋಟಿ ಗಳಿಸಿದ ‘ಆಡಸ್ಸಿ’, ಭಾರತದಲ್ಲಿ ಗಳಿಸ್ಸಿದ್ದೆಷ್ಟು?
The Odyssey

Updated on: Jul 18, 2026 | 1:35 PM

ಕ್ರಿಸ್ಟೋಫರ್ ನೋಲನ್ (christopher nolan) ನಿರ್ದೇಶನದ ‘ದಿ ಆಡಸ್ಸಿ’ (The Odyssey) ಸಿನಿಮಾ ಜುಲೈ 17ಕ್ಕೆ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ವಿಶ್ವದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿತ್ತು ‘ದಿ ಆಡಸ್ಸಿ’. ಈ ಸಿನಿಮಾದ ಅಡ್ವಾನ್ಸ್ ಟಿಕೆಟ್ ಬುಕಿಂಗ್ ವರ್ಷಕ್ಕೆ ಮುಂಚೆಯೇ ಮಾರಾಟವಾಗಿದ್ದವು. ಮ್ಯಾಟ್ ಡೇಮನ್, ಟಾಮ್ ಹಾಲೆಂಡ್, ಅನ್ನಾ ಹಾಥ್​​ವೇ, ಜೆಂಡೆಯಾ ಸೇರಿದಂತೆ ಇನ್ನೂ ಹಲವು ದೊಡ್ಡ ಸ್ಟಾರ್ ನಟ-ನಟಿಯರು ನಟಿಸಿದ್ದಾರೆ. ಸಿನಿಮಾ ಮೊದಲ ದಿನವೇ ಭರ್ಜರಿ ಕಲೆಕ್ಷನ್ ಮಾಡಿದೆ. ಭಾರತದಲ್ಲೂ ಸಹ ದೊಡ್ಡ ಮೊತ್ತವನ್ನು ಗಳಿಕೆ ಮಾಡಿದೆ ‘ಆಡಸ್ಸಿ’.

‘ದಿ ಆಡಸ್ಸಿ’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಮೊದಲ ದಿನವೇ 50 ಮಿಲಿಯನ್ ಡಾಲರ್ ಮೊತ್ತ ಗಳಿಕೆ ಮಾಡಿದೆ. ಭಾರತದ ರೂಪಾಯಿ ಲೆಕ್ಕಾಚಾರದಲ್ಲಿ ಈ ಸಿನಿಮಾ ಮೊದಲ ದಿನವೇ ಬರೋಬ್ಬರಿ 481 ಕೋಟಿಗೂ ಹೆಚ್ಚು ಮೊತ್ತ ಗಳಿಸಿದೆ. ಕ್ರಿಸ್ಟೊಫರ್ ನೋಲನ್ ನಿರ್ದೇಶನ ಮಾಡಿರುವ ಈ ವರೆಗಿನ ಸಿನಿಮಾಗಳಲ್ಲಿ ಮೊದಲ ದಿನ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಎನಿಸಿಕೊಂಡಿದೆ ‘ದಿ ಆಡಸ್ಸಿ’.

‘ದಿ ಆಡಸ್ಸಿ’ ಸಿನಿಮಾ ಭಾರತದಲ್ಲಿ ಸಹ ದೊಡ್ಡ ಮೊತ್ತದ ಗಳಿಕೆಯನ್ನೇ ಮಾಡಿದೆ. ಬಹುತೇಕ ಮೆಟ್ರೋ ನಗರಗಳಲ್ಲಿ ಮಲ್ಟಿಪ್ಲೆಕ್ಸ್​​ಗಳಲ್ಲಿ ಮಾತ್ರವೇ ಬಿಡುಗಡೆ ಆಗಿರುವ ಸಿನಿಮಾ ಮೊದಲ ದಿನ 17.40 ಕೋಟಿಗೂ ಹೆಚ್ಚು ಮೊತ್ತ ಗಳಿಸಿದೆ. ಅಡ್ವಾನ್ಸ್ ಬುಕಿಂಗ್ ಎಲ್ಲವೂ ಸೇರಿ ಸುಮಾರು 20 ಕೋಟಿ ಗಳಿಕೆ ಮೊದಲ ದಿನವೇ ಆಗಿದೆ. ಹಾಲಿವುಡ್ ಸಿನಿಮಾ ಒಂದು ಭಾರತದಲ್ಲಿ ಮೊದಲ ದಿನ ಗಳಿಸಿದ ದೊಡ್ಡ ಮೊತ್ತಗಳಲ್ಲಿ ಇದೂ ಸಹ ಒಂದಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ‘ದಿ ಆಡಸ್ಸಿ’ಯನ್ನು ಹಿಂದಿಕ್ಕಿದ ‘ಸ್ಪೈಡರ್​​ಮ್ಯಾನ್’

‘ದಿ ಆಡಸ್ಸಿ’ ಸಿನಿಮಾ, ಭಾರತದಲ್ಲಿ ಇಂಗ್ಲೀಷ್​​ನಲ್ಲಿ ಮಾತ್ರವೇ ಅಲ್ಲದೆ, ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿಯೂ ಸಹ ಬಿಡುಗಡೆ ಆಗಿತ್ತು. ಸಿನಿಮಾದ ಇಂಗ್ಲೀಷ್ ಆವೃತ್ತಿ ಭಾರತೀಯ ಭಾಷೆಯ ಆವೃತ್ತಿಗಳಿಗಿಂತಲೂ ಹೆಚ್ಚು ಗಳಿಕೆ ಮಾಡಿದೆ. ಸಿನಿಮಾದ ಇಂಗ್ಲೀಷ್ ಆವೃತ್ತಿ 13.75 ಕೋಟಿ ರೂಪಾಯಿ ಗಳಿಕೆ ಮಾಡಿದ್ದರೆ. ಹಿಂದಿ ಆವೃತ್ತಿ ಸುಮಾರು ಎರಡು ಕೋಟಿ, ತೆಲುಗು ಆವೃತ್ತಿ 1.10 ಕೋಟಿ ಮತ್ತು ತಮಿಳು ಆವೃತ್ತಿ 65 ಲಕ್ಷ ರೂಪಾಯಿ ಗಳಿಸಿದೆ.

ಭಾರತದಲ್ಲಿ ಹಲವು ಹಾಲಿವುಡ್ ಸಿನಿಮಾಗಳು ದೊಡ್ಡ ಮೊತ್ತದ ಗಳಿಕೆ ಮಾಡಿವೆ. ‘ಅವತಾರ್’ ಸಿನಿಮಾ ಸರಣಿ, ‘ಅವೇಂಜರ್ಸ್’ ಸರಣಿ ಭಾರತದಲ್ಲಿ ಭರ್ಜರಿ ಗಳಿಕೆ ಮಾಡಿದ ಹಾಲಿವುಡ್ ಸಿನಿಮಾಗಳ ಪಟ್ಟಿಯಲ್ಲಿ ಮೊದಲಲ್ಲಿವೆ. ಕಳೆದ ವರ್ಷ ಬಿಡುಗಡೆ ಆಗಿದ್ದ ‘ಡೆಡ್​​ಪೂಲ್-ವೋಲ್ವರಿನ್’ ಸಿನಿಮಾ ಮೊದಲ ದಿನವೇ 21 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಇದೇ ತಿಂಗಳ ಅಂತ್ಯಕ್ಕೆ ‘ಸ್ಪೈಡರ್​​ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಬಿಡುಗಡೆ ಆಗಲಿದ್ದು, ಆ ಸಿನಿಮಾ ಸಹ ಭಾರಿ ದೊಡ್ಡ ಗಳಿಕೆಯನ್ನೇ ಭಾರತದಲ್ಲಿ ಮಾಡುವ ನಿರೀಕ್ಷೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us