ಭಾರತದಲ್ಲಿ ಭರ್ಜರಿ ಓಪನಿಂಗ್ ಪಡೆದ ಹಾಲಿವುಡ್ ಸಿನಿಮಾ ‘ವೆನಮ್: ದಿ ಲಾಸ್ಟ್ ಡ್ಯಾನ್ಸ್’

‘ವೆನಮ್: ದಿ ಲಾಸ್ಟ್ ಡ್ಯಾನ್ಸ್’ ಸಿನಿಮಾವನ್ನು ಭಾರತದಾದ್ಯಂತ ‘ಸೋನಿ ಪಿಕ್ಚರ್ಸ್ ಎಂಟರ್‌ಟೈನ್‌ಮೆಂಟ್ ಇಂಡಿಯಾ’ ಸಂಸ್ಥೆಯು ಬಿಡುಗಡೆ ಮಾಡಿದೆ. ಇಂಗ್ಲಿಷ್​ನ ಈ ಸಿನಿಮಾ ಹಿಂದಿ, ತಮಿಳು, ತೆಲುಗು ಭಾಷೆಗಳಲ್ಲಿ ಬಿಡುಗಡೆ ಆಗಿದೆ. 3ಡಿ ಹಾಗೂ ಇಮ್ಯಾಕ್ಸ್​ 3ಡಿ ವರ್ಷನ್​ಗಳಲ್ಲಿ ಕೂಡ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಸಿನಿಮಾಗೆ ಉತ್ತಮ ಓಪನಿಂಗ್ ಸಿಕ್ಕಿದೆ.

ಭಾರತದಲ್ಲಿ ಭರ್ಜರಿ ಓಪನಿಂಗ್ ಪಡೆದ ಹಾಲಿವುಡ್ ಸಿನಿಮಾ ‘ವೆನಮ್: ದಿ ಲಾಸ್ಟ್ ಡ್ಯಾನ್ಸ್’
‘ವೆನಮ್: ದಿ ಲಾಸ್ಟ್ ಡ್ಯಾನ್ಸ್​’ ಪೋಸ್ಟರ್
Follow us
ಮದನ್​ ಕುಮಾರ್​
|

Updated on: Oct 25, 2024 | 5:40 PM

ಆ್ಯಕ್ಷನ್​, ಸೈನ್ಸ್​ ಫಿಕ್ಷನ್​ ಮತ್ತು ಅಡ್ವೆಂಚರಸ್​ ಸಿನಿಮಾಗಳನ್ನು ಇಷ್ಟಪಡುವ ಪ್ರೇಕ್ಷಕರಿಗೆ ಹೆಚ್ಚು ಇಷ್ಟ ಆಗುವುದು ಹಾಲಿವುಡ್ ಸಿನಿಮಾಗಳು. ಅಂಥವರಿಗಾಗಿ ಈ ವಾರ ‘ವೆನಮ್: ದಿ ಲಾಸ್ಟ್ ಡ್ಯಾನ್ಸ್’ ಸಿನಿಮಾ ಬಿಡುಗಡೆ ಆಗಿದೆ. ಅಕ್ಟೋಬರ್​ 24ರಂದು ತೆರೆಕಂಡಿರುವ ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್​ ಇದೆ. ಸೈನ್ಸ್​ ಫಿಕ್ಷನ್​ ಕಹಾನಿ ಇರುವ ಈ ಸಿನಿಮಾದ ಬಗ್ಗೆ ಪಾಸಿಟಿವ್ ಪ್ರತಿಕ್ರಿಯೆ ಕೇಳಿಬರುತ್ತಿದೆ. ಹಾಲಿವುಡ್ ಸಿನಿಪ್ರಿಯರಿಗೆ ‘ವೆನಮ್’ ಫ್ರಾಂಚೈಸ್ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಈ ಮೊದಲು ಎರಡು ಪಾರ್ಟ್​ಗಳು ಅದ್ಭುತ ಯಶಸ್ಸು ಕಂಡಿದ್ದವು. ಈಗ ಈ ಫ್ರಾಂಚೈನ್​ನ ಕೊನೆಯ ಸಿನಿಮಾ ರಿಲೀಸ್ ಆಗಿದೆ.

‘ವೆನಮ್: ದಿ ಲಾಸ್ಟ್ ಡ್ಯಾನ್ಸ್’ ಸಿನಿಮಾ ಕೊನೆಯ ಫ್ರಾಂಚೈಸ್ ಎಂಬ ಕಾರಣದಿಂದಲೂ ಪ್ರೇಕ್ಷಕರಿಗೆ ಹೆಚ್ಚಿನ ನಿರೀಕ್ಷೆ ಮೂಡಿತ್ತು. ಈ ಮೊದಲಿನ 2 ಸಿನಿಮಾಗಳ ಭರ್ಜರಿ ಯಶಸ್ಸಿನ ಬಳಿಕ, ಎಡ್ಡಿ ಬ್ರಾಕ್ ಹಾಗೂ ವೆನಮ್ ಕಥೆ ಅಂತಿಮವಾಗಿ ಹೇಗೆ ಕೊನೆಯಾಗುತ್ತದೆ ಎಂಬುದನ್ನು ತಿಳಿಯಲು ಸಿನಿಪ್ರಿಯರು ಕಾದಿದ್ದರು. ಈಗ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರಿಗೆ ಮಸ್ತ್ ಮನರಂಜನೆ ಸಿಗುತ್ತಿದೆ.

ಬಿಡುಗಡೆಗೂ ಮುನ್ನವೇ ‘ವೆನಮ್: ದಿ ಲಾಸ್ಟ್ ಡ್ಯಾನ್ಸ್’ ಹೈಪ್​ ಕ್ರಿಯೇಟ್ ಮಾಡಿತ್ತು. ಈ ಚಿತ್ರದ ಪ್ರೀಮಿಯರ್‌ಗೆ ಸಿಕ್ಕಾಪಟ್ಟೆ ಮೆಚ್ಚುಗೆ ಸಿಕ್ಕಿತ್ತು. ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಮೂಲಕವೂ ಈ ಸಿನಿಮಾ ದಾಖಲೆ ಬರೆಯಿತು. ಈ ವಾರ ತೆರೆಗೆ ಬಂದಿರುವ ಸಿನಿಮಾವನ್ನು ಪ್ರೇಕ್ಷಕರು ಕಣ್ತುಂಬಿಕೊಳ್ಳುತ್ತಿದ್ದಾರೆ. ಘಟಾನುಘಟಿ ಪಾತ್ರವರ್ಗ, ಅತ್ಯಾಕರ್ಷಕ ಗ್ರಾಫಿಕ್ಸ್​, ಮೈನವಿರೇಳಿಸುವಂತವ ಆ್ಯಕ್ಷನ್​ ಕಾರಣದಿಂದ ಈ ಸಿನಿಮಾದ ಬಗ್ಗೆ ಟಾಕ್​ ಹೆಚ್ಚಾಗಿದೆ.

ಇದನ್ನೂ ಓದಿ: 80ಕ್ಕೂ ಅಧಿಕ ಅತ್ಯಾಚಾರ ಆರೋಪ ಇರುವ ನಿರ್ಮಾಪಕನಿಗೆ ಈಗ ಮೈತುಂಬ ಕಾಯಿಲೆ

ಟಾಮ್ ಹಾರ್ಡಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ವೆನಮ್: ದಿ ಲಾಸ್ಟ್ ಡ್ಯಾನ್ಸ್​’ನಲ್ಲಿ ಅವರ ಅಭಿನಯಕ್ಕೆ ಮೆಚ್ಚುಗೆ ಸಿಗುತ್ತಿದೆ. ಟಾಮ್ ಹಾರ್ಡಿ ಅವರು ವೆನಮ್ ಪಾತ್ರದಲ್ಲಿ ಜೀವಿಸಿದ್ದಾರೆ. ಈ ಚಿತ್ರದಲ್ಲಿ ಚಿವೆಟೆಲ್ ಎಜಿಯೋಫೋರ್, ರಿಸ್ ಇಫಾನ್ಸ್, ಜುನೋ ಟೆಂಪಲ್, ಪೆಗ್ಗಿ ಲೂ ಮುಂತಾದವರು ನಟಿಸಿದ್ದಾರೆ. ಅವಿ ಅರಾದ್, ಮ್ಯಾಟ್ ಟೋಲ್ಮಾಚ್, ಆಮಿ ಪಾಸ್ಕಲ್, ಕೆಲ್ಲಿ ಮಾರ್ಸೆಲ್, ಟಾಮ್ ಹಾರ್ಡಿ ಮತ್ತು ಹಚ್ ಪಾರ್ಕರ್ ನಿರ್ಮಾಣದ ಈ ಸಿನಿಮಾವನ್ನು ಕೆಲ್ಲಿ ಮಾರ್ಸೆಲ್ ಅವರು ನಿರ್ದೇಶಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಗುಂಪು ಕಟ್ಟಿಕೊಂಡು ಬರಲ್ಲ, ಸಿಂಗಲ್ ಸಿಂಹ ರೀತಿ ಬರ್ತೀನಿ; ಚೈತ್ರಾ ಕುಂದಾಪುರ
ಗುಂಪು ಕಟ್ಟಿಕೊಂಡು ಬರಲ್ಲ, ಸಿಂಗಲ್ ಸಿಂಹ ರೀತಿ ಬರ್ತೀನಿ; ಚೈತ್ರಾ ಕುಂದಾಪುರ
ಮೈಸೂರು: ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ, ಗಂಗರಾಜು ಗಂಭೀರ ಆರೋಪ
ಮೈಸೂರು: ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ, ಗಂಗರಾಜು ಗಂಭೀರ ಆರೋಪ
ಗಣೇಶನಿಗೆ ತುಳಸಿಯನ್ನು ಯಾಕೆ ಅರ್ಪಿಸಬಾರದು? ತಿಳಿಯಲು ಈ ವಿಡಿಯೋ ನೋಡಿ
ಗಣೇಶನಿಗೆ ತುಳಸಿಯನ್ನು ಯಾಕೆ ಅರ್ಪಿಸಬಾರದು? ತಿಳಿಯಲು ಈ ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಶುಭವಾಗಲಿದೆ
Nithya Bhavishya: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಶುಭವಾಗಲಿದೆ
ಕೆಲಸಕ್ಕೆ ಮುಸ್ಲಿಂ ಯುವತಿಯನ್ನು ಕರೆ ತಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ!
ಕೆಲಸಕ್ಕೆ ಮುಸ್ಲಿಂ ಯುವತಿಯನ್ನು ಕರೆ ತಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ!
ಪೋಷಕರೇ ಎಚ್ಚರ! ಆಟವಾಡುವಾಗ ಗೇಟ್ ಬಿದ್ದು ಒಂದೂವರೆ ವರ್ಷದ ಮಗು ಸಾವು
ಪೋಷಕರೇ ಎಚ್ಚರ! ಆಟವಾಡುವಾಗ ಗೇಟ್ ಬಿದ್ದು ಒಂದೂವರೆ ವರ್ಷದ ಮಗು ಸಾವು