AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tyson: ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್​ ಜತೆ ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್​

‘ಟೈಸನ್​’ ಚಿತ್ರಕ್ಕೆ ಪೃಥ್ವಿರಾಜ್​ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಜತೆಗೆ ಅವರು ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ಇದು ಐಎಎಸ್​ ಅಧಿಕಾರಿಯ ಕಥೆ ಎಂಬುದನ್ನು ಪೋಸ್ಟರ್ ಹೇಳುತ್ತಿದೆ.

Tyson: ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್​ ಜತೆ ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್​
ಪೃಥ್ವಿರಾಜ್
TV9 Web
| Edited By: |

Updated on:Jun 10, 2022 | 8:58 PM

Share

‘ಕೆಜಿಎಫ್ 2’ ತೆರೆಕಂಡ ಬಳಿಕ ವಿಜಯ್ ಕಿರಗಂದೂರು (Vijay Kiragandur) ಒಡೆತನದ ‘ಹೊಂಬಾಳೆ ಫಿಲ್ಮ್ಸ್​’  (Hombale Films) ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿದೆ. ಪರ ಭಾಷೆಯಲ್ಲೂ ಚಿತ್ರಗಳನ್ನು ನಿರ್ಮಾಣ ಮಾಡುವುದರಲ್ಲಿ ಹೊಂಬಾಳೆ ಫಿಲ್ಮ್ಸ್​ ಬ್ಯುಸಿ ಆಗಿದೆ. ಈಗ ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್​ ಸುಕುಮಾರನ್ ಜತೆ ಹೊಸ ಸಿನಿಮಾ ಘೋಷಿಸುವ ಮೂಲಕ ಈ ನಿರ್ಮಾಣ ಸಂಸ್ಥೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಈ ಚಿತ್ರಕ್ಕೆ ‘ಟೈಸನ್’ (Tyson) ಎನ್ನುವ ಶೀರ್ಷಿಕೆ ಇಡಲಾಗಿದೆ.

‘ಟೈಸನ್​’ ಚಿತ್ರಕ್ಕೆ ಪೃಥ್ವಿರಾಜ್​ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಜತೆಗೆ ಅವರು ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ಇದು ಐಎಎಸ್​ ಅಧಿಕಾರಿಯ ಕಥೆ ಎಂಬುದನ್ನು ಪೋಸ್ಟರ್ ಹೇಳುತ್ತಿದೆ. ‘ಹೊಂಬಾಳೆ ಫಿಲ್ಮ್ಸ್​’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಯಶಸ್ಸು ಕಂಡಿದೆ. ಹೀಗಾಗಿ, ಈ ಚಿತ್ರ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಮಲಯಾಳಂ, ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿಯಲ್ಲಿ ಚಿತ್ರ ಸಿದ್ಧಗೊಳ್ಳಲಿದೆ.

ಇದನ್ನೂ ಓದಿ
Image
50ನೇ ದಿನ ‘ಕೆಜಿಎಫ್ 2’ ಎಷ್ಟು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ; ಇಲ್ಲಿದೆ ಮಾಹಿತಿ
Image
Srinidhi Shetty: ಗ್ಲಾಮರಸ್ ಲುಕ್​ನಲ್ಲಿ ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ; ಫೋಟೋಗಳು ಇಲ್ಲಿವೆ
Image
ಮಧ್ಯರಾತ್ರಿ ಸಿನಿಮಾ ವೀಕ್ಷಿಸಿದ ಶ್ರೀನಿಧಿ ಶೆಟ್ಟಿ, ಗರುಡ, ವಿನಯ್ ರಾಜ್​ಕುಮಾರ್..; ಚಿತ್ರ ನೋಡಿ ಆಶಾ ಭಟ್ ಹೇಳಿದ್ದೇನು?
Image
Srinidhi Shetty: ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ ಕ್ಯೂಟ್ ಫೋಟೋ ಗ್ಯಾಲರಿ

‘ಟೈಸನ್​’ ಪೋಸ್ಟರ್​ನಲ್ಲಿ ವ್ಯಕ್ತಿಯೋರ್ವ ಬೋರ್ಡ್​ಮೇಲೆ ಹೆಸರನ್ನು ಬರೆಯುತ್ತಿದ್ದಾನೆ. ರಂಜನ್ ಘೋಷ್ ಎಂಬ ಐಎಎಸ್ ಅಧಿಕಾರಿ 2022-2023ವರೆಗೆ ಸೇವೆ ಸಲ್ಲಿಸಿರುವಾಗಿ ಬರೆಯಲಾಗಿದೆ. ಹೀಗಾಗಿ, ಸಿನಿಮಾ 2023 ಅಥವಾ 2024ರಲ್ಲಿ ರಿಲೀಸ್ ಆಗಬಹುದು ಎಂದು ಅಂದಾಜಿಸಲಾಗುತ್ತಿದೆ.

ಏಪ್ರಿಲ್ 14ರಂದು ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ರಿಲೀಸ್ ಆಗಿ ಎರಡು ತಿಂಗಳು ಕಳೆಯುತ್ತಾ ಬಂದಿದೆ. ಈ ಸಿನಿಮಾ 1200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಸಿನಿಮಾದಿಂದ ನಿರ್ಮಾಣ ಸಂಸ್ಥೆಗೆ ದುಡ್ಡಿನ ಹೊಳೆಯೇ ಹರಿದಿದೆ. ಮತ್ತಷ್ಟು ಚಿತ್ರಗಳನ್ನು ನಿರ್ಮಾಣ ಮಾಡಲು ಬಲ ಸಿಕ್ಕಂತೆ ಆಗಿದೆ. ಹೀಗಾಗಿ, ಹೊಸಹೊಸ ಪ್ರಾಜೆಕ್ಟ್​ಗಳನ್ನು ಘೋಷಣೆ ಮಾಡಲಾಗುತ್ತಿದೆ.

‘ನಿನ್ನಿಂದಲೇ’, ‘ಮಾಸ್ಟರ್​​ಪೀಸ್​’, ‘ರಾಜಕುಮಾರ’, ‘ಕೆಜಿಎಫ್: ಚಾಪ್ಟರ್ 1’, ‘ಯುವರತ್ನ’, ‘ಕೆಜಿಎಫ್: ಚಾಪ್ಟರ್​ 2’ ಚಿತ್ರಗಳನ್ನು ‘ಹೊಂಬಾಳೆ ಫಿಲ್ಮ್ಸ್​’ ಇಲ್ಲಿಯವರೆಗೆ ನಿರ್ಮಾಣ ಮಾಡಿದೆ. ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್​’, ‘ಸಲಾರ್’, ‘ಬಘೀರ’, ‘ರಿಚರ್ಡ್​ ಆ್ಯಂಟನಿ’ ಸಿನಿಮಾಗಳು ನಿರ್ಮಾಣ ಹಂತದಲ್ಲಿವೆ. ಈಗ ಇದಕ್ಕೆ ಹೊಸ ಸೇರ್ಪಡೆ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:38 pm, Fri, 10 June 22

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​