Priyanka Chopra: ಪ್ರಿಯಾಂಕಾ ಚೋಪ್ರಾ ಬಾಲಿವುಡ್​ ಬಿಟ್ಟು ಹಾಲಿವುಡ್​ಗೆ ಹೋಗಿದ್ದು ಯಾಕೆ? ಕಡೆಗೂ ಬಾಯ್ಬಿಟ್ಟ ನಟಿ

ಹಾಲಿವುಡ್​ ಸೆಲೆಬ್ರಿಟಿಗಳ ವಲಯದಲ್ಲಿ ಪ್ರಿಯಾಂಕಾ ಚೋಪ್ರಾ ಅವರ ಖ್ಯಾತಿ ಹೆಚ್ಚಿದೆ. ಅನೇಕ ಅವಾರ್ಡ್​ ಫಂಕ್ಷನ್​ಗಳಲ್ಲೂ ಅವರು ಮಿಂಚಿದ್ದಾರೆ.

Priyanka Chopra: ಪ್ರಿಯಾಂಕಾ ಚೋಪ್ರಾ ಬಾಲಿವುಡ್​ ಬಿಟ್ಟು ಹಾಲಿವುಡ್​ಗೆ ಹೋಗಿದ್ದು ಯಾಕೆ? ಕಡೆಗೂ ಬಾಯ್ಬಿಟ್ಟ ನಟಿ
ಪ್ರಿಯಾಂಕಾ ಚೋಪ್ರಾ
Follow us
TV9 Web
| Updated By: ಮದನ್​ ಕುಮಾರ್​

Updated on: Mar 28, 2023 | 1:03 PM

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಈಗ ಅಮೆರಿಕದಲ್ಲಿ ಸೆಟ್ಲ್​ ಆಗಿದ್ದಾರೆ. ಅಮೆರಿಕದ ಗಾಯಕ ನಿಕ್​ ಜೋನಸ್​ ಅವರ ಜೊತೆ ಮದುವೆ ಆದ ಬಳಿಕ ಅವರು ಬಾಲಿವುಡ್ (Bollywood)​ ತೊರೆದು ಹಾಲಿವುಡ್​ನಲ್ಲಿ ಕೆಲಸ ಮಾಡಲು ಆರಂಭಿಸಿದರು. ಈ ಬಗ್ಗೆ ಭಾರತದಲ್ಲಿನ ಅಭಿಮಾನಿಗಳಿಗೆ ಬೇಸರ ಇದೆ. ಅಷ್ಟಕ್ಕೂ ಪ್ರಿಯಾಂಕಾ ಚೋಪ್ರಾ ಅವರು ಹಿಂದಿ ಚಿತ್ರರಂಗವನ್ನು ತೊರೆದಿದ್ದು ಯಾಕೆ? ಈ ವಿಚಾರದ ಬಗ್ಗೆ ಇಷ್ಟು ದಿನಗಳವರೆಗೆ ಅವರು ಮಾತನಾಡಿರಲಿಲ್ಲ. ಈಗ ಇದೇ ಮೊದಲ ಬಾರಿಗೆ ಆ ಕುರಿತು ಪ್ರಿಯಾಂಕಾ ಚೋಪ್ರಾ ಬಾಯ್ಬಿಟ್ಟಿದ್ದಾರೆ. ಬಾಲಿವುಡ್​ನಲ್ಲಿ ಅವರು ಕಷ್ಟದ ದಿನಗಳನ್ನು ಎದುರಿಸಿದ್ದರು. ಆ ಕಾರಣದಿಂದಲೇ ಅವರು ಹಾಲಿವುಡ್​ಗೆ (Hollywood) ಶಿಫ್ಟ್​ ಆಗುವ ನಿರ್ಧಾರಕ್ಕೆ ಬಂದರು.

ಬಾಲಿವುಡ್​ನಲ್ಲಿ ರಾಜಕೀಯ ನಡೆಯುತ್ತಿದೆ ಎಂದು ಈ ಹಿಂದೆ ಅನೇಕರು ಆರೋಪಿಸಿದ್ದುಂಟು. ಈಗ ಪ್ರಿಯಾಂಕಾ ಚೋಪ್ರಾ ಕೂಡ ಅದನ್ನೇ ಹೇಳಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಅವರನ್ನು ಕೆಲವರು ಟಾರ್ಗೆಟ್​ ಮಾಡಿದ್ದರು. ಅವಕಾಶ ಸಿಗದಂತೆ ಮಾಡಿದ್ದರು. ಆ ಸಂದರ್ಭದಲ್ಲಿ ಬ್ರೇಕ್​ ತೆಗೆದುಕೊಳ್ಳಬೇಕು ಅಂತ ಪ್ರಿಯಾಂಕಾಗೆ ಅನಿಸಿತ್ತು. ಆಗಲೇ ಅವರಿಗೆ ಅಮೆರಿಕದ ಮ್ಯೂಸಿಕ್​ ಇಂಡಸ್ಟ್ರಿಯಿಂದ ಕರೆ ಬಂತು. ಅಲ್ಲಿಂದ ಪ್ರಿಯಾಂಕಾ ಚೋಪ್ರಾ ಅವರ ಬದುಕು ಬದಲಾಯಿತು.

ಇದನ್ನೂ ಓದಿ: ಹಾಲಿವುಡ್ ಎಂಟ್ರಿ ಬಗ್ಗೆ ಪರ-ವಿರೋಧ ಚರ್ಚೆ; ಶಾರುಖ್ ಹೇಳಿಕೆಗೆ ಉತ್ತರ ಕೊಟ್ಟ ಪ್ರಿಯಾಂಕಾ ಚೋಪ್ರಾ

ಇದನ್ನೂ ಓದಿ
Image
Priyanka Chopra: ಫ್ಯಾನ್ಸ್​ ವಾವ್​ ಎನ್ನುವಂತೆ ಗ್ಲಾಮರ್​ ವೇಷ ಧರಿಸಿದ ಪ್ರಿಯಾಂಕಾ ಚೋಪ್ರಾ; ಇಲ್ಲಿವೆ ಫೋಟೋಗಳು
Image
ಶಾಕಿಂಗ್​ ಸತ್ಯದ ಜತೆ ಮೊದಲ ಬಾರಿ ಮಗು ಫೋಟೋ ತೋರಿಸಿದ ಪ್ರಿಯಾಂಕಾ ಚೋಪ್ರಾ-ನಿಕ್​ ಜೋನಸ್​
Image
ಪ್ರಿಯಾಂಕಾ ಚೋಪ್ರಾ ಮಗಳ ಹೆಸರು ಮಾಲ್ತಿ ಮೇರಿ ಚೋಪ್ರಾ ಜೋನಸ್​; ಏನು ಇದರ ಅರ್ಥ?
Image
ಕಪ್ಪು ಸೀರೆ ಧರಿಸಿ ‘ಪ್ರೀ ಆಸ್ಕರ್​ ಪಾರ್ಟಿ’ಯಲ್ಲಿ ಮಿಂಚಿದ ‘ದೇಸಿ ಗರ್ಲ್​’ ಪ್ರಿಯಾಂಕಾ ಚೋಪ್ರಾ

ಅಮೆರಿಕದ ಮ್ಯೂಸಿಕ್​ ಇಂಡಸ್ಟ್ರಿಯಲ್ಲೂ ಪ್ರಿಯಾಂಕಾ ಚೋಪ್ರಾ ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗಲಿಲ್ಲ. ಆಗ ಅವರು ಅಲ್ಲಿನ ಸಿನಿಮಾಗಳಲ್ಲಿ ಅದೃಷ್ಟ ಪರೀಕ್ಷೆ ಮಾಡಿಕೊಂಡರು. ಆಗ ಅವರಿಗೆ ಹೆಚ್ಚಿನ ಜನಪ್ರಿಯತೆ ಸಿಕ್ಕಿತು. ಹಾಲಿವುಡ್​ ಸೆಲೆಬ್ರಿಟಿಗಳ ವಲಯದಲ್ಲಿ ಪ್ರಿಯಾಂಕಾ ಚೋಪ್ರಾ ಅವರ ಖ್ಯಾತಿ ಹೆಚ್ಚಿತು. ಅನೇಕ ಅವಾರ್ಡ್​ ಫಂಕ್ಷನ್​ಗಳಲ್ಲೂ ಪ್ರಿಯಾಂಕಾ ಚೋಪ್ರಾ ಮಿಂಚಿದರು.

ಇದನ್ನೂ ಓದಿ: ಬಾಲಿವುಡ್​ನಲ್ಲಿ ಪ್ರಿಯಾಂಕಾ ಚೋಪ್ರಾಗೆ ಬಾಡಿ ಶೇಮಿಂಗ್​; ಭಾರತ ತೊರೆದ ಬಳಿಕ ಮೌನ ಮುರಿದ ನಟಿ

ಹಿಂದಿ ಚಿತ್ರರಂಗದಲ್ಲಿ ಪ್ರಿಯಾಂಕಾ ಚೋಪ್ರಾ ಅವರು ಹಲವು ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. 2002ರಲ್ಲಿ ಬಾಲಿವುಡ್​ಗೆ ಕಾಲಿಟ್ಟ ಅವರು ಸ್ಟಾರ್​ ನಟಿಯಾಗಿ ಮೆರೆದರು. ‘ಬಾಜಿ ರಾವ್​ ಮಸ್ತಾನಿ’ ರೀತಿಯ ಸೂಪರ್ ಹಿಟ್​ ಸಿನಿಮಾಗಳನ್ನು ನೀಡಿದ ಬಳಿಕವೂ ಅವರಿಗೆ ಬಾಲಿವುಡ್​ನ ಒಳ ರಾಜಕೀಯವನ್ನು ಎದುರಿಸಲು ಸಾಧ್ಯವಾಗಲಿಲ್ಲ.

2016ರಲ್ಲಿ ಬಂದ ‘ಜೈ ಗಂಗಾಜಲ್​’ ಸಿನಿಮಾವೇ ಕೊನೇ. ಆ ಬಳಿಕ ಪ್ರಿಯಾಂಕಾ ಚೋಪ್ರಾ ಅವರು ಹಿಂದಿಯ ಯಾವುದೇ ಸಿನಿಮಾದಲ್ಲೂ ನಟಿಸಿಲ್ಲ. ಅವರು ಮತ್ತೆ ಬಾಲಿವುಡ್​ಗೆ ಕಮ್​ಬ್ಯಾಕ್​ ಮಾಡಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ. ಆದರೆ ಅಭಿಮಾನಿಗಳ ಆಸೆ ಸದ್ಯಕ್ಕಂತೂ ಈಡೇರುವಂತೆ ಕಾಣುತ್ತಿಲ್ಲ. ಅಷ್ಟಕ್ಕೂ ಪ್ರಿಯಾಂಕಾ ಚೋಪ್ರಾ ಅವರನ್ನು ಬಾಲಿವುಡ್​ನಲ್ಲಿ ಟಾರ್ಗೆಟ್​ ಮಾಡಿದವರು ಯಾರು? ಯಾರ ಹೆಸರನ್ನೂ ಅವರು ಬಹಿರಂಗಪಡಿಸಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ