AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಿಕಾ, ಪ್ರಿಯಾಂಕಾ ರೀತಿ ಹಾಲಿವುಡ್​ಗೆ ಹೋಗ್ತಾರಾ ಕಂಗನಾ? ಖಡಕ್​ ಉತ್ತರ ನೀಡಿದ ‘ಧಾಕಡ್​’ ನಟಿ

Kangana Ranaut: ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾ ಮುಂತಾದವರು ಈ ಹಿಂದೆ ಹಾಲಿವುಡ್​ಗೆ ಕಾಲಿಟ್ಟಾಗ ದೊಡ್ಡ ಸುದ್ದಿ ಆಗಿತ್ತು. ಆದರೆ ಕಂಗನಾ ರಣಾವತ್​ ಅವರು ಹಾಲಿವುಡ್​ ಎಂಟ್ರಿ ಬಗ್ಗೆ ಆಸೆ ಇಟ್ಟುಕೊಂಡಿಲ್ಲ.

ದೀಪಿಕಾ, ಪ್ರಿಯಾಂಕಾ ರೀತಿ ಹಾಲಿವುಡ್​ಗೆ ಹೋಗ್ತಾರಾ ಕಂಗನಾ? ಖಡಕ್​ ಉತ್ತರ ನೀಡಿದ ‘ಧಾಕಡ್​’ ನಟಿ
ಕಂಗನಾ ರಣಾವತ್
TV9 Web
| Updated By: ಮದನ್​ ಕುಮಾರ್​|

Updated on: May 21, 2022 | 9:07 AM

Share

ನಟಿ ಕಂಗನಾ ರಣಾವತ್​ (Kangana Ranaut) ಅವರು ಈಗ ಆ್ಯಕ್ಷನ್​ ಹೀರೋ ಅವತಾರ ತಾಳಿದ್ದಾರೆ. ಮೇ 20ರಂದು ತೆರೆಕಂಡಿರುವ ‘ಧಾಕಡ್​’ (Dhaakad) ಸಿನಿಮಾದಲ್ಲಿ ಅವರು ಭರ್ಜರಿ ಸಾಹಸ ದೃಶ್ಯಗಳ ಮೂಲಕ ಅಭಿಮಾನಿಗಳನ್ನು ರಂಜಿಸುವ ಪ್ರಯತ್ನ ಮಾಡಿದ್ದಾರೆ. ಹಾಲಿವುಡ್ (Hollywood)​ ಸಿನಿಮಾಗಳ ಗುಣಮಟ್ಟದಲ್ಲಿ ಈ ಆ್ಯಕ್ಷನ್​ ಸನ್ನಿವೇಶಗಳು ಮೂಡಿಬಂದಿವೆ ಎಂದು ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಈ ಚಿತ್ರದ ತೆರೆಹಿಂದೆ ಅನೇಕ ವಿದೇಶಿ ತಂತ್ರಜ್ಞರು ಕೆಲಸ ಮಾಡಿದ್ದಾರೆ. ಇದನ್ನೆಲ್ಲ ಗಮನಿಸುತ್ತಿದ್ದರೆ ಕಂಗನಾ ರಣಾವತ್​ ಅವರು ಮುಂದಿನ ದಿನಗಳಲ್ಲಿ ಹಾಲಿವುಡ್​ನಲ್ಲಿ ಸಿನಿಮಾ ಮಾಡುತ್ತಾರಾ ಎಂಬ ಪ್ರಶ್ನೆ ಮೂಡೋದು ಸಹಜ. ಇತ್ತೀಚೆಗೆ ಕಪಿಲ್​ ಶರ್ಮಾ ನಡೆಸಿದ ಸಂದರ್ಶನದಲ್ಲೂ ಇದೇ ಪ್ರಶ್ನೆ ಎದುರಾಯಿತು. ಅದಕ್ಕೆ ಖಡಕ್​ ಆಗಿ ಉತ್ತರಿಸಿದ ಕಂಗನಾ ಅವರು ‘ನಾವು ಎಲ್ಲಿಗೂ ಹೋಗುವ ಅವಶ್ಯಕತೆ ಇಲ್ಲ’ ಎಂದು ಹೇಳಿದ್ದಾರೆ. ತಮ್ಮ ನೇರ ನಡೆ-ನುಡಿ ಮೂಲಕ ಹೆಸರಾದವರು ಕಂಗನಾ. ತಮಗೆ ಅನಿಸಿದ್ದನ್ನು ನೇರವಾಗಿ ಹೇಳುವಲ್ಲಿ ಅವರು ಎಂದಿಗೂ ಹಿಂದೇಟು ಹಾಕಿಲ್ಲ. ಬೇರೆ ಬೇರೆ ರೀತಿಯ ಸಿನಿಮಾಗಳನ್ನು ಮಾಡುತ್ತ ಅವರು ಗುರುತಿಸಿಕೊಂಡಿದ್ದಾರೆ. ಹಾಲಿವುಡ್​ಗೆ ಕಾಲಿಡುವ ಕುರಿತು ಅವರು ತಮ್ಮದೇ ನಿಲವು ಹೊಂದಿದ್ದಾರೆ.

ಬಾಲಿವುಡ್​ನಲ್ಲಿ ನಟಿಸಿದ ಬಳಿಕ ಕೆಲವು ಕಲಾವಿದರು ಹಾಲಿವುಡ್​ನಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಂಡ ಉದಾಹರಣೆ ಇದೆ. ಈ ಹಿಂದೆ ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾ ಮುಂತಾದವರು ಹಾಲಿವುಡ್​ಗೆ ಕಾಲಿಟ್ಟಿದ್ದು ದೊಡ್ಡ ಸುದ್ದಿ ಆಗಿತ್ತು. ಆದರೆ ಕಂಗನಾ ರಣಾವತ್​ ಅವರು ಹಾಲಿವುಡ್​ ಎಂಟ್ರಿ ಬಗ್ಗೆ ಯಾವುದೇ ಆಲೋಚನೆ ಇಟ್ಟುಕೊಂಡಿಲ್ಲ.

ಇದನ್ನೂ ಓದಿ: ಕಂಗನಾ ರಣಾವತ್​ ಯಾಕಿನ್ನೂ ಮದುವೆ ಆಗಿಲ್ಲ? ಅದಕ್ಕೆ ಕಾರಣ ಆಗಿದ್ದು ಒಂದೇ ಒಂದು ಗಾಸಿಪ್​; ಏನದು?

ಇದನ್ನೂ ಓದಿ
Image
ಮಹೇಶ್​ ಬಾಬು ಮಾತಿಗೆ ಬೆಂಬಲ ನೀಡಿದ ಕಂಗನಾ; ಬಾಲಿವುಡ್ ವರ್ಸಸ್​​ ಸೌತ್​ ಚರ್ಚೆ ಇನ್ನಷ್ಟು ಜೋರು
Image
Kangana Ranaut: ಯೋಗಿ ಆದಿತ್ಯನಾಥ್​ ಭೇಟಿ ಮಾಡಿದ ನಟಿ ಕಂಗನಾ ರಣಾವತ್​; ಈ ಮೀಟಿಂಗ್​ ಉದ್ದೇಶ ಏನು?
Image
‘ಅಜಯ್​ ದೇವಗನ್​ ಹೇಳಿದ್ರಲ್ಲಿ ತಪ್ಪಿಲ್ಲ, ಆದ್ರೆ ಸಂಸ್ಕೃತ ರಾಷ್ಟ್ರ ಭಾಷೆ ಆಗಲಿ’: ಕಂಗನಾ ಹೊಸ ಟ್ವಿಸ್ಟ್​
Image
Kangana Ranaut Photos: ಕಂಗನಾ ರಣಾವತ್ ಹಾಟ್ ಅವತಾರ ನೋಡಿ ಅಭಿಮಾನಿಗಳೇ ದಂಗು

‘ನಾವು ಎಲ್ಲಿಗೂ ಹೋಗಬೇಕಾದ ಅನಿವಾರ್ಯತೆ ಇಲ್ಲ. ನಮ್ಮಲ್ಲಿಯೇ ಸಾಕಷ್ಟು ಪ್ರತಿಭಾವಂತರು ಇದ್ದಾರೆ. ಜಗತ್ತು ಎಂಬುದು ಒಂದು ಪ್ರದೇಶದಂತಾಗಿದೆ. ಎಲ್ಲರೂ ಬೇರೆ ದೇಶಗಳಿಂದ ಬಂದು ಭಾರತದಲ್ಲಿ ಕೆಲಸ ಮಾಡುತ್ತಿದ್ದಾರೆ’ ಎಂದು ಕಂಗನಾ ಹೇಳಿದ್ದಾರೆ. ಅವರ ಉತ್ತರ ಕೇಳಿ ಫ್ಯಾನ್ಸ್​ ಖುಷಿ ಆಗಿದ್ದಾರೆ.

ಇದನ್ನೂ ಓದಿ: ‘ಧಾಕಡ್​’ ರಿಲೀಸ್​ಗೂ ಮುನ್ನ ತಿರುಮಲಕ್ಕೆ ಬಂದು ವೆಂಕಟೇಶ್ವರನ ದರ್ಶನ ಪಡೆದ ಕಂಗನಾ ರಣಾವತ್​

‘ಧಾಕಡ್​’ ಸಿನಿಮಾ ಮೇಕಿಂಗ್​ ಗುಣಮಟ್ಟ ಚೆನ್ನಾಗಿದೆ. ಕೆಲವರು ಈ ಚಿತ್ರವನ್ನು ಹಾಲಿವುಡ್​ನ ‘ಬ್ಲಾಕ್​ ವಿಡೋ’ ಸಿನಿಮಾಗೆ ಹೋಲಿಸಿದ್ದಾರೆ. ಆ ಬಗ್ಗೆ ಕೂಡ ಕಂಗನಾ ಪ್ರತಿಕ್ರಿಯೆ ನೀಡಿದ್ದಾರೆ. ‘ಹಾಲಿವುಡ್​ ಸಿನಿಮಾಗಳಿಗೆ ಸಿಗುವ ಬಜೆಟ್​ನಲ್ಲಿ ನಮಗೆ ಶೇ.1ರಷ್ಟು ಕೂಡ ಸಿಕ್ಕಿಲ್ಲ. ಆದರೂ ನಾವು ಅಂತಾರಾಷ್ಟ್ರೀಯ ಗುಣಮಟ್ಟದ ಸಿನಿಮಾ ಮಾಡಿದ್ದೇವೆ. ಕೆಲಸ ಮಾಡಿದ ಶೇ.80ರಷ್ಟು ತಂತ್ರಜ್ಞರು ಇಲ್ಲಿನವರು’ ಎಂದಿದ್ದಾರೆ ಕಂಗನಾ. ಈ ಸಿನಿಮಾದಲ್ಲಿ ಅವರ ಜೊತೆ ಅರ್ಜುನ್​ ರಾಮ್​ಪಾಲ್​, ದಿವ್ಯಾ ದತ್ತ ಮುಂತಾದವರು ನಟಿಸಿದ್ದಾರೆ.

‘ನಾನು ಒಂಟಿ ಅಲ್ಲ’ ಎಂದಿದ್ದ ಕಂಗನಾ:

ಕಂಗನಾ ರಣಾವತ್​ ಅವರು ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳನ್ನು ಎದುರು ಹಾಕಿಕೊಂಡಿದ್ದಾರೆ. ಹಾಗಾಗಿ ಅವರ ಸಿನಿಮಾ ಬಗ್ಗೆ ಯಾರೂ ಮಾತನಾಡುವುದಿಲ್ಲ. ಹಾಗಿದ್ದರೂ ಕೂಡ ಸಲ್ಮಾನ್​ ಖಾನ್​ ಅವರು ಇತ್ತೀಚೆಗೆ ತಮ್ಮ ಟ್ವಿಟರ್​ ಖಾತೆಯಲ್ಲಿ ‘ಧಾಕಡ್​’ ಚಿತ್ರದ ಟ್ರೇಲರ್​ ಶೇರ್​ ಮಾಡಿಕೊಂಡು ಕಂಗನಾ ಮತ್ತು ಅವರ ತಂಡಕ್ಕೆ ಶುಭ ಕೋರಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕಂಗನಾ, ‘ನನ್ನ ದಬಂಗ್​ ಹೀರೋಗೆ ಧನ್ಯವಾದಗಳು. ಚಿನ್ನದಂತಹ ಹೃದಯ ನಿಮ್ಮದು. ಇನ್ಮುಂದೆ ಚಿತ್ರರಂಗದಲ್ಲಿ ನಾನು ಒಂಟಿ ಎಂದು ಹೇಳುವುದಿಲ್ಲ. ಇಡೀ ಧಾಕಡ್​ ಚಿತ್ರತಂಡ ಪರವಾಗಿ ಧನ್ಯವಾದಗಳು’ಎಂದು ಬರೆದುಕೊಂಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ