Oppenheimer: ಲೈಂಗಿಕ ಕ್ರಿಯೆ ವೇಳೆ ಭಗವದ್ಗೀತೆ ಓದುವ ದೃಶ್ಯ; ‘ಆಪನ್​ಹೈಮರ್​’ ಚಿತ್ರಕ್ಕೆ ಎದುರಾಯ್ತು ವಿರೋಧ

Bhagavad Gita in Oppenheimer Movie: ‘ಆಪನ್​ಹೈಮರ್​’ ಸಿನಿಮಾದಲ್ಲಿನ ಈ ದೃಶ್ಯಕ್ಕೆ ಭಾರತದ ಸೆನ್ಸಾರ್​ ಮಂಡಳಿಯವರು ಹೇಗೆ ಅನುಮತಿ ನೀಡಿದರು ಎಂದು ಕೆಲವರು ತಕರಾರು ತೆಗೆದಿದ್ದಾರೆ. ಆಕ್ಷೇಪಾರ್ಹ ದೃಶ್ಯವನ್ನು ತೆಗೆದುಹಾಕುವಂತೆ ಒತ್ತಾಯಿಸಲಾಗುತ್ತಿದೆ.

Oppenheimer: ಲೈಂಗಿಕ ಕ್ರಿಯೆ ವೇಳೆ ಭಗವದ್ಗೀತೆ ಓದುವ ದೃಶ್ಯ; ‘ಆಪನ್​ಹೈಮರ್​’ ಚಿತ್ರಕ್ಕೆ ಎದುರಾಯ್ತು ವಿರೋಧ
ಕಿಲಿಯನ್​ ಮರ್ಫಿ
Follow us
ಮದನ್​ ಕುಮಾರ್​
|

Updated on: Jul 23, 2023 | 1:26 PM

ಎಲ್ಲೆಲ್ಲೂ ‘ಆಪನ್​ಹೈಮರ್​’ ಸಿನಿಮಾದ (Oppenheimer Movie) ಬಗ್ಗೆ ಚರ್ಚೆ ಆಗುತ್ತಿದೆ. ಜುಲೈ 21ರಂದು ಬಿಡುಗಡೆ ಆದ ಹಾಲಿವುಡ್​ನ ಈ ಚಿತ್ರಕ್ಕೆ ವಿಮರ್ಶಕರು ಮೆಚ್ಚುಗೆ ಸೂಚಿಸಿದ್ದಾರೆ. ಆದರೆ ಈ ಸಿನಿಮಾದಲ್ಲಿನ ಒಂದು ದೃಶ್ಯಕ್ಕೆ ಈಗ ವಿರೋಧ ವ್ಯಕ್ತವಾಗಿದೆ. ಲೈಂಗಿಕ ಕ್ರಿಯೆ ನಡೆಸುವಾಗ ಕಥಾನಾಯಕ ಭಗವದ್ಗೀತೆ(Bhagavad Gita) ಸಾಲುಗಳನ್ನು ಓದುವ ದೃಶ್ಯ ಈ ಸಿನಿಮಾದಲ್ಲಿದೆ. ಇದಕ್ಕೆ ಭಾರತದಲ್ಲಿ ಆಕ್ಷೇಪ ಎದುರಾಗುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಮಾಹಿತಿ ಆಯುಕ್ತ ಉದಯ್​ ಮಹುರ್ಕರ್​ ತಕರಾರು ತೆಗೆದಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಅವರು ‘ಆಪನ್​ಹೈಮರ್​’ ಚಿತ್ರತಂಡವನ್ನು ಪ್ರಶ್ನಿಸಿದ್ದಾರೆ. ಈ ದೃಶ್ಯಕ್ಕೆ ಕತ್ತರಿ ಬೀಳುವ ಸಾಧ್ಯತೆ ಇದೆ. ಕ್ರಿಸ್ಟೋಫರ್​ ನೋಲನ್​ (Christopher Nolan) ನಿರ್ದೇಶನದ ಈ ಸಿನಿಮಾ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

ಅಣುಬಾಂಬ್​ ಕಂಡು ಹಿಡಿದ ಅಮೆರಿಕದ ವಿಜ್ಞಾನಿ ಜೆ. ರಾಬರ್ಟ್​ ಆಪನ್​ಹೈಮರ್​ ಅವರ ಜೀವನದ ಕುರಿತು ‘ಆಪನ್​ಹೈಮರ್​’ ಸಿನಿಮಾ ಮೂಡಿಬಂದಿದೆ. ಆಪನ್​ಹೈಮರ್​ ಪಾತ್ರವನ್ನು ಕಿಲಿಯನ್​ ಮರ್ಫಿ ಮಾಡಿದ್ದಾರೆ. ರಿಯಲ್​ ಲೈಫ್​ನಲ್ಲಿ ಆಪನ್​ಹೈಮರ್​ ಅವರಿಗೆ ಹಿಂದೂ ಪುರಾಣಗಳ ಬಗ್ಗೆ ಆಸಕ್ತಿ ಇತ್ತು. ಅವರು ಸಂಸ್ಕೃತ ಕಲಿತಿದ್ದರು ಮತ್ತು ಭಗವದ್ಗೀತೆ ಓದಿಕೊಂಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಈ ಸಿನಿಮಾದಲ್ಲಿ ಒಂದು ದೃಶ್ಯ ಇದೆ. ಆ ದೃಶ್ಯವೇ ಈಗ ಕಾಂಟ್ರವರ್ಸಿ ಸೃಷ್ಟಿ ಮಾಡಿದೆ.

ಆಪನ್​ಹೈಮರ್​ ಜೊತೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ಅವರ ಪ್ರೇಯಸಿಗೆ ಅನೇಕ ಪುಸ್ತಕಗಳು ಕಾಣಿಸುತ್ತವೆ. ಆ ಪೈಕಿ ಒಂದು ಪುಸ್ತಕವನ್ನು ಕೈಗೆತ್ತಿಕೊಂಡು ‘ಇದು ಏನು’ ಅಂತ ಆಕೆ ಪ್ರಶ್ನಿಸುತ್ತಾಳೆ. ‘ಇದು ಭಗವದ್ಗೀತೆ’ ಎಂದು ಆಪನ್​ಹೈಮರ್​ ಹೇಳುತ್ತಾರೆ ಮತ್ತು ಅದರಲ್ಲಿನ ಒಂದೆರಡು ಸಾಲುಗಳನ್ನು ವಿವರಿಸುತ್ತಾರೆ. ಇಂಥ ದೃಶ್ಯಕ್ಕೆ ಭಾರತದಲ್ಲಿ ಸೆನ್ಸಾರ್​ ಮಂಡಳಿಯವರು ಹೇಗೆ ಅನುಮತಿ ನೀಡಿದರು ಎಂದು ಕೆಲವರು ತಕರಾರು ತೆಗೆದಿದ್ದಾರೆ. ಇದು ಹಿಂದೂ ಧರ್ಮದ ಮೇಲೆ ಮಾಡಲಾಗಿರುವ ದಾಳಿ ಎಂದು ಟೀಕೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: Oppenheimer Vs Barbie: ‘ಆಪನ್​ಹೈಮರ್​’ ವರ್ಸಸ್​ ‘ಬಾರ್ಬಿ’; ಮೊದಲ ದಿನ ಭಾರತದ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರಗಳ ಕಲೆಕ್ಷನ್​ ಎಷ್ಟು?

‘ಸೇವ್​ ಕಲ್ಚರ್​ ಸೇವ್​ ಇಂಡಿಯಾ ಪ್ರತಿಷ್ಠಾನ’ದ ವತಿಯಿಂದ ಉದಯ್​ ಮಹುರ್ಕರ್​ ಅವರು ‘ಆಪನ್​ಹೈಮರ್​’ ಸಿನಿಮಾದ ನಿರ್ದೇಶಕ ಕ್ರಿಸ್ಟೋಫರ್​ ನೋಲನ್​ಗೆ ಪತ್ರ ಬರೆದಿದ್ದಾರೆ. ಸಿನಿಮಾದಲ್ಲಿ ಇರುವ ಆಕ್ಷೇಪಾರ್ಹ ದೃಶ್ಯವನ್ನು ತೆಗೆದುಹಾಕುವಂತೆ ಅವರು ಒತ್ತಾಯಿಸಿದ್ದಾರೆ. ಇದಕ್ಕೆ ಕ್ರಿಸ್ಟೋಫರ್​ ನೋಲನ್​ ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬ ಕೌತುಕ ಮೂಡಿದೆ. ಹಾಲಿವುಡ್​ನಲ್ಲಿ ಗಮನಾರ್ಹ ಸಿನಿಮಾಗಳನ್ನು ಮಾಡಿ ಕ್ರಿಸ್ಟೋಫರ್​ ನೋಲನ್​ ಅವರು ಗುರುತಿಸಿಕೊಂಡಿದ್ದಾರೆ. ಭಾರತದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಪ್ರಸ್ತುತ ರಿಲೀಸ್​ ಆಗಿರುವ ‘ಆಪನ್​ಹೈಮರ್​’ ಸಿನಿಮಾಗೆ ಭಾರತದ ಬಾಕ್ಸ್​ ಆಫೀಸ್​ನಲ್ಲಿ ಮೊದಲ ದಿನ 13.5 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು