AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್​’ ಸಿನಿಮಾದ ಬಿಡುಗಡೆ ದಿನಾಂಕದ ಬಗ್ಗೆ ಕಡೆಗೂ ಮೌನ ಮುರಿದ ‘ಹೊಂಬಾಳೆ ಫಿಲ್ಮ್ಸ್​’

‘ಸಲಾರ್​’ ಚಿತ್ರದ ಬಿಡುಗಡೆ ದಿನಾಂಕ ಮುಂದೆ ಹೋಗಿದೆ ಎಂಬ ಬಗ್ಗೆ ಇತ್ತೀಚಿನ ದಿನಗಳಲ್ಲಿ ಸುದ್ದಿ ಹರಿದಾಡಲು ಆರಂಭಿಸಿತ್ತು. ಹಾಗಿದ್ದರೂ ಕೂಡ ಈ ಚಿತ್ರತಂಡದವರು ಮೌನವಾಗಿದ್ದರು. ಅಂತೂ ಇಂತೂ ಈಗ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್​’ ಕಡೆಯಿಂದ ಆ ಬಗ್ಗೆ ಪ್ರತಿಕ್ರಿಯೆ ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಸಲಾರ್​’ ಸಿನಿಮಾದ ಬಿಡುಗಡೆ ದಿನಾಂಕದ ಬಗ್ಗೆ ಕಡೆಗೂ ಮೌನ ಮುರಿದ ‘ಹೊಂಬಾಳೆ ಫಿಲ್ಮ್ಸ್​’
ಪ್ರಭಾಸ್​
ಮದನ್​ ಕುಮಾರ್​
|

Updated on:Sep 13, 2023 | 10:37 AM

Share

ಪ್ರಭಾಸ್​ ನಟನೆಯ ‘ಸಲಾರ್​’ ಸಿನಿಮಾ (Salaar Movie) ಸೆಪ್ಟೆಂಬರ್​ 28ರಂದು ರಿಲೀಸ್​ ಆಗಲಿದೆ ಎಂದು ಅಭಿಮಾನಿಗಳು ಕಾದು ಕುಳಿತಿದ್ದರು. ಆದರೆ ಈ ಚಿತ್ರದ ಬಿಡುಗಡೆ ದಿನಾಂಕ (Salaar Release Date) ಮುಂದೆ ಹೋಗಿದೆ ಎಂಬ ಬಗ್ಗೆ ಇತ್ತೀಚಿನ ದಿನಗಳಲ್ಲಿ ಸುದ್ದಿ ಹರಿದಾಡಲು ಆರಂಭಿಸಿತ್ತು. ಹಾಗಿದ್ದರೂ ಕೂಡ ಈ ಚಿತ್ರತಂಡದವರು ಮೌನವಾಗಿದ್ದರು. ಅಂತೂ ಇಂತೂ ಈಗ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಕಡೆಯಿಂದ ಆ ಬಗ್ಗೆ ಪ್ರತಿಕ್ರಿಯೆ ಸಿಕ್ಕಿದೆ. ‘ಸಲಾರ್​’ ಸಿನಿಮಾದ ರಿಲೀಸ್​ ಡೇಟ್​ ಮುಂದೂಡಿಕೆ ಆಗಿರುವುದರ ಬಗ್ಗೆ ನಿರ್ಮಾಪಕರೇ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಕಾರಣಾಂತರಗಳಿಂದ ಸಲಾರ್​ ಸಿನಿಮಾದ ಬಿಡುಗಡೆ ವಿಳಂಬ ಆಗುತ್ತಿದೆ ಎಂದು ತಿಳಿಸಲಾಗಿದೆ. ಇದು ಒಂದು ವರ್ಗದ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಪ್ರಶಾಂತ್​ ನೀಲ್​ ಅವರು ‘ಸಲಾರ್​’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಪ್ರಭಾಸ್​ ಅವರಿಗೆ ಜೋಡಿಯಾಗಿ ಶ್ರುತಿ ಹಾಸನ್​ ನಟಿಸುತ್ತಿದ್ದಾರೆ. ಪೃಥ್ವಿರಾಜ್​ ಸಕುಮಾರನ್​ ಅವರಂತಹ ಘಟಾನುಘಟಿ ಕಲಾವಿದರು ಕೂಡ ಈ ಚಿತ್ರದಲ್ಲಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಆದಷ್ಟು ಬೇಗ ‘ಸಲಾರ್​’ ನೋಡಬೇಕು ಎಂಬುದು ಫ್ಯಾನ್ಸ್​ ಆಸೆ ಆಗಿತ್ತು. ಆದರೆ ರಿಲೀಸ್​ ದಿನಾಂಕ ಮುಂದೂಡಿಕೆ ಆಗಿದ್ದು, ಇನ್ನೂ ಒಂದಷ್ಟು ತಿಂಗಳು ಕಾಯುವುದು ಅನಿವಾರ್ಯ ಆಗಿದೆ.

‘ಹೊಂಬಾಳೆ ಫಿಲ್ಮ್ಸ್​’ ಪೋಸ್ಟ್​:

‘ಸಲಾರ್​’ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಜಾಸ್ತಿ ಇದೆ. ಹಾಗಾಗಿ ಆ ನಿರೀಕ್ಷೆಯ ಮಟ್ಟವನ್ನು ತಲುಪಲು ಚಿತ್ರತಂಡ ಪ್ರಯತ್ನಿಸುತ್ತಿದೆ. ಅದಕ್ಕೆ ಸಹಜವಾಗಿಯೇ ಸಮಯ ಹಿಡಿಯುತ್ತಿದೆ. ಆ ಕಾರಣದಿಂದ ಅಂದುಕೊಂಡ ದಿನಾಂಕದಲ್ಲಿ ‘ಸಲಾರ್​’ ಚಿತ್ರವನ್ನು ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲ. ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಸಿನಿಮಾವನ್ನು ಕಟ್ಟಿಕೊಡಬೇಕು ಎಂಬ ಉದ್ದೇಶದಿಂದ ರಿಲೀಸ್​ ದಿನಾಂಕ ಮುಂದೂಡಲಾಗಿದೆ.

ಇದನ್ನೂ ಓದಿ: ‘ಸಲಾರ್​’ ಬಿಡುಗಡೆ ಮುಂದಕ್ಕೆ ಹೋಗಿದ್ದಕ್ಕೆ ರಣಬೀರ್​ ಕಪೂರ್​ಗೆ ಲಾಭ; ಏನಿದು ಲೆಕ್ಕಾಚಾರ?

ಹಾಗಾದರೆ, ‘ಸಲಾರ್​’ ಸಿನಿಮಾ ಯಾವಾಗ ಬಿಡುಗಡೆ ಆಗಲಿದೆ? ಈ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾಹಿತಿ ನೀಡುವುದಾಗಿ ‘ಹೊಂಬಾಳೆ ಫಿಲ್ಮ್ಸ್​’ ಹೇಳಿದೆ. ಈ ಸಿನಿಮಾ ಎರಡು ಪಾರ್ಟ್​ನಲ್ಲಿ ಮೂಡಿಬರಲಿದೆ. ಮೊದಲ ಪಾರ್ಟ್​ಗೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಆದಷ್ಟು ಬೇಗ ಹೊಸ ರಿಲೀಸ್​ ಡೇಟ್​ ಘೋಷಣೆ ಆಗಲಿ ಎಂದು ಪ್ರಭಾಸ್​ ಅಭಿಮಾನಿಗಳು ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:26 am, Wed, 13 September 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More